ಪ್ರಧಾನ್ ರಾಜೀನಾಮೆಗೆ ಹರ್ಷ: ‘ಮೋದಿ, ಅಮಿತ್ ಶಾ ರೆಸಿಗ್ನೇಷನ್ ಬಾಕಿ’ ಎಂದ ಪ್ರತಿಭಟನಾಕಾರರು

Date:

ನೀಟ್ ಪರೀಕ್ಷಾ ಅಕ್ರಮ ಹಾಗೂ ಶೈಕ್ಷಣಿಕ ಅಧ್ವಾನಗಳ ನಡುವೆ ಕೊನೆಗೂ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಇದಾದ ಬೆನ್ನಲ್ಲೇ, ಮುಂಬೈನ ಐತಿಹಾಸಿಕ ಶಿವಾಜಿ ಪಾರ್ಕ್‌ನಲ್ಲಿ ಸಾವಿರಾರು ಯುವಕರು ಮತ್ತು ವಿದ್ಯಾರ್ಥಿಗಳು ಒಟ್ಟುಗೂಡಿ ಬೃಹತ್ ವಿಜಯೋತ್ಸವ ಹಾಗೂ ಪ್ರತಿಭಟನಾ ಸಮಾವೇಶ ನಡೆಸಿದ್ದಾರೆ.

- Advertisement -

ಧಾರಾಕಾರ ಮಳೆಯ ನಡುವೆಯೂ ತ್ರಿವರ್ಣ ಧ್ವಜ ಮತ್ತು ಸಂವಿಧಾನದ ಭಾವಚಿತ್ರಗಳನ್ನು ಹಿಡಿದು ಶಿವಾಜಿ ಪಾರ್ಕ್‌ನಲ್ಲಿ ನೆರೆದಿದ್ದ ವಿದ್ಯಾರ್ಥಿ ಸಮೂಹ, ಪ್ರಧಾನ್ ಅವರ ನಿರ್ಗಮನವನ್ನು ತಮಗಾದ ಪ್ರಥಮ ಹಂತದ ಜಯ ಎಂದು ಬಣ್ಣಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕಲಬುರಗಿ | ಹನಿ ನೀರಿಗೂ ಪರದಾಡುತ್ತಿರುವ ದಣ್ಣೂರು...

ಎರಡು ನಳಗಳ ಮುಂದೆ ಖಾಲಿ ಕೊಡ ಹಿಡಿದು ಗಂಟೆಗಟ್ಟಲೆ ಕಾಯುವ ಮಹಿಳೆಯರು; ಬೆಳೆ ನಷ್ಟ, ಜಾನುವಾರು ಮಾರಾಟ, ಉದ್ಯೋಗದ ಕೊರತೆಯಿಂದ ಗ್ರಾಮ ತೊರೆಯುತ್ತಿರುವ ಕುಟುಂಬಗಳು ಒಂದು ಕೊಡ ನೀರಿಗಾಗಿ ಮನೆಮನೆಯ ಮುಂದೆ ಕಾಯಬೇಕು....

‘ನನ್ನೊಳಗೆ ನೀವೊ ನಿಮ್ಮೊಳಗೆ ನಾನೊ’

ಲೇಹ್ ಲಡಾಕಿನ ಪರ್ವತ ಶ್ರೇಣಿಗಳ ನಡುವೆ ನಮ್ಮ ಕಾರು ನಿಧಾನವಾಗಿ ಸಾಗುತ್ತಿತ್ತು. ಬೇರೆ ಬೇರೆ ಬಣ್ಣಗಳ ಪರ್ವತ ಶಿಖರಗಳು, ಕೆಳಗಡೆ ಕಿಲೋಮಿಟರ್ ಉದ್ದದ ಕಿರಿದಾದ ರಸ್ತೆ, ಪಕ್ಕದಲ್ಲಿ ಸ್ವಲ್ಪ ಎಚ್ಚರ ತಪ್ಪಿದರೂ ಕಾಣುವ...

ಕಾರ್ಪೊರೇಟ್‌ ಕಾಳಗ | ಮಸ್ಕ್‌ನ ಸ್ಟಾರ್‌ಲಿಂಕ್ ಮಣಿಸಿ ಅಂಬಾನಿಯ...

ಎಲಾನ್ ಮಸ್ಕ್ ಒಡೆತನದ ‘ಸ್ಟಾರ್‌ಲಿಂಕ್’ ಉಪಗ್ರಹ ಇಂಟರ್ನೆಟ್ ಭಾರತಕ್ಕೆ ಕಾಲಿಡುತ್ತಿದ್ದಂತೆ ರಿಲಯನ್ಸ್ ಜಿಯೋದ ಮಾರುಕಟ್ಟೆ ಏಕಸ್ವಾಮ್ಯಕ್ಕೆ ಭಾರಿ ಪೈಪೋಟಿ ಎದುರಾಗುವಂತೆ ಕಾಣುತ್ತಿದೆ. ಈ ಬೆನ್ನಲ್ಲೇ, ರಾಷ್ಟ್ರೀಯ ಭದ್ರತೆ ಮತ್ತು ದತ್ತಾಂಶ ಸುರಕ್ಷತೆಯ ನೆಪವೊಡ್ಡಿ...

ಇದನ್ನೂ ಓದಿ: ಧರ್ಮೇಂದ್ರ ಪ್ರಧಾನ್ ರಾಜೀನಾಮೆ; ಇನ್ನೂ ಎರಡು ಬೇಡಿಕೆಗಳು ಬಾಕಿ ಇವೆ ಎಂದ ಸಿಜೆಪಿ

ಸಾಮಾಜಿಕ ಜಾಲತಾಣಗಳ ಕರೆಯ ಮೇರೆಗೆ ಶಿವಾಜಿ ಪಾರ್ಕ್ ಹಾಗೂ ದಾದರ್ ಸುತ್ತಮುತ್ತ ಸಾವಿರಾರು ವಿದ್ಯಾರ್ಥಿಗಳು, ಯುವ ಕಾರ್ಯಕರ್ತರು ಮತ್ತು ಸಾರ್ವಜನಿಕರು ಜಮಾಯಿಸಿದ್ದರು. ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಯಿಂದಲೇ ತಮ್ಮ ಹೋರಾಟ ಮುಗಿಯುವುದಿಲ್ಲ ಎಂದು ಪ್ರತಿಭಟನಾಕಾರರು ಹೇಳಿದ್ದಾರೆ.

“ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಕೊಟ್ಟಿದ್ದಾರೆ, ಈಗ ಮೋದಿ ಮತ್ತು ಅಮಿತ್ ಶಾ ಬಾಕಿ ಇದ್ದಾರೆ” (Modi, Amit Shah baaki hai) ಎಂದು ಘೋಷಣೆಗಳನ್ನು ಕೂಗಿದರು. ದೇಶದ ಶಿಕ್ಷಣ ವ್ಯವಸ್ಥೆಯಲ್ಲಿ ನಡೆದ ಲೋಪದೋಷಗಳಿಗೆ ಸಂಪೂರ್ಣ ಸರ್ಕಾರವೇ ಹೊಣೆ ಹೊರಬೇಕು ಎಂದು ಅವರು ಹಕ್ಕೊತ್ತಾಯ ಮಂಡಿಸಿದರು.

ಮುಂಬೈನಲ್ಲಿ ಸುರಿಯುತ್ತಿದ್ದ ಜಿಟಿಜಿಟಿ ಮಳೆಯ ನಡುವೆಯೂ ರೇನ್‌ಕೋಟ್ ಹಾಗೂ ಛತ್ರಿಗಳನ್ನು ಹಿಡಿದು ನಿಂತಿದ್ದ ಯುವಕ-ಯುವತಿಯರು ಡಾ. ಬಿ.ಆರ್. ಅಂಬೇಡ್ಕರ್ ಅವರ ಭಾವಚಿತ್ರಗಳು ಹಾಗೂ ಸಂವಿಧಾನದ ಪ್ರತಿಗಳನ್ನು ಎತ್ತಿಹಿಡಿದರು. ಶಾಂತಿಯುತವಾಗಿಯೇ ಸಾಗಿದ ಈ ಸಮಾವೇಶದಲ್ಲಿ ವಿದ್ಯಾರ್ಥಿಗಳು ತಮ್ಮ ಹಕ್ಕುಗಳಿಗಾಗಿ ಧ್ವನಿ ಎತ್ತಿದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು | ಮಾ. ಶಾಸಕ ಎಂ.ಪಿ. ಕುಮಾರಸ್ವಾಮಿ: ದಲಿತರ ಭೂ ಕಬಳಿಕೆ ಆರೋಪ 

ಮಾಜಿ ಶಾಸಕ ಎಂ.ಪಿ. ಕುಮಾರಸ್ವಾಮಿ ಶಾಸಕರಾಗಿದ್ದ ಅವಧಿಯಲ್ಲಿ ದಲಿತ ಕುಟುಂಬವೊಂದಕ್ಕೆ ಸೇರಿದ್ದ...

ರಾಮನಗರ | ಡಾ. ಬಂಜಗೆರೆ ಜಯಪ್ರಕಾಶ್‌ ಅವರಿಗೆ ಪ್ರಶಸ್ತಿ ಗೌರವ: ‘ಜನಮುಖಿ ಜೆಪಿ’ ಕಾರ್ಯಕ್ರಮ ಸಫಲ

ಹಿರಿಯ ಸಾಹಿತಿ ಡಾ. ಬಂಜಗೆರೆ ಜಯಪ್ರಕಾಶ್ (ಜೆ.ಪಿ) ಅವರಿಗೆ ಕರ್ನಾಟಕ ಸಾಹಿತ್ಯ...

ಕಲಬುರಗಿ | ಪ್ರಾಧ್ಯಾಪಕ ಶಿವಾನಂದ ಬಂಟನೂರಗೆ ಡಾ.ಪ್ರತಿಭಾ ಚಿಣ್ಣಪ್ಪ ಸ್ಮರಣಾರ್ಥ ಪ್ರಶಸ್ತಿ

ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದ ಸಂಗೀತ ಮತ್ತು ಲಲಿತ ಕಲಾ ವಿಭಾಗದ ಸಹಾಯಕ...

ಕುಡಚಿ–ಬಾಗಲಕೋಟೆ ರೈಲು ಮಾರ್ಗ ಕಾಮಗಾರಿ ವಿಳಂಬ: ಶೀಘ್ರ ಪರಿಶೀಲನೆ ನಡೆಸಿ ಕ್ರಮ ಕೈಗೊಳ್ಳುವ ಭರವಸೆ

ಕುಡಚಿ–ಬಾಗಲಕೋಟೆ ರೈಲು ಮಾರ್ಗದ ಕಾಮಗಾರಿಯಲ್ಲಿ ರೈಲ್ವೆ ಇಲಾಖೆ ವಿಳಂಬ ಮಾಡುತ್ತಿರುವುದು ಹಾಗೂ...