ಪುದುಚೆರಿ ಚುನಾವಣೆ | 30 ಕ್ಷೇತ್ರಗಳಿಗೆ ಟಿಕೆಟ್‌ ಘೋಷಿಸಿದ ಟಿವಿಕೆ : ಏಕಾಂಗಿಯಾಗಿ ಸ್ಪರ್ಧೆಗಿಳಿದು ಸವಾಲು

Date:

ಪುದುಚೆರಿಯಲ್ಲಿ ಮುಂಬರುವ ವಿಧಾನಸಭಾ ಚುನಾವಣೆಗೆ ಟಿವಿಕೆ ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಘೋಷಣೆ ಮಾಡಿದೆ. ಪುದುಚೆರಿಯ 30 ವಿಧಾನಸಭಾ ಕ್ಷೇತ್ರಗಳಲ್ಲೂ ಏಕಾಂಗಿಯಾಗಿ ಸ್ಪರ್ಧಿಸುವುದಾಗಿ ಟಿವಿಕೆ ಸ್ಪಷ್ಟಪಡಿಸಿದೆ.

- Advertisement -

ಪುದುಚೆರಿ ಕೇಂದ್ರಾಡಳಿತ ಪ್ರದೇಶದ ಮಂಗಳಂ ಮತ್ತು ಕದಿರ್ಕಾಮಮ್‌ ವಿಧಾನಸಭಾ ಕ್ಷೇತ್ರದಿಂದ ಟಿವಿಕೆ ಇಬ್ಬರು ಮಹಿಳಾ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದೆ.  

ಔಸುಡು ಮೀಸಲು ಕ್ಷೇತ್ರದಿಂದ ಕಳೆದ ಬಾರಿ ಬಿಜೆಪಿಯಿಂದ ಸ್ಪರ್ಧಿಸಿದ್ದ ಎ ಕೆ ಸಾಯಿ ಜೆ ಸರವಣನ್ ಕುಮಾರ್‌ ಅವರು ಬಿಜೆಪಿಯಲ್ಲಿ ಟಿಕೆಟ್‌ ದೊರಕದ ಹಿನ್ನೆಲೆಯಲ್ಲಿ ಕಳೆದ ಶನಿವಾರ ಟಿವಿಕೆ ಪಕ್ಷವನ್ನು ಸೇರ್ಪಡೆಗೊಂಡಿದ್ದರು. ಈಗ ತಿರುಭುವನೈ ಮೀಸಲು ಕ್ಷೇತ್ರದಿಂದ ಅವರನ್ನು ಟಿವಿಕೆ ಕಣಕ್ಕಿಳಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕಲಬುರಗಿ | ‘ನಮ್ಮನ್ನ ಎಲ್ಲಿಗೆ ಕಳುಹಿಸುತ್ತೀರಿ?’: ತಗ್ಗಿನ ಬೇಲಿಯ...

92ಕ್ಕೂ ಅಧಿಕ ಸ್ಲಂ ಕುಟುಂಬಗಳ ಬದುಕು ಕೇವಲ ಜಮೀನಿನ ಹಕ್ಕಿನ ಪ್ರಶ್ನೆಯಲ್ಲ; ಅವರ ಸುರಕ್ಷಿತ ಓಡಾಟ, ಕುಡಿಯುವ ನೀರು ಹಾಗೂ ನಿತ್ಯದ ಬದುಕಿನ ಹಕ್ಕಿನ ಪ್ರಶ್ನೆಯೂ ಹೌದು. ನ್ಯಾಯಾಲಯದ ವಿಚಾರಣೆ ಅಂತಿಮಗೊಳ್ಳುವವರೆಗೆ ಯಾವುದೇ...

ಚುನಾವಣಾ ಆಯೋಗದ ಸಭೆ: ಪರಿಹಾರವಲ್ಲ, ತೇಪೆ ಹಚ್ಚುವ ಕಾರ್ಯಕ್ರಮ

ಅವೈಜ್ಞಾನಿಕ 'SIR' ಪ್ರಕ್ರಿಯೆ ಮತ್ತು ಆಯೋಗದೊಳಗಿನ ಭಿನ್ನಾಭಿಪ್ರಾಯಗಳು ಸಾರ್ವಜನಿಕವಾಗಿ ಬಯಲಾದ ಬೆನ್ನಲ್ಲೇ ಬಿಡುಗಡೆಯಾದ ಚುನಾವಣಾ ಆಯೋಗದ ಪತ್ರಿಕಾ ಪ್ರಕಟಣೆ, ತಪ್ಪುಗಳನ್ನು ತಿದ್ದುವ ಬದಲು ವ್ಯವಸ್ಥೆಯ ಲೋಪಗಳಿಗೆ ತೇಪೆ ಹಚ್ಚುವ ಯತ್ನದಂತೆ ಕಾಣುತ್ತಿದೆ. ದೇಶದ ಇತಿಹಾಸದಲ್ಲೇ...

ಹೊರಟ್ಟಿ ಅವರ ಹೋರಾಟದ ಬದುಕು ಮತ್ತು ಅವರ ಭಕ್ತ...

