ಪುಣೆ| 13 ವರ್ಷದ ಬಾಲಕಿ ಮೇಲೆ ನಿರಂತರ ಅತ್ಯಾಚಾರ ಎಸಗಿದ ತಂದೆ, ಚಿಕ್ಕಪ್ಪ, ಸೋದರ ಸಂಬಂಧಿ

Date:

ಪುಣೆಯ 13 ವರ್ಷದ ಬಾಲಕಿಯ ಮೇಲೆ ಆಕೆಯ ತಂದೆ, ಚಿಕ್ಕಪ್ಪ ಮತ್ತು ಸೋದರ ಸಂಬಂಧಿಯೇ ನಿರಂತರ ಅತ್ಯಾಚಾರ ಎಸಗಿದ್ದು, ಪುಣೆ ಪೊಲೀಸರು ಬಂಧಿಸಿದ್ದಾರೆ.

- Advertisement -

ಶಾಲೆಯಲ್ಲಿ ‘ಗುಡ್ ಟಚ್ ಮತ್ತು ಬ್ಯಾಡ್ ಟಚ್’ ಬಗ್ಗೆ ಸೆಷನ್‌ ನಡೆಯುತ್ತಿದ್ದಾಗ ಈ ಬಾಲಕಿ ಮೇಲೆ ನಡೆಯುತ್ತಿದ್ದ ಅತ್ಯಾಚಾರವು ಬೆಳಕಿಗೆ ಬಂದಿದೆ. ಈ ಬಾಲಕಿ ಈ ಸೆಷನ್‌ನಲ್ಲಿ ತನ್ನೆಲ್ಲ ಕಷ್ಟವನ್ನು ಹಂಚಿಕೊಂಡಿದ್ದಾಳೆ ಎಂದು ವರದಿಯಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಪೋಲೀಸರ ಪ್ರಕಾರ, ಸಂತ್ರಸ್ತೆಯ ಸೋದರಸಂಬಂಧಿ 2023ರ ಜುಲೈ ತಿಂಗಳಲ್ಲಿ ಆಕೆಯ ಮೇಲೆ ಅತ್ಯಾಚಾರವೆಸಗಿದ್ದಾನೆ. ಈ ಬಗ್ಗೆ ಯಾರಿಗಾದರೂ ಹೇಳಿದರೆ ನಿನ್ನ ಮೇಲೆ ಕೆಟ್ಟ ಪರಿಣಾಮ ಬೀರುವುದಾಗಿ ಬೆದರಿಕೆ ಹಾಕಿದ್ದಾನೆ. ಬಾಲಕಿಯ ತಂದೆ ಪದೇ ಪದೇ ಲೈಂಗಿಕ ಕಿರುಕುಳ ನೀಡುತ್ತಿದ್ದ ಎಂದೂ ಪೊಲೀಸರು ತಿಳಿಸಿದ್ದಾರೆ.

ಇದನ್ನು ಓದಿದ್ದೀರಾ?  ಬೀದರ್‌ | ಬಾಲಕಿ ಮೇಲೆ ಅತ್ಯಾಚಾರ; 60 ವರ್ಷದ ಕಾಮುಕನ ಬಂಧನ

2024ರ ಜನವರಿ ತಿಂಗಳಲ್ಲಿ ಆಕೆಯ ಚಿಕ್ಕಪ್ಪ ಆಕೆಯನ್ನು ಲೈಂಗಿಕವಾಗಿ ನಿಂದಿಸಿದ್ದಾರೆ ಎಂದು ಆರೋಪಿಸಲಾಗಿದೆ. “ಬಾಲಕಿ ಚಿಕ್ಕಪ್ಪನ ನಡೆಯನ್ನು ವಿರೋಧಿಸಿದಾಗ, ಕಿರುಚಲು ಪ್ರಯತ್ನಿಸಿದಾಗ, ಅವನು ಬಾಲಕಿಯ ಬಾಯಿಯನ್ನು ಬಿಗಿ ಹಿಡಿದು ಥಳಿಸಿದ್ದಾನೆ” ಎಂದು ಪೊಲೀಸ್ ಅಧಿಕಾರಿಯೊಬ್ಬರು ಹೇಳಿದ್ದಾರೆ.

ಆಕೆಯ ತಂದೆ ಮತ್ತು ಚಿಕ್ಕಪ್ಪ 40 ವರ್ಷದವರಾಗಿದ್ದು ಆಕೆಯ ಸೋದರ ಸಂಬಂಧಿ 20 ವರ್ಷದವನಾಗಿದ್ದಾನೆ. ‘ಗುಡ್ ಟಚ್ ಮತ್ತು ಬ್ಯಾಡ್ ಟಚ್’ ಕುರಿತು ತನ್ನ ಶಾಲೆಯಲ್ಲಿ ಕೌನ್ಸೆಲಿಂಗ್ ಸಮಯದಲ್ಲಿ ಬಾಲಕಿ ಈ ಮಾಹಿತಿ ಹೇಳಿದ್ದಾಳೆ. ನಂತರ ಪೊಲೀಸರಿಗೆ ಮಾಹಿತಿ ನೀಡಲಾಯಿತು ಎಂದು ಅಧಿಕಾರಿ ತಿಳಿಸಿದರು.

ಭಾರತೀಯ ದಂಡ ಸಂಹಿತೆ ಮತ್ತು ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (ಪೋಕ್ಸೊ) ಕಾಯ್ದೆಯಡಿ ಅತ್ಯಾಚಾರ ಆರೋಪದಡಿ ಮೂವರನ್ನು ಬಂಧಿಸಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಜಂತರ್ ಮಂತರ್‌ನಲ್ಲಿ ಪ್ರತಿಭಟನೆ: ಎಎಪಿ ನಾಯಕ ಸೌರಭ್ ಭಾರದ್ವಾಜ್ ಸೇರಿ ಹಲವು ಮಂದಿ ದೆಹಲಿ ಪೊಲೀಸರ ವಶಕ್ಕೆ

ಚುನಾವಣಾ ಆಯೋಗದ ವಿರುದ್ಧ ಆಯೋಜಿಸಲಾಗಿದ್ದ ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲು ಜಂತರ್ ಮಂತರ್‌‌ಗೆ ಆಗಮಿಸಿದ್ದ...

ಸಿಜೆಪಿ ಬೆಂಬಲಕ್ಕೆ ನಿಂತ ಪಾಲ್ಘರ್ ವಕೀಲರ ಸಂಘ: ಕಾರ್ಯಕರ್ತರಿಗೆ ಉಚಿತ ಕಾನೂನು ನೆರವು ಘೋಷಣೆ

ಮಹಾರಾಷ್ಟ್ರದ ಪಾಲ್ಘರ್ ಜಿಲ್ಲೆಯ ವಕೀಲರ ಸಂಘವೊಂದು 'ಕಾಕ್ರೋಚ್ ಜನತಾ ಪಾರ್ಟಿ' (ಸಿಜೆಪಿ)...

ಅಯೋಧ್ಯೆ ರಾಮಮಂದಿರ ಸಿಬ್ಬಂದಿಗೆ ಶೇ. 100ರಷ್ಟು ಪೊಲೀಸ್ ವೆರಿಫಿಕೇಷನ್; ಹಿನ್ನೆಲೆ ಪರಿಶೀಲನೆ ಕಡ್ಡಾಯ

ಉತ್ತರ ಪ್ರದೇಶದ ಅಯೋಧ್ಯೆಯ ರಾಮಮಂದಿರ ಆಡಳಿತ ಮತ್ತು ಭದ್ರತಾ ವ್ಯವಸ್ಥೆಯನ್ನು ಮತ್ತಷ್ಟು...

ಸಿಇಸಿ ಗ್ಯಾನೇಶ್ ರಾಜೀನಾಮೆಗೆ ಆಗ್ರಹಿಸಿ ಪ್ರತಿಭಟನೆ: ಅನುಮತಿ ನಿರಾಕರಣೆ; ಜಂತರ್ ಮಂತರ್‌ನಲ್ಲಿ ಬಿಗಿ ಭದ್ರತೆ

ಮುಖ್ಯ ಚುನಾವಣೆ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ...