ದೆಹಲಿ ಸ್ಫೋಟ: ಪುಲ್ವಾಮಾದ ಶಂಕಿತ ಆರೋಪಿ ಡಾ. ಉಮರ್ ನಬಿ ಮನೆ ಧ್ವಂಸ

Date:

ದೆಹಲಿಯ ಕೆಂಪು ಕೋಟೆ ಬಳಿ ನಡೆದ ಬಾಂಬ್ ಸ್ಫೋಟದ ಶಂಕಿತ ಆರೋಪಿ ಡಾ. ಉಮರ್ ನಬಿಯ ದಕ್ಷಿಣ ಕಾಶ್ಮೀರದ ಪುಲ್ವಾಮಾದ ಕ್ವಿಲ್ ಗ್ರಾಮದಲ್ಲಿರುವ ಮನೆಯನ್ನು ಭದ್ರತಾ ಪಡೆಗಳು ಧ್ವಂಸಗೊಳಿಸಿದೆ. ಉಗ್ರರ ವಿರುದ್ಧದ ಬಲವಾದ ಸಂದೇಶ ನೀಡಲು ಮನೆಯನ್ನು ಕೆಡವಲಾಗಿದೆ ಎಂದು ಪೊಲೀಸರು ಹೇಳಿಕೊಂಡಿದ್ದಾರೆ. ಇನ್ನು ಮನೆ ಕೆಡವುದಕ್ಕೂ ಮುನ್ನ ಮನೆಯಲ್ಲಿದ್ದ ನಬಿ ಕುಟುಂಬಸ್ಥರನ್ನು ಹೊರಗೆ ಕರೆತರಲಾಗಿದೆ ಎಂದು ವರದಿಯಾಗಿದೆ.

- Advertisement -

ಸೋಮವಾರ ದೆಹಲಿಯ ಕೆಂಪು ಕೋಟೆಯ ಬಳಿ ಐ20 ಕಾರು ಸ್ಫೋಟಗೊಂಡಿದ್ದು, ಸುಮಾರು 13 ಮಂದಿ ಮೃತಪಟ್ಟಿದ್ದಾರೆ. ನಬಿ ಈ ಬಾಂಬ್ ದಾಳಿಯ ಶಂಕಿತ ಆರೋಪಿ. ಈ ಸ್ಫೋಟದಲ್ಲಿ ನಬಿ ಸಾವನ್ನಪ್ಪಿದ್ದು, ವಶಪಡಿಸಿಕೊಂಡ ದೇಹದ ಭಾಗಗಳೊಂದಿಗೆ ಡಿಎನ್‌ಎ ಹೊಂದಿಕೆಯಾಗಿದೆ ಎನ್ನಲಾಗಿದೆ. ಸದ್ಯ ಉಮರ್ ತಾಯಿ, ತಂದೆ ಮತ್ತು ಇಬ್ಬರು ಸಹೋದರರು ಪೊಲೀಸ್ ವಶದಲ್ಲಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

ಇದನ್ನು ಓದಿದ್ದೀರಾ? ದೆಹಲಿ ಸ್ಫೋಟ ದುರಂತ: ಮುಗಿಲು ಮುಟ್ಟಿದ ಮೃತರ ಕುಟುಂಬಗಳ ರೋದನ

ದೆಹಲಿ ಸ್ಫೋಟಕ್ಕೆ ಸಂಬಂಧಿಸಿದಂತೆ ತನಿಖಾ ಸಂಸ್ಥೆಗಳು ಉತ್ತರ ಪ್ರದೇಶದ ಡಾ. ಅದೀಲ್ ಅಹ್ಮದ್ ರಾಥರ್, ಡಾ. ಶಾಹೀನ್ ಸಯೀದ್, ಡಾ. ಪರ್ವೇಜ್ ಅನ್ಸಾರಿ, ಡಾ. ಫಾರೂಕ್ ಮತ್ತು ಡಾ. ಮೊಹಮ್ಮದ್ ಆರಿಫ್ ಎಂಬ ಐವರು ವೈದ್ಯರನ್ನು ಬಂಧಿಸಿದೆ. ಈ ಹಿನ್ನೆಲೆ ಸದ್ಯ ಜಮ್ಮು ಮತ್ತು ಕಾಶ್ಮೀರ ಪೊಲೀಸರು, ಉತ್ತರ ಪ್ರದೇಶ ಮತ್ತು ಹರಿಯಾಣ ಪೊಲೀಸರು, ಗುಪ್ತಚರ ಸಂಸ್ಥೆಗಳು ‘ವೈಟ್ ಕಾಲರ್ ಉಗ್ರಗಾಮಿ ಜಾಲ’ ಎಂಬ ಬಗ್ಗೆ ತನಿಖೆ ನಡೆಸುತ್ತಿದೆ.

ಇನ್ನು ಈಗಾಗಲೇ ಮಾನವ ಹಕ್ಕುಗಳ ಹೋರಾಟಗಾರರು ಶಂಕಿತ ಉಗ್ರರು ಅಥವಾ ಉಗ್ರರ ಮನೆಯನ್ನು ಧ್ವಂಸಗೊಳಿಸುವುದಕ್ಕೆ ವಿರೋಧ ವ್ಯಕ್ತಪಡಿಸಿದೆ. ಉಗ್ರ ಕೃತ್ಯದಲ್ಲಿ ನೇರವಾಗಿ ಭಾಗಿಯಾಗಿರದ ಕುಟುಂಬ ಸದಸ್ಯರು, ಸಂಬಂಧಿಕರಿಗೆ ಶಿಕ್ಷೆ ನೀಡುವುದು, ಅವರನ್ನು ಬೀದಿಪಾಲು ಮಾಡುವುದು ಸರಿಯಲ್ಲ. ಇದು ಅಂತಾರಾಷ್ಟ್ರೀಯ ಕಾನೂನಿನಡಿ ನಿಷೇಧಿತ ಎಂದು ಮಾನವ ಹಕ್ಕುಗಳ ಹೋರಾಟಗಾರರು ಹೇಳಿದ್ದಾರೆ. ಈ ರೀತಿ ಮನೆ ಧ್ವಂಸ ಮಾಡುವುದು ವಸತಿ ಹಕ್ಕು, ಘನತೆಯ ಹಕ್ಕು ಮತ್ತು ಕಾನೂನಿನ ಮುಂದೆ ಸಮಾನತೆಯ ಹಕ್ಕು ಸೇರಿದಂತೆ ಮೂಲಭೂತ ಸೇರಿದಂತೆ ಮೂಲಭೂತ ಹಕ್ಕುಗಳ ಉಲ್ಲಂಘನೆಯಾಗುತ್ತದೆ ಎಂದು ಮಾನವ ಹಕ್ಕುಗಳ ಸಂಘಟನೆಗಳು ಪ್ರತಿಪಾದಿಸಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ನ್ಯಾಯಾಂಗದ ಮೇಲೆ ಗೌರವವಿದೆ, ತಪ್ಪಾಗಿದ್ದರೆ ಕ್ಷಮೆಯಾಚಿಸುವೆ: ಸಂಜಯ್ ರಾವತ್

ಸುಪ್ರೀಂ ಕೋರ್ಟ್ ಕುರಿತು ತಾವು ನೀಡಿರುವ ಹೇಳಿಕೆಗಳು ಸೂಕ್ತವಲ್ಲ ಅಥವಾ ಅನುಚಿತ...

ವಿರಳಾತಿ ವಿರಳ ಪ್ರಕರಣ: ಮಾಲೆಗಾಂವ್ ಅಪ್ರಾಪ್ತೆಯ ಅತ್ಯಾಚಾರ, ಕೊಲೆ ಅಪರಾಧಿಗೆ ಮರಣದಂಡನೆ ಶಿಕ್ಷೆ

ಮಹಾರಾಷ್ಟ್ರದ ನಾಸಿಕ್ ಜಿಲ್ಲೆಯ ಮಾಲೆಗಾಂವ್ ತಾಲೂಕಿನ ಡೋಂಗರಾಳೆ ಗ್ರಾಮದಲ್ಲಿ ಸಾಡೇನಾಲ್ಕು ವರ್ಷದ...

ತಿರಂಗಾ ಮಾರ್ಚ್ ನಡೆಸದಂತೆ ಅಭಿಜೀತ್ ದೀಪ್ಕೆಗೆ ದೆಹಲಿ ಪೊಲೀಸರಿಂದ ನೋಟಿಸ್: ಮನೆಯ ಬಳಿ ಬಿಗಿ ಭದ್ರತೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ ಅವರು ದೆಹಲಿಯ...

​ಪ್ರತಿಭಟನೆಗಳ ವರದಿಗಾರಿಕೆಗೆ ಭಾರತೀಯ ಪ್ರೆಸ್ ಕೌನ್ಸಿಲ್‌ನಿಂದ ನೂತನ ಮಾರ್ಗದರ್ಶಿ ಸೂತ್ರಗಳ ಬಿಡುಗಡೆ

ಪ್ರತಿಭಟನೆಗಳು ಮತ್ತು ಧರಣಿ ಸತ್ಯಾಗ್ರಹಗಳ ಸಂದರ್ಭದಲ್ಲಿ ಪತ್ರಕರ್ತರ ಸುರಕ್ಷತೆಯನ್ನು ಕಾಯ್ದುಕೊಳ್ಳಲು, ಜವಾಬ್ದಾರಿಯುತ...