ಪುದುಚೆರಿ ಚುನಾವಣೆ | ‘ಇಂಡಿಯಾ’ ಗೊಂದಲ ನಿವಾರಣೆ: ಕಾಂಗ್ರೆಸ್ 16, ಡಿಎಂಕೆ 14 ಕ್ಷೇತ್ರಗಳಲ್ಲಿ ಸ್ಪರ್ಧೆ

Date:

ಪುದುಚೆರಿಯ ‘ಇಂಡಿಯಾ’ ಮೈತ್ರಿಕೂಟದ ಪ್ರಮುಖ ಪಕ್ಷಗಳಾದ ಡಿಎಂಕೆ ಮತ್ತು ಕಾಂಗ್ರೆಸ್‌ ಪಕ್ಷಗಳ ನಡುವೆ ಇದ್ದ ಗೊಂದಲಗಳು ಮುಕ್ತಾಯಗೊಂಡಿವೆ. ಸೀಟು ಹಂಚಿಕೆಯನ್ನೂ ಮಾಡಿಕೊಂಡಿವೆ.

- Advertisement -

ಈ ಸಂಬಂಧಿಸಿದಂತೆ ಜಂಟಿ ಸುದ್ದಿಗೋಷ್ಠಿಯನ್ನು ನಡೆಸಿದ ಡಿಎಂಕೆ ಸಂಸದ ಎಸ್‌. ಜಗತ್ರತ್ನಚಗನ್ ಮತ್ತು ಪಿಪಿಸಿಸಿ(ಪುದುಚೆರಿ ಪ್ರದೇಶ್ ಕಾಂಗ್ರೆಸ್‌ ‌ಸಮಿತಿ) ಅಧ್ಯಕ್ಷ ವಿ. ವೈಥಿಲಿಂಗಂ, ಪುದುಚೆರಿ ಕೇಂದ್ರಾಡಳಿತ ಪ್ರದೇಶದ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ 16 ಕ್ಷೇತ್ರಗಳಲ್ಲಿ ಸ್ಪರ್ಧಿಸಲಿದ್ದು, ಡಿಎಂಕೆ 14 ಕ್ಷೇತ್ರಗಳಲ್ಲಿ ಸ್ಪರ್ಧಿಸಲಿದೆ ಎಂದು ತಿಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕಲಬುರಗಿ | ‘ನಮ್ಮನ್ನ ಎಲ್ಲಿಗೆ ಕಳುಹಿಸುತ್ತೀರಿ?’: ತಗ್ಗಿನ ಬೇಲಿಯ...

92ಕ್ಕೂ ಅಧಿಕ ಸ್ಲಂ ಕುಟುಂಬಗಳ ಬದುಕು ಕೇವಲ ಜಮೀನಿನ ಹಕ್ಕಿನ ಪ್ರಶ್ನೆಯಲ್ಲ; ಅವರ ಸುರಕ್ಷಿತ ಓಡಾಟ, ಕುಡಿಯುವ ನೀರು ಹಾಗೂ ನಿತ್ಯದ ಬದುಕಿನ ಹಕ್ಕಿನ ಪ್ರಶ್ನೆಯೂ ಹೌದು. ನ್ಯಾಯಾಲಯದ ವಿಚಾರಣೆ ಅಂತಿಮಗೊಳ್ಳುವವರೆಗೆ ಯಾವುದೇ...

ಚುನಾವಣಾ ಆಯೋಗದ ಸಭೆ: ಪರಿಹಾರವಲ್ಲ, ತೇಪೆ ಹಚ್ಚುವ ಕಾರ್ಯಕ್ರಮ

ಅವೈಜ್ಞಾನಿಕ 'SIR' ಪ್ರಕ್ರಿಯೆ ಮತ್ತು ಆಯೋಗದೊಳಗಿನ ಭಿನ್ನಾಭಿಪ್ರಾಯಗಳು ಸಾರ್ವಜನಿಕವಾಗಿ ಬಯಲಾದ ಬೆನ್ನಲ್ಲೇ ಬಿಡುಗಡೆಯಾದ ಚುನಾವಣಾ ಆಯೋಗದ ಪತ್ರಿಕಾ ಪ್ರಕಟಣೆ, ತಪ್ಪುಗಳನ್ನು ತಿದ್ದುವ ಬದಲು ವ್ಯವಸ್ಥೆಯ ಲೋಪಗಳಿಗೆ ತೇಪೆ ಹಚ್ಚುವ ಯತ್ನದಂತೆ ಕಾಣುತ್ತಿದೆ. ದೇಶದ ಇತಿಹಾಸದಲ್ಲೇ...

ಹೊರಟ್ಟಿ ಅವರ ಹೋರಾಟದ ಬದುಕು ಮತ್ತು ಅವರ ಭಕ್ತ...

ಗ್ಯಾರಂಟಿ ಯೋಜನೆಗಳಿಂದ ಕೂಲಿ ಕಾರ್ಮಿಕರು ಸಿಗುತ್ತಿಲ್ಲವೆಂಬ ಬಸವರಾಜ ಹೊರಟ್ಟಿ ಅವರ ಹೇಳಿಕೆ ಮತ್ತು ಅದಕ್ಕೆ ಸಿಕ್ಕ ಸಾರ್ವಜನಿಕ ಚಪ್ಪಾಳೆಗಳು, ಕೇವಲ ಹಸಿವನ್ನೇ ಶ್ರಮದ ಇಂಧನವನ್ನಾಗಿ ನೋಡುವ ಸಮಾಜದ ಕ್ರೂರ ಮನಸ್ಥಿತಿಯನ್ನು ಅನಾವರಣಗೊಳಿಸುತ್ತವೆ. ಬಸವರಾಜ ಹೊರಟ್ಟಿ...

‘ಇಂಡಿಯಾ’ ಮೈತ್ರಿಕೂಟದ ವಿಸಿಕೆ ಮತ್ತು ಸಿಪಿಐ ಪಕ್ಷಗಳಿಗೆ ಡಿಎಂಕೆ ತನ್ನ ಕ್ಷೇತ್ರಗಳನ್ನೇ ಬಿಟ್ಟುಕೊಡಲಿದೆ ಎಂದು ತಿಳಿಸಿದ್ದಾರೆ.

2021ರ ವಿಧಾನಸಭಾ ಚುನಾವಣೆಯಲ್ಲಿ 14 ಕ್ಷೇತ್ರಗಳಲ್ಲಿ ಸ್ಪರ್ಧಿಸಿದ್ದ ಕಾಂಗ್ರೆಸ್‌ ಕೇವಲ 2ಕ್ಷೇತ್ರಗಳಲ್ಲಿ ಗೆದ್ದಿದ್ದರೆ, 13 ಕ್ಷೇತ್ರಗಳಲ್ಲಿ ಕಣಕ್ಕಿಳಿದಿದ್ದ ಡಿಎಂಕೆ 6 ಕ್ಷೇತ್ರಗಳಲ್ಲಿ ಜಯ ಸಾಧಿಸಿತ್ತು.

ಇದನ್ನೂ ಓದಿ : ಸೌಜನ್ಯ ಪ್ರಕರಣ | ಸುಪ್ರೀಂ ನೋಟಿಸ್: ‘ಸರ್ಕಾರ ಹಿಂದೆ ಸರಿಯದಿರಲಿ’ ಎಂದ ಮಹಿಳಾಪರ ಹೋರಾಟಗಾರರು

ಇನ್ನು, ಪುದುಚೆರಿ ವಿಧಾನಸಭಾ ಚುನಾವಣೆಯ ನಾಮಪತ್ರ ಸಲ್ಲಿಕೆಗೆ ಮಾ.23(ಸೋಮವಾರ) ದಿನವಾಗಿತ್ತು. ಇಂದಿನಿಂದ(ಮಾರ್ಚ್ 24) ನಾಮಪತ್ರ ಪರಿಶೀಲನೆ ನಡೆಯಲಿದ್ದು, ಮಾರ್ಚ್ 26ರೊಳಗೆ ನಾಮಪತ್ರ ಹಿಂಪಡೆಯಬಹುದಾಗಿದೆ.

ಪುದುಚೆರಿಯ 30 ವಿಧಾನಸಭಾ ಕ್ಷೇತ್ರಗಳಿಗೆ ಏಪ್ರಿಲ್ 9ರಂದು ಚುನಾವಣೆ ನಡೆಯಲಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡಿನಲ್ಲಿ ತೀವ್ರ ವಿರೋಧ: ‘ಆರ್‌ಟಿಐ ವಿನಾಯಿತಿ’ ನಿರ್ಧಾರದಿಂದ ಹಿಂದೆ ಸರಿದ ವಿಜಯ್ ಸರ್ಕಾರ

ತಮಿಳುನಾಡಿನ ಮುಖ್ಯಮಂತ್ರಿ ಸಿ. ಜೋಸೆಫ್ ವಿಜಯ್ ನೇತೃತ್ವದ 'ತಮಿಳಗ ವೆಟ್ರಿ ಕಳಗಂ'...

ಅಸ್ಸಾಂ ಸರ್ಕಾರದ ವೈಫಲ್ಯಗಳನ್ನು ಮುಚ್ಚಿಡಲು ನಮ್ಮ ಬಂಧನ: ಸಿಜೆಪಿ ನಾಯಕ ಅಶುತೋಷ್ ರಂಕಾ ಆರೋಪ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಸಹ-ಸಂಚಾಲಕ ಅಶುತೋಷ್ ರಂಕಾ ಮತ್ತು ಅವರ...

ವಿಜಯನ್ ವಿರುದ್ಧ ಸಿಎಂಆರ್‌ಎಲ್ ಪ್ರಕರಣ: ಇಡಿ ಹೇಳಿದ ತಕ್ಷಣ ಎಫ್‌ಐಆರ್ ದಾಖಲಿಸಲಾಗದು ಎಂದು ಕೇರಳ ಗೃಹ ಸಚಿವ

ಜಾರಿ ನಿರ್ದೇಶನಾಲಯ (ಇಡಿ) ಕೋರಿದೆ ಎಂದಮಾತ್ರಕ್ಕೆ ತಕ್ಷಣವೇ ಎಫ್‌ಐಆರ್ ನೋಂದಾಯಿಸಲು ಸಾಧ್ಯವಿಲ್ಲ....

4 ವರ್ಷಗಳಲ್ಲಿ 111 ಸಂಸದರು, ಶಾಸಕರ ಪಕ್ಷಾಂತರ: ಶೇ. 26ರಷ್ಟು ನಾಯಕರನ್ನು ಸೇರಿಸಿಕೊಂಡ ಬಿಜೆಪಿ!

ದೇಶದ ರಾಜಕೀಯ ಕ್ಷೇತ್ರದಲ್ಲಿ ಜನಪ್ರತಿನಿಧಿಗಳ ಪಕ್ಷಾಂತರ ಪರ್ವ ತಡೆಯಿಲ್ಲದೆ ಮುಂದುವರಿದಿದೆ. ಅದರಲ್ಲೂ...