ಪುದುಚೆರಿ ಚುನಾವಣೆ | ಕೊನೆಗೂ ಎಐಎನ್‌ಆರ್‌ಸಿ ನೇತೃತ್ವದಲ್ಲಿ ಚುನಾವಣೆ ಎದುರಿಸಲು ಒಪ್ಪಿದ ಬಿಜೆಪಿ

Date:

ಪುದುಚೆರಿಯ ಆಡಳಿತಾರೂಢ ಎಐಎನ್‌ಆರ್‌ಸಿ ಮತ್ತು ಬಿಜೆಪಿ ಮೈತ್ರಿಯ ಬಗ್ಗೆ ಸಾಕಷ್ಟು ಗೊಂದಲಗಳಿದ್ದವು. ಪುದುಚೆರಿ ಕೇಂದ್ರಾಡಳಿತ ಪ್ರದೇಶದ ಮುಖ್ಯಮಂತ್ರಿ, ಎಐಎನ್‌ಆರ್‌ಸಿ ಮುಖ್ಯಸ್ಥ ಎನ್.ರಂಗಸ್ವಾಮಿ ಅವರು ಮೈತ್ರಿಯ ನೇತೃತ್ವ ನಮಗೆ ನೀಡದಿದ್ದಲ್ಲಿ ಏಕಾಂಗಿಯಾಗಿ ಸ್ಪರ್ಧಿಸುವುದಾಗಿಯೂ ಬಿಜೆಪಿಗೆ ಎಚ್ಚರಿಕೆ ನೀಡಿದ್ದರು. ಆದರೆ ಈಗ ಎಐಎನ್‌ಆರ್‌ಸಿ ನೇತೃತ್ವದಲ್ಲೇ ಚುನಾವಣೆ ಎದುರಿಸಲು ಬಿಜೆಪಿ ಒಪ್ಪಿದೆ. ಉಭಯ ಪಕ್ಷಗಳು ಸೀಟು ಹಂಚಿಕೆಯನ್ನೂ ಮಾಡಿಕೊಂಡಿವೆ.

- Advertisement -

ಆಡಳಿತರೂಢ ಎಐಎನ್‌ಆರ್‌ಸಿ ಮತ್ತು ಬಿಜೆಪಿ – ಎಐಎಡಿಎಂಕೆ ಮೈತ್ರಿ ಪಕ್ಷಗಳು ಚುನಾವಣೆಗಾಗಿ ಸೀಟು ಹಂಚಿಕೆಯ ಬಗ್ಗೆ ಒಪ್ಪಂದ ಮಾಡಿಕೊಂಡಿವೆ. ಒಟ್ಟು 30 ವಿಧಾನಸಭಾ ಕ್ಷೇತ್ರಗಳಿರುವ ಪುದುಚೆರಿ ಕೇಂದ್ರಾಡಳಿತ ಪ್ರದೇಶದ ವಿಧಾನಸಭಾ ಚುನಾವಣೆಗಾಗಿ ಎಐಎನ್‌ಆರ್‌ಸಿ 16 ಕ್ಷೇತ್ರಗಳಲ್ಲ ಹಾಗೂ ಬಿಜೆಪಿ 14 ಕ್ಷೇತ್ರಗಳಲ್ಲಿ ಸ್ಪರ್ಧಿಸಲಿವೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕಲಬುರಗಿ | ‘ನಮ್ಮನ್ನ ಎಲ್ಲಿಗೆ ಕಳುಹಿಸುತ್ತೀರಿ?’: ತಗ್ಗಿನ ಬೇಲಿಯ...

92ಕ್ಕೂ ಅಧಿಕ ಸ್ಲಂ ಕುಟುಂಬಗಳ ಬದುಕು ಕೇವಲ ಜಮೀನಿನ ಹಕ್ಕಿನ ಪ್ರಶ್ನೆಯಲ್ಲ; ಅವರ ಸುರಕ್ಷಿತ ಓಡಾಟ, ಕುಡಿಯುವ ನೀರು ಹಾಗೂ ನಿತ್ಯದ ಬದುಕಿನ ಹಕ್ಕಿನ ಪ್ರಶ್ನೆಯೂ ಹೌದು. ನ್ಯಾಯಾಲಯದ ವಿಚಾರಣೆ ಅಂತಿಮಗೊಳ್ಳುವವರೆಗೆ ಯಾವುದೇ...

ಚುನಾವಣಾ ಆಯೋಗದ ಸಭೆ: ಪರಿಹಾರವಲ್ಲ, ತೇಪೆ ಹಚ್ಚುವ ಕಾರ್ಯಕ್ರಮ

ಅವೈಜ್ಞಾನಿಕ 'SIR' ಪ್ರಕ್ರಿಯೆ ಮತ್ತು ಆಯೋಗದೊಳಗಿನ ಭಿನ್ನಾಭಿಪ್ರಾಯಗಳು ಸಾರ್ವಜನಿಕವಾಗಿ ಬಯಲಾದ ಬೆನ್ನಲ್ಲೇ ಬಿಡುಗಡೆಯಾದ ಚುನಾವಣಾ ಆಯೋಗದ ಪತ್ರಿಕಾ ಪ್ರಕಟಣೆ, ತಪ್ಪುಗಳನ್ನು ತಿದ್ದುವ ಬದಲು ವ್ಯವಸ್ಥೆಯ ಲೋಪಗಳಿಗೆ ತೇಪೆ ಹಚ್ಚುವ ಯತ್ನದಂತೆ ಕಾಣುತ್ತಿದೆ. ದೇಶದ ಇತಿಹಾಸದಲ್ಲೇ...

ಹೊರಟ್ಟಿ ಅವರ ಹೋರಾಟದ ಬದುಕು ಮತ್ತು ಅವರ ಭಕ್ತ...

ಗ್ಯಾರಂಟಿ ಯೋಜನೆಗಳಿಂದ ಕೂಲಿ ಕಾರ್ಮಿಕರು ಸಿಗುತ್ತಿಲ್ಲವೆಂಬ ಬಸವರಾಜ ಹೊರಟ್ಟಿ ಅವರ ಹೇಳಿಕೆ ಮತ್ತು ಅದಕ್ಕೆ ಸಿಕ್ಕ ಸಾರ್ವಜನಿಕ ಚಪ್ಪಾಳೆಗಳು, ಕೇವಲ ಹಸಿವನ್ನೇ ಶ್ರಮದ ಇಂಧನವನ್ನಾಗಿ ನೋಡುವ ಸಮಾಜದ ಕ್ರೂರ ಮನಸ್ಥಿತಿಯನ್ನು ಅನಾವರಣಗೊಳಿಸುತ್ತವೆ. ಬಸವರಾಜ ಹೊರಟ್ಟಿ...

ಮುಖ್ಯಮಂತ್ರಿ ಎನ್.ರಂಗಸ್ವಾಮಿ ಮತ್ತು ಕೇಂದ್ರ ಸಚಿವ ಮನ್ಸುಖ್ ಮಾಂಡವೀಯ ಅವರು ಪುದುಚೆರಿಯ ಖಾಸಗಿ ಹೋಟೆಲ್‌ವೊಂದರಲ್ಲಿ ಮೈತ್ರಿಗೆ ಸಂಬಂಧಿಸಿದಂತೆ ಸಭೆ ನಡೆಸಿದ್ದರು. ಸಭೆಯ ಬಳಿಕ ಮಾಧ್ಯಮಗಳಿಗೆ ಹೇಳಿಕೆ ನೀಡಿದ ಮಾಂಡವೀಯ, ರಂಗಸ್ವಾಮಿ ನೇತೃತ್ವದಲ್ಲೇ ಚುನಾವಣೆಯನ್ನು ಎದುರಿಸಲಿದ್ದೇವೆ. ನಮ್ಮ ಮೈತ್ರಿಯಲ್ಲಿ ಯಾವುದೇ ಗೊಂದಲವಿಲ್ಲ ಎಂದು ಹೇಳಿದ್ದಾರೆ.

ಇನ್ನು, ಬಿಜೆಪಿ ತನ್ನ ಪಾಲಿಗೆ ಸಿಕ್ಕ 14 ಕ್ಷೆತ್ರಗಳ ಪೈಕಿ, ಎಐಎಡಿಎಂಕೆ ಹಾಗೂ ಹೊಸದಾಗಿ ಸ್ಥಾಪನೆಯಾಗದ ಎಲ್‌ಜೆಕೆ ಮೈತ್ರಿ ಪಕ್ಷಗಳಿಗೆ ತಲಾ 2 ಕ್ಷೇತ್ರಗಳನ್ನು ಬಿಟ್ಟುಕೊಟ್ಟಿದೆ ಎಂದು ಪಕ್ಷದ ಉನ್ನತ ಮೂಲಗಳು ತಿಳಿಸಿವೆ.

ಇದನ್ನೂ ಓದಿ : ಇರಾನ್‌-ಕತಾರ್‌ ಅನಿಲ ಘಟಕಗಳಿಗೆ ಹತ್ತಿದ ಕಿಚ್ಚು: ಭಾರತಕ್ಕೂ ತಟ್ಟಲಿದೆಯಾ ಬಿಸಿ?

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮಳೆ ಅಬ್ಬರ: ಉತ್ತರ ಪ್ರದೇಶದಲ್ಲಿ 10 ಮಂದಿ ಸಾವು; ಒಡಿಶಾದಲ್ಲಿ ಪ್ರವಾಹ

ದೇಶದ ಹಲವು ರಾಜ್ಯಗಳಲ್ಲಿ ಮುಂಗಾರು ಮಳೆಯ ಆರ್ಭಟ ಮುಂದುವರಿದಿದ್ದು, ಉತ್ತರ ಪ್ರದೇಶ...

26 ಬಾರಿ ಸೋತರೂ ಕುಗ್ಗದ ಛಲ; 59ನೇ ವಯಸ್ಸಿನಲ್ಲಿ ಸರ್ಕಾರಿ ಶಿಕ್ಷಕ ಹುದ್ದೆ ಪಡೆದ ವೃದ್ಧ

ಸರಿಯಾದ ಪ್ರಯತ್ನ ಮತ್ತು ಛಲವಿದ್ದರೆ ವಯಸ್ಸು ಕೇವಲ ಒಂದು ಸಂಖ್ಯೆಯಷ್ಟೇ ಎಂಬುದನ್ನು...

1,870 ಕೋಟಿ ರೂ. ದೇಣಿಗೆ ದಂಧೆ ಆರೋಪ: ಗುಜರಾತ್‌ನ 3 ರಾಜಕೀಯ ಪಕ್ಷಗಳ ಅಕ್ರಮ ಬಯಲು

ಗುಜರಾತ್‌ನಲ್ಲಿ ನೋಂದಾಯಿತವಾಗಿದ್ದ, ಆದರೆ ಮಾನ್ಯತೆ ಪಡೆಯದ ಮೂರು ರಾಜಕೀಯ ಪಕ್ಷಗಳು ಆದಾಯ...

ತಮಗೆ ಬಿಜೆಪಿ‌ ಸೇರುವಂತೆ ಗ್ಯಾನೇಶ್ ಕುಮಾರ್ ಆಹ್ವಾನಿಸಿದ್ದರು: ನಿವೃತ್ತ ಐಎಎಸ್ ಜಿಜಿ ಥಾಮ್ಸನ್

ಚುನಾವಣಾ ಆಯುಕ್ತ (CEC) ಗ್ಯಾನೇಶ್ ಕುಮಾರ್ ಅವರು 2016ರಲ್ಲಿ ಸರ್ಕಾರಿ ಸೇವೆಯಲ್ಲಿದ್ದಾಗ...