ಇ.ಡಿ. ಆರೋಪ ಪಟ್ಟಿಯಲ್ಲಿ ಪ್ರಿಯಾಂಕಾ ಗಾಂಧಿ ಹೆಸರು ಉಲ್ಲೇಖ

Date:

ಹರ್ಯಾಣದ ಫರೀದಾಬಾದ್‌ನಲ್ಲಿ ಖರೀದಿಸಿದ ಕೃಷಿ ಭೂಮಿಯಲ್ಲಿ ಅಕ್ರಮ ಹಣ ವರ್ಗಾವಣೆಯಾಗಿರುವ ಹಿನ್ನೆಲೆಯಲ್ಲಿ ಜಾರಿ ನಿರ್ದೇಶನಾಲಯ ಸಲ್ಲಿಸಿರುವ ಆರೋಪ ಪಟ್ಟಿಯಲ್ಲಿ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ಹೆಸರು ಉಲ್ಲೇಖವಾಗಿದೆ.

- Advertisement -

ದೆಹಲಿ ಮೂಲದ ರಿಯಲ್ ಎಸ್ಟೇಟ್ ಏಜೆಂಟ್ ಹೆಚ್ ಎಲ್ ಪವ್ಹಾ ಎಂಬಾತನಿಂದ 2006ರಲ್ಲಿ ಭೂಮಿ ಖರೀದಿಸಿ 2010ರಲ್ಲಿ ಆತನಿಗೇ ಮಾರಿದ ಪ್ರಕರಣದಲ್ಲಿ ಅಕ್ರಮ ಹಣ ವರ್ಗಾವಣೆಯಾಗಿರುವ ಆರೋಪದ ಹಿನ್ನೆಲೆಯಲ್ಲಿ ಜಾರಿ ನಿರ್ದೇಶನಾಲಯ ಪ್ರಿಯಾಂಕಾ ಗಾಂಧಿ ಹೆಸರನ್ನು ಉಲ್ಲೇಖಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಆದರೆ ಪ್ರಕರಣದಲ್ಲಿ ಪ್ರಿಯಾಂಕಾ ಗಾಂಧಿಯವರನ್ನು ಆರೋಪಿ ಎಂದು ಹೆಸರಿಸಿಲ್ಲ. ಇಡಿ ವರದಿಯಂತೆ, ಪ್ರಿಯಾಂಕಾ ಗಾಂಧಿ ಅವರಲ್ಲದೆ ಆಕೆಯ ಪತಿ ರಾಬರ್ಟ್ ವಾದ್ರಾ ಕೂಡ ಹೆಚ್ ಎಲ್ ಪವ್ಹಾ ಎಂಬಾತನಿಂದ ಕೃಷಿ ಭೂಮಿ ಖರೀದಿಸಿದ್ದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ₹40 ಸಾವಿರ ಕೋಟಿ ಲೂಟಿ ಆರೋಪ; ಪ್ರಧಾನಿ ಮೋದಿ ಏನು ಹೇಳುತ್ತಾರೆ?

ಮಂಗಳವಾರದಂದು ಜಾರಿ ನಿರ್ದೇಶನಾಲಯ ರಾಬರ್ಟ್ ವಾದ್ರಾ ಹೆಸರನ್ನು ಆರೋಪ ಪಟ್ಟಿಯಲ್ಲಿ ಉಲ್ಲೇಖಿಸಿದೆ. ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಆರೋಪಿಯಾಗಿ ದೇಶದಿಂದ ಪಲಾಯನ ಮಾಡಿರುವ ಸಂಜಯ್ ಭಂಡಾರಿ ಕೂಡ ಪ್ರಕರಣದ ಪ್ರಮುಖ ಆರೋಪಿಯಾಗಿದ್ದಾನೆ.

