ಆರ್‌ಎಸ್‌ಎಸ್ ಶಿಬಿರಗಳಲ್ಲಿ ಲೈಂಗಿಕ ದೌರ್ಜನ್ಯ ಆರೋಪ: ನಿಷ್ಪಕ್ಷಪಾತ ತನಿಖೆಗೆ ಪ್ರಿಯಾಂಕಾ ಗಾಂಧಿ ಒತ್ತಾಯ

Date:

ಕೇರಳದ ಯುವ ಸಾಫ್ಟ್‌ವೇರ್ ಇಂಜಿನಿಯರ್‌ ಆನಂದು ಅಜಿ ಅವರ ಆತ್ಮಹತ್ಯೆ ಪ್ರಕರಣ ಹೊಸ ತಿರುವು ಪಡೆದಿದೆ. ವಯನಾಡು ಕಾಂಗ್ರೆಸ್ ಸಂಸದೆ ಪ್ರಿಯಾಂಕಾ ಗಾಂಧಿ ವಾದ್ರಾ ಅವರು ಆರ್‌ಎಸ್‌ಎಸ್ (ರಾಷ್ಟ್ರೀಯ ಸ್ವಯಂಸೇವಕ ಸಂಘ) ಸದಸ್ಯರ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪಗಳ ಬಗ್ಗೆ ಗಂಭೀರ ಆರೋಪ ಮಾಡಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಸಂಪೂರ್ಣ ಮತ್ತು ನಿಷ್ಪಕ್ಷಪಾತ ತನಿಖೆ ನಡೆಸಬೇಕೆಂದು ಆಗ್ರಹಿಸಿದ್ದಾರೆ.

- Advertisement -

ಪ್ರಿಯಾಂಕಾ ಗಾಂಧಿ ಅವರು ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಸಂದೇಶದಲ್ಲಿ, ಆನಂದು ಅಜಿ ಆತ್ಮಹತ್ಯೆಗೆ ಮುನ್ನ ಬರೆದಿದ್ದ ಸಂದೇಶವನ್ನು ಉಲ್ಲೇಖಿಸಿ, “ಅವರ ಆತ್ಮಹತ್ಯೆ ಪತ್ರದಲ್ಲಿ ಅವರು ಹಲವಾರು ಆರ್‌ಎಸ್‌ಎಸ್ ಸದಸ್ಯರಿಂದ ನಿರಂತರ ಲೈಂಗಿಕ ದೌರ್ಜನ್ಯಕ್ಕೆ ಒಳಗಾಗಿದ್ದೇನೆ ಎಂದು ಬರೆದಿದ್ದಾರೆ. ಅಲ್ಲದೆ ಇಂಥ ಕೃತ್ಯಗಳು ಆರ್‌ಎಸ್‌ಎಸ್ ಶಿಬಿರಗಳಲ್ಲಿ ವ್ಯಾಪಕವಾಗಿ ನಡೆಯುತ್ತಿವೆ ಎಂಬುದನ್ನೂ ಉಲ್ಲೇಖಿಸಿದ್ದಾರೆ. ಇದು ನಿಜವಾದರೆ ಅತಿ ಭಯಾನಕ ಸಂಗತಿ,” ಎಂದು ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬಾಲಿವುಡ್‌ ಮೇಲೆ ಭೂಗತ ಲೋಕದ ಕರಿನೆರಳು: ದಾವೂದ್ ಇಬ್ರಾಹಿಂನಿಂದ...

ಒಂದು ಕಾಲದಲ್ಲಿ ಬಾಲಿವುಡ್ ಸಿನಿಮಾಗಳಿಗೆ ಹಣ ಹೂಡುತ್ತಿದ್ದ, ನಟ-ನಟಿಯರ ವೃತ್ತಿಜೀವನದ ಮೇಲೆ ಪ್ರಭಾವ ಬೀರುತ್ತಿದ್ದ ಭೂಗತ ಲೋಕ, ಈಗ ಗುಂಡಿನ ದಾಳಿ ಮತ್ತು ಜೀವಬೆದರಿಕೆಗಳ ಮೂಲಕ ಮತ್ತೊಮ್ಮೆ ತನ್ನ ಅಸ್ತಿತ್ವ ಪ್ರದರ್ಶಿಸುತ್ತಿದೆ. ದಾವೂದ್...

ಲೋಕಸಭೆಯ ಬಲ 850ಕ್ಕೆ ಏರಿಕೆ: ಕಲಾಪದ ಸಮಯ ಹೆಚ್ಚಳವಿಲ್ಲದಿದ್ದರೆ...

ಲೋಕಸಭೆಯ ಸದಸ್ಯರ ಬಲವನ್ನು 550ರಿಂದ 850ಕ್ಕೆ ಹೆಚ್ಚಿಸುವ ‘ಕ್ಷೇತ್ರ ಪುನರ್‌ವಿಂಗಡಣೆ ಮಸೂದೆ–2026’ ಸಂಸದೀಯ ಪ್ರಜಾಪ್ರಭುತ್ವದಲ್ಲಿ ಹೊಸ ಚರ್ಚೆ ಹುಟ್ಟುಹಾಕಿದೆ. ಜನಸಂಖ್ಯೆಗೆ ಅನುಗುಣವಾಗಿ ಸೀಟುಗಳ ಹೆಚ್ಚಳ ಅನಿವಾರ್ಯವಾದರೂ, ಸಂಸತ್ತಿನ ವಾರ್ಷಿಕ ಕಲಾಪದ ದಿನಗಳು ಮತ್ತು...

ಸೌದಿ ಅರೇಬಿಯಾದ ಕಂಠನಾಳಕ್ಕೇ ಕೈಹಾಕಿರುವ ಯೆಮನ್!

