ಉದ್ಯೋಗಿಗಳ ಟಿಡಿಎಸ್ ಹಣ ಕಂಪನಿಗೆ ಆಧಾರವಲ್ಲ: ದೆಹಲಿ ಹೈಕೋರ್ಟ್

Date:

ತೆರಿಗೆಯಾಗಿ ಸಂಗ್ರಹಿಸಿದ ಸಾರ್ವಜನಿಕರ ಹಣವನ್ನು ಕಂಪನಿಯ ಆರ್ಥಿಕ ಸಂಕಷ್ಟ ನಿವಾರಣೆಗೆ ಅಥವಾ ಬಂಡವಾಳವಾಗಿ ಬಳಸುವುದು ಅಪರಾಧ ಎಂದು ದೆಹಲಿಯ ತೀಸ್‌ ಹಜಾರಿ ನ್ಯಾಯಾಲಯ ಮಹತ್ವದ ತೀರ್ಪು ನೀಡಿದೆ. 2013-14ನೇ ಸಾಲಿನಲ್ಲಿ ₹ 8.51 ಕೋಟಿ ಟಿಡಿಎಸ್ (TDS) ಮೊತ್ತವನ್ನು ಸರ್ಕಾರದ ಬೊಕ್ಕಸಕ್ಕೆ ಪಾವತಿಸದ ಪ್ರಕರಣದಲ್ಲಿ ಮೂವರು ಆರೋಪಿಗಳನ್ನು ನ್ಯಾಯಾಲಯ ದೋಷಿಗಳೆಂದು ಘೋಷಿಸಿದೆ.

- Advertisement -

ಡೆಹ್ರಾಡೂನ್ ಹೈವೇಸ್ ಪ್ರಾಜೆಕ್ಟ್ ಲಿಮಿಟೆಡ್‌ಗೆ ಸಂಬಂಧಿಸಿದ ಈ ಪ್ರಕರಣದಲ್ಲಿ, ಅಮಿತ್ ಭರಾನಾ, ಅಲೋಕ್ ಖನ್ನಾ ಮತ್ತು ನಿಖಿಲ್ ಜೈನ್ ಎಂಬುವವರನ್ನು ದೋಷಿಗಳು ಎಂದು ಹೆಚ್ಚುವರಿ ಮುಖ್ಯ ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ರೇಣು ಚೌಧರಿ ತೀರ್ಪು ನೀಡಿದ್ದಾರೆ. ಆದಾಗ್ಯೂ, ಕಂಪನಿಯ ವಿರುದ್ಧದ ಪ್ರಕ್ರಿಯೆಗಳಿಗೆ ತಡೆಯಾಜ್ಞೆ ಇರುವುದರಿಂದ, ಈ ಪ್ರಕರಣದಲ್ಲಿ ಕಂಪನಿಯನ್ನು ನೇರವಾಗಿ ಹೊಣೆಗಾರರನ್ನಾಗಿ ಮಾಡಿಲ್ಲ ಎಂದು ಆದೇಶದಲ್ಲಿ ಸ್ಪಷ್ಟಪಡಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಳಗಾವಿ | ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ ಕಬ್ಬು ಬೆಂಕಿಗಾಹುತಿ:...

ಬರಗಾಲದಿಂದ ಬೆಳೆ ನಷ್ಟ ಅನುಭವಿಸಿ ಆರ್ಥಿಕ ಸಂಕಷ್ಟಕ್ಕೆ ಸಿಲುಕಿರುವ ರೈತರಿಗೆ ಇದೀಗ ವಿದ್ಯುತ್‌ ಶಾರ್ಟ್ ಸರ್ಕ್ಯೂಟ್ ಮತ್ತೊಂದು ಹೊಡೆತ ನೀಡಿದೆ. ವರ್ಷವಿಡೀ ಕಷ್ಟಪಟ್ಟು ಬೆಳೆಸಿದ ಕಬ್ಬು ಕಟಾವಿಗೆ ಬರುವ ಹೊತ್ತಿನಲ್ಲಿ ಬೆಂಕಿಗೆ ಆಹುತಿಯಾಗಿದ್ದು,...

ಹಾವೇರಿ | ಡಿಜಿಟಲ್ ಜನನ ಪ್ರಮಾಣ ಪತ್ರ ಗೊಂದಲ:...

ಹಳೆ ಮಾದರಿಯ ಕೈಬರಹ ಜನನ ಪ್ರಮಾನ ಪತ್ರದ ವಿಧಾನವನ್ನು ಬಿಟ್ಟು, ಡಿಜಿಟಲ್ ಜನನ ಪ್ರಮಾಣ ಪತ್ರ ನಿಯಮ ಜಾರಿಗೊಳಿಸಿದ್ದರಿಂದ ಹಲವು ಸಮಸ್ಯೆಗಳು ಎದುರಾಗಿದ್ದು, ಹದಿನಾರು ವರ್ಷಕ್ಕಿಂತ ಕೆಳಗಿನ ಮಕ್ಕಳಿಗೆ ಆಧಾರ್ ಕಾರ್ಡ್ ತಿದ್ದುಪಡಿ...

ವಲಸೆ ಹಳ್ಳಿಗರಿಗೆ ಮಾತ್ರವೇ? ಉದ್ಯೋಗಕ್ಕಾಗಿ ನಗರ ಸೇರುವ ಯುವಜನರೂ...

ಭಾರತವು ವಿಶ್ವದಲ್ಲೇ ಅತಿ ಹೆಚ್ಚು ಜನಸಂಖ್ಯೆ ಹೊಂದಿರುವ ದೇಶ. ಹೆಚ್ಚುತ್ತಿರುವ ಜನಸಂಖ್ಯೆಯೊಂದಿಗೆ ಆಹಾರ, ಶಿಕ್ಷಣ, ಆರೋಗ್ಯ, ವಸತಿ ಮತ್ತು ಉದ್ಯೋಗದ ಬೇಡಿಕೆಯೂ ಹೆಚ್ಚುತ್ತಿದೆ. ದೇಶದ ಅಭಿವೃದ್ಧಿಗೆ ಮಾನವ ಸಂಪನ್ಮೂಲವೇ ದೊಡ್ಡ ಶಕ್ತಿಯಾಗಿದ್ದರೂ, ಆ...

ಆದಾಯ ತೆರಿಗೆ ಇಲಾಖೆಯು ಡಿಸೆಂಬರ್ 2013ರಲ್ಲಿ ನಡೆಸಿದ ಸಮೀಕ್ಷೆಯಲ್ಲಿ ಈ ತೆರಿಗೆ ವಂಚನೆ ಬೆಳಕಿಗೆ ಬಂದಿತ್ತು. ಗುತ್ತಿಗೆದಾರರು ಹಾಗೂ ಉದ್ಯೋಗಿಗಳಿಂದ ಕಡಿತಗೊಳಿಸಲಾದ ಬರೋಬ್ಬರಿ ₹ 8.51 ಕೋಟಿಗೂ ಅಧಿಕ ಟಿಡಿಎಸ್ ಮೊತ್ತವನ್ನು ನಿಗದಿತ ಅವಧಿಯಲ್ಲಿ ಕೇಂದ್ರ ಸರ್ಕಾರಕ್ಕೆ ಪಾವತಿಸಿರಲಿಲ್ಲ. ಈ ಸಂಬಂಧ ವಿಚಾರಣೆ ನಡೆಸಿ 2018ರಲ್ಲಿ ಆರೋಪಿಗಳ ವಿರುದ್ಧ ದೋಷಾರೋಪ ಪಟ್ಟಿ ಸಲ್ಲಿಕೆಯಾಗಿತ್ತು.

ವಿಚಾರಣೆ ವೇಳೆ ‘ತೀವ್ರ ಆರ್ಥಿಕ ಬಿಕ್ಕಟ್ಟಿನ’ ಕಾರಣ ನೀಡಿ ಆರೋಪಿಗಳು ತಮ್ಮ ತಪ್ಪನ್ನು ಸಮರ್ಥಿಸಿಕೊಳ್ಳಲು ಯತ್ನಿಸಿದ್ದರು. ಇದನ್ನು ತಳ್ಳಿಹಾಕಿದ ನ್ಯಾಯಾಲಯ, “ಕಂಪನಿಯ ಆರ್ಥಿಕ ಸಂಕಷ್ಟವನ್ನು ಕಾನೂನಾತ್ಮಕವಾಗಿ ಒಪ್ಪಲು ಸಾಧ್ಯವಿಲ್ಲ. ಸಾರ್ವಜನಿಕರ ತೆರಿಗೆ ಹಣವನ್ನು ಅಲ್ಪಾವಧಿಯ ಆರ್ಥಿಕ ಪರಿಹಾರಕ್ಕಾಗಿ ಬಳಸಿಕೊಳ್ಳುವುದು ಸರ್ಕಾರ ಮತ್ತು ಪ್ರಾಮಾಣಿಕ ತೆರಿಗೆದಾರರಿಗೆ ಮಾಡುವ ದ್ರೋಹ” ಎಂದು ಕಟುವಾಗಿ ಎಚ್ಚರಿಸಿದೆ.

ತಾವು ಕೇವಲ ತಾಂತ್ರಿಕ ನಿರ್ದೇಶಕರು ಹಾಗೂ ಉದ್ಯೋಗಿಯಾಗಿದ್ದೆವು, ಹಣಕಾಸು ವ್ಯವಹಾರದಲ್ಲಿ ತಮ್ಮ ಪಾತ್ರವಿಲ್ಲ ಎಂಬ ಆರೋಪಿಗಳ ವಾದವನ್ನೂ ನ್ಯಾಯಾಲಯ ತಿರಸ್ಕರಿಸಿದೆ. ಬ್ಯಾಲೆನ್ಸ್ ಶೀಟ್ ಮತ್ತು ತೆರಿಗೆ ಕಡಿತದ ‘ಫಾರ್ಮ್ 27ಎ’ ದಾಖಲೆಗಳಲ್ಲಿ ಆರೋಪಿಗಳ ಸಹಿ ಇರುವುದು ಅವರ ಹೊಣೆಗಾರಿಕೆಯನ್ನು ಸಾಬೀತುಪಡಿಸಿದೆ. ಕೇವಲ ಹುದ್ದೆಯ ಹೆಸರಿನಿಂದ ಈ ಶಾಸನಬದ್ಧ ಜವಾಬ್ದಾರಿಯಿಂದ ನುಣುಚಿಕೊಳ್ಳುವಂತಿಲ್ಲ ಎಂದು ನ್ಯಾಯಾಧೀಶರು ಅಭಿಪ್ರಾಯಪಟ್ಟಿದ್ದಾರೆ.

ಪ್ರಕರಣದಲ್ಲಿ ಆರೋಪಿಗಳ ವಿರುದ್ಧದ ಸಾಕ್ಷ್ಯಗಳು ಯಾವುದೇ ಸಂಶಯವಿಲ್ಲದೆ ಸಾಬೀತಾಗಿದ್ದು, ಉದ್ದೇಶಪೂರ್ವಕವಾಗಿಯೇ ತೆರಿಗೆ ಪಾವತಿಯಲ್ಲಿ ನಿರ್ಲಕ್ಷ್ಯ ವಹಿಸಿರುವುದು ದೃಢಪಟ್ಟಿದೆ. ಈ ಹಣಕಾಸಿನ ಅಕ್ರಮದಲ್ಲಿ ಅಪರಾಧ ಸಾಬೀತಾಗಿರುವ ಹಿನ್ನೆಲೆಯಲ್ಲಿ, ಮೂವರೂ ದೋಷಿಗಳಿಗೆ ಶೀಘ್ರದಲ್ಲೇ ಪ್ರತ್ಯೇಕ ವಿಚಾರಣೆ ನಡೆಸಿ ಶಿಕ್ಷೆಯ ಪ್ರಮಾಣವನ್ನು ಪ್ರಕಟಿಸಲಾಗುವುದು ಎಂದು ನ್ಯಾಯಾಲಯ ತನ್ನ ತೀರ್ಪಿನಲ್ಲಿ ತಿಳಿಸಿದೆ.

eedina
ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್ | ನ.7ಕ್ಕೆ ಜಿಲ್ಲಾ ಪ್ರಥಮ ದಲಿತ ಬಂಡಾಯ ಸಮ್ಮೇಳನ

ಬೀದರ್ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾ ಘಟಕದ ವತಿಯಿಂದ ಜಿಲ್ಲಾ...

ಕೇಂದ್ರದ ಆಡಳಿತ ಕರಡು ತಿರಸ್ಕರಿಸಿದ ಲಡಾಖ್ ನಾಯಕರು: ‘ಏಕಪಕ್ಷೀಯ’ ನಿರ್ಧಾರ ಖಂಡಿಸಿ ಬೃಹತ್ ಪ್ರತಿಭಟನೆಯ ಎಚ್ಚರಿಕೆ

ಲಡಾಖ್ ಸಂಬಂಧಿಸಿದಂತೆ ಕೇಂದ್ರ ಸರ್ಕಾರವು ಸಿದ್ಧಪಡಿಸಿರುವ ನೂತನ ಆಡಳಿತಾತ್ಮಕ ಕರಡನ್ನು ಪ್ರಮುಖ...

ಬೀದರ್‌ | 125 ಎಕರೆಯಲ್ಲಿ ಜಿಲ್ಲಾ ಕ್ರೀಡಾಂಗಣ ನಿರ್ಮಾಣಕ್ಕೆ ಯೋಜನೆ : ಸಚಿವ ಈಶ್ವರ ಖಂಡ್ರೆ

ಬೀದರ್ ನಗರದ ಸಮೀಪ 125 ಎಕರೆ ಪ್ರದೇಶದಲ್ಲಿ ಸುಸಜ್ಜಿತ ಜಿಲ್ಲಾ ಕ್ರೀಡಾಂಗಣ...