ಪ್ರತಿಭಟನೆ ನಂತರ ಸ್ವಲ್ಪ ಶಾಪಿಂಗ್ ಮಾಡಿ: ವರ್ತಕರ ಆಕ್ಷೇಪಕ್ಕೆ ರಾಹುಲ್ ಗಾಂಧಿ ಪ್ರತಿಕ್ರಿಯೆ

Date:

ಇಂದು (ನ.1) ದೆಹಲಿಯ ರಾಮಲೀಲಾ ಮೈದಾನದಲ್ಲಿ ಪ್ರತಿಪಕ್ಷಗಳ ‘ಇಂಡಿಯಾ’ ಒಕ್ಕೂಟ ಆಯೋಜಿಸಿರುವ ಬೃಹತ್ ರ್ಯಾಲಿಯಿಂದಾಗಿ ದೀಪಾವಳಿ ಹಬ್ಬದ ಸಸಂಂಭ್ರಮದಲ್ಲಿದ್ದ ತಮ್ಮ ವ್ಯಾಪಾರ-ವಹಿವಾಟಿಗೆ ಧಕ್ಕೆಯಾಗಲಿದೆ ಎಂದು ಸ್ಥಳೀಯ ವರ್ತಕರು ಆತಂಕ ವ್ಯಕ್ತಪಡಿಸಿದ್ದಾರೆ. ವರ್ತಕರ ಈ ಆಕ್ಷೇಪಕ್ಕೆ ಪ್ರತಿಕ್ರಿಯಿಸಿರುವ ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ, ರಸವತ್ತಾದ ಸಲಹೆಯೊಂದನ್ನು ನೀಡಿದ್ದಾರೆ. “ದೆಹಲಿಗೆ ಆಗಮಿಸುವ ಲಕ್ಷಾಂತರ ಜನರು ಪ್ರತಿಭಟನೆ ಮುಗಿದ ನಂತರ ಸ್ಥಳೀಯ ಮಾರುಕಟ್ಟೆಗಳಲ್ಲಿ ಶಾಪಿಂಗ್ ಮಾಡುವ ಮೂಲಕ ಸಣ್ಣ ವ್ಯಾಪಾರಿಗಳಿಗೆ ನೆರವಾಗಬೇಕು” ಎಂದಿದ್ದಾರೆ.

- Advertisement -

ಚಲಿಸುತ್ತಿರುವ ಕಾರಿನಲ್ಲಿ ಕುಳಿತು ವಿಡಿಯೋ ಸಂದೇಶವೊಂದನ್ನು ಸಾಮಾಜಿಕ ಜಾಲತಾಣ ‘ಎಕ್ಸ್’ನಲ್ಲಿ ಹಂಚಿಕೊಂಡಿರುವ ರಾಹುಲ್ ಗಾಂಧಿ, “ನಾಳೆ (ಭಾನುವಾರ) ರ್ಯಾಲಿಯಲ್ಲಿ ಭಾಗವಹಿಸಿ, ಮೆರವಣಿಗೆ ನಡೆಸಿ ಪ್ರತಿಭಟನೆ ದಾಖಲಿಸುವುದರ ಜೊತೆಗೆ, ದೆಹಲಿಯ ಮಾರುಕಟ್ಟೆಗಳಲ್ಲಿ ಸ್ವಲ್ಪ ಶಾಪಿಂಗ್ ಕೂಡ ಮಾಡಿ. ಇದರಿಂದ ನಮ್ಮ ಸ್ಥಳೀಯ ವರ್ತಕರಿಗೆ ಆರ್ಥಿಕವಾಗಿ ಸಹಾಯವಾಗುತ್ತದೆ. ನಮ್ಮ ರ್ಯಾಲಿಯಿಂದ ವ್ಯಾಪಾರಿಗಳಿಗೆ ಯಾವುದೇ ತೊಂದರೆಯಾಗುವುದಿಲ್ಲ ಎಂಬುದು ನಮಗೆ ತಿಳಿದಿದೆ. ಆದರೆ, ಈ ವಿಷಯದಲ್ಲಿ ಬಿಜೆಪಿ ಭಯಗೊಂಡು ಸುಳ್ಳು ವದಂತಿಗಳನ್ನು ಹರಡುತ್ತಿದೆ. ಹೀಗಾಗಿ, ನಾವು ಪ್ರತಿಭಟನೆ ಮತ್ತು ಶಾಪಿಂಗ್ ಎರಡನ್ನೂ ಒಟ್ಟಿಗೆ ಮಾಡೋಣ” ಎಂದು ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ರಾಜ್ಯೋತ್ಸವ ವಿಶೇಷ | ಕನ್ನಡಕ್ಕೊಂದು ವಿಜ್ಞಾನದ ಓದು

ವಿಜ್ಞಾನ ಓದು ಎಂದರೇನು? ಕನ್ನಡಕ್ಕಾಗಿ ಅಂತಹದೊಂದು ಬೇಕಾ? ಇಂತಹದ್ದೊಂದರ ಚರ್ಚೆ ಇಂದಿನ ಅಗತ್ಯಗಳಲ್ಲೊಂದು. ಏಕೆಂದರೆ ನಮ್ಮಲ್ಲಿ ಓದು ಎನ್ನುವುದು ಬಹುಪಾಲು ಸಾಹಿತ್ಯಕವಾದ ಓದೇ ಆಗಿದೆ. ಸಾಹಿತ್ಯದಲ್ಲಿ ಸಹಜವಾಗಿ ಕಾಣಬರುವ ಒಂದು ಬಗೆಯ ಎಲ್ಲವೂ...

ರೈತ ಹೋರಾಟದಿಂದ ವಿಧಾನಸಭಾಧ್ಯಕ್ಷ ಸ್ಥಾನದವರೆಗೆ ಕಾಗೋಡು ತಿಮ್ಮಪ್ಪ ಹಾದಿ…

ಕರ್ನಾಟಕದ ಸಾಮಾಜಿಕ ಮತ್ತು ರಾಜಕೀಯ ಇತಿಹಾಸದಲ್ಲಿ ಕೆಲವು ವ್ಯಕ್ತಿಗಳು ತಮ್ಮ ಹೋರಾಟ, ಸಾರ್ವಜನಿಕ ಬದುಕು ಹಾಗೂ ಜನಪರ ಚಟುವಟಿಕೆಗಳ ಮೂಲಕ ವಿಶೇಷ ಛಾಪು ಮೂಡಿಸಿದ್ದಾರೆ. ಅಂತಹವರ ಸಾಲಿನಲ್ಲಿ ಶಿವಮೊಗ್ಗ ಜಿಲ್ಲೆಯ ಸಾಗರದ ಕಾಂಗ್ರೆಸ್...

ಈ ದಿನ ಕವಿತೆ | ಎರಡು ದೀಪಗಳು- ಅಲಿ...

ವಾರಕ್ಕೊಂದು ಅನುವಾದಿತ ಕವಿತೆ ಮಾಲಿಕೆಯಲ್ಲಿ ಉರ್ದು ಕವಿ ಅಲಿ ಸರ್ದಾರ್ ಜಾಫ್ರಿಯವರ ಕವನವನ್ನು ಕನ್ನಡಕ್ಕೆ ಅನುವಾದಿಸಿದ್ದಾರೆ ಹಿರಿಯ ಅನುವಾದಕಿ ಸಿ ಎಚ್‌ ಭಾಗ್ಯ . ಕತ್ತಲ ಗವಿಯೊಳಗಿಂದರೆಕ್ಕೆಗಳು ಫಡಫಡಿಸುವ ಸದ್ದು ಕೇಳುವುದು.ನಿರ್ದಯಿ ಗಾಳಿಯುಮಂಜಿನ ಮೇಲೆ...

ದೀಪಾವಳಿ, ಛಥ್ ಪೂಜೆ ಹಾಗೂ ಭಾಯಿ ದೂಜ್ ಹಬ್ಬಗಳು ಹತ್ತಿರವಿರುವುದರಿಂದ ದೇಶದ ವಿವಿಧ ಭಾಗಗಳಿಂದ ದೆಹಲಿಗೆ ಆಗಮಿಸುತ್ತಿರುವ ಲಕ್ಷಾಂತರ ಜನರು ಇಲ್ಲಿನ ಸ್ಥಳೀಯ ವ್ಯಾಪಾರಿಗಳಿಗೆ ಬೆಂಬಲ ನೀಡಬೇಕೆಂದು ಅವರು ಕೋರಿದ್ದಾರೆ.

ಅಂದಹಾಗೆ, ಇತ್ತೀಚೆಗೆ ದೆಹಲಿಯ ‘ಚೇಂಬರ್ ಆಫ್ ಟ್ರೇಡ್ ಅಂಡ್ ಇಂಡಸ್ಟ್ರಿ’ (CTI) ಸಂಘಟನೆಯು ದೀಪಾವಳಿ ಹಬ್ಬದ ಹಿನ್ನೆಲೆಯಲ್ಲಿ ನವೆಂಬರ್ 11ರ ನಂತರದ ದಿನಗಳಿಗೆ ರ್ಯಾಲಿಯನ್ನು ಮುಂದೂಡುವಂತೆ ‘ಇಂಡಿಯಾ’ ಒಕ್ಕೂಟದ ನಾಯಕರಾದ ಅಖಿಲೇಶ್ ಯಾದವ್, ಮಮತಾ ಬ್ಯಾನರ್ಜಿ, ತೇಜಸ್ವಿ ಯಾದವ್ ಹಾಗೂ ಉದ್ಧವ್ ಠಾಕ್ರೆ ಅವರಿಗೆ ಪತ್ರ ಬರೆದಿತ್ತು. ನವೆಂಬರ್ 6 ರಂದು ಧನ್ ತೇರಸ್ ಮತ್ತು ನವೆಂಬರ್ 8 ರಂದು ದೀಪಾವಳಿ ಹಬ್ಬವಿದ್ದು, ನವೆಂಬರ್ 1 ಅತ್ಯಂತ ಪ್ರಮುಖ ವ್ಯಾಪಾರಿ ದಿನವಾಗಿದೆ. ಚಾಂದನಿ ಚೌಕ್, ಕನ್ನಾಟ್ ಪ್ಲೇಸ್ ಸೇರಿದಂತೆ ಮಧ್ಯ ಮತ್ತು ಹಳೆಯ ದೆಹಲಿಯ ಸುಮಾರು 20 ಪ್ರಮುಖ ಸಗಟು ಮತ್ತು ಚಿಲ್ಲರೆ ಮಾರುಕಟ್ಟೆಗಳಲ್ಲಿ ಪ್ರತಿದಿನ 10,000 ದಿಂದ 12,000 ಕೋಟಿ ರೂ.ಗಳಷ್ಟು ಬೃಹತ್ ವಹಿವಾಟು ನಡೆಯುತ್ತದೆ. ರ್ಯಾಲಿಗೆ ಸುಮಾರು 10 ಲಕ್ಷ ಜನರು ಮತ್ತು 15,000 ದಿಂದ 20,000 ವಾಹನಗಳು ಆಗಮಿಸುವ ನಿರೀಕ್ಷೆಯಿರುವುದರಿಂದ ಸಂಚಾರ ದಟ್ಟಣೆ ಉಂಟಾಗಿ ವ್ಯಾಪಾರ ಸ್ಥಗಿತಗೊಳ್ಳಬಹುದು ಎಂಬುದು CTI ಅಧ್ಯಕ್ಷ ಬ್ರಿಜೇಶ್ ಗೋಯಲ್ ಹೇಳಿದ್ದರು.

ಈ ನಡುವೆ, ಚುನಾವಣಾ ಅಕ್ರಮ ಮತ್ತು ಎಸ್‌ಐಅರ್‌ ಪ್ರಕ್ರಿಯೆಯಡಿ ಸುಮಾರು 13 ಕೋಟಿ (14%ರಷ್ಟು) ನೈಜ ಮತದಾರರ ಹೆಸರುಗಳನ್ನು ಡಿಲೀಟ್ ಮಾಡಲಾಗಿದೆ ಎಂದು ಆರೋಪಿಸಿ ಪ್ರತಿಪಕ್ಷಗಳು ಹಮ್ಮಿಕೊಂಡಿರುವ ಈ ಹೋರಾಟ ತೀವ್ರ ಸ್ವರೂಪ ಪಡೆದುಕೊಂಡಿದೆ. ಶನಿವಾರವಷ್ಟೇ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ನಿವಾಸದ ಆವರಣದಲ್ಲಿ ನಡೆದ ಸಾಂಕೇತಿಕ ಸಂಸತ್ತಿನಲ್ಲಿ, ಮಾಜಿ ಸ್ಪೀಕರ್ ಮೀರಾ ಕುಮಾರ್ ಅಧ್ಯಕ್ಷತೆಯಲ್ಲಿ ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ವಿರುದ್ಧ ‘ಸಾರ್ವಜನಿಕ ದೋಷಾರೋಪಣೆ’ ನಡೆಸಿ ನಿರ್ಣಯ ಅಂಗೀಕರಿಸಲಾಗಿತ್ತು.

ಇತ್ತ ದೆಹಲಿ ಪೊಲೀಸರು ಷರತ್ತುಬದ್ಧ ಅನುಮತಿಯೊಂದಿಗೆ ರಾಮಲೀಲಾ ಮೈದಾನದ ರ್ಯಾಲಿಗೆ ಅವಕಾಶ ನೀಡಿದ್ದು, ನಿಗದಿತ ಸ್ಥಳಗಳಲ್ಲಿ ಮಾತ್ರ ವಾಹನಗಳನ್ನು ಪಾರ್ಕ್ ಮಾಡುವಂತೆ ಸೂಚಿಸಿದ್ದಾರೆ. ರಾಹುಲ್ ಗಾಂಧಿ ಅವರು “ಮೆರವಣಿಗೆಯೂ ನಡೆಯಲಿದೆ, ರ್ಯಾಲಿಯೂ ನಡೆಯಲಿದೆ ಹಾಗೂ ಲಕ್ಷಾಂತರ ಜನರು ಸ್ಥಳೀಯ ಸಣ್ಣ ಅಂಗಡಿಗಳಿಂದ ವಸ್ತುಗಳನ್ನು ಖರೀದಿಸಲಿದ್ದಾರೆ” ಎಂದು ಹೇಳುತ್ತಾ, ಸಾರ್ವಜನಿಕರಿಗೆ ‘ಶುಭ ದೀಪಾವಳಿ, ಜೈ ಹಿಂದ್’ ಎಂದು ಶುಭಾಶಯ ಕೋರಿದ್ದಾರೆ.

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮತದಾರರ ಮರುಸೇರ್ಪಡೆಗೆ ಚುನಾವಣಾ ಆಯೋಗದಿಂದಲೇ ತಡೆ; 16.10 ಲಕ್ಷ ಜನರ ಸೇರ್ಪಡೆ ವಿರೋಧಿಸಿ ಮೇಲ್ಮನವಿ!

ಪಶ್ಚಿಮ ಬಂಗಾಳದ SIR ಪ್ರಕ್ರಿಯೆ ಮುಗಿದರೂ, ಅಲ್ಲಿನ ಮತದಾರರ ಪಟ್ಟಿಯ ಸುತ್ತ...

‘ಸಂಗೀತಾ’ ಮತ್ತು ‘ಸಂಗೇತಾ’ ನಡುವಿನ ವ್ಯತ್ಯಾಸ ಹಸಿದ ಗ್ರಾಹಕರಿಗೆ ತಿಳಿಯದು: ಮದ್ರಾಸ್ ಹೈಕೋರ್ಟ್

ತಂಜಾವೂರಿನ ಐತಿಹಾಸಿಕ ಬೃಹದೀಶ್ವರ ದೇವಾಲಯದ ಎದುರು ಇರುವ ಉಪಾಹಾರ ಗೃಹವೊಂದು ‘ಹೋಟೆಲ್...

ಗ್ಯಾನೇಶ್ ವಿರುದ್ಧ ‘ಇಂಡಿಯಾ’ ಒಕ್ಕೂಟದ ಸಾಂಕೇತಿಕ ‘ಮಹಾಭಿಯೋಗ’: ಮುಂದುವರಿದ ವಾಗ್ದಾಳಿ

ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್ ಅವರ ವಿರುದ್ಧ 'ಇಂಡಿಯಾ'...

ಧರ್ಮಸ್ಥಳ ಸೌಜನ್ಯ ಅತ್ಯಾಚಾರ, ಕೊಲೆ ಪ್ರರಕಣ; ಅಪರಾಧ ಸ್ಥಳ ಮರುಸೃಷ್ಟಿಸಿದ SIT

ದೇಶಾದ್ಯಂತ ತೀವ್ರ ಕುತೂಹಲ ಹಾಗೂ ಆಕ್ರೋಶಕ್ಕೆ ಕಾರಣವಾಗಿದ್ದ ಸೌಜನ್ಯ ಅತ್ಯಾಚಾರ ಮತ್ತು...