ಗ್ಯಾರಂಟಿ ಯೋಜನೆಗಳಿಂದ ಕೂಲಿ ಕಾರ್ಮಿಕರು ಸಿಗುತ್ತಿಲ್ಲವೆಂಬ ಬಸವರಾಜ ಹೊರಟ್ಟಿ ಅವರ ಹೇಳಿಕೆ ಮತ್ತು ಅದಕ್ಕೆ ಸಿಕ್ಕ ಸಾರ್ವಜನಿಕ ಚಪ್ಪಾಳೆಗಳು, ಕೇವಲ ಹಸಿವನ್ನೇ ಶ್ರಮದ ಇಂಧನವನ್ನಾಗಿ ನೋಡುವ ಸಮಾಜದ ಕ್ರೂರ ಮನಸ್ಥಿತಿಯನ್ನು ಅನಾವರಣಗೊಳಿಸುತ್ತವೆ. ಬಸವರಾಜ ಹೊರಟ್ಟಿ...

ಮಾಜಿ ಎಐಎಡಿಎಂಕೆ ಶಾಸಕರಾದ ಕೆ ಎ ಯು ಅಸನಾ ಮತ್ತು ಎಲ್ ಪೆರಿಯಸಾಮಿ ಕ್ರಮವಾಗಿ ಕಾರೈಕಲ್ (ದಕ್ಷಿಣ) ಮತ್ತು ನೆಟ್ಟಪಕ್ಕಂ (ಮೀಸಲು) ಕ್ಷೇತ್ರಗಳಿಂದ ಸ್ಪರ್ಧಿಸಲು ಟಿವಿಕೆ ಟಿಕೆಟ್‌ ನೀಡಿದೆ.

ಬಿಜೆಪಿಯ ಪುದುಚೆರಿ ಘಟಕದ ಮಾಜಿ ಅಧ್ಯಕ್ಷ ವಿ ಸಾಮಿನಾಥನ್ ಅವರನ್ನು ಲಾಸ್ಪೆಟ್ ಕ್ಷೇತ್ರಕ್ಕೆ ಟಿಕೆಟ್‌ ನೀಡಿದ್ದಲ್ಲದೆ, ಪುದುಚೆರಿಯ ಮಾಜಿ ಪೊಲೀಸ್ ಮಹಾನಿರ್ದೇಶಕ ವಿ ಜೆ ಚಂದ್ರನ್ ಮತ್ತು ಮಾಜಿ ಕಾಂಗ್ರೆಸ್ ಶಾಸಕ ಎನ್ ಧನವೇಲೌ ಅವರಿಗೂ ಟಿವಿಕೆ ಟಿಕೆಟ್‌ ಘೋಷಣೆ ಮಾಡಿದೆ.

ಇದನ್ನೂ ಓದಿ :ಲಿಂಗತ್ವ ಅಲ್ಪಸಂಖ್ಯಾತರ ಅಸ್ಮಿತೆಯನ್ನೇ ಅಳಿಸುವ ಮಸೂದೆ: ಆತ್ಮಗೌರವಕ್ಕೆ ಕೊಡಲಿಪೆಟ್ಟು

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡಿನಲ್ಲಿ ತೀವ್ರ ವಿರೋಧ: ‘ಆರ್‌ಟಿಐ ವಿನಾಯಿತಿ’ ನಿರ್ಧಾರದಿಂದ ಹಿಂದೆ ಸರಿದ ವಿಜಯ್ ಸರ್ಕಾರ

ತಮಿಳುನಾಡಿನ ಮುಖ್ಯಮಂತ್ರಿ ಸಿ. ಜೋಸೆಫ್ ವಿಜಯ್ ನೇತೃತ್ವದ 'ತಮಿಳಗ ವೆಟ್ರಿ ಕಳಗಂ'...

ಅಸ್ಸಾಂ ಸರ್ಕಾರದ ವೈಫಲ್ಯಗಳನ್ನು ಮುಚ್ಚಿಡಲು ನಮ್ಮ ಬಂಧನ: ಸಿಜೆಪಿ ನಾಯಕ ಅಶುತೋಷ್ ರಂಕಾ ಆರೋಪ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಸಹ-ಸಂಚಾಲಕ ಅಶುತೋಷ್ ರಂಕಾ ಮತ್ತು ಅವರ...

ವಿಜಯನ್ ವಿರುದ್ಧ ಸಿಎಂಆರ್‌ಎಲ್ ಪ್ರಕರಣ: ಇಡಿ ಹೇಳಿದ ತಕ್ಷಣ ಎಫ್‌ಐಆರ್ ದಾಖಲಿಸಲಾಗದು ಎಂದು ಕೇರಳ ಗೃಹ ಸಚಿವ

ಜಾರಿ ನಿರ್ದೇಶನಾಲಯ (ಇಡಿ) ಕೋರಿದೆ ಎಂದಮಾತ್ರಕ್ಕೆ ತಕ್ಷಣವೇ ಎಫ್‌ಐಆರ್ ನೋಂದಾಯಿಸಲು ಸಾಧ್ಯವಿಲ್ಲ....

4 ವರ್ಷಗಳಲ್ಲಿ 111 ಸಂಸದರು, ಶಾಸಕರ ಪಕ್ಷಾಂತರ: ಶೇ. 26ರಷ್ಟು ನಾಯಕರನ್ನು ಸೇರಿಸಿಕೊಂಡ ಬಿಜೆಪಿ!

ದೇಶದ ರಾಜಕೀಯ ಕ್ಷೇತ್ರದಲ್ಲಿ ಜನಪ್ರತಿನಿಧಿಗಳ ಪಕ್ಷಾಂತರ ಪರ್ವ ತಡೆಯಿಲ್ಲದೆ ಮುಂದುವರಿದಿದೆ. ಅದರಲ್ಲೂ...