ಇರಾನ್ ಪರಮೋಚ್ಛ ನಾಯಕ ಖಮೇನಿ ಹತ್ಯೆ: ಜಮ್ಮು ಕಾಶ್ಮೀರ, ಲಡಾಖ್‌ನಲ್ಲಿ ಪ್ರತಿಭಟನೆ; ಶೋಕ

Date:

ಇಸ್ರೇಲ್ ಮತ್ತು ಅಮೆರಿಕ ದಾಳಿ ಇರಾನ್ ಮೇಲೆ ದಾಳಿ ಮಾಡಿದ್ದು, ಇರಾನ್ ಪರಮೋಚ್ಛ ನಾಯಕ ಅಯತೊಲ್ಲಾ ಅಲಿ ಖಮೇನಿ ಹತ್ಯೆ ನಡೆಸಿದೆ. ಈ ಬೆನ್ನಲ್ಲೇ ವಿಶ್ವದ ಹಲವು ದೇಶಗಳಲ್ಲಿ ಆಕ್ರೋಶ ವ್ಯಕ್ತವಾಗಿದೆ. ಭಾನುವಾರ ಮುಂಜಾನೆ ಜಮ್ಮು ಮತ್ತು ಕಾಶ್ಮೀರ, ಲಡಾಖ್‌ನಲ್ಲಿ ಹತ್ತಾರು ಸಾವಿರ ಜನರು ಬೀದಿಗಿಳಿದು ಪ್ರತಿಭಟಿಸಿದ್ದು, ತೀವ್ರ ಶೋಕಾಚರಿಸಲಾಗುತ್ತಿದೆ.

- Advertisement -

ಕಾಶ್ಮೀರ ಕಣಿವೆಯಿಂದ ಲಡಾಖ್‌ನ ಕಾರ್ಗಿಲ್‌ವರೆಗೆ, ಜನರು ಬೀದಿಗಿಳಿದು ಹುತಾತ್ಮತೆಯ ಸಂಕೇತವಾಗಿ ಕಪ್ಪು ಮತ್ತು ಕೆಂಪು ಧ್ವಜಗಳನ್ನು ಹೊತ್ತು ನಡೆದಿದ್ದಾರೆ. ಜತೆಗೆ ಖಮೇನಿ ಮತ್ತು ಇರಾನ್‌ನ ಸ್ಥಾಪಕ ಆಧ್ಯಾತ್ಮಿಕ ನಾಯಕ ಅಯತೊಲ್ಲಾ ರುಹೊಲ್ಲಾ ಖಮೇನಿ ಭಾವಚಿತ್ರಗಳು ಕಾಣಿಸಿಕೊಂಡಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

ಇದನ್ನು ಓದಿದ್ದೀರಾ? ಇರಾನ್‌ನ ಮಿತ್ರರು ಯಾರು? ರಷ್ಯಾ-ಚೀನಾ ನಿಲುವೇನು?

ಪ್ರತಿಭಟನಾಕಾರರು ಅಮೆರಿಕ, ಇಸ್ರೇಲ್ ಮತ್ತು ಅದರ ಮಿತ್ರರಾಷ್ಟ್ರಗಳನ್ನು ಖಂಡಿಸುವ ಘೋಷಣೆಗಳನ್ನು ಕೂಗಿದೆ. ಶ್ರೀನಗರದಲ್ಲಿ, ಐತಿಹಾಸಿಕ ಲಾಲ್ ಚೌಕ್‌ನಲ್ಲಿ ಅಧಿಕ ಜನರು ಸೇರಿಕೊಂಡಿದ್ದಾರೆ. ಶ್ರೀನಗರದಾದ್ಯಂತದ ಅಲ್ಲಲ್ಲಿ ಪ್ರತಿಭಟನೆ ನಡೆಸಲಾಗುತ್ತಿದೆ. ಜಡಿಬಲ್, ರೈನವಾರಿ, ಬೆಮಿನಾ ಮತ್ತು ಡೌನ್‌ಟೌನ್‌ನ ಕೆಲವು ಭಾಗಗಳಲ್ಲಿ ಜನರು ಮೆರವಣಿಗೆ ನಡೆಸಿದ್ದು, ಇರಾನ್‌ನೊಂದಿಗೆ ನಿಲ್ಲುವುದಾಗಿ ಘೋಷಣೆ ಕೂಗಿದ್ದಾರೆ.

ಬಾರಾಮುಲ್ಲಾ, ಬುದ್ಗಾಮ್, ಅನಂತ್‌ನಾಗ್, ಪುಲ್ವಾಮಾ, ಶೋಪಿಯಾನ್ ಮತ್ತು ಕುಪ್ವಾರಾ ಸೇರಿದಂತೆ ಕಾಶ್ಮೀರ ಕಣಿವೆಯ ಸುಮಾರು ಹತ್ತು ಜಿಲ್ಲೆಗಳಿಂದ ಪ್ರತಿಭಟನೆಗಳು ಮತ್ತು ಶೋಕಾಚರಣೆ ನಡೆದಿದೆ. ಸ್ಥಳೀಯ ಇಮಾಂಬರಾಗಳು ಮತ್ತು ಸಮುದಾಯ ಕೇಂದ್ರಗಳು ನಿರಂತರ ಶೋಕಾಚರಣೆ ಸಭೆಗಳನ್ನು ನಡೆಸಲಾಗುತ್ತಿದೆ.

ಜಮ್ಮುವಿನ ಕಿಶ್ತ್ವಾರ್, ಭದೇರ್ವಾ ಮತ್ತು ಜಮ್ಮು ನಗರದ ಕೆಲವು ಭಾಗಗಳಲ್ಲಿ ಶಿಯಾ ಸಂಘಟನೆಗಳು, ಇತರೆ ಸಂಘಟನೆಗಳ ನೇತೃತ್ವದಲ್ಲಿ ಪ್ರತಿಭಟನೆಗಳು ನಡೆದಿವೆ. ಶಿಯಾ ಜನಸಂಖ್ಯೆಯ ಭದ್ರಕೋಟೆಯಾದ ಲಡಾಖ್‌ನ ಕಾರ್ಗಿಲ್ ಜಿಲ್ಲೆಯಲ್ಲಿ ಅತಿ ಹೆಚ್ಚು ಜನರು ಬೀದಿಗಿಳಿದು ಪ್ರತಿಭಟಿಸಿದ್ದಾರೆ.

ಫೆಬ್ರವರಿ 28ರಂದು ಅಮೆರಿಕ ಮತ್ತು ಇಸ್ರೇಲ್ ಜಂಟಿಯಾಗಿ ಇರಾನ್ ಮೇಲೆ ಬೃಹತ್ ಸೇನಾ ದಾಳಿ ನಡೆಸಿವೆ. ಈ ಕಾರ್ಯಾಚರಣೆಗೆ ಅಮೆರಿಕ ‘ಆಪರೇಷನ್ ಎಪಿಕ್ ಫ್ಯೂರಿ’ ಮತ್ತು ಇಸ್ರೇಲ್ ‘ರೋರಿಂಗ್ ಲಯನ್’ ಎಂದು ಹೆಸರಿಟ್ಟಿವೆ. ಈ ದಾಳಿಯಲ್ಲಿ ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ಹತರಾಗಿದ್ದಾರೆ. ಜತೆಗೆ ಅವರ ಕುಟುಂಬಸ್ಥರು ಮೃತಪಟ್ಟಿದ್ದಾರೆ ಎಂದು ಇರಾನ್ ಸರ್ಕಾರಿ ಮಾಧ್ಯಮಗಳು ಖಚಿತಪಡಿಸಿವೆ.

ಇರಾನ್‌ನ ಅರೆಸೈನಿಕ ಕ್ರಾಂತಿಕಾರಿ ಗಾರ್ಡ್‌ನ ಮುಖ್ಯಸ್ಥ ಮತ್ತು ಭದ್ರತಾ ಸಲಹೆಗಾರ ಅಲಿ ಶಮ್ಖಾನಿ ಅವರೊಂದಿಗೆ ಸಭೆ ನಡೆಸುತ್ತಿದ್ದ ಜನರಲ್ ಅಬ್ದುಲ್ ರಹೀಮ್ ಮೌಸವಿ ಮತ್ತು ರಕ್ಷಣಾ ಸಚಿವ ಜನರಲ್ ಅಜೀಜ್ ನಾಸಿರ್ಜಾದೆ ಹತರಾಗಿದ್ದಾರೆ ಎಂದೂ ಇರಾನ್ ಮಾಧ್ಯಮಗಳು ವರದಿ ಮಾಡಿದೆ.

ಇಸ್ರೇಲ್-ಅಮೆರಿಕ ದಾಳಿಗೆ ಪ್ರತಿಯಾಗಿ ಇರಾನ್ ಕೂಡ ಇಸ್ರೇಲ್‌ನ ಟೆಲ್ ಅವಿವ್ ಮತ್ತು ಮಧ್ಯಪ್ರಾಚ್ಯ ಕತಾರ್, ಯುಎಇ, ಬಹ್ರೇನ್, ಕುವೈತ್ ಮತ್ತು ಜೋರ್ಡಾನ್‌ನಲ್ಲಿರುವ ಅಮೆರಿಕದ ಮಿಲಿಟರಿ ಬೇಸ್‌ಗಳ ಮೇಲೆ ಕ್ಷಿಪಣಿ ದಾಳಿ ನಡೆಸುತ್ತಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಮೋದಿಯನ್ನು ದೇವರನ್ನಾಗಿಸುವ ಯತ್ನ’: ಬಿಹಾರ ಸಿಎಂ ಹೇಳಿಕೆಗೆ ಪ್ರಶಾಂತ್ ಕಿಶೋರ್ ಕಿಡಿ

ಪ್ರಧಾನಿ ನರೇಂದ್ರ ಮೋದಿ ಅವರು ಶ್ರೀರಾಮನಿಗೂ ಮನೆ ಒದಗಿಸಿದರು ಎಂಬ ಬಿಹಾರ...

‘ಲೆಹರಾ ದೋ ತಿರಂಗಾ’ ಮಾರ್ಚ್‌ಗೆ ಮುನ್ನ ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ ದೆಹಲಿ ಪೊಲೀಸರಿಂದ ವಶಕ್ಕೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ ಅವರನ್ನು ಶುಕ್ರವಾರ...

ಸಿಎಂಆರ್‌ಎಲ್ ಲಂಚ ಪ್ರಕರಣ: ಕೇರಳದ ಮಾಜಿ ಸಿಎಂ ಪಿಣರಾಯಿ ವಿಜಯನ್‌ಗೆ ಇ.ಡಿ ಸಮನ್ಸ್

ಬಹುಚರ್ಚಿತ ಕೊಚ್ಚಿನ್ ಮಿನರಲ್ಸ್ ಅಂಡ್ ರೂಟೈಲ್ ಲಿಮಿಟೆಡ್ (ಸಿಎಂಆರ್‌ಎಲ್) ಅಕ್ರಮ ಹಣ...