10 ವರ್ಷಗಳಿಂದ ದ್ವೇಷ ಹರಡುತ್ತಿರುವ ಪ್ರಧಾನಿ ಮೋದಿ: ಪ್ರಿಯಾಂಕಾ ಗಾಂಧಿ

Date:

ಹಿಂದೂ-ಮುಸ್ಲಿಂ ಬಗ್ಗೆ ವಿವಾದಾತ್ಮಕ ಮಾತನಾಡಿಲ್ಲ ಎಂದು ಹೇಳುತ್ತಿರುವ ಪ್ರಧಾನಿ ನರೇಂದ್ರ ಮೋದಿ 10 ವರ್ಷಗಳಿಂದ ಎರಡು ಸಮುದಾಯಗಳ ನಡುವೆ ದ್ವೇಷ ಹರಡುವ ಕೆಲಸ ಮಾಡುತ್ತಿದ್ದಾರೆ ಎಂದು ಕಾಂಗ್ರೆಸ್ ಪ್ರಿಯಾಂಕಾ ಗಾಂಧಿ ವಾಗ್ದಾಳಿ ನಡೆಸಿದರು.

- Advertisement -

ಉತ್ತರ ಪ್ರದೇಶದ ರಾಯ್‌ಬರೇಲಿಯ ರ್ಯಾಲಿಯಲ್ಲಿ ಅವರು ಮಾತನಾಡಿದರು. ಮೋದಿ ಅವರು ತಾವು ಮಾಡಿದ ಭಾಷಣಗಳನ್ನು ಈಗ ನಿರಾಕರಿಸುತ್ತಿದ್ದಾರೆ. ಇಡೀ ವಿಶ್ವದ ಮುಂದೆ ಭಾಷಣ ಮಾಡಿದ್ದಾರೆ. ಈಗ ಹೇಗೆ ಇದ್ದಕ್ಕಿದ್ದಂತೆ ತಾನು ಮಾತನಾಡಿಲ್ಲ ಎಂದು ಮಾತು ಬದಲಿಸುತ್ತಿದ್ದಾರೆ ಎಂದು ಪ್ರಶ್ನಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

“ಕಳೆದ 10 ವರ್ಷಗಳಿಂದ ಬಿಜೆಪಿಯವರು ರಾಯ್‌ಬರೇಲಿ ಕ್ಷೇತ್ರಕ್ಕೆ ಭೇಟಿ ನೀಡಿಲ್ಲ. ಇಲ್ಲಿನ ದೂರದ ಪ್ರದೇಶಗಳಿಗೂ ನಾನು ಭೇಟಿ ನೀಡುತ್ತಿದ್ದೇನೆ. ಮನೆಯಲ್ಲಿರುವ ಹಿರಿಯ ನಾಯಕರು ನಿಮ್ಮ ಅಜ್ಜಿ ಕೂಡ ಭೇಟಿ ಮಾಡಲು ಬರುತ್ತಿದ್ದರು ಎಂದು ಹೇಳುತ್ತಿದ್ದಾರೆ” ಎಂದು ಪ್ರಿಯಾಂಕಾ ಗಾಂಧಿ ತಿಳಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ದೇಶ ತನ್ನ ಹಳೆಯ ಲಯಕ್ಕೆ, ಪ್ರಜಾಪ್ರಭುತ್ವಕ್ಕೆ ಹಿಂದಿರುಗುತ್ತಿದೆಯೇ?

“ಇತ್ತೀಚಿನ ವರ್ಷಗಳಲ್ಲಿ ಕ್ಷೇತ್ರಕ್ಕೆ ಯಾವುದೇ ಸೌಲಭ್ಯ ನೀಡುತ್ತಿಲ್ಲ. ನಮ್ಮ ಅಜ್ಜಿ ಗ್ರಾಮಗಳಿಗೆ ಆನೆಯ ಮೂಲಕ ಬರುತ್ತಿದ್ದರು. ಈಗಿನ ಪ್ರಧಾನಿ ಬಡಜನರ ಮನೆಗಳಿಗೆ ಭೇಟಿ ನೀಡದೆ ಅಮೆರಿಕ, ಜಪಾನ್ ಮುಂತಾದ ದೇಶಗಳಿಗೆ ತೆರಳುತ್ತಾರೆ. ಕಳೆದ 55 ವರ್ಷದ ಅವಧಿಯಲ್ಲಿ ನಿರುದ್ಯೋಗ ಸಮಸ್ಯೆ ಅತ್ಯಂತ ಹೆಚ್ಚಾಗಿದೆ. ಬೆಲೆಗಳು ದಿನದಿಂದ ದಿನಕ್ಕೆ ಏರುತ್ತಲೇ ಇವೆ” ಎಂದು ಮೋದಿ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

“ಪ್ರಧಾನಿ ಮೋದಿ ಬಿಜೆಪಿ ಪಕ್ಷವನ್ನು ಕಳೆದ 10 ವರ್ಷಗಳಲ್ಲಿ ಅತ್ಯಂತ ಶ್ರೀಮಂತ ಪಕ್ಷವನ್ನಾಗಿ ಮಾಡಿದ್ದಾರೆ. ದೇಶವನ್ನು ಮಾರಾಟಕ್ಕಿಟ್ಟು ಅವರು ಶ್ರೀಮಂತರಾಗಿದ್ದಾರೆ. ಇಂದಿನ ದಿನಗಳ ಆಡಳಿತ ಕಾಂಗ್ರೆಸ್ ಆಡಳಿತದಂತೆ ಇಲ್ಲ” ಎಂದು ಬೇಸರ ವ್ಯಕ್ತಪಡಿಸಿದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ನ್ಯಾಯಾಂಗದ ಮೇಲೆ ಗೌರವವಿದೆ, ತಪ್ಪಾಗಿದ್ದರೆ ಕ್ಷಮೆಯಾಚಿಸುವೆ: ಸಂಜಯ್ ರಾವತ್

ಸುಪ್ರೀಂ ಕೋರ್ಟ್ ಕುರಿತು ತಾವು ನೀಡಿರುವ ಹೇಳಿಕೆಗಳು ಸೂಕ್ತವಲ್ಲ ಅಥವಾ ಅನುಚಿತ...

ವಿರಳಾತಿ ವಿರಳ ಪ್ರಕರಣ: ಮಾಲೆಗಾಂವ್ ಅಪ್ರಾಪ್ತೆಯ ಅತ್ಯಾಚಾರ, ಕೊಲೆ ಅಪರಾಧಿಗೆ ಮರಣದಂಡನೆ ಶಿಕ್ಷೆ

ಮಹಾರಾಷ್ಟ್ರದ ನಾಸಿಕ್ ಜಿಲ್ಲೆಯ ಮಾಲೆಗಾಂವ್ ತಾಲೂಕಿನ ಡೋಂಗರಾಳೆ ಗ್ರಾಮದಲ್ಲಿ ಸಾಡೇನಾಲ್ಕು ವರ್ಷದ...

ತಿರಂಗಾ ಮಾರ್ಚ್ ನಡೆಸದಂತೆ ಅಭಿಜೀತ್ ದೀಪ್ಕೆಗೆ ದೆಹಲಿ ಪೊಲೀಸರಿಂದ ನೋಟಿಸ್: ಮನೆಯ ಬಳಿ ಬಿಗಿ ಭದ್ರತೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ ಅವರು ದೆಹಲಿಯ...

​ಪ್ರತಿಭಟನೆಗಳ ವರದಿಗಾರಿಕೆಗೆ ಭಾರತೀಯ ಪ್ರೆಸ್ ಕೌನ್ಸಿಲ್‌ನಿಂದ ನೂತನ ಮಾರ್ಗದರ್ಶಿ ಸೂತ್ರಗಳ ಬಿಡುಗಡೆ

ಪ್ರತಿಭಟನೆಗಳು ಮತ್ತು ಧರಣಿ ಸತ್ಯಾಗ್ರಹಗಳ ಸಂದರ್ಭದಲ್ಲಿ ಪತ್ರಕರ್ತರ ಸುರಕ್ಷತೆಯನ್ನು ಕಾಯ್ದುಕೊಳ್ಳಲು, ಜವಾಬ್ದಾರಿಯುತ...