ಸೌದಿ ಅರೇಬಿಯಾದ ಜೀವನಾಡಿಗೇ ಕೈಹಾಕಿರುವ ಯೆಮನ್‌ನ ಈ ಪ್ರತಿರೋಧವು ಕೇವಲ ಒಂದು ಯುದ್ಧದ ಕಥೆಯಲ್ಲ; ಇದು ಮಧ್ಯಪ್ರಾಚ್ಯದ ರಾಜಕೀಯ ಇತಿಹಾಸವನ್ನೇ ಮರುಬರೆಯಬಹುದಾದ ಸಂಘರ್ಷವಾಗಿದೆ. ಅಲ್ಲಿಯವರೆಗೆ, ಯೆಮನ್ ಕೇವಲ ಅರಬ್ ಜಗತ್ತಿಗಷ್ಟೇ ಅಲ್ಲ, ಇಡೀ...

“ಲಕ್ಷಾಂತರ ಮಕ್ಕಳೂ, ಯುವಕರು ಈ ಶಿಬಿರಗಳಲ್ಲಿ ಭಾಗವಹಿಸುತ್ತಾರೆ. ಆರ್‌ಎಸ್‌ಎಸ್ ನಾಯಕತ್ವ ತಕ್ಷಣ ಕ್ರಮ ಕೈಗೊಳ್ಳಬೇಕು ಮತ್ತು ತನಿಖೆಗೆ ಸಂಪೂರ್ಣ ಸಹಕಾರ ನೀಡಬೇಕು. ಬಾಲಕರ ಮೇಲಿನ ಲೈಂಗಿಕ ಹಿಂಸೆ ಕೂಡ ಗಂಭೀರ ಅಪರಾಧಗಳಿಗೆ ಸಮನಾಗಿದೆ. ಕೇಂದ್ರ ಸರ್ಕಾರ ಇಂತಹ ವಿಷಯಗಳ ಮೇಲೆ ತಾಳುವ ಮೌನದ ಸಂಸ್ಕೃತಿ ಮುರಿಯಲೇಬೇಕು” ಎಂದು ಹೇಳಿದ್ದಾರೆ.

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ಸರ್ಕಾರದ ಎರಡು ಸಂವೇದನಾಶೀಲ ನಿರ್ಧಾರಕ್ಕೆ ಅಭಿನಂದನೆಗಳು

ಇದೇ ವೇಳೆ ಕಾಂಗ್ರೆಸ್ ಮುಖಂಡ ಪವನ್ ಖೇರಾ ಅವರು ಸಹ ಈ ಪ್ರಕರಣದ ಬಗ್ಗೆ “ಕಾಲಮಿತಿಯೊಳಗೆ ಪೂರಕ ತನಿಖೆ ನಡೆಯಬೇಕು. ತಪ್ಪಿತಸ್ಥರನ್ನು ಗುರುತಿಸಿ ಕಠಿಣ ಕ್ರಮ ಕೈಗೊಳ್ಳಬೇಕು. ಕ್ರಮ ಕೈಗೊಳ್ಳದಿದ್ದರೆ ಇಂತಹ ದುಷ್ಕೃತ್ಯಗಳು ಯುವ ಪೀಳಿಗೆಯ ಮೇಲೆ ಅಪಾರ ಹಾನಿ ಉಂಟುಮಾಡುತ್ತವೆ,” ಎಂದು ಎಚ್ಚರಿಸಿದ್ದಾರೆ.

ಆನಂದು ಅಜಿ ಅವರ ಆತ್ಮಹತ್ಯೆಯ ಹಿನ್ನೆಲೆ ಮತ್ತು ಆರ್‌ಎಸ್‌ಎಸ್ ವಿರುದ್ಧದ ಈ ಗಂಭೀರ ಆರೋಪಗಳ ಹಿನ್ನೆಲೆಯಲ್ಲಿ ರಾಷ್ಟ್ರದಲ್ಲಿ ರಾಜಕೀಯ ಚರ್ಚೆ ತೀವ್ರಗೊಂಡಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಾಂತಿ ಮುಚ್ಚಳಿಕೆ ನೋಟಿಸ್‌ಗೆ ಆಕ್ಷೇಪ: ದೆಹಲಿ ಹೈಕೋರ್ಟ್‌ ಮೆಟ್ಟಿಲೇರಿದ ವಿದ್ಯಾರ್ಥಿ ನಾಯಕಿ ನೇಹಾ ಬೋರಾ

ಶಾಂತಿ ಸುವ್ಯವಸ್ಥೆ ಕಾಪಾಡುವ ನೆಪದಲ್ಲಿ ₹10,000 ಮೊತ್ತದ 'ಶಾಂತಿ ಮುಚ್ಚಳಿಕೆ' (Peace...

ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸುವ ಆಸೆ: ಕೊಲೆ ಅಪರಾಧಿಯ ಶಿಕ್ಷೆಗೆ ಅಲಹಾಬಾದ್ ಹೈಕೋರ್ಟ್ ತಡೆ

2027ರ ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಅಥವಾ ಸಾಧ್ಯವಾದರೆ...

ಮುಂಬೈ | ಸಾಹಿಲ್ ವಾಕೋಡೆ ಸಾವು: ಮಗನ ತಿಥಿಯಂದೇ ಪೋಷಕರು, ವಿದ್ಯಾರ್ಥಿಗಳ ಬಂಧನ

ಐಐಟಿ ಬಾಂಬೆ ವಿದ್ಯಾರ್ಥಿ ಸಾಹಿಲ್ ವಾಕೋಡೆ ಅವರ ನಿಧನವಾಗಿ ಒಂದು ತಿಂಗಳ...