ಆಸ್ತಿ ದಾಖಲೆಗಳು ಭಾರತೀಯ ಪೌರತ್ವಕ್ಕೆ ಪುರಾವೆಯಲ್ಲ: ಕೋಲ್ಕತ್ತಾ ಹೈಕೋರ್ಟ್

Date:

ಭಾರತದಲ್ಲಿ ಕೇವಲ ಭೂಮಿ ಅಥವಾ ಆಸ್ತಿಯನ್ನು ಖರೀದಿಸಿದ ತಕ್ಷಣವೇ ಯಾವುದೇ ವಿದೇಶಿ ಪ್ರಜೆಗೆ ಭಾರತದ ಪೌರತ್ವ ಸಿಗುವುದಿಲ್ಲ ಎಂದು ಕೋಲ್ಕತ್ತಾ ಹೈಕೋರ್ಟ್ ಹೇಳಿದೆ.

- Advertisement -

ಬಾಂಗ್ಲಾದೇಶದಿಂದ ಅಕ್ರಮವಾಗಿ ನುಸುಳಿದ್ದಾರೆಂಬ ಆರೋಪದ ಮೇಲೆ ಕಳೆದ ಜೂನ್ ತಿಂಗಳಿನಲ್ಲಿ ಪಶ್ಚಿಮ ಬಂಗಾಳದಲ್ಲಿ ಬಂಧನಕ್ಕೊಳಗಾಗಿರುವ ನಾಸಿರ್ ಮುಲ್ಲಾ ಎಂಬವರ ಪರವಾಗಿ ಸಲ್ಲಿಕೆಯಾಗಿದ್ದ ಅರ್ಜಿಯನ್ನು ಕಲ್ಕತ್ತಾ ಹೈಕೋರ್ಟ್‌ ವಿಚಾರಣೆ ನಡೆಸಿದೆ. ಈ ವೇಳೆ, ಈ ಆದೇಶ ಹೊರಡಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಗಗನಕ್ಕೇರಿದ ಅಕ್ಕಿ ಬೆಲೆ: ತತ್ತರಿಸಿದ ಬಡ, ಮಧ್ಯಮ ವರ್ಗದ...

ರಾಜ್ಯಾದ್ಯಂತ ತೀವ್ರ ಮಳೆ ಕೊರತೆ ಮತ್ತು ಬರಗಾಲದ ಕರಿಛಾಯೆ ಕೃಷಿ ಕ್ಷೇತ್ರವನ್ನು ತತ್ತರಿಸುವಂತೆ ಮಾಡಿದೆ. ಅನ್ನದಾತನ ಬದುಕನ್ನು ಸಂಕಷ್ಟಕ್ಕೆ ನೂಕಿದ್ದ ಈ ಬರಗಾಲದ ಬಿಸಿ ಇದೀಗ ನೇರವಾಗಿ ಜನಸಾಮಾನ್ಯರ ತಟ್ಟೆಗೆ ತಟ್ಟಿದ್ದು, ಅಕ್ಕಿಯ...

ಬೆಳಗಾವಿ | ಬಿಸಿಲಿಗೂ ಕುಗ್ಗದೆ ಕಬ್ಬಿಗೆ ₹5500 ಬೆಲೆಗಾಗಿ...

ಕಬ್ಬಿಗೆ ಪ್ರತಿ ಟನ್‌ಗೆ ₹5,500 ಬೆಲೆ ನೀಡಬೇಕು, ಸಕ್ಕರೆಗೆ ಪ್ರತಿ ಕೆ.ಜಿ.ಗೆ ₹60 ಕನಿಷ್ಠ ಬೆಂಬಲ ಬೆಲೆ (ಎಂಎಸ್‌ಪಿ) ನಿಗದಿಪಡಿಸಬೇಕು ಹಾಗೂ ಸ್ವಾಮಿನಾಥನ್‌ ಆಯೋಗದ ಶಿಫಾರಸುಗಳನ್ನು ಜಾರಿಗೊಳಿಸಬೇಕು ಎಂದು ಆಗ್ರಹಿಸಿ ಬೆಳಗಾವಿ ಜಿಲ್ಲೆಯ...

ಈ ದಿನ ಕವಿತೆ | ನನ್ನವ್ವನ ನೋಟ್ ಪುಸ್ತಕ...

ವಾರಕ್ಕೊಂದು ಅನುವಾದಿತ ಕವಿತೆ ಮಾಲಿಕೆಯಲ್ಲಿ ಈ ಬಾರಿ ಗುಜರಾತಿನ ಕವಿ, ಕಲಾವಿದರಾದ ಜಯಂತ್ ಪರ್ಮಾರ್ ಅವರ ಒಂದು ಉರ್ದು ಕವನದ ಇಂಗ್ಲಿಷ್ ಅನುವಾದವನ್ನು ಕನ್ನಡಕ್ಕೆ ತಂದಿದ್ದಾರೆ ಹಿರಿಯ ಅನುವಾದಕಿ ಸಿ ಎಚ್‌ ಭಾಗ್ಯ ಬೇವಿನ...

ಸದ್ಯ ಡಿಟೆನ್ಷನ್ ಸೆಂಟರ್‌ನಲ್ಲಿರುವ (ಬಂಧನ ಕೇಂದ್ರ) ನಾಸಿರ್ ಮುಲ್ಲಾ ಭಾರತದ ಪ್ರಜೆಯಾಗಿದ್ದಾನೆ ಎಂದು ಆತನ ಪರ ವಕೀಲರು ವಾದಿಸಿದ್ದರು. ಆದರೆ, ನಾಸಿರ್ ಅವರು ತಾವು ವಿದೇಶಿ ಪ್ರಜೆ ಎಂಬುದನ್ನು ಒಪ್ಪಿಕೊಂಡಿದ್ದಾರೆ ಎಂದು ಬಂಗಾಳ ಬಿಜೆಪಿ ಸರ್ಕಾರ ವಾದಿಸಿದೆ. ಈ ಹಿನ್ನೆಲೆಯಲ್ಲಿ ಬಂಧಿತ ವ್ಯಕ್ತಿ ಭಾರತದ ಪ್ರಜೆ ಎಂಬುದನ್ನು ಸಾಬೀತುಪಡಿಸಲು ಅಗತ್ಯ ದಾಖಲೆಗಳನ್ನು ಒದಗಿಸುವಂತೆ ನ್ಯಾಯಾಲಯವು ಅರ್ಜಿದಾರರಿಗೆ ಸೂಚಿಸಿತ್ತು.

ನ್ಯಾಯಾಲಯದ ಸೂಚನೆಗೆ ಪ್ರತಿಕ್ರಿಯಿಸಿದ ಅರ್ಜಿದಾರರ ವಕೀಲರು, ನಾಸಿರ್ ಮುಲ್ಲಾ ಹೊಂದಿರುವ ಭೂಮಿಯ ದಾಖಲೆಗಳನ್ನು ಹೊರತುಪಡಿಸಿ, ಆತ ಭಾರತದ ಪ್ರಜೆ ಎಂಬುದನ್ನು ಖಚಿತವಾಗಿ ಸಾಬೀತುಪಡಿಸಲು ಯಾವುದೇ ಪೂರಕ ದಾಖಲೆಗಳು ಲಭ್ಯವಿಲ್ಲ ಎಂದು ನ್ಯಾಯಾಲಯಕ್ಕೆ ತಿಳಿಸಿದ್ದರು.

ಇದನ್ನು ಗಂಭೀರವಾಗಿ ಪರಿಗಣಿಸಿದ ನ್ಯಾಯಪೀಠವು, “ಕೇವಲ ಭೂಮಿಯ ದಾಖಲೆಗಳನ್ನು ಪೌರತ್ವದ ಪುರಾವೆಯಾಗಿ ಪರಿಗಣಿಸಲು ಸಾಧ್ಯವಿಲ್ಲ. ವಿದೇಶಿ ಪ್ರಜೆಯೊಬ್ಬರು ಭಾರತದಲ್ಲಿ ಸ್ಥಿರ ಆಸ್ತಿಯನ್ನು ಖರೀದಿಸಬಹುದಾಗಿದ್ದು, ಆ ಕಾರಣಕ್ಕಾಗಿಯೇ ಅವರು ಭಾರತದ ಪ್ರಜೆಯಾಗಲು ಸಾಧ್ಯವಿಲ್ಲ” ಎಂದು ಹೇಳಿದೆ.

ಈ ಲೇಖನ ಓದಿದ್ದೀರಾ?: ರಾಮಮಂದಿರ ಲೂಟಿ | ಕಳುವಾಗಿದ್ದು ಹಣ ಮಾತ್ರವಲ್ಲ, ಜನರ ನಂಬಿಕೆಯೂ!

ಆದಾಗ್ಯೂ, ಬಂಧಿತ ವ್ಯಕ್ತಿಗೆ ತನ್ನ ಪೌರತ್ವವನ್ನು ಸಾಬೀತುಪಡಿಸಲು ನ್ಯಾಯಾಲಯವು ಜುಲೈ 20ರವರೆಗೆ ಅಂತಿಮ ಅವಕಾಶವನ್ನು ನೀಡಿದೆ. ಅಷ್ಟರೊಳಗೆ ಪೌರತ್ವ ಸಾಬೀತು ಮಾಡುವ ಪ್ರಮಾಣಪತ್ರದೊಂದಿಗೆ ಅಗತ್ಯ ದಾಖಲೆಗಳನ್ನು ಸಲ್ಲಿಸಬೇಕೆಂದು ಸೂಚಿಸಿದೆ.

ಇತ್ತೀಚೆಗಷ್ಟೇ, ಕೇಂದ್ರ ಸರ್ಕಾರ ಕೂಡ ಪಾಸ್‌ಪೋರ್ಟ್‌ಗಳು ಭಾರತೀಯ ಪೌರತ್ವಕ್ಕೆ ಖಚಿತವಾದ ಪುರಾವೆಯಲ್ಲ ಎಂದು ಹೇಳಿತ್ತು. ಇದೀಗ, ಆಸ್ತಿ ದಾಖಲೆಯೂ ಪೌರತ್ವದ ಪುರಾವೆಯಲ್ಲ ಎಂದು ಕೋಲ್ಕತ್ತಾ ಹೈಕೋರ್ಟ್‌ ಹೇಳಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕರ್ನಾಟಕದ ನೂತನ ರಾಜ್ಯಪಾಲರಾಗಿ ಡಾ. ಸುಧಾ ಯಾದವ್ ಪ್ರಮಾಣ ವಚನ ಸ್ವೀಕಾರ

ಕರ್ನಾಟಕದ ನೂತನ ರಾಜ್ಯಪಾಲರಾಗಿ ಡಾ. ಸುಧಾ ಯಾದವ್ ಅವರು ಶುಕ್ರವಾರ ಅಧಿಕಾರ...

ಅಂಟಾರ್ಕ್ಟಿಕದಲ್ಲಿ ಪೆಂಗ್ವಿನ್ ಎಣಿಸುವ ಅಪರೂಪದ ಉದ್ಯೋಗ: ಲಕ್ಷಗಳ ಸಂಭಾವನೆ, ಹೇಗಿರುತ್ತದೆ ಹಿಮದ ನಾಡಿನ ಬದುಕು?

ಜನಜಂಗುಳಿ, ಟ್ರಾಫಿಕ್ ಕಿರಿಕಿರಿ ಹಾಗೂ ದೈನಂದಿನ ಯಾಂತ್ರಿಕ ಬದುಕಿನಿಂದ ದೂರ ಸರಿದು,...

ಲಡಾಖ್ ನಾಯಕರ ಜೊತೆ ಕೇಂದ್ರದ ಮಾತುಕತೆ ಅಪೂರ್ಣ: ಅಕ್ಟೋಬರ್ 22ಕ್ಕೆ ಮುಂದಿನ ಸಭೆ

ಕೇಂದ್ರ ಗೃಹ ಸಚಿವಾಲಯ ಹಾಗೂ ಲಡಾಖ್‌ನ ಪ್ರಾತಿನಿಧಿಕ ಸಂಸ್ಥೆಗಳ ನಡುವೆ ಲೇಹ್‌ನಲ್ಲಿ...