ಜಂತರ್ ಮಂತರ್‌ನಲ್ಲಿ ಪ್ರತಿಭಟನೆ: ಎಎಪಿ ನಾಯಕ ಸೌರಭ್ ಭಾರದ್ವಾಜ್ ಸೇರಿ ಹಲವು ಮಂದಿ ದೆಹಲಿ ಪೊಲೀಸರ ವಶಕ್ಕೆ

Date:

ಚುನಾವಣಾ ಆಯೋಗದ ವಿರುದ್ಧ ಆಯೋಜಿಸಲಾಗಿದ್ದ ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲು ಜಂತರ್ ಮಂತರ್‌‌ಗೆ ಆಗಮಿಸಿದ್ದ ಎಎಪಿ ದೆಹಲಿ ಘಟಕದ ಅಧ್ಯಕ್ಷ ಹಾಗೂ ಹಿರಿಯ ನಾಯಕ ಸೌರಭ್ ಭಾರದ್ವಾಜ್ ಅವರನ್ನು ದೆಹಲಿ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಸೌರಭ್ ಭಾರದ್ವಾಜ್ ಅವರ ಜತೆಗೆ ಶಾಸಕ ಸಂಜೀವ್ ಝಾ ಸೇರಿದಂತೆ ಸುಮಾರು 50ಕ್ಕೂ ಹೆಚ್ಚು ಆಪ್ ನಾಯಕರು ಮತ್ತು ಕಾರ್ಯಕರ್ತರನ್ನು ಪೊಲೀಸರು ಸ್ಥಳದಲ್ಲಿಯೇ ವಶಕ್ಕೆ ತೆಗೆದುಕೊಂಡಿದ್ದಾರೆ.

- Advertisement -

ಚುನಾವಣಾ ಆಯೋಗದ ನಡಾವಳಿಗಳನ್ನು ವಿರೋಧಿಸಿ ಸಿಜೆಪಿ, ಇಂಡಿಯಾ ಒಕ್ಕೂಟ ಮಾತ್ರವಲ್ಲದೆ ಆಮ್ ಆದ್ಮಿ ಪಾರ್ಟಿಯೂ ಜಂತರ್ ಮಂತರ್‌ನಲ್ಲಿ ಬೃಹತ್ ಪ್ರತಿಭಟನೆಯನ್ನು ಆಯೋಜಿಸಿತ್ತು. ಆದರೆ ಪೊಲೀಸರು ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸಲು ಅವಕಾಶವಿಲ್ಲ ಎಂದು ಹೇಳಿಕೊಂಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕಪ್ಪತಗುಡ್ಡದ ಮಡಿಲಲ್ಲಿ ಗಾಂಧಿ ತತ್ವಗಳ ಪ್ರೇರಣಾ ಕೇಂದ್ರ ‘ಸಬರಮತಿ...

ಗದಗ ನಗರದ ಕಪ್ಪತಗುಡ್ಡದ ಸೆರಗಿನಲ್ಲಿರುವ 'ಮಹಾತ್ಮ ಗಾಂಧಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ವಿಶ್ವವಿದ್ಯಾಲಯ'ದ ಆವರಣದಲ್ಲಿ ನಿರ್ಮಿಸಲಾಗಿರುವ ಸಬರಮತಿ ಆಶ್ರಮವು ಗಾಂಧೀಜಿಯವರ ತತ್ವ ಮತ್ತು ಆದರ್ಶಗಳನ್ನು ಇಂದಿನ ಪೀಳಿಗೆಗೆ ತಲುಪಿಸುವ ಪ್ರೇರಣಾ ಕೇಂದ್ರವಾಗಿ...

ಸ್ಮರಣೆ | ʼಗಾಂಧಿ ನೀ ನಮ್ಮೆಲ್ಲರೊಳಗೂ ಇರುವೆʼ

ನಿನ್ನ ಚಾಳೀಸಿನೊಳಗೆ ತೂರಿಕೊಂಡ ಸ್ವಚ್ಚ ಭಾರತವಿನ್ನೂ ಚರಂಡಿಯಲ್ಲಿ ಹೊರಳಾಡುತ್ತಿದೆ. ಕಪ್ಪು ಹಣದ ಕತ್ತಲೆ ಗಾಢವಾಗಿ, ಸೂತ್ರಧಾರಿಗಳು ಉಳ್ಳವರಾಗಿ ಕೈಲಾಸದಲ್ಲಿನ ಭವ್ಯ ಶಿವಾಲಯದಲ್ಲಿದ್ದಾರೆ. ಊರ ಹೊರಗಣ ಕೇರಿಯವರಿಗೆ ಕೊಳಕು ಬಳಿಯುವ ಕಾಯಕ ಮತ್ತು ಕೊಳಗೇರಿ...

ಸುದ್ದಿ ವಿವರ | ಇವಿಎಂ vs ಬ್ಯಾಲೆಟ್‌ ಪೇಪರ್‌:...

ಇವಿಎಂ ಮೇಲಿನ ವಿಶ್ವಾಸದ ಪ್ರಶ್ನೆ ಮತ್ತೆ ದೇಶದ ಚುನಾವಣಾ ಚರ್ಚಾ ಕೇಂದ್ರವಾಗಿದೆ. ಪಾರದರ್ಶಕತೆ ಮತ್ತು ಮತದಾರರ ನಂಬಿಕೆಯನ್ನು ಮುಂದಿಟ್ಟುಕೊಂಡು, ಬ್ಯಾಲೆಟ್‌ ಪೇಪರ್ ವ್ಯವಸ್ಥೆಗೆ ಮರಳಬೇಕೆಂಬ ಬೇಡಿಕೆಯನ್ನು ವಿಪಕ್ಷಗಳು ಮುಂದೆ ತಂದಿವೆ. ಬುಧವಾರ (ಸೆ.30), ದೆಹಲಿಯಲ್ಲಿ...

ಇದನ್ನೂ ಓದಿ: ಸಿಇಸಿ ಗ್ಯಾನೇಶ್ ರಾಜೀನಾಮೆಗೆ ಆಗ್ರಹಿಸಿ ಪ್ರತಿಭಟನೆ: ಅನುಮತಿ ನಿರಾಕರಣೆ; ಜಂತರ್ ಮಂತರ್‌ನಲ್ಲಿ ಬಿಗಿ ಭದ್ರತೆ

ಪ್ರತಿಭಟನಾ ಸ್ಥಳ ತಲುಪಿದ ಸೌರಭ್ ಭಾರದ್ವಾಜ್, ಸಾರ್ವಜನಿಕರಿಗೆ ಮತ್ತು ಬೆಂಬಲಿಗರಿಗೆ ಶಾಂತಿಯುತವಾಗಿ ಧರಣಿಯಲ್ಲಿ ಭಾಗವಹಿಸುವಂತೆ ಮನವಿ ಮಾಡುತ್ತಿದ್ದಂತೆಯೇ ದೆಹಲಿ ಪೊಲೀಸರು ಅವರನ್ನು ವಶಕ್ಕೆ ಪಡೆದರು.

ತಮ್ಮನ್ನು ವಶಕ್ಕೆ ಪಡೆದ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಸೌರಭ್ ಭಾರದ್ವಾಜ್, “ನಾವು ಅತ್ಯಂತ ಶಾಂತಿಯುತವಾಗಿ ಪ್ರತಿಭಟನೆ ನಡೆಸಲು ಬಂದಿದ್ದೆವು. ಆದರೆ ಪೊಲೀಸರು ನಮ್ಮ ಕಾರ್ಯಕರ್ತರು ಮತ್ತು ಸ್ವಯಂಸೇವಕರೊಂದಿಗೆ ದುರ್ವರ್ತನೆ ತೋರಿದ್ದಾರೆ” ಎಂದು ಗಂಭೀರ ಆರೋಪ ಮಾಡಿದ್ದಾರೆ.

ಪ್ರತಿಭಟನೆಯನ್ನು ಹತೋಟಿಗೆ ತರಲು ಮತ್ತು ಕಾನೂನು ಸುವ್ಯವಸ್ಥೆ ಕಾಪಾಡಲು ದೆಹಲಿ ಪೊಲೀಸರು ಜಂತರ್ ಮಂತರ್ ಸುತ್ತಮುತ್ತಲಿನ ಪ್ರದೇಶದಲ್ಲಿ ಭದ್ರತೆಯನ್ನು ತೀವ್ರಗೊಳಿಸಿದ್ದು, ಕೆಲವೆಡೆ ಇಂಟರ್ನೆಟ್ ಸೇವೆಗಳನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಇಸಿ ಗ್ಯಾನೇಶ್ ರಾಜೀನಾಮೆಗೆ ಆಗ್ರಹಿಸಿ ಪ್ರತಿಭಟನೆ: ಅನುಮತಿ ನಿರಾಕರಣೆ; ಜಂತರ್ ಮಂತರ್‌ನಲ್ಲಿ ಬಿಗಿ ಭದ್ರತೆ

ಮುಖ್ಯ ಚುನಾವಣೆ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ...

ಸ್ಮರಣೆ | ʼಗಾಂಧಿ ನೀ ನಮ್ಮೆಲ್ಲರೊಳಗೂ ಇರುವೆʼ

ನಿನ್ನ ಚಾಳೀಸಿನೊಳಗೆ ತೂರಿಕೊಂಡ ಸ್ವಚ್ಚ ಭಾರತವಿನ್ನೂ ಚರಂಡಿಯಲ್ಲಿ ಹೊರಳಾಡುತ್ತಿದೆ. ಕಪ್ಪು ಹಣದ...

ಕಾಲಮಾನ | ದೇಹವೇ ನೈತಿಕ ಹೋರಾಟದ ತಾಣವಾದಾಗ…

ಉಪವಾಸ ಸತ್ಯಾಗ್ರಹ ಬಲಪ್ರಯೋಗದ ಬದಲು ಸ್ವಯಂಪ್ರೇರಿತ ವೇದನೆ/ಯಾತನೆಯನ್ನು ಅವಲಂಬಿಸುತ್ತದೆ. ಅದು ಮಣಿಸುವುದಕ್ಕಿಂತಲೂ...

ಭಾಲ್ಕಿ | ಹಬ್ಬಗಳ ಆಚರಣೆಯ ಹಿಂದಿರುವ ವೈಚಾರಿಕ ನೆಲೆ ಅರಿಯಬೇಕು: ಧನಲಕ್ಷ್ಮಿ ಪಾಟೀಲ್

ಹಬ್ಬಗಳು ಕೇವಲ ಸಂಭ್ರಮದ ಆಚರಣೆಗಳಾಗಿರದೆ, ಅವುಗಳ ಹಿಂದಿರುವ ಸಾಮಾಜಿಕ, ಸಾಂಸ್ಕೃತಿಕ ಹಾಗೂ...