ಪುಣೆ ಉದ್ಯಮಿ ಕೇತನ್ ಹತ್ಯೆ ಪ್ರಕರಣ: ಆರೋಪಿಗಳಿಂದ ‘ಕೋಡ್ ವರ್ಡ್’ ಬಳಕೆ; ಸಿಯಾಳ ಮೊಬೈಲ್ ವಶಕ್ಕೆ

Date:

ಪುಣೆಯ 25 ವರ್ಷದ ಉದ್ಯಮಿ ಕೇತನ್ ಅಗರ್ವಾಲ್ ಹತ್ಯೆ ಪ್ರಕರಣದ ತನಿಖೆ ನಡೆಸುತ್ತಿರುವ ಪುಣೆ ಪೊಲೀಸರಿಗೆ ಪ್ರಮುಖ ಸಾಕ್ಷ್ಯವೊಂದು ಲಭ್ಯವಾಗಿದೆ. ಈ ಪ್ರಕರಣದ ಆರೋಪಿಗಳಾದ ಭಾವಿ ಪತ್ನಿ ಸಿಯಾ ಗೋಯಲ್ ಮತ್ತು ಆಕೆಯ ಪ್ರಿಯಕರ ಚೇತನ್ ಚೌಧರಿ ಅವರು ಪರಸ್ಪರ ಸಂಭಾಷಣೆಯ ಸಂದರ್ಭದಲ್ಲಿ ರಹಸ್ಯ ‘ಕೋಡ್ ವರ್ಡ್’ಗಳನ್ನು ಬಳಸುತ್ತಿದ್ದರು ಎಂಬ ಅಂಶ ತನಿಖೆಯಲ್ಲಿ ಬಹಿರಂಗವಾಗಿದೆ.

- Advertisement -

ಜೂನ್ 18ರಂದು ಸಿಯಾಳೊಂದಿಗೆ ನಿಶ್ಚಿತಾರ್ಥ ಮಾಡಿಕೊಂಡಿದ್ದ ಕೇತನ್ ಅಗರ್ವಾಲ್ ಅವರನ್ನು ಪುಣೆಯ ಸಮೀಪವಿರುವ ಲೋಹಗಡ್ ಕೋಟೆಯ ಮೇಲಿನಿಂದ ತಳ್ಳಿ ಹತ್ಯೆ ಮಾಡಲಾಗಿತ್ತು. ಆರಂಭದಲ್ಲಿ ಇದನ್ನು ಆಕಸ್ಮಿಕ ಸಾವು ಎಂದು ಬಿಂಬಿಸಲು ಪ್ರಯತ್ನಿಸಲಾಗಿತ್ತು. ಆದರೆ, ತೀವ್ರ ವಿಚಾರಣೆಯ ನಂತರ ಸಿಯಾ (20) ಮತ್ತು ಚೇತನ್ (22) ತಾವು ನಡೆಸಿದ ಕೊಲೆಯ ಕೃತ್ಯವನ್ನು ಒಪ್ಪಿಕೊಂಡಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

ಪ್ರಕರಣದ ತನಿಖೆಯನ್ನು ಮುಂದುವರಿಸಿರುವ ಪೊಲೀಸರು, ಆರೋಪಿ ಸಿಯಾಳಿಗೆ ಸೇರಿದ ಎರಡನೇ ಮೊಬೈಲ್ ಫೋನ್ ಅನ್ನು ವಶಪಡಿಸಿಕೊಂಡಿದ್ದಾರೆ. ಈ ಮೊಬೈಲ್ ಫೋನ್‌ನಲ್ಲಿರುವ ಡೇಟಾವು ಹತ್ಯೆಯ ಪೂರ್ವ ಮತ್ತು ನಂತರ ಆರೋಪಿಗಳು ನಡೆಸಿದ ರಹಸ್ಯ ಸಂಭಾಷಣೆಯನ್ನು ಬಯಲು ಮಾಡಲು ಸಹಕಾರಿಯಾಗಲಿದೆ ಎಂದು ತನಿಖಾಧಿಕಾರಿ ಮನೋಜ್ ಪವಾರ್ ತಿಳಿಸಿದ್ದಾರೆ. ಆರೋಪಿಗಳು ಬಳಸಿದ ಈ ಕೋಡ್ ವರ್ಡ್‌ಗಳ ಅರ್ಥ ಮತ್ತು ಉದ್ದೇಶವನ್ನು ಕಂಡುಹಿಡಿಯಲು ಪೊಲೀಸರು ಈಗ ತಂತ್ರಜ್ಞರ ಮೊರೆ ಹೋಗಿದ್ದಾರೆ.

ಇದನ್ನೂ ಓದಿ: ಅಯೋಧ್ಯೆ ಹೋರಾಟದಿಂದ ಹಗರಣದವರೆಗೆ; ಜನರ ನಂಬಿಕೆ ಜೊತೆ ಸಂಘಪರಿವಾರ ಚೆಲ್ಲಾಟ

ಸಾರ್ವಜನಿಕ ಅಭಿಯೋಜಕರು ಮೊಬೈಲ್ ಫೋನ್ ಡೇಟಾವನ್ನು ಇತ್ತೀಚೆಗಷ್ಟೇ ಹೊರತೆಗೆಯಲಾಗಿದ್ದು, ಕೋಡ್ ವರ್ಡ್‌ಗಳ ನಿಖರ ಅರ್ಥ ತಿಳಿಯಲು ಆರೋಪಿಗಳನ್ನು ಮುಖಾಮುಖಿ ವಿಚಾರಣೆ ನಡೆಸುವ ಅಗತ್ಯವಿದೆ ಎಂದು ವಾದಿಸಿ ಹೆಚ್ಚಿನ ಪೊಲೀಸ್ ಕಸ್ಟಡಿಗೆ ಕೋರಿದ್ದರು. ಆದರೆ, ಆರೋಪಿ ಚೇತನ್ ಪರ ವಕೀಲರು ಇದನ್ನು ವಿರೋಧಿಸಿದರು. ವಾದ-ಪ್ರತಿವಾದಗಳನ್ನು ಆಲಿಸಿದ ನ್ಯಾಯಾಲಯವು, ಪೊಲೀಸರ ಹೆಚ್ಚಿನ ಕಸ್ಟಡಿ ಮನವಿಯನ್ನು ತಿರಸ್ಕರಿಸಿದೆ.

ನ್ಯಾಯಾಲಯವು ಸಿಯಾ ಮತ್ತು ಚೇತನ್ ಅವರನ್ನು 14 ದಿನಗಳ ಕಾಲ, ಅಂದರೆ ಜುಲೈ 16ರವರೆಗೆ ನ್ಯಾಯಾಂಗ ಬಂಧನಕ್ಕೆ (Judicial Custody) ಒಪ್ಪಿಸಿದೆ. ಸದ್ಯಕ್ಕೆ ಪೊಲೀಸರು ವಶಪಡಿಸಿಕೊಂಡಿರುವ ಎರಡನೇ ಮೊಬೈಲ್ ಫೋನ್ ಮತ್ತು ಇತರ ಡಿಜಿಟಲ್ ಸಾಕ್ಷ್ಯಗಳನ್ನು ಮೂಲ ಪತ್ತೆಹಚ್ಚಲು ಮುಂದಾಗಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ ಶಾಪವೇ?‌ – ಭಾಗ 2

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು...

ಮುಂಬೈ ಪ್ರತಿಭಟನೆ: ಸಿಜೆಪಿ ಆಯೋಜಕರು, 500ಕ್ಕೂ ಹೆಚ್ಚು ಜನರ ವಿರುದ್ಧ ಎಫ್‌ಐಆರ್ ದಾಖಲು

ಮುಂಬೈನ ಪ್ರಸಿದ್ಧ ಶಿವಾಜಿ ಪಾರ್ಕ್‌ನಲ್ಲಿ ಅನುಮತಿಯಿಲ್ಲದೆ ಪ್ರತಿಭಟನೆ ನಡೆಸಿದ ಆರೋಪದ ಮೇಲೆ...

ಹುಲಸೂರ | ಗಡಿಭಾಗದ ಸರ್ಕಾರಿ ಶಾಲೆಗಳಿಗೆ ಕನ್ನಡ ಶಿಕ್ಷಕರ ನೇಮಕಕ್ಕೆ ಕಸಾಪ ಮನವಿ

ಮಹಾರಾಷ್ಟ್ರದ ಗಡಿಯೊಂದಿಗೆ ಹೊಂದಿಕೊಂಡಿರುವ ಬೀದರ್ ಜಿಲ್ಲೆಯ ಹುಲಸೂರ ತಾಲೂಕಿನ ಉರ್ದು ಹಾಗೂ...

ಬೀದರ್‌ | ಅ.24ರಿಂದ ಕಲ್ಯಾಣ ಪರ್ವ: ಭಿತ್ತಿ ಪತ್ರ