ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್‌ಗೆ 2ನೇ ಬಾರಿ ಇಡಿಯಿಂದ ಸಮನ್ಸ್

Date:

ದೆಹಲಿ ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದಂತೆ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರಿಗೆ ಜಾರಿ ನಿರ್ದೇಶನಾಲಯವು (ಇಡಿ) ವಿಚಾರಣೆಗೆ ಹಾಜರಾಗಲು ಸಮನ್ಸ್ ಜಾರಿಗೊಳಿಸಿದೆ.

- Advertisement -

ಡಿಸೆಂಬರ್ 21, ಗುರುವಾರದಂದು ಇಡಿಯ ಮುಂದೆ ಹಾಜರಾಗುವಂತೆ ಸಿಎಂ ಅವರಿಗೆ ಸಮನ್ಸ್ ನೀಡಲಾಗಿದೆ. ಇದು ಕೇಜ್ರಿವಾಲ್ ಅವರಿಗೆ ಜಾರಿ ನಿರ್ದೇಶನಾಲಯದಿಂದ ನೀಡಲಾಗಿರುವ ಎರಡನೇ ಸಮನ್ಸ್ ಆಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

ಗಗನಕ್ಕೇರಿದ ಅಕ್ಕಿ ಬೆಲೆ: ತತ್ತರಿಸಿದ ಬಡ, ಮಧ್ಯಮ ವರ್ಗದ...

ರಾಜ್ಯಾದ್ಯಂತ ತೀವ್ರ ಮಳೆ ಕೊರತೆ ಮತ್ತು ಬರಗಾಲದ ಕರಿಛಾಯೆ ಕೃಷಿ ಕ್ಷೇತ್ರವನ್ನು ತತ್ತರಿಸುವಂತೆ ಮಾಡಿದೆ. ಅನ್ನದಾತನ ಬದುಕನ್ನು ಸಂಕಷ್ಟಕ್ಕೆ ನೂಕಿದ್ದ ಈ ಬರಗಾಲದ ಬಿಸಿ ಇದೀಗ ನೇರವಾಗಿ ಜನಸಾಮಾನ್ಯರ ತಟ್ಟೆಗೆ ತಟ್ಟಿದ್ದು, ಅಕ್ಕಿಯ...

ಕಳೆದ ತಿಂಗಳು ನ.2 ರಂದು ಜಾರಿ ನಿರ್ದೇಶನಾಲಯವು ಕೇಜ್ರಿವಾಲ್ ಅವರನ್ನು ವಿಚಾರಣೆಗೆ ಹಾಜರಾಗುವಂತೆ ಸಮನ್ಸ್ ನೀಡಿತ್ತು. ಆದರೆ ಕೆಲವು ಪೂರ್ವ ನಿಗದಿ ಕಾರ್ಯಕ್ರಮಗಳ ಕಾರಣದಿಂದ ಕೇಜ್ರೀವಾಲ್ ಅವರು ವಿಚಾರಣೆಗೆ ಹಾಜರಾಗಿರಲಿಲ್ಲ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ರಾಜಕೀಯ ಸಂಸ್ಕೃತಿಯನ್ನು ಅಧೋಗತಿಗೆ ತಳ್ಳುತ್ತಿರುವ ಬಿಜೆಪಿ ಅಂತಃಕಲಹ

ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಜ್ರಿವಾಲ್ ಅವರ ಪಕ್ಷದ ಇಬ್ಬರು ನಾಯಕರಾದ ಮನೀಶ್ ಸಿಸೋಡಿಯಾ ಮತ್ತು ಸಂಜಯ್ ಸಿಂಗ್ ಅವರನ್ನು ಇಡಿ ಬಂಧಿಸಿದೆ.

ಈ ವರ್ಷದ ಏಪ್ರಿಲ್‌ನಲ್ಲಿ ಇದೇ ಹಗರಣಕ್ಕೆ ಸಂಬಂಧಿಸಿದಂತೆ ಅರವಿಂದ್ ಕೇಜ್ರಿವಾಲ್ ಅವರನ್ನೂ ಸಿಬಿಐ ವಿಚಾರಣೆಗೆ ಒಳಪಡಿಸಿತ್ತು.

ದೆಹಲಿಯಲ್ಲಿರುವ ಸಿಬಿಐ ಪ್ರಧಾನ ಕಚೇರಿಯಲ್ಲಿ ಒಂಬತ್ತು ಗಂಟೆಗಳ ಕಾಲ ತಮ್ಮ ವಿಚಾರಣೆಯ ನಂತರ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಕೇಜ್ರಿವಾಲ್, ತನಿಖಾ ಸಂಸ್ಥೆಯಿಂದ 56 ಪ್ರಶ್ನೆಗಳನ್ನು ಕೇಳಲಾಗಿದೆ. 9.5 ಗಂಟೆಗಳ ಕಾಲ ಸಿಬಿಐ ವಿಚಾರಣೆ ನಡೆಸಲಾಗಿದೆ. ನಾನು ಎಲ್ಲ ಪ್ರಶ್ನೆಗಳಿಗೆ ಉತ್ತರಿಸಿದೆ. ರಾಜಕೀಯ ಉದ್ದೇಶದಿಂದ ತಮ್ಮನ್ನು ವಿಚಾರಣೆಗೆ ಒಳಪಡಿಸಲಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

SIR ವಿರುದ್ಧ ಅರ್ಜಿ; ಚುನಾವಣಾ ಆಯೋಗಕ್ಕೆ ಸುಪ್ರೀಂ ಕೋರ್ಟ್ ನೋಟಿಸ್

SIR ಪ್ರಕ್ರಿಯೆಯನ್ನು ಪ್ರಶ್ನಿಸಿ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್...

ಭಾರತದ ಮೇಲೆ ಶೇ.100 ಸುಂಕ: 10 ದಿನಗಳಲ್ಲಿ ಅಮೆರಿಕ ಅಧ್ಯಕ್ಷ ಟ್ರಂಪ್ ಅಂತಿಮ ತೀರ್ಮಾನ!

ಭಾರತದಿಂದ ಅಮೆರಿಕಕ್ಕೆ ರಫ್ತಾಗುವ ಸರಕುಗಳ ಮೇಲೆ ಶೇ. 100ರಷ್ಟು ಭಾರಿ ಆಮದು...

ಅಕ್ಟೋಬರ್ 12ರ ಸುಪ್ರೀಂ ಕೋರ್ಟ್ ಮೆರವಣಿಗೆ: ರಾಹುಲ್, ಅಖಿಲೇಶ್ ಸೇರಿ ವಿಪಕ್ಷ ನಾಯಕರಿಗೆ ನೋಟಿಸ್

ಕಳೆದ ಅಕ್ಟೋಬರ್ 12ರಂದು ಸುಪ್ರೀಂ ಕೋರ್ಟ್ ಕಡೆಗೆ ನಡೆಸಲಾದ ಮೆರವಣಿಗೆಗೆ ಸಂಬಂಧಿಸಿದಂತೆ...

ಪೊಲೀಸ್ ವಿರುದ್ಧ ಲೈಂಗಿಕ ಕಿರುಕುಳ ದೂರಿನ ಬೆನ್ನಲ್ಲೇ ಜಾತಿನಿಂದನೆ ಕೇಸ್: ಯೂಟ್ಯೂಬರ್ ಯುವತಿ ಬಂಧಿಸದಂತೆ ಸುಪ್ರೀಂ ಆದೇಶ

ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಲೈಂಗಿಕ ಕಿರುಕುಳದ ದೂರು ನೀಡಿದ್ದ ಯುವ ಪತ್ರಕರ್ತೆ...