ಆಸ್ತಿ ಪ್ರಕರಣ: ಅಲಹಾಬಾದ್‌ ಹೈಕೋರ್ಟ್‌ ಆದೇಶ ಪ್ರಶ್ನಿಸಿ ಸುಪ್ರೀಂ ಮೊರೆ ಹೋದ ರಾಹುಲ್‌ ಗಾಂಧಿ

Date:

ಆದಾಯದ ಮೂಲಗಳಿಗೆ ಹೋಲಿಸಿದರೆ ಅಕ್ರಮವಾಗಿ ಅಥವಾ ಅಸಮರ್ಪಕವಾಗಿ ಹೆಚ್ಚಿನ ಆಸ್ತಿ ಹೊಂದಿದ್ದಾರೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ಅಲಹಾಬಾದ್‌ ಹೈಕೋರ್ಟ್‌ ನೀಡಿರುವ ವಿವಿಧ ಆದೇಶಗಳನ್ನು ಪ್ರಶ್ನಿಸಿ ಲೋಕಸಭೆಯ ಪ್ರತಿಪಕ್ಷ ನಾಯಕ ರಾಹುಲ್‌ ಗಾಂಧಿ ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿದ್ದಾರೆ.

- Advertisement -

ರಾಹುಲ್‌ ಗಾಂಧಿ ಸಲ್ಲಿಸಿರುವ ಅರ್ಜಿಯ ವಿಚಾರಣೆಯನ್ನು ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್‌, ನ್ಯಾಯಮೂರ್ತಿಗಳಾದ ಜಾಯ್‌ಮಲ್ಯ ಬಾಗ್ಚಿ ಹಾಗೂ ವಿ. ಮೋಹನಾ ಅವರನ್ನೊಳಗೊಂಡ ಪೀಠ ಆಗಸ್ಟ್‌ 17ರಂದು ನಡೆಸಲಿದೆ. ಹೈಕೋರ್ಟ್‌ನಿಂದ ಪ್ರಕರಣವನ್ನು ವರ್ಗಾವಣೆ ಮಾಡುವಂತೆ ಕೋರಿ ರಾಹುಲ್‌ ಗಾಂಧಿ ಪ್ರತ್ಯೇಕ ವರ್ಗಾವಣೆ ಅರ್ಜಿಯನ್ನೂ ಸಲ್ಲಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕಲಬುರಗಿ | ‘ನಮ್ಮನ್ನ ಎಲ್ಲಿಗೆ ಕಳುಹಿಸುತ್ತೀರಿ?’: ತಗ್ಗಿನ ಬೇಲಿಯ...

92ಕ್ಕೂ ಅಧಿಕ ಸ್ಲಂ ಕುಟುಂಬಗಳ ಬದುಕು ಕೇವಲ ಜಮೀನಿನ ಹಕ್ಕಿನ ಪ್ರಶ್ನೆಯಲ್ಲ; ಅವರ ಸುರಕ್ಷಿತ ಓಡಾಟ, ಕುಡಿಯುವ ನೀರು ಹಾಗೂ ನಿತ್ಯದ ಬದುಕಿನ ಹಕ್ಕಿನ ಪ್ರಶ್ನೆಯೂ ಹೌದು. ನ್ಯಾಯಾಲಯದ ವಿಚಾರಣೆ ಅಂತಿಮಗೊಳ್ಳುವವರೆಗೆ ಯಾವುದೇ...

ಚುನಾವಣಾ ಆಯೋಗದ ಸಭೆ: ಪರಿಹಾರವಲ್ಲ, ತೇಪೆ ಹಚ್ಚುವ ಕಾರ್ಯಕ್ರಮ

ಅವೈಜ್ಞಾನಿಕ 'SIR' ಪ್ರಕ್ರಿಯೆ ಮತ್ತು ಆಯೋಗದೊಳಗಿನ ಭಿನ್ನಾಭಿಪ್ರಾಯಗಳು ಸಾರ್ವಜನಿಕವಾಗಿ ಬಯಲಾದ ಬೆನ್ನಲ್ಲೇ ಬಿಡುಗಡೆಯಾದ ಚುನಾವಣಾ ಆಯೋಗದ ಪತ್ರಿಕಾ ಪ್ರಕಟಣೆ, ತಪ್ಪುಗಳನ್ನು ತಿದ್ದುವ ಬದಲು ವ್ಯವಸ್ಥೆಯ ಲೋಪಗಳಿಗೆ ತೇಪೆ ಹಚ್ಚುವ ಯತ್ನದಂತೆ ಕಾಣುತ್ತಿದೆ. ದೇಶದ ಇತಿಹಾಸದಲ್ಲೇ...

ಹೊರಟ್ಟಿ ಅವರ ಹೋರಾಟದ ಬದುಕು ಮತ್ತು ಅವರ ಭಕ್ತ...

ಗ್ಯಾರಂಟಿ ಯೋಜನೆಗಳಿಂದ ಕೂಲಿ ಕಾರ್ಮಿಕರು ಸಿಗುತ್ತಿಲ್ಲವೆಂಬ ಬಸವರಾಜ ಹೊರಟ್ಟಿ ಅವರ ಹೇಳಿಕೆ ಮತ್ತು ಅದಕ್ಕೆ ಸಿಕ್ಕ ಸಾರ್ವಜನಿಕ ಚಪ್ಪಾಳೆಗಳು, ಕೇವಲ ಹಸಿವನ್ನೇ ಶ್ರಮದ ಇಂಧನವನ್ನಾಗಿ ನೋಡುವ ಸಮಾಜದ ಕ್ರೂರ ಮನಸ್ಥಿತಿಯನ್ನು ಅನಾವರಣಗೊಳಿಸುತ್ತವೆ. ಬಸವರಾಜ ಹೊರಟ್ಟಿ...

ಏನಿದು ಪ್ರಕರಣ?

ಬಿಜೆಪಿ ಕಾರ್ಯಕರ್ತ ಎಸ್‌. ವಿಗ್ನೇಶ್‌ ಶಿಶಿರ್‌, ರಾಹುಲ್‌ ಗಾಂಧಿ ಹಾಗೂ ಅವರ ಕುಟುಂಬದ ಇತರ ಸದಸ್ಯರ ವಿರುದ್ಧ ಆದಾಯದ ಮೂಲಗಳಿಗೆ ಹೊಂದಿಕೆಯಾಗದ ಆಸ್ತಿ ಹೊಂದಿರುವ ಆರೋಪ ಮಾಡಿದ್ದರು. ಈ ಆರೋಪಗಳ ಕುರಿತು ತನಿಖೆ ನಡೆಸುವಂತೆ ಕೋರಿ ಅವರು ಮನವಿ ಸಲ್ಲಿಸಿದ್ದರು.

ಈ ವರ್ಷದ ಮೇ ತಿಂಗಳಲ್ಲಿ ಅಲಹಾಬಾದ್‌ ಹೈಕೋರ್ಟ್‌ ಆರೋಪಗಳ ಸತ್ಯಾಸತ್ಯತೆಯನ್ನು ಪರಿಶೀಲಿಸುವಂತೆ ಕೇಂದ್ರ ತನಿಖಾ ದಳ (CBI) ಹಾಗೂ ಜಾರಿ ನಿರ್ದೇಶನಾಲಯಕ್ಕೆ (ED) ಸೂಚಿಸಿತ್ತು.

ನಂತರ ಜುಲೈನಲ್ಲಿ CBI ತನ್ನ ತನಿಖೆಯ ಪ್ರಗತಿ ಕುರಿತು ಹೊಸ ಪ್ರಮಾಣಪತ್ರ ಸಲ್ಲಿಸುವಂತೆ ಹೈಕೋರ್ಟ್‌ ನಿರ್ದೇಶಿಸಿತ್ತು. ಆದರೆ ತನಿಖೆಯ ಪ್ರಗತಿ ಕುರಿತು CBI ಸಲ್ಲಿಸಿದ್ದ ಉತ್ತರಕ್ಕೆ ನ್ಯಾಯಾಲಯ ಅಸಮಾಧಾನ ವ್ಯಕ್ತಪಡಿಸಿತ್ತು.

ಜುಲೈ 20ರ ಆದೇಶದಲ್ಲಿ ನ್ಯಾಯಮೂರ್ತಿಗಳಾದ ಬೃಜ್‌ ರಾಜ್‌ ಸಿಂಗ್‌ ಹಾಗೂ ರಾಜೇಶ್‌ ಸಿಂಗ್‌ ಚೌಹಾಣ್‌ ಅವರ ಪೀಠ, CBI ಸಲ್ಲಿಸಿರುವ ಪ್ರಮಾಣಪತ್ರವು ಈ ಹಿಂದೆ ನೀಡಿದ್ದ ನಿರ್ದೇಶನಕ್ಕೆ ಅನುಗುಣವಾಗಿಲ್ಲ. ತನಿಖೆ ಎಷ್ಟರ ಮಟ್ಟಿಗೆ ಮುಂದುವರಿದಿದೆ ಎಂಬುದೂ ಸ್ಪಷ್ಟವಾಗುತ್ತಿಲ್ಲ ಎಂದು ಹೇಳಿತ್ತು.

ಇದೇ ವೇಳೆ, ED ಅಗತ್ಯ ಕ್ರಮಗಳನ್ನು ಕೈಗೊಂಡಿದೆ ಎಂದು ನ್ಯಾಯಾಲಯ ಗಮನಿಸಿತ್ತು. ತನಿಖೆಯಲ್ಲಿ ಕ್ರಮ ಕೈಗೊಳ್ಳಲು ಅಗತ್ಯವಾದ ಯಾವುದೇ ಅಂಶಗಳು ಪತ್ತೆಯಾದರೆ ED ಮುಂದಿನ ಕ್ರಮ ಕೈಗೊಳ್ಳಲು ಸ್ವತಂತ್ರವಾಗಿದೆ ಎಂದೂ ತಿಳಿಸಿತ್ತು.

ಇದನ್ನೂ ಓದಿ: ಸಕ್ಕರೆ, ಉಪ್ಪು, ಕೊಬ್ಬು ಹೆಚ್ಚಿರುವ ಆಹಾರಕ್ಕೆ ಎಚ್ಚರಿಕೆ ಲೇಬಲ್‌: FSSAI ವಿರುದ್ಧ ಸುಪ್ರೀಂ ಗರಂ

ಪ್ರಕರಣದ ವಿಚಾರಣೆಯನ್ನು ಇದೇ ಪೀಠದ ಮುಂದೆ ಮುಂದುವರಿಸುವಂತೆ ಸೂಚಿಸಿದ್ದ ಹೈಕೋರ್ಟ್‌, ಆಗಸ್ಟ್‌ 20ರಂದು ಪ್ರಕರಣವನ್ನು ಮತ್ತೆ ವಿಚಾರಣೆಗೆ ಪಟ್ಟಿ ಮಾಡುವಂತೆ ನಿರ್ದೇಶಿಸಿತ್ತು. ಇದೀಗ ಈ ಆದೇಶಗಳನ್ನೇ ರಾಹುಲ್‌ ಗಾಂಧಿ ಸುಪ್ರೀಂ ಕೋರ್ಟ್‌ನಲ್ಲಿ ಪ್ರಶ್ನಿಸಿದ್ದಾರೆ.

ಬ್ರಿಟಿಷ್‌ ಪೌರತ್ವದ ಆರೋಪವೂ ಬಾಕಿ

ಇದೇ ಅರ್ಜಿದಾರ ವಿಗ್ನೇಶ್‌ ಶಿಶಿರ್‌ ಸಲ್ಲಿಸಿರುವ ಮತ್ತೊಂದು ಪ್ರತ್ಯೇಕ ಅರ್ಜಿಯೂ ಹೈಕೋರ್ಟ್‌ನಲ್ಲಿ ಬಾಕಿಯಿದೆ. ರಾಹುಲ್‌ ಗಾಂಧಿ ಭಾರತೀಯ ಪೌರತ್ವದ ಜೊತೆಗೆ ಬ್ರಿಟಿಷ್‌ ಪಾಸ್‌ಪೋರ್ಟ್‌ ಹೊಂದಿದ್ದರು ಎಂದು ಆರೋಪಿಸಿರುವ ಶಿಶಿರ್‌, ಪೌರತ್ವ ಕಾನೂನು ಉಲ್ಲಂಘನೆಗಾಗಿ ಅವರ ವಿರುದ್ಧ ಕ್ರಿಮಿನಲ್‌ ಕ್ರಮ ಕೈಗೊಳ್ಳುವಂತೆ ಮನವಿ ಮಾಡಿದ್ದಾರೆ.

ಈ ಪ್ರಕರಣದಲ್ಲಿ ಅಲಹಾಬಾದ್‌ ಹೈಕೋರ್ಟ್‌ ಆರಂಭದಲ್ಲಿ ರಾಹುಲ್‌ ಗಾಂಧಿ ವಿರುದ್ಧ ಎಫ್‌ಐಆರ್‌ ದಾಖಲಿಸುವಂತೆ ಆದೇಶಿಸಿತ್ತು. ಆದರೆ ಪ್ರಕರಣಕ್ಕೆ ಸಂಬಂಧಿಸಿದಂತೆ ಶಿಶಿರ್‌ ಸಾಮಾಜಿಕ ಜಾಲತಾಣಗಳಲ್ಲಿ ಕೆಲವು ಪೋಸ್ಟ್‌ಗಳನ್ನು ಪ್ರಕಟಿಸಿದ ಬಳಿಕ, ನ್ಯಾಯಮೂರ್ತಿಯೊಬ್ಬರು ತಮ್ಮ ಹಿಂದಿನ ಆದೇಶವನ್ನು ತಡೆಹಿಡಿದು ಪ್ರಕರಣದ ವಿಚಾರಣೆಯಿಂದ ಹಿಂದೆ ಸರಿದಿದ್ದರು. ಈ ಪೌರತ್ವ ಸಂಬಂಧಿತ ಪ್ರಕರಣವೂ ಪ್ರಸ್ತುತ ಅಲಹಾಬಾದ್‌ ಹೈಕೋರ್ಟ್‌ನಲ್ಲಿ ಬಾಕಿ ಉಳಿದಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮುದ್ದೇಬಿಹಾಳ | ದಾಸೋಹಿ ರೈತ ಉತ್ಪಾದಕ ಸಹಕಾರಿ ಸಂಘದ ಆರ್ಥಿಕ ಚಟುವಟಿಕೆ: ಗವಿಸಿದ್ದೇಶ್ವರ ಶ್ರೀಗಳಿಂದ ಚಾಲನೆ

ರೈತರೇ ಮಾಲೀಕರಾಗಿ, ರೈತರ ಆರ್ಥಿಕ ಸಬಲೀಕರಣವನ್ನೇ ಕೇಂದ್ರವಾಗಿಟ್ಟುಕೊಂಡು ಅಸ್ತಿತ್ವಕ್ಕೆ ಬಂದಿರುವ ದಾಸೋಹಿ...

ಸಮುದ್ರದಲ್ಲಿ ಅಲೆಗಳು ಭೋರ್ಗರೆಯುತ್ತಿರುವಾಗ ಈಜುವುದು ನನಗಿಷ್ಟ: ವೈರಲ್ ಆಯ್ತು ರಾಹುಲ್ ಗಾಂಧಿ ‘X’ ಪೋಸ್ಟ್

ಸಮುದ್ರದಲ್ಲಿ ಅಲೆಗಳು ಭೋರ್ಗರೆಯುತ್ತಿರುವಾಗ ಈಜುವುದು ನನಗಿಷ್ಟ ಎಂದು ಕಾಂಗ್ರೆಸ್ ನಾಯಕ ಹಾಗೂ...

ಗವಿಸಿದ್ದೇಶ್ವರ ಸ್ವಾಮೀಜಿ ದಸರಾ ಉದ್ಘಾಟನೆ ಆಹ್ವಾನ ತಿರಸ್ಕರಿಸಿದ್ದಾರೆಂಬ ಸುಳ್ಳುಸುದ್ದಿ: ತಪ್ಪಿತಸ್ಥನ ವಿರುದ್ಧ FIR

ಗವಿಮಠದ ಅಭಿನವ ಗವಿಸಿದ್ದೇಶ್ವರ ಸ್ವಾಮೀಜಿ ಮೈಸೂರು ದಸರಾ ಮಹೋತ್ಸವದ ಉದ್ಘಾಟನೆ ಆಹ್ವಾನವನ್ನು...