ಲೋಕಸಭಾ ಸ್ಥಾನಗಳ ಹೆಚ್ಚಳ ಪ್ರಸ್ತಾವನೆ: ಮೋದಿಯ ‘ದಿಕ್ಕು ತಪ್ಪಿಸುವ ಅಸ್ತ್ರ’; ಕಾಂಗ್ರೆಸ್‌ ಟೀಕೆ

Date:

ಲೋಕಸಭಾ ಸ್ಥಾನಗಳ ಸಂಖ್ಯೆಯನ್ನು ಹೆಚ್ಚಿಸುವ ಪ್ರಧಾನಿ ನರೇಂದ್ರ ಮೋದಿ ಅವರ ಪ್ರಸ್ತಾವನೆಯನ್ನು ಕಾಂಗ್ರೆಸ್ ಭಾನುವಾರ ತೀವ್ರವಾಗಿ ಖಂಡಿಸಿದೆ. ಈ ಕ್ರಮವು ಕೇವಲ ಜನಸಂಖ್ಯೆ ಹೆಚ್ಚಿರುವ ದೊಡ್ಡ ರಾಜ್ಯಗಳಿಗೆ ಮಾತ್ರ ಪ್ರಯೋಜನಕಾರಿಯಾಗಲಿದ್ದು, ಇದೊಂದು ಜನರ ಗಮನವನ್ನು ಬೇರೆಡೆ ಸೆಳೆಯುವ ”ದಿಕ್ಕು ತಪ್ಪಿಸುವ ಅಸ್ತ್ರ’ ಎಂದು ಕಾಂಗ್ರೆಸ್ ಲೇವಡಿ ಮಾಡಿದೆ.

- Advertisement -

ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ ಅವರು ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದು, “ಪ್ರಧಾನಿಯವರು ಎಂದಿನಂತೆ ಜನರನ್ನು ದಾರಿ ತಪ್ಪಿಸುವ ಹೇಳಿಕೆಗಳನ್ನು ನೀಡುತ್ತಿದ್ದಾರೆ. ಲೋಕಸಭೆಯ ಬಲವನ್ನು 50%ರಷ್ಟು ಹೆಚ್ಚಿಸುವುದರಿಂದ ದಕ್ಷಿಣ ಭಾರತದ ರಾಜ್ಯಗಳಿಗೆ ಯಾವುದೇ ಅನ್ಯಾಯವಾಗುವುದಿಲ್ಲ ಎನ್ನುವುದು ಹಸಿ ಸುಳ್ಳು. ಇದು ದೇಶದ ಜನರನ್ನು ವಂಚಿಸುವ ತಂತ್ರ” ಎಂದು ಕಿಡಿಕಾರಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

“ಲೋಕಸಭಾ ಸ್ಥಾನಗಳ ಹೆಚ್ಚಳದಿಂದ ರಾಜ್ಯಗಳ ನಡುವಿನ ಪ್ರಾತಿನಿಧ್ಯದ ಅಂತರ ಮತ್ತಷ್ಟು ಹೆಚ್ಚಾಗಲಿದೆ. ಸದ್ಯ ಉತ್ತರ ಪ್ರದೇಶ ಮತ್ತು ಕೇರಳದ ನಡುವೆ ಇರುವ 60 ಸೀಟುಗಳ ವ್ಯತ್ಯಾಸವು ಹೊಸ ಪ್ರಸ್ತಾವನೆಯಿಂದ 90ಕ್ಕೆ ಏರಲಿದೆ. ಹಾಗೆಯೇ ಉತ್ತರ ಪ್ರದೇಶ ಮತ್ತು ತಮಿಳುನಾಡು ನಡುವಿನ ವ್ಯತ್ಯಾಸವು 41 ರಿಂದ 61ಕ್ಕೆ ಏರಲಿದೆ” ಎಂದು ರಮೇಶ್ ವಿವರಿಸಿದ್ದಾರೆ.

“ಈ ಪ್ರಸ್ತಾವನೆಯಿಂದ ಪಂಜಾಬ್, ಹರಿಯಾಣ ಮತ್ತು ಈಶಾನ್ಯ ರಾಜ್ಯಗಳ ಪ್ರಭಾವ ಕುಸಿಯಲಿದೆ. ದೊಡ್ಡ ರಾಜ್ಯಗಳ ಪ್ರಭಾವ ಮತ್ತಷ್ಟು ಹೆಚ್ಚಾಗಲಿದ್ದು, ಇದು ಪ್ರಾದೇಶಿಕ ಸಮತೋಲನವನ್ನು ಕದಡಲಿದೆ” ಎಂದು ಆರೋಪಿಸಿದ್ದಾರೆ.

2029ರ ಸಾರ್ವತ್ರಿಕ ಚುನಾವಣೆಗಿಂತ ಮುಂಚಿತವಾಗಿ ಮಹಿಳಾ ಮೀಸಲಾತಿ ಕಾಯ್ದೆಯನ್ನು ಜಾರಿಗೆ ತರುವ ಭಾಗವಾಗಿ, ಲೋಕಸಭಾ ಸ್ಥಾನಗಳನ್ನು 543 ರಿಂದ 816ಕ್ಕೆ ಏರಿಸಲು ಸರ್ಕಾರ ಯೋಜಿಸಿದೆ. ಇದಕ್ಕಾಗಿ, ಏಪ್ರಿಲ್ 16 ರಿಂದ ಮೂರು ದಿನಗಳ ವಿಶೇಷ ಸಂಸತ್ ಅಧಿವೇಶನವನ್ನು ಕರೆಯಲಾಗಿದೆ.

ಕೇರಳದಲ್ಲಿ ನಡೆದ ಎನ್‌ಡಿಎ ರ್ಯಾಲಿಯನ್ನುದ್ದೇಶಿಸಿ ಮಾತನಾಡಿದ್ದ ಮೋದಿ, “ಕೇರಳ, ತಮಿಳುನಾಡು, ಕರ್ನಾಟಕ, ಆಂಧ್ರಪ್ರದೇಶ, ಗೋವಾ ಮತ್ತು ತೆಲಂಗಾಣ ಸೇರಿದಂತೆ ಯಾವುದೇ ರಾಜ್ಯಗಳು ತಮ್ಮ ಸ್ಥಾನಗಳನ್ನು ಕಳೆದುಕೊಳ್ಳದಂತೆ ಸರ್ಕಾರ ನೋಡಿಕೊಳ್ಳಲಿದೆ. ಮಹಿಳಾ ಸಬಲೀಕರಣದ ದೃಷ್ಟಿಯಿಂದ ಎಲ್ಲ ಪಕ್ಷಗಳು ಇದನ್ನು ಬೆಂಬಲಿಸಬೇಕು” ಎಂದು ಮನವಿ ಮಾಡಿದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದೆಹಲಿ ಪ್ರತಿಭಟನೆ ವೇಳೆ ಪೊಲೀಸರಿಂದ ಲೈಂಗಿಕ ಕಿರುಕುಳ: ಮೂವರು ಪತ್ರಕರ್ತೆಯರ ಆರೋಪ

ದೇಶದ ರಾಜಧಾನಿ ದೆಹಲಿಯ ಜಂತರ್ ಮಂತರ್ ಬಳಿ ನಡೆದ ಪ್ರತಿಭಟನೆಯ ವರದಿಗಾರಿಕೆಯಲ್ಲಿ...

ಹಳೆಯ ಪ್ರಕರಣ: ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ವಿರುದ್ಧ ವಿಜಿಲೆನ್ಸ್ ತನಿಖೆಗೆ ಕೇರಳ ಸರ್ಕಾರ ಆದೇಶ

20೦6ರ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಹಾಲಿ ಮುಖ್ಯ ಚುನಾವಣಾ ಆಯುಕ್ತ (CEC) ಗ್ಯಾನೇಶ್...

ಗಣೇಶ ವಿಸರ್ಜನೆ ಮುಗಿಯಿತು, ಇನ್ನು ಸಿಇಸಿ ಗ್ಯಾನೇಶ್ ಕುಮಾರ್ ವಿಸರ್ಜನೆ ಬಾಕಿ: ನಟ ಪ್ರಕಾಶ್ ರಾಜ್

ದೇಶಾದ್ಯಂತ ಗಣೇಶ ವಿಸರ್ಜನೆ ಪ್ರಕ್ರಿಯೆ ಪೂರ್ಣಗೊಂಡಿದ್ದು, ಈಗ ಮುಖ್ಯ ಚುನಾವಣಾ ಆಯುಕ್ತ...

ಜಿಎಸ್‌ಟಿ ದಸ್ತಗಿರಿ ಅಧಿಕಾರ ಹಿಂಪಡೆಯುವ ಪ್ರಸ್ತಾಪ: ಆಡಂಬರದ ಜಾರಿಯೂ ಇಂದಿನ ಭ್ರಮನಿರಸನವೂ….

2017ರ ಜೂನ್ 30ರ ಮಧ್ಯರಾತ್ರಿ ಭಾರತದ ಸಂಸತ್ತಿನಲ್ಲಿ ವಿಶೇಷ ಅಧಿವೇಶನ ಕರೆಯಾಗಿತ್ತು....