ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್, AK-47 ಬಳಕೆ: ‘ಅವರೇನು ಭಯೋತ್ಪಾದಕರೇ?- ಪ್ರಿಯಾಂಕಾ ಗಾಂಧಿ ಆಕ್ರೋಶ

Date:

ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಸೇರಿದಂತೆ ಶಿಕ್ಷಣ ಕ್ಷೇತ್ರದಲ್ಲಿನ ಹಲವು ಅಧ್ವಾನಗಳ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವರಾಗಿದ್ದ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ ವಿದ್ಯಾರ್ಥಿಗಳು ಶಾಂತಿಯುತವಾಗಿ ಪ್ರತಿಭಟನೆ ನಡೆಸುತ್ತಿದ್ದಾಗ ಪೊಲೀಸರು ಬಲಪ್ರಯೋಗವನ್ನು ಮಾಡಿರುವುದನ್ನು ಕಾಂಗ್ರೆಸ್ ಸಂಸದೆ ಪ್ರಿಯಾಂಕಾ ಗಾಂಧಿ ವಾದ್ರಾ ತೀವ್ರವಾಗಿ ಖಂಡಿಸಿದ್ದಾರೆ. “ಪ್ರತಿಭಟನೆ ನಿರತ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಹಾಗೂ AK-47 ನಂತಹ ಮಾರಕಾಸ್ತ್ರಗಳನ್ನು ಬಳಸಲಾಗುತ್ತಿದೆ. ಅವರೇನು ಭಯೋತ್ಪಾದಕರೇ?” ಎಂದು ಕೇಂದ್ರ ಮತ್ತು ವಿವಿಧ ರಾಜ್ಯ ಸರ್ಕಾರಗಳ ವಿರುದ್ಧ ಹರಿಹಾಯ್ದಿದ್ದಾರೆ.

- Advertisement -

ದೆಹಲಿಯ ಜಂತರ್ ಮಂತರ್‌ನಲ್ಲಿ ನಡೆಯುತ್ತಿದ್ದ ವಿದ್ಯಾರ್ಥಿಗಳ ಪ್ರತಿಭಟನಾ ಸ್ಥಳದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಬಿಹಾರ ಮತ್ತು ಪಶ್ಚಿಮ ಬಂಗಾಳದಲ್ಲಿ ಪ್ರತಿಭಟನೆ ನಡೆಸಿದ ವಿದ್ಯಾರ್ಥಿಗಳ ವಿರುದ್ಧ ಎಫ್‌ಐಆರ್‌ಗಳನ್ನು ದಾಖಲಿಸಲಾಗುತ್ತಿದೆ. ಪ್ರತಿಭಟನೆಯಲ್ಲಿ ಭಾಗವಹಿಸಿದ ಹೆಣ್ಣುಮಕ್ಕಳ ಪೋಷಕರಿಗೂ ಬೆದರಿಕೆ ಕರೆಗಳು ಹೋಗುತ್ತಿವೆ. ಭಾರತದಲ್ಲಿ ಹೆಣ್ಣುಮಕ್ಕಳು ತಮ್ಮ ಹಕ್ಕಿಗಾಗಿ ಪ್ರತಿಭಟಿಸುವಂತೆಯೇ ಇಲ್ಲವೇ” ಎಂದು ಪ್ರಶ್ನಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಅಂಬಾರಿಯ ಮುಂದೆ ಪೊಲೀಸರು ಸೆಲ್ಫಿ ತೆಗೆದುಕೊಂಡರೆ ಭದ್ರತೆಗೆ ಹೇಗೆ...

ಚಿನ್ನದ ಅಂಬಾರಿಯನ್ನು ಜಂಬೂಸವಾರಿಯ ದಿನ ಬಳಸಿಕೊಳ್ಳಲು ಸರ್ಕಾರ ಅರಸು ಮನೆತನದವರಿಂದ ಪಡೆಯುತ್ತದೆ. ಉಚಿತವಾಗಿ ಅಲ್ಲ; ನಿಗದಿಪಡಿಸಿರುವ ಹಣವನ್ನು ಸಂದಾಯ ಮಾಡಿ. ಅಂಬಾರಿಯ ಭದ್ರತೆಯ ಹೊಣೆ ಸರ್ಕಾರದ ಮೇಲೂ ಇರುತ್ತದೆ. ಪೊಲೀಸರು ಸೆಲ್ಫಿ ತೆಗೆದುಕೊಂಡರೆ...

ಪ್ರಜಾಪ್ರಭುತ್ವದ ಕಗ್ಗೊಲೆ: ‘ಖಾಸಗಿತನ’ದ ನೆಪದಲ್ಲಿ ಪತ್ರಿಕಾ ಸ್ವಾತಂತ್ರ್ಯ ಹತ್ತಿಕ್ಕಲು...

ಮೋದಿ ಸರ್ಕಾರವು ಈ ಕಾಯ್ದೆಯನ್ನು ಏಕಾಏಕಿ ಜಾರಿಗೊಳಿಸದೆ, ಹಂತ ಹಂತವಾಗಿ ಜಾರಿಗೊಳಿಸುತ್ತಾ ಪ್ರಜಾಪ್ರಭುತ್ವದ ಕತ್ತು ಹಿಸುಕುತ್ತಿದೆ. ಆರ್‌ಟಿಐ ಕಾಯ್ದೆಯನ್ನು ದುರ್ಬಲಗೊಳಿಸುವ ತಿದ್ದುಪಡಿಯು ಈಗಾಗಲೇ ನವೆಂಬರ್ 2025ರಿಂದಲೇ ಜಾರಿಯಲ್ಲಿದ್ದರೆ, ಡೇಟಾ ಬಳಕೆಯ ಕಠಿಣ ನಿಯಮಗಳು...

ಬೆಂಗಳೂರು ಶಿಕ್ಷಕರ ಕ್ಷೇತ್ರದ ಸೋಲು: ಕಾಂಗ್ರೆಸ್ ಸರ್ಕಾರಕ್ಕೆ ಎಚ್ಚರಿಕೆಯ...

ಉಳಿದ ಮೂರು ವಿಧಾನ ಪರಿಷತ್‌ ಕ್ಷೇತ್ರಗಳಿಗಿಂತ ಬೆಂಗಳೂರು ಶಿಕ್ಷಕರ ಕ್ಷೇತ್ರದ ಫಲಿತಾಂಶ ರಾಜಕೀಯವಾಗಿ ಪರಿಣಾಮ ಬೀರಬಲ್ಲದು. ಡಿ.ಕೆ. ಶಿವಕುಮಾರ್‌ ಅವರ ನಾಯಕತ್ವವನ್ನು ಓರೆಗೆ ಹಚ್ಚಬಲ್ಲದು. ಒಕ್ಕಲಿಗ ಪ್ರಾಬಲ್ಯದ ಪ್ರದೇಶಗಳ ಒಲವು-ನಿಲುವುಗಳನ್ನು ತಿಳಿಸಬಲ್ಲದು. ಆದರೆ,...

ಇದನ್ನೂ ಓದಿ: ನೆಕ್ಕಿದ್ದನ್ನು ಕಕ್ಕಿದ ಕೇಂದ್ರ ಸಚಿವ: ‘ಕೋಟಿ’ ರು ಸೌತೆಕಾಯಿ ಸಬ್ಸಿಡಿ ವಾಪಸ್, ‘ನಾನೂ ರೈತನೇ’ ಎಂದ ಭಂಡತನಕ್ಕೆ ವಿಪಕ್ಷಗಳ ಚಾಟಿ

ನೀಟ್ ಮತ್ತು ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳ ಪ್ರಶ್ನೆಪತ್ರಿಕೆ ಸೋರಿಕೆ, ಅಕ್ರಮಗಳ ವಿರುದ್ಧ ದೇಶದ ವಿವಿಧ ಭಾಗಗಳಲ್ಲಿ (ದೆಹಲಿ, ಬಿಹಾರ, ಪಶ್ಚಿಮ ಬಂಗಾಳ) ವಿದ್ಯಾರ್ಥಿ ಸಂಘಟನೆಗಳು, ಸಿಜೆಪಿ ಹಾಗೂ ಯುವಜನರು ವ್ಯಾಪಕ ಪ್ರತಿಭಟನೆ ನಡೆಸುತ್ತಿದ್ದರು. ದೆಹಲಿಯ ಜಂತರ್ ಮಂತರ್ ಸೇರಿದಂತೆ ಬಿಹಾರದ ಕೆಲವು ಭಾಗಗಳಲ್ಲಿ ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಚದುರಿಸಲು ಪೊಲೀಸರು ಪೆಲೆಟ್ ಗನ್‌ಗಳು, ಅಶ್ರುವಾಯು ಹಾಗೂ ಕೋವಿಗಳನ್ನು ಬಳಸಿದ್ದಾರೆ. ಇದರಿಂದಾಗಿ ನೂರಾರು ಮಂದಿ ಗಾಯಗೊಂಡಿದ್ದಾರೆ. ಹಾಗೆಯೇ ನೂರಾರು ವಿದ್ಯಾರ್ಥಿಗಳ ಮೇಲೆ ಎಫ್‌ಐಆರ್ ದಾಖಲಿಸಿದ್ದಾರೆ.

ತಮ್ಮ ಭವಿಷ್ಯ ಮತ್ತು ಪರೀಕ್ಷಾ ವ್ಯವಸ್ಥೆಯ ಸುಧಾರಣೆಗಾಗಿ ಶಾಂತಿಯುತವಾಗಿ ಹಕ್ಕೊತ್ತಾಯ ಮಂಡಿಸುತ್ತಿದ್ದ ವಿದ್ಯಾರ್ಥಿಗಳ ಮೇಲೆ ಹಿಂಸಾತ್ಮಕ ರೀತಿಯಲ್ಲಿ ಬಲಪ್ರಯೋಗ ಮಾಡಲಾಗಿದೆ ಎಂದು ಪ್ರತಿಪಕ್ಷಗಳು ಆರೋಪಿಸಿವೆ.

ಇನ್ನು ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ, “ಸಂಪೂರ್ಣ ವ್ಯವಸ್ಥೆಯು ವಿದ್ಯಾರ್ಥಿಗಳ ವಿರುದ್ಧ ಮಾರಣಾಂತಿಕವಾಗಿ ವರ್ತಿಸುತ್ತಿದೆ. ದೆಹಲಿಯಲ್ಲಿ ಪೆಲೆಟ್ ಗನ್, ಬಿಹಾರದಲ್ಲಿ AK-47 ಗಳ ಬಳಕೆ ವರದಿಯಾಗಿದೆ. ವಿದ್ಯಾರ್ಥಿಗಳು ಭಯೋತ್ಪಾದಕರಲ್ಲ. ರಾಜ್ಯ ಯಾವುದೇ ಇರಲಿ, ಯುವಕರ ಧ್ವನಿಯನ್ನು ಅಡಗಿಸುವ ಮಾದರಿ ಒಂದೇ ಆಗಿದೆ” ಎಂದು ‘X’ ನಲ್ಲಿ ಬರೆದುಕೊಂಡಿದ್ದಾರೆ.

ಸಮಾಜವಾದಿ ಪಕ್ಷದ ಸಂಸದೆ ಡಿಂಪಲ್ ಯಾದವ್, “ವಿದ್ಯಾರ್ಥಿಗಳ ನ್ಯಾಯಯುತ ಬೇಡಿಕೆಗಳನ್ನು ಆಲಿಸುವ ಬದಲು ಅವರ ಮೇಲೆ ಪೆಲೆಟ್ ಗನ್ ಹಾಗೂ ಕಠಿಣ ಬಲಪ್ರಯೋಗ ಮಾಡುತ್ತಿರುವುದು ಪ್ರಜಾಪ್ರಭುತ್ವ ವಿರೋಧಿ” ಎಂದು ಖಂಡಿಸಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಂಗಳೂರು ಶಿಕ್ಷಕರ ಕ್ಷೇತ್ರದ ಸೋಲು: ಕಾಂಗ್ರೆಸ್ ಸರ್ಕಾರಕ್ಕೆ ಎಚ್ಚರಿಕೆಯ ಕರೆಘಂಟೆಯೇ?

ಉಳಿದ ಮೂರು ವಿಧಾನ ಪರಿಷತ್‌ ಕ್ಷೇತ್ರಗಳಿಗಿಂತ ಬೆಂಗಳೂರು ಶಿಕ್ಷಕರ ಕ್ಷೇತ್ರದ ಫಲಿತಾಂಶ...

ಬೀದರ್‌ | ನ.1ರಂದು ಸಚಿವ ಈಶ್ವರ ಖಂಡ್ರೆಗೆ ಅಭಿನಂದನಾ ಸಮಾರಂಭ

ಬೀದರ್‌ ತಾಲ್ಲೂಕಿನ ಅತಿವಾಳ ಸಮೀಪ ಡಾ. ಬಿ.ಆರ್. ಅಂಬೇಡ್ಕರ್ ಅಧ್ಯಯನ ಮತ್ತು...

ಬೀದರ್‌ | ವಾಲ್ಮೀಕಿ ರಾಮಾಯಣ ಮಾನವ ಸಂಬಂಧಗಳ ಮೌಲ್ಯ ಸಾರುತ್ತದೆ: ನಾ.ಗೀತಾಚಾರ್ಯ

ಮಹರ್ಷಿ ವಾಲ್ಮೀಕಿ ರಚಿಸಿದ ರಾಮಾಯಣವು ಮಾನವ ಸಂಬಂಧಗಳ ಮಹತ್ವ, ಕುಟುಂಬದ ಜವಾಬ್ದಾರಿ,...