ಇಡಿ ದಾಖಲಿಸಿರುವ ಆರೋಪ ಪಟ್ಟಿಯಲ್ಲಿ ಪ್ರಮುಖ ಆರೋಪಿಗಳಾದ ಸಿಸಿ ಥಂಪಿ, ಎನ್ಆರ್‌ಐ ಸಮಿತ್ ಚೆಡಾ ಅವರಿಂದ ರಾಬರ್ಟ್ ವಾದ್ರಾ ಅವರು ಲಂಡನ್‌ನಲ್ಲಿ ಆಸ್ತಿ ಖರೀದಿಸಿ, ನವೀಕರಿಸುವುದರೊಂದಿಗೆ ಅಲ್ಲಿಯೇ ಉಳಿದುಕೊಂಡಿದ್ದರು.

2016ರಲ್ಲಿ ಭಾರತ ತೊರೆದಿರುವ ಸಂಜಯ್ ಭಂಡಾರಿ ಮೇಲೆ ಅಕ್ರಮ ಹಣ ವರ್ಗಾವಣೆ, ರಕ್ಷಣಾ ಮಧ್ಯವರ್ತಿಯಾಗಿ ಲಂಚ ಪಡೆದ ಆರೋಪ ಸೇರಿದಂತೆ ಹಲವು ಆರೋಪಗಳಿವೆ. ಈ ಆರೋಪಿ ಕೂಡ ಹೆಚ್ಎಲ್ ಪಹ್ವಾ ಜೊತೆ ಆತ್ಮೀಯ ಸಂಬಂಧ ಹೊಂದಿದ್ದಾರೆ. ಇಡಿಯಿಂದ 2020ರಲ್ಲಿ ಬಂಧನಕ್ಕೊಳಗಾಗಿದ್ದ ಥಂಪಿ ಸದ್ಯ ಜಾಮೀನಿನ ಮೇಲಿದ್ದಾನೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಿರುಪತಿ ಬಳಿ ಭೀಕರ ಬಾಯ್ಲರ್ ಸ್ಫೋಟ: ಐವರು ಕಾರ್ಮಿಕರ ಸಾವು, 10 ಮಂದಿಗೆ ಗಂಭೀರ ಗಾಯ

ಟಿಐಎಲ್ ಹೆಲ್ತ್‌‌ಕೇರ್ ಫಾರ್ಮಾಸ್ಯುಟಿಕಲ್ಸ್ ಕಾರ್ಖಾನೆಯಲ್ಲಿ ಬಾಯ್ಲರ್ ಸ್ಫೋಟಗೊಂಡು ಕನಿಷ್ಠ ಐವರು ಕಾರ್ಮಿಕರು...

‘ದಿಮಾಗಿ ನಕ್ಸಲ್’ ಟೀಕೆಗಳಿಗೆ ಬಗ್ಗದಿರಿ, ಹೋರಾಟ ಮುಂದುವರಿಸಿ: ಪರಿಸರವಾದಿಗಳಿಗೆ ನಿವೃತ್ತ ಸುಪ್ರೀಂ ನ್ಯಾಯಮೂರ್ತಿ ಓಕಾ ಕರೆ

ಪರಿಸರ ರಕ್ಷಣೆ ಮತ್ತು ಸಾಂವಿಧಾನಿಕ ಹಕ್ಕುಗಳಿಗಾಗಿ ಧ್ವನಿ ಎತ್ತುವ ಹೋರಾಟಗಾರರನ್ನು ‘ದಿಮಾಗಿ...

ಮುಂಬೈ ಪ್ರತಿಭಟನೆ: ಸಿಜೆಪಿ ಆಯೋಜಕರು, 500ಕ್ಕೂ ಹೆಚ್ಚು ಜನರ ವಿರುದ್ಧ ಎಫ್‌ಐಆರ್ ದಾಖಲು

ಮುಂಬೈನ ಪ್ರಸಿದ್ಧ ಶಿವಾಜಿ ಪಾರ್ಕ್‌ನಲ್ಲಿ ಅನುಮತಿಯಿಲ್ಲದೆ ಪ್ರತಿಭಟನೆ ನಡೆಸಿದ ಆರೋಪದ ಮೇಲೆ...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್ ದೀಪ್ಕೆ ಕುರಿತು ನಡೆದಿದೆ ಚರ್ಚೆ!

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ...