‘ತಮ್ಮನ್ನು ಬದಿಗೊತ್ತಿದ್ದಾರೆ’; ಒಲಿಂಪಿಕ್ ಅಸೋಸಿಯೇಷನ್‌ನ ಇ.ಸಿ ವಿರುದ್ಧ ಪಿ.ಟಿ ಉಷಾ ಆರೋಪ

Date:

Advertisements

ಭಾರತೀಯ ಒಲಿಂಪಿಕ್ ಅಸೋಸಿಯೇಷನ್‌ನ ಕಾರ್ಯಕಾರಿ ಸಮಿತಿ (ಇಸಿ) ಸದಸ್ಯರು ‘ತಂಡ’ವಾಗಿ ಕೆಲಸ ಮಾಡುತ್ತಿಲ್ಲ. ತಮ್ಮನ್ನು ಬದಿಗೊತ್ತಲು ಸಮಿತಿ ಸದಸ್ಯರು ಪ್ರಯತ್ನಿಸುತ್ತಿದ್ದಾರೆ ಎಂದು ಅಸೋಷಿಯೇಷನ್‌ನ ಅಧ್ಯಕ್ಷೆ ಪಿ.ಟಿ ಉಷಾ ಆರೋಪಿಸಿದ್ದಾರೆ. ಉಷಾ ಕೂಡ ಇಸಿಯ ಭಾಗವಾಗಿದ್ದಾರೆ.

ಅವರು ‘ಇಸಿ’ಯ ಇತರ ಸದಸ್ಯರಿಗೆ ಪತ್ರ ಬರೆದಿದ್ದಾರೆ. ಅವರ ಪತ್ರವು ಕಾರ್ಯಕಾರಿ ಸಮಿತಿ ಸದಸ್ಯರಲ್ಲಿ ಪರಸ್ಪರರ ನಡುವೆ ನಂಬುಇಕೆ ಕುಸಿತವಾಗಿದೆ ಎಂಬುದನ್ನು ಸೂಚಿಸುತ್ತದೆ ಎಂದು ಟಿಎನ್‌ಐಇ ವರದಿ ಮಾಡಿದೆ.

ಬಹುತೇಕ ಇಸಿ ಸದಸ್ಯರು ಉಷಾ ಅವರ ಕಾರ್ಯನಿರ್ವಾಹಕ ಸಹಾಯಕ ಅಜಯ್ ನಾರಂಗ್ ಅವರನ್ನು ಹುದ್ದೆಯಿಂದ ತೆಗೆದುಹಾಕುವಂತೆ ಸೂಚಿಸಿದ್ದಾರೆ. ಆದಾಗ್ಯೂ, ಉಷಾ ಅವರು ತಮ್ಮ ಪತ್ರದಲ್ಲಿ ಇಸಿಯು ನಾರಂಗ್ ಅವರನ್ನು ನೇಮಿಸಲು ಅಥವಾ ವಜಾಗೊಳಿಸಲು ಸಾಧ್ಯವಿಲ್ಲ ಎಂದು ಒತ್ತಿಹೇಳಿದ್ದಾರೆ. ವರದಿಯ ಪ್ರಕಾರ, ಆ ಸ್ಥಾನಕ್ಕೆ ಸಿಇಒ ರಘುರಾಮ್ ಅಯ್ಯರ್ ಅವರನ್ನು ನೇಮಿಸುವಂತೆ ಒತ್ತಾಯಿಸಿರುವುದಾಗಿ ಇಸಿ ಹೇಳಿಕೊಂಡಿದೆ. ಕುತೂಹಲಕಾರಿಯಾಗಿ, ಅಯ್ಯರ್ ಮತ್ತು ನಾರಂಗ್ ತಮ್ಮ ಹುದ್ದೆಗಳಲ್ಲಿ ಸರಿಯಾದ ರೀತಿಯಲ್ಲಿಯೇ ಕೆಲಸ ಮಾಡುತ್ತಿದ್ದಾರೆ.

Advertisements

“ಸಿಬ್ಬಂದಿಗಳ ನೇಮಕ ಮತ್ತು ವಜಾ ಸೇರಿದಂತೆ ದೈನಂದಿನ ಆಡಳಿತಾತ್ಮಕ ಕಾರ್ಯಗಳ ನಿರ್ಧಾರವು ಕಾರ್ಯಕಾರಿ ಸಮಿತಿಯ ಕೆಲಸವಲ್ಲ ಎಂಬುದನ್ನು ನಿಮಗೆ (ಇಸಿ ಸದಸ್ಯರು) ನೆನಪಿಸುತಿದ್ದೇನೆ. ಇಸಿಯಾಗಿ, ನಾವು ಭಾರತೀಯ ಒಲಿಂಪಿಕ್ ಅಸೋಸಿಯೇಷನ್‌ಅನ್ನು ಎತ್ತರಕ್ಕೆ ಕೊಂಡೊಯ್ಯಲು ನಮ್ಮ ಅಧಿಕಾರ ಮತ್ತು ಹಕ್ಕುಗಳನ್ನು ಬಳಸಬೇಕು” ಎಂದು ಉಷಾ ಪತ್ರದಲ್ಲಿ ಬರೆದಿದ್ದಾರೆ.

“ಅಧ್ಯಕ್ಷರ ಕಾರ್ಯನಿರ್ವಾಹಕ ಸಹಾಯಕರ ನೇಮಕಾತಿಯು ಕಾರ್ಯಕಾರಿ ಸಮಿತಿಯ ಅಧಿಕಾರ ವ್ಯಾಪ್ತಿಗೆ ಒಳಪಡುವುದಿಲ್ಲ. ಆದ್ದರಿಂದ ವಜಾಗೊಳಿಸುವಿಕೆ ಕೂಡ ಕಾನೂನುಬದ್ಧವಾಗಿರುವುದಿಲ್ಲ. ಅದು ಹೊರ ಜಗತ್ತಿಗೆ ಕೆಟ್ಟದಾಗಿ ಬಿಂಬಿತವಾಗುತ್ತದೆ” ಎಂದು ಹೇಳಿದ್ದಾರೆ.

ಭಾರತೀಯ ಒಲಿಂಪಿಕ್ ಅಸೋಸಿಯೇಷನ್‌ ಭವನಕ್ಕೆ ಅನಧಿಕೃತ ವ್ಯಕ್ತಿಗಳು ಪ್ರವೇಶಿಸದಂತೆ ನಿರ್ದೇಶನ ನೀಡುವ ನೋಟಿಸ್‌ಗೆ ಒಂಬತ್ತು ಇಸಿ ಸದಸ್ಯರು ಸಹಿ ಹಾಕಿದ್ದು, ಆ ನೋಟಿಸ್‌ಅನ್ನು ಅಂಟಿಸಿದ ನಂತರ ಉಷಾ ಅವರು ಪತ್ರ ಬರೆದಿದ್ದಾರೆ.

“ಭಾರತೀಯ ಒಲಿಂಪಿಕ್ ಅಸೋಸಿಯೇಷನ್‌ ಭವನದಲ್ಲಿ ಅಂಟಿಸಲಾದ ನೋಟಿಸ್‌ನ ಎಲ್ಲ ಪ್ರತಿಗಳನ್ನು ತೆಗೆದುಹಾಕಲು ಸಿಬ್ಬಂದಿಗೆ ನಿರ್ದೇಶಿಸಲಾಗಿದೆ. ಇದಲ್ಲದೆ, ನನ್ನ ಕಾರ್ಯನಿರ್ವಾಹಕ ಸಹಾಯಕರ ಮೂಲಕ ನನ್ನ ಕಚೇರಿ ನೀಡುವ ಮಾರ್ಗದರ್ಶನ ಮತ್ತು ನಿರ್ದೇಶನಗಳನ್ನು ಅನುಸರಿಸಲು ಭಾರತೀಯ ಒಲಿಂಪಿಕ್ ಅಸೋಸಿಯೇಷನ್‌ ಸಿಬ್ಬಂದಿಗೆ ಸೂಚಿಸಲಾಗಿದೆ” ಎಂದು ಉಷಾ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

“ನಾವು ಇನ್ನೂ ತಂಡವಾಗಿ ಕೆಲಸ ಮಾಡಲು ಸಾಧ್ಯವಾಗುತ್ತಿಲ್ಲ ಎಂಬುದು ನಿರಾಶಾದಾಯಕವಾಗಿದೆ. ನಿಮ್ಮ ಪ್ರತಿಯೊಂದು ಕಾರ್ಯಗಳು ನನ್ನನ್ನು ಬದಿಗೆ ತಳ್ಳುವ ಪ್ರಯತ್ನವಾಗಿದೆ” ಎಂದು ಹೇಳಿದ್ದಾರೆ.

ಟಿಎನ್‌ಐಇ ವರದಿ ಪ್ರಕಾರ, ಹಿರಿಯ ಉಪಾಧ್ಯಕ್ಷ ಅಜಯ್ ಪಟೇಲ್ ಬಂಡಾಯ ಎದ್ದಿರುವವರಲ್ಲಿ ಮುಂಚೂಣಿಯಲ್ಲಿದ್ದಾರೆ. ಅಧ್ಯಕ್ಷರ ಅನುಪಸ್ಥಿತಿಯ ಸಂದರ್ಭದಲ್ಲಿ ಮಾತ್ರ ಹಿರಿಯ ಉಪಾಧ್ಯಕ್ಷರು ಅಧಿಕಾರ ವಹಿಸಿಕೊಳ್ಳಬಹುದು ಎಂದು ಉಷಾ ತಮ್ಮ ಪತ್ರದಲ್ಲಿ ಒತ್ತಿಹೇಳಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಿವಾದಾತ್ಮಕ ಯೂಟ್ಯೂಬರ್ ಎಲ್ವಿಶ್ ಮನೆ ಮೇಲೆ ಗುಂಡಿನ ದಾಳಿ: ಎನ್‌ಕೌಂಟರ್ ಮಾಡಿ ಆರೋಪಿ ಬಂಧನ

ಬಲಪಂಥೀಯ, ವಿವಾದಾತ್ಮಕ ಯೂಟ್ಯೂಬರ್ ಮತ್ತು ಬಿಗ್ ಬಾಸ್ ವಿಜೇತ ಎಲ್ವಿಶ್ ಯಾದವ್‌...

ಉತ್ತರಾಖಂಡ | ಕಪಾಳ ಮೋಕ್ಷ ಮಾಡಿದ ಶಿಕ್ಷಕನಿಗೆ ಗುಂಡು ಹಾರಿಸಿದ ವಿದ್ಯಾರ್ಥಿ

ತರಗತಿಯಲ್ಲಿ ಕಪಾಳ ಮೋಕ್ಷ ಮಾಡಿದ ಕಾರಣಕ್ಕೆ ಕುಪಿತಗೊಂಡ ವಿದ್ಯಾರ್ಥಿಯೊಬ್ಬ ತನ್ನ ಶಿಕ್ಷಕನ...

ಅಯೋಧ್ಯೆ | ಆಸ್ಪತ್ರೆಗೆ ದಾಖಲಿಸಲು ನಿರಾಕರಣೆ, ತಂದೆಯ ತೋಳಿನಲ್ಲಿ ಮೃತಪಟ್ಟ ಬಾಲಕ

ತೀವ್ರವಾಗಿ ಅಸ್ಪಸ್ಥಗೊಂಡಿದ್ದ ತನ್ನ 12 ವರ್ಷದ ಪುತ್ರನನ್ನು ಸರ್ಕಾರಿ ಆಸ್ಪತ್ರೆಗೆ ಕರೆ...

ನಟಿಗೆ ಕಿರುಕುಳ ಆರೋಪ: ಕೇರಳ ಯುವ ಕಾಂಗ್ರೆಸ್ ಅಧ್ಯಕ್ಷನ ಹುದ್ದೆ ತೊರೆದ ರಾಹುಲ್ ಮಾಂಕೂಟತ್ತಿಲ್

ಕೇರಳದ ರಾಜಕೀಯದಲ್ಲಿ ದೊಡ್ಡ ಸಂಚಲನ ಸೃಷ್ಟಿಸಿರುವ ಅಶ್ಲೀಲ ಸಂದೇಶ ಹಾಗೂ ದುರ್ವರ್ತನೆ...

Download Eedina App Android / iOS

X