ಹರ್ಯಾಣದ ಫರೀದಾಬಾದ್‌ನಲ್ಲಿ ಖರೀದಿಸಿದ ಕೃಷಿ ಭೂಮಿಯಲ್ಲಿ ಅಕ್ರಮ ಹಣ ವರ್ಗಾವಣೆಯಾಗಿರುವ ಹಿನ್ನೆಲೆಯಲ್ಲಿ ಜಾರಿ ನಿರ್ದೇಶನಾಲಯ ಸಲ್ಲಿಸಿರುವ ಆರೋಪ ಪಟ್ಟಿಯಲ್ಲಿ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ಹೆಸರು ಉಲ್ಲೇಖವಾಗಿದೆ.
ದೆಹಲಿ ಮೂಲದ ರಿಯಲ್ ಎಸ್ಟೇಟ್ ಏಜೆಂಟ್ ಹೆಚ್ ಎಲ್ ಪವ್ಹಾ ಎಂಬಾತನಿಂದ 2006ರಲ್ಲಿ ಭೂಮಿ ಖರೀದಿಸಿ 2010ರಲ್ಲಿ ಆತನಿಗೇ ಮಾರಿದ ಪ್ರಕರಣದಲ್ಲಿ ಅಕ್ರಮ ಹಣ ವರ್ಗಾವಣೆಯಾಗಿರುವ ಆರೋಪದ ಹಿನ್ನೆಲೆಯಲ್ಲಿ ಜಾರಿ ನಿರ್ದೇಶನಾಲಯ ಪ್ರಿಯಾಂಕಾ ಗಾಂಧಿ ಹೆಸರನ್ನು ಉಲ್ಲೇಖಿಸಿದೆ.
ಆದರೆ ಪ್ರಕರಣದಲ್ಲಿ ಪ್ರಿಯಾಂಕಾ ಗಾಂಧಿಯವರನ್ನು ಆರೋಪಿ ಎಂದು ಹೆಸರಿಸಿಲ್ಲ. ಇಡಿ ವರದಿಯಂತೆ, ಪ್ರಿಯಾಂಕಾ ಗಾಂಧಿ ಅವರಲ್ಲದೆ ಆಕೆಯ ಪತಿ ರಾಬರ್ಟ್ ವಾದ್ರಾ ಕೂಡ ಹೆಚ್ ಎಲ್ ಪವ್ಹಾ ಎಂಬಾತನಿಂದ ಕೃಷಿ ಭೂಮಿ ಖರೀದಿಸಿದ್ದರು.
ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ₹40 ಸಾವಿರ ಕೋಟಿ ಲೂಟಿ ಆರೋಪ; ಪ್ರಧಾನಿ ಮೋದಿ ಏನು ಹೇಳುತ್ತಾರೆ?
ಮಂಗಳವಾರದಂದು ಜಾರಿ ನಿರ್ದೇಶನಾಲಯ ರಾಬರ್ಟ್ ವಾದ್ರಾ ಹೆಸರನ್ನು ಆರೋಪ ಪಟ್ಟಿಯಲ್ಲಿ ಉಲ್ಲೇಖಿಸಿದೆ. ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಆರೋಪಿಯಾಗಿ ದೇಶದಿಂದ ಪಲಾಯನ ಮಾಡಿರುವ ಸಂಜಯ್ ಭಂಡಾರಿ ಕೂಡ ಪ್ರಕರಣದ ಪ್ರಮುಖ ಆರೋಪಿಯಾಗಿದ್ದಾನೆ.
ಇಡಿ ದಾಖಲಿಸಿರುವ ಆರೋಪ ಪಟ್ಟಿಯಲ್ಲಿ ಪ್ರಮುಖ ಆರೋಪಿಗಳಾದ ಸಿಸಿ ಥಂಪಿ, ಎನ್ಆರ್‌ಐ ಸಮಿತ್ ಚೆಡಾ ಅವರಿಂದ ರಾಬರ್ಟ್ ವಾದ್ರಾ ಅವರು ಲಂಡನ್‌ನಲ್ಲಿ ಆಸ್ತಿ ಖರೀದಿಸಿ, ನವೀಕರಿಸುವುದರೊಂದಿಗೆ ಅಲ್ಲಿಯೇ ಉಳಿದುಕೊಂಡಿದ್ದರು.
2016ರಲ್ಲಿ ಭಾರತ ತೊರೆದಿರುವ ಸಂಜಯ್ ಭಂಡಾರಿ ಮೇಲೆ ಅಕ್ರಮ ಹಣ ವರ್ಗಾವಣೆ, ರಕ್ಷಣಾ ಮಧ್ಯವರ್ತಿಯಾಗಿ ಲಂಚ ಪಡೆದ ಆರೋಪ ಸೇರಿದಂತೆ ಹಲವು ಆರೋಪಗಳಿವೆ. ಈ ಆರೋಪಿ ಕೂಡ ಹೆಚ್ಎಲ್ ಪಹ್ವಾ ಜೊತೆ ಆತ್ಮೀಯ ಸಂಬಂಧ ಹೊಂದಿದ್ದಾರೆ. ಇಡಿಯಿಂದ 2020ರಲ್ಲಿ ಬಂಧನಕ್ಕೊಳಗಾಗಿದ್ದ ಥಂಪಿ ಸದ್ಯ ಜಾಮೀನಿನ ಮೇಲಿದ್ದಾನೆ.