‘ಆಪರೇಷನ್ ಕಾವೇರಿ’ ಮೂಲಕ ಮೊದಲ ಹಂತದಲ್ಲಿ ಸುಡಾನ್‌ನಲ್ಲಿಯ ಭಾರತೀಯರ ರಕ್ಷಣೆ

Date:

  • ಆಪರೇಷನ್ ಕಾವೇರಿ ಮೂಲಕ ಮೊದಲ ಹಂತದಲ್ಲಿ 278 ಜನರ ರಕ್ಷಣೆ
  • ಸುಡಾನ್‌ನಲ್ಲಿ ನಡೆಯುತ್ತಿರುವ ಸಂಘರ್ಷಕ್ಕೆ 72 ಗಂಟೆಗಳ ಕದನ ವಿರಾಮ ಘೋಷಣೆ

‘ಆಪರೇಷನ್‌ ಕಾವೇರಿ’ ಹೆಸರಿನ ಯೋಜನೆ ಮೂಲಕ ಯುದ್ಧ ಪೀಡಿತ ಸುಡಾನ್‌ನಲ್ಲಿ ಸಿಲುಕಿರುವ ಭಾರತೀಯರನ್ನು ಮೊದಲ ಹಂತದಲ್ಲಿ ರಕ್ಷಿಸಲಾಗಿದೆ ವಿದೇಶಾಂಗ ಸಚಿವಾಲಯ ಮಂಗಳವಾರ (ಏಪ್ರಿಲ್‌ 25) ಹೇಳಿದೆ.

- Advertisement -

ಮೊದಲ ಹಂತದ ಕಾರ್ಯಾಚರಣೆಯಲ್ಲಿ ಭಾರತೀಯರನ್ನು ರಕ್ಷಿಸಿ ಭಾರತೀಯ ನೌಕಾಪಡೆಯ ಯುದ್ಧನೌಕೆ ಮೂಲಕ ಸೌದಿ ಅರೇಬಿಯಾದ ಜೆಡ್ಡಾ ಪ್ರದೇಶಕ್ಕೆ ಕರೆತರಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

‘ವಿಬಿ-ಜಿ ರಾಮ್‌ ಜಿ’ ಅನುಷ್ಠಾನದಲ್ಲಿ ಎಡವಟ್ಟು! ಕೂಲಿ ಸಿಗದೆ...

ಗ್ರಾಮೀಣ ಬಡ ಕುಟುಂಬಗಳಿಗೆ ಆಸರೆಯಾಗಬೇಕಿದ್ದ ‘ವಿಬಿ-ಜಿ ರಾಮ್ ಜಿ’ (VB-G RAM G) ಯೋಜನೆ, ಅನುಷ್ಠಾನದ ಎಡವಟ್ಟುಗಳಿಂದಾಗಿ ಗೊಂದಲದ ಗೂಡಾಗಿದೆ. ಕೆಲಸ ಮಾಡಿದರೂ ತಿಂಗಳುಗಟ್ಟಲೆ ಕೂಲಿ ಸಿಗದೆ ಬಡ ಕಾರ್ಮಿಕರು ಆರ್ಥಿಕ ಸಂಕಷ್ಟಕ್ಕೆ...

ಖಾಲಿಯಾಗುತ್ತಿವೆ ಉತ್ತರ ಕನ್ನಡದ ಹಳ್ಳಿಗಳು: 40ಕ್ಕೂ ಹೆಚ್ಚು ಗ್ರಾಮಗಳಲ್ಲಿ...

ಮಕ್ಕಳ ಗದ್ದಲ, ಕೃಷಿ ಚಟುವಟಿಕೆಯ ಹಿಗ್ಗು, ಹಬ್ಬ-ಹರಿದಿನಗಳ ಸಂಭ್ರಮದಿಂದ ಕಂಗೊಳಿಸುತ್ತಿದ್ದ ಹಳ್ಳಿಗಳು ಇವತ್ತು ನಿಶ್ಶಬ್ದವಾಗಿ ನಿಂತಿವೆ. ಪ್ರಕೃತಿಯ ಮಡಿಲಲ್ಲಿ ಕಟ್ಟಿಕೊಂಡಿದ್ದ ಬದುಕು ನಿಧಾನವಾಗಿ ಕರಗಿ ಹೋಗುತ್ತಿದೆ. ಊರು ತೊರೆದು ಪಟ್ಟಣ ಸೇರವುದು ಅನಿವಾರ್ಯವ...

ಕಲಬುರಗಿ | ‘ನಮ್ಮನ್ನ ಎಲ್ಲಿಗೆ ಕಳುಹಿಸುತ್ತೀರಿ?’: ತಗ್ಗಿನ ಬೇಲಿಯ...

92ಕ್ಕೂ ಅಧಿಕ ಸ್ಲಂ ಕುಟುಂಬಗಳ ಬದುಕು ಕೇವಲ ಜಮೀನಿನ ಹಕ್ಕಿನ ಪ್ರಶ್ನೆಯಲ್ಲ; ಅವರ ಸುರಕ್ಷಿತ ಓಡಾಟ, ಕುಡಿಯುವ ನೀರು ಹಾಗೂ ನಿತ್ಯದ ಬದುಕಿನ ಹಕ್ಕಿನ ಪ್ರಶ್ನೆಯೂ ಹೌದು. ನ್ಯಾಯಾಲಯದ ವಿಚಾರಣೆ ಅಂತಿಮಗೊಳ್ಳುವವರೆಗೆ ಯಾವುದೇ...

ಈ ಮೂಲಕ ಸುಡಾನ್‌ ಸೇನಾ ಸಂಘರ್ಷದಲ್ಲಿ ಸಿಲುಕಿರುವ ಭಾರತೀಯರನ್ನು ರಕ್ಷಿಸಿ ತಾಯ್ನಾಡಿಗೆ ಕರೆತರುವ ಪ್ರಯತ್ನ ಭರದಿಂದ ಸಾಗಿದೆ.

ಸುಡಾನ್‌ ಸೇನೆ ಮತ್ತು ಅರೆಸೇನಾ ಪಡೆ ನಡುವೆ ನಡೆಯುತ್ತಿರುವ ಹಿಂಸಾಚಾರಕ್ಕೆ 72 ಗಂಟೆಗಳ ಕದನ ವಿರಾಮ ಘೋಷಿಸಿರುವುದರಿಂದ ಆಪರೇಷನ್‌ ಕಾವೇರಿ ಮೂಲಕ ಭಾರತೀಯರ ರಕ್ಷಣೆಗೆ ಯೋಜನೆ ರೂಪಿಸಲಾಗಿದೆ.

ವಿದೇಶಾಂಗ ಸಚಿವಾಲಯದ ವಕ್ತಾರ ಅರಿಂದಮ್‌ ಬಾಗ್ಚಿ ಈ ಕುರಿತು ಟ್ವೀಟ್ ಮಾಡಿದ್ದು ಭಾರತೀಯ ನೌಕಾಪಡೆಯ ಐಎನ್‌ಎಸ್‌ ಸುಮೇಧಾ ಯುದ್ಧನೌಕೆ ಏರಿದ ಭಾರತೀಯರ ಚಿತ್ರಗಳನ್ನು ಹಂಚಿಕೊಂಡಿದ್ದಾರೆ.

ಕೆಲವರು ರಾಷ್ಟ್ರಧ್ವಜವನ್ನು ಪ್ರದರ್ಶಿಸುವ ಮೂಲಕ ತಮ್ಮನ್ನು ರಕ್ಷಿಸಿದ ನೌಕಾಪಡೆಗೆ ಧನ್ಯವಾದ ಸಲ್ಲಿಸಿದರು.

“ಆಪರೇಷನ್‌ ಕಾವೇರಿ ಮೂಲಕ ಮೊದಲ ಹಂತದಲ್ಲಿ ಸುಡಾನ್‌ನಲ್ಲಿ ಸಿಲುಕಿದ ಭಾರತೀಯರಲ್ಲಿ ಸುಮಾರು 278 ಜನರ ತಂಡವನ್ನು ಸೌದಿ ಅರೇಬಿಯಾದ ಜೆಡ್ಡಾಗೆ ಕರೆತರಲಾಗಿದೆ” ಎಂದು ಟ್ವೀಟ್‌ ಮಾಡಿದ್ದಾರೆ.

ಸುಡಾನ್‌ನಿಂದ ರಕ್ಷಿಸಿದ ಭಾರತೀಯರ ತಂಡದಲ್ಲಿ ಮಕ್ಕಳೂ ಇದ್ದಾರೆ.

ಆಪರೇಷನ್‌ ಕಾವೇರಿ ಭಾಗವಾಗಿ ಭಾರತವು ಜೆಡ್ಡಾನಲ್ಲಿ ಎರಡು ವಿಮಾನ ಮತ್ತು ಸುಡಾನ್‌ ಬಂದರಿನಲ್ಲಿ ಐಎನ್‌ಎಸ್‌ ಸುಮೇಧಾ ಇರಿಸಿತ್ತು.

ಸುಡಾನ್‌ನಲ್ಲಿ ಭಾರತ ಮೂಲದ 3,000 ಪ್ರಜೆಗಳು ಸಿಲುಕಿರುವ ಸಾಧ್ಯತೆ ಇದೆ. ಹೀಗಾಗಿ ಇವರೆಲ್ಲರನ್ನೂ ರಕ್ಷಿಸಿ, ತಾಯ್ನಾಡಿಗೆ ಕರೆತರುವ ಕೆಲಸ ಭರದಿಂದ ಸಾಗಿದೆ.

ಸುಡಾನ್‌ ಸೇನೆ ಹಾಗೂ ಸುಡಾನ್‌ನ ಅರೆಸೇನಾ ಪಡೆಯ ನಡುವೆ ಕಳೆದ 10 ದಿನಗಳಿಂದ ಯುದ್ಧ ನಡೆಯುತ್ತಿದೆ. ಈ ಸೇನಾ ಘರ್ಷಣೆಯಲ್ಲಿ ಕೋಟ್ಯಂತರ ಜನರು ಅಪಾಯದಲ್ಲಿದ್ದಾರೆ. ಭಾರತೀಯ ಸೇನೆ ಹಾಗೂ ಭಾರತ ಸರ್ಕಾರ ಅಲ್ಲಿ ಸಿಲುಕಿರುವ ಭಾರತೀಯರ ರಕ್ಷಣೆಗೆ ದೊಡ್ಡ ಪಡೆಯನ್ನು ಅಲ್ಲಿಗೆ ಕಳುಹಿಸಿದೆ.

ಸೌದಿ ಮೂಲಕ ರಕ್ಷಣಾ ಕಾರ್ಯ

ಸುಡಾನ್ ದೇಶಕ್ಕೆ ಸೌದಿ ಅರೇಬಿಯಾ ನೆರೆಯ ರಾಷ್ಟ್ರ. 2 ರಾಷ್ಟ್ರಗಳ ನಡುವೆ ಕೆಂಪು ಸಮುದ್ರ ಹರಡಿಕೊಂಡಿದೆ. ಆದ್ದರಿಂದ ಸೌದಿ ಅರೇಬಿಯಾ ಮೂಲಕ ಭಾರತೀಯರನ್ನು ರಕ್ಷಿಸಿ ಕರೆತರುವ ಕಾರ್ಯ ಮುಂದುವರಿದಿದೆ.

500ಕ್ಕೂ ಹೆಚ್ಚು ಭಾರತೀಯರು ಸುಡಾನ್ ಬಂದರನ್ನು ತಲುಪಿದ್ದು, ಶೀಘ್ರದಲ್ಲೇ ತಾಯ್ನಾಡಿಗೆ ಮರಳಲಿದ್ದಾರೆ. ಆಪರೇಷನ್ ಕಾವೇರಿ ಮೂಲಕ ಅವರನ್ನು ಭಾರತಕ್ಕೆ ಕರೆತರುವ ಕಾರ್ಯ ಸಾಗಿದೆ.

ಸುಡಾನ್ ಕಾರ್ಯಾಚರಣೆ ಏಪ್ರಿಲ್ 24ರಿಂದ ಪರಿಣಾಮಕಾರಿಯಾಗಿ ಆರಂಭವಾಗಿದೆ. ಯೋಜನೆಯಂತೆ ಹಕ್ಕಿಪಿಕ್ಕಿ ಜನರನ್ನೂ ರಕ್ಷಿಸಿ ಕರೆತರುವ ಪ್ರಯತ್ನ ಮುಂದುವರಿದಿದೆ. ಈಗಾಗಲೇ ಹಲವು ದೇಶಗಳು ಭಾರತೀಯರನ್ನು ರಕ್ಷಣೆ ಮಾಡಿವೆ. ಸೌದಿ ಅರೇಬಿಯಾ ಕೂಡ ಭಾರತೀಯರನ್ನು ರಕ್ಷಿಸಿ ತಾಯ್ನಾಡಿಗೆ ಕಳುಹಿಸಿ ಕೊಟ್ಟಿದೆ.

ಹಿಂಸಾಚಾರದ ತವರು ಸುಡಾನ್

ಈ ಸುದ್ದಿ ಓದಿದ್ದೀರಾ? ಪ್ರಧಾನಿ ಹುದ್ದೆಗೆ ರಾಜನಾಥ್‌ ಸಿಂಗ್‌ ಗಂಭೀರ ಅಭ್ಯರ್ಥಿ : ಸತ್ಯಪಾಲ್‌ ಮಲಿಕ್

1956ರಲ್ಲಿ ಬ್ರಿಟನ್‌ನಿಂದ ಸ್ವಾತಂತ್ರ್ಯ ಪಡೆದ ನಂತರ ದೇಶದಲ್ಲಿ ಮೊದಲ ಬಾರಿಗೆ ಹಿಂಸಾಚಾರ ನಡೆದಿತ್ತು. 1958, 1969, 1985, 1989, 2019 ಮತ್ತು 2021ರಲ್ಲಿ ಸುಡಾನ್ ಭೀಕರ ದಂಗೆ ಹಾಗೂ ಹಿಂಸಾಚಾರಕ್ಕೆ ಸಾಕ್ಷಿಯಾಗಿದೆ.

1989ರಲ್ಲಿ ನಡೆದ ದಂಗೆ ಪರಿಣಾಮ ಒಮರ್ ಅಲ್-ಬಶೀರ್ ಅಧಿಕಾರಕ್ಕೆ ಬಂದಿದ್ದ. ಸತತ 3 ದಶಕಕ್ಕೂ ಹೆಚ್ಚು ಕಾಲ ಈತ ಸರ್ವಾಧಿಕಾರಿಯಾಗಿ ಸುಡಾನ್ ನೆಲವನ್ನು ಆಳಿದ್ದ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

2017ರಲ್ಲಿ ಚುನಾವಣಾ ಆಯೋಗವನ್ನು ನಂಬಿದ್ದೆವು, ಆದರೆ 2022ರಲ್ಲಿ ಎಸ್‌ಪಿ ಮತಗಳನ್ನು ಇಸಿ ಅಳಿಸಿದೆ: ಅಖಿಲೇಶ್ ಆರೋಪ

2022ರ ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ಸಮಾಜವಾದಿ ಪಕ್ಷದ (ಎಸ್‌ಪಿ) ಬೆಂಬಲಿಗರ...

ಪಶ್ಚಿಮ ಬಂಗಾಳ | ಸುವೇಂದು ಅಧಿಕಾರಿಗೆ ‘ಅಲ್ಲಾಹ್ ಮೇಲಕ್ಕೆ ಟಿಕೆಟ್ ಕಾಯ್ದಿರಿಸಲಿ’ – ಹುಮಾಯೂನ್ ವಿವಾದಾತ್ಮಕ ಹೇಳಿಕೆ

ಪಶ್ಚಿಮ ಬಂಗಾಳದ ರೇಜಿನಗರ ಉಪಚುನಾವಣೆ ಸಮೀಪಿಸುತ್ತಿದ್ದಂತೆ ರಾಜಕೀಯ ವಾಗ್ದಾಳಿಗಳು ತೀವ್ರ ಸ್ವರೂಪ...

ಗ್ಯಾನೇಶ್ ಕುಮಾರ್ ರಾಜೀನಾಮೆ ನೀಡಲಿ: ಇಸಿಐ ವಿವರಣೆ ತಿರಸ್ಕರಿಸಿದ ಸಿಪಿಐಎಂ; ಸಿಇಸಿ ಪದಚ್ಯುತಿಗೆ ಆಗ್ರಹ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಗೆ ಸಂಬಂಧಿಸಿದಂತೆ ಕೇಂದ್ರ...

ಸಮುದ್ರದಲ್ಲಿ ಅಲೆಗಳು ಭೋರ್ಗರೆಯುತ್ತಿರುವಾಗ ಈಜುವುದು ನನಗಿಷ್ಟ: ವೈರಲ್ ಆಯ್ತು ರಾಹುಲ್ ಗಾಂಧಿ ‘X’ ಪೋಸ್ಟ್

ಸಮುದ್ರದಲ್ಲಿ ಅಲೆಗಳು ಭೋರ್ಗರೆಯುತ್ತಿರುವಾಗ ಈಜುವುದು ನನಗಿಷ್ಟ ಎಂದು ಕಾಂಗ್ರೆಸ್ ನಾಯಕ ಹಾಗೂ...