ಪುದುಚೇರಿ | ಆಟೋ ಚಾಲಕ, ಪ್ರವಾಸಿಗರಿಂದ 16ರ ಬಾಲಕಿಯ ಸಾಮೂಹಿಕ ಅತ್ಯಾಚಾರ

Date:

ದೀಪಾವಳಿಗಾಗಿ ಪುದುಚೇರಿಯಲ್ಲಿರುವ ತಮ್ಮ ಕುಟುಂಬಸ್ಥರ ಮನೆಗೆ ಹೋಗಲು ಹೊರಟಿದ್ದ ಮುಂಬೈನ 16 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿದೆ.

- Advertisement -

ಎರಡು ದಿನಗಳಿಂದ ನಾಪತ್ತೆಯಾಗಿದ್ದ ಬಾಲಕಿ ಪುದುಚೇರಿಯ ಕಡಲತೀರದಲ್ಲಿ ಅತ್ಯಂತ ದುರ್ಬಲ ಸ್ಥಿತಿಯಲ್ಲಿ ಪತ್ತೆಯಾಗಿದ್ದಾಳೆ. ಮೊದಲು ಆಟೋ ಚಾಲಕ ಅತ್ಯಾಚಾರ ಎಸಗಿದ್ದು ಬಳಿಕ ಪ್ರವಾಸಿಗರ ಗುಂಪೊಂದು ಅತ್ಯಾಚಾರ ಎಸಗಿದೆ ಎಂದು ಬಾಲಕಿ ಹೇಳಿದ್ದಾಳೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಶಿಕ್ಷಣ ಮಾರಾಟ ಮಾಡಿದ ಶಾಲೆಗಳೇ ಈಗ ಮಾರಾಟಕ್ಕೆ!

ಕರ್ನಾಟಕದಲ್ಲಿ ಖಾಸಗಿ ಶಾಲೆಗಳು ಮುಚ್ಚುವ ಹಂತಕ್ಕೆ ತಲುಪಿದ್ದು, ಮಾರಾಟಕ್ಕೆ ಸಜ್ಜಾಗಿವೆ. ಕೋವಿಡ್-19 ಆಕ್ರಮಣದ ನಂತರದಲ್ಲಿ ಖಾಸಗಿ ಶಾಲೆಗಳಲ್ಲಿ ದಾಖಲಾತಿಯಲ್ಲಿ ಭಾರೀ ಕುಸಿತ, ಪ್ರತಿಷ್ಠಿತ ಶಾಲೆಗಳ ಜೊತೆಗೆ ಪೈಪೋಟಿ, ಮೂಲಭೂತ ಸೌಕರ್ಯಕ್ಕೆ ತಕ್ಕಂತೆ ಲಾಭದ...

ಬಿಗಿದ ತುಟಿಯ ದೃಶ್ಯಭಾಷೆ: ನಿರ್ಬಂಧಗಳ ನೆರಳಲ್ಲಿ ರೂಪಕಗಳ ಪ್ರತಿರೋಧ

ಸಿನೆಮಾವನ್ನು ನಿಯಂತ್ರಿಸಲು ಅಧಿಕಾರಶಾಹಿ ಸದಾ ಹೊಸ ಕಟ್ಟುಪಾಡುಗಳನ್ನು ಸೃಷ್ಟಿಸುತ್ತಲೇ ಇರುತ್ತದೆ; ಆದರೆ ಕಲೆಗೆ ಇರುವ ಶಕ್ತಿಯೆಂದರೆ, ಅದು ನಿರ್ಬಂಧಗಳ ಗೋಡೆಗಳನ್ನೇ ಹೊಸ ನೋಟದ ಕಿಟಕಿಗಳನ್ನಾಗಿಸಿಕೊಳ್ಳುತ್ತದೆ. ನೇರ ಮಾತನ್ನು ಕಸಿದುಕೊಂಡಷ್ಟೂ ರೂಪಕಗಳ ನಡಿಗೆ ಬಿಗಿಯಾಗುತ್ತದೆ,...

ಕತೆ | ಪೌರಶ್ರೀ – ಐಸಾಕ್‌ ಅಸಿಮೋವ್

ಪೌರಶ್ರೀ ಓದುವುದಕ್ಕೂ ಮುನ್ನ- ಒಂದು ಪುಟ್ಟ ಟಿಪ್ಪಣಿ ಈ ಸಹಸ್ರಮಾನದ ಅತ್ಯದ್ಭುತ ವೈಜ್ಞಾನಿಕ ಲೇಖಕ ರಲ್ಲಿ ಒಬ್ಬರು ಅಮೆರಿಕ ಬೋಸ್ಟನ್ ವಿಶ್ವ ವಿದ್ಯಾಲಯ ದಲ್ಲಿ ರಸಾಯನ ಶಾಸ್ತ್ರದ ಪ್ರಾಧ್ಯಾಪಕರಾಗಿದ್ದ ಐಸಾಕ್ ಅಸಿಮೋವ್. ವಿಶ್ವ...

ಪುದುಚೇರಿಯ ಕಡಲತೀರದಲ್ಲಿ ಪತ್ತೆಯಾದ ಬಾಲಕಿಯನ್ನು ಜಿಪ್ಮರ್ ಆಸ್ಪತ್ರೆಗೆ ಕರೆದೊಯ್ಯಲಾಗಿದ್ದು ವೈದ್ಯಕೀಯ ವರದಿಯಲ್ಲಿ ಆಕೆಯ ಮೇಲೆ ಅತ್ಯಾಚಾರ ನಡೆದಿರುವುದು ದೃಢಪಟ್ಟಿದೆ.

ಇದನ್ನು ಓದಿದ್ದೀರಾ? ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ; ವಿಡಿಯೋ ಚಿತ್ರೀಕರಿಸಿ ಹರಿಬಿಟ್ಟ ದುರುಳರು

ಮನೆಯಲ್ಲಿ ಸಣ್ಣ ಜಗಳ ನಡೆದು ಮನೆಯಿಂದ ಹೊರನಡೆದ ಬಾಲಕಿ ಪುದುಚೇರಿಗೆ ತನ್ನ ಕುಟುಂಬಸ್ಥರ ಮನೆಗೆ ದೀಪಾವಳಿ ಆಚರಿಸಲೆಂದು ಹೊರಟಿದ್ದಳು. ಆದರೆ ನಾಪತ್ತೆಯಾದ ಕಾರಣ ಆಕೆಯ ತಾಯಿ ಅಕ್ಟೋಬರ್ 31ರಂದು ಪ್ರಕರಣ ದಾಖಲಿಸಿದ್ದರು. ಇದಾದ ಎರಡು ದಿನಗಳ ಬಳಿಕ ಬಾಲಕಿ ಪತ್ತೆಯಾಗಿದ್ದಾಳೆ.

ಪೊಲೀಸರು ತನಿಖೆ ನಡೆಸಿ ಸಿಸಿಟಿವಿ ಪರಿಶೀಲಿಸಿದಾಗ ಬಾಲಕಿ ಕಾಜಾ ಮೊಹಿದೀನ್ ಎಂಬ ವ್ಯಕ್ತಿಯ ಆಟೋ ರಿಕ್ಷಾವನ್ನು ಹತ್ತಿರುವುದು ಕಂಡುಬಂದಿದೆ. ಆಕೆ ಹೇಳಿದ ಸ್ಥಳಕ್ಕೆ ಕರೆದೊಯ್ಯುವ ಬದಲು ಆಟೋ ಚಾಲಕ ಅತಿಥಿ ಗೃಹವೊಂದಕ್ಕೆ ಕರೆದೊಯ್ದಿದ್ದಾನೆ. ಅಲ್ಲಿಂದ ಬಳಿಕ ಆತನ ಮನೆಗೆ ಕರೆದೊಯ್ದು ಅತ್ಯಾಚಾರ ಎಸಗಿದ್ದಾನೆ. ಬಳಿಕ ಬಾಲಕಿಯನ್ನು ಆರೋವಿಲ್ಲೆಯಲ್ಲಿ ಬಿಟ್ಟಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ಇದನ್ನು ಓದಿದ್ದೀರಾ? ಮಧ್ಯಪ್ರದೇಶದಲ್ಲಿ ಕಾಮುಕರ ಅಟ್ಟಹಾಸ; ಪತಿಯನ್ನು ಮರಕ್ಕೆ ಕಟ್ಟಿ ಪತ್ನಿ ಮೇಲೆ ಸಾಮೂಹಿಕ ಅತ್ಯಾಚಾರ

ಅದಾದ ಬಳಿಕ ಪ್ರವಾಸಿ ಟೆಕ್ಕಿಗಳಿದ್ದ ಕಾರನ್ನು ನಿಲ್ಲಿಸಿ ಬಾಲಕಿ ಲಿಫ್ಟ್ ಕೇಳಿದ್ದಾಳೆ. ಪ್ರವಾಸಿಗರು ಆಕಯನ್ನು ಮನೆಯೊಂದಕ್ಕೆ ಕರೆದೊಯ್ದು ಸಾಮೂಹಿಕ ಅತ್ಯಾಚಾರ ಎಸಗಿ ಎರಡು ದಿನಗಳ ಕಾಲ ಅದೇ ಕೊಠಡಿಯಲ್ಲಿ ಇರಿಸಿಕೊಂಡಿದ್ದಾರೆ. ಎರಡು ದಿನಗಳ ನಂತರ ಕ್ಯಾಬ್ ಬುಕ್ ಮಾಡಿ ಆಕೆಯನ್ನು ಪುದುಚೇರಿಗೆ ವಾಪಸ್ ಕಳುಹಿಸಿದ್ದಾರೆ ಎಂದು ವರದಿಯಾಗಿದೆ.

ಗ್ರ್ಯಾಂಡ್ ಬಜಾರ್ ಪೊಲೀಸರು ಆಂಧ್ರಪ್ರದೇಶದ ಓರ್ವ ಟೆಕ್ಕಿ, ಒಡಿಶಾದ ಇಬ್ಬರು ಟೆಕ್ಕಿಗಳ ವಿರುದ್ಧ ಪೋಕ್ಸೊ ಪ್ರಕರಣ ದಾಖಲಿಸಿ ಬಂಧಿಸಿದ್ದಾರೆ. ಇನ್ನೂ ಮೂವರು ಆರೋಪಿಗಳಿಗಾಗಿ ಶೋಧ ಕಾರ್ಯಾಚರಣೆ ನಡೆಸಲಾಗುತ್ತಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗ್ಯಾನೂ ವಿರುದ್ಧ ಪ್ರತಿಭಟನೆ: ವಿದ್ಯಾರ್ಥಿ ನಾಯಕಿ ನೇಹಾ ಬೋರಾ ಬಂಧನ

ದೆಹಲಿಯಲ್ಲಿ ಚುನಾವಣಾ ಆಯೋಗ ಮತ್ತು ಕೇಂದ್ರ ಸರ್ಕಾರದ ವಿರುದ್ಧದ ಪ್ರತಿಭಟನೆಗಳು ಭಾನುವಾರವೂ...

ಸಿಜೆಪಿ ಪ್ರತಿಭಟನೆ: ವಿದ್ಯಾರ್ಥಿ, ಯುವತಿಯರ ಮೇಲೆ ಹಲ್ಲೆ; ನಾಲ್ವರು RSS ಗೂಂಡಾಗಳ ಬಂಧನ

ದೆಹಲಿಯಲ್ಲಿ ನಡೆದ 'ಕಾಕ್ರೋಚ್ ಜನತಾ ಪಾರ್ಟಿ' (CJP) ಪ್ರತಿಭಟನೆಯ ಸಂದರ್ಭದಲ್ಲಿ ವಿದ್ಯಾರ್ಥಿಗಳು...

ದೆಹಲಿ ಈಗ ‘ಡಿಟೆನ್ಷನ್ ಸ್ಟೇಟ್’ – ಪ್ರತಿಭಟನಾಕಾರರ ಬಂಧನಕ್ಕೆ ಸಂಸದ ಸಂಜಯ್ ರಾವತ್ ಆಕ್ರೋಶ

ಏಕಪಕ್ಷೀಯ ನಿರ್ಧಾರ ಕೈಗೊಂಡ ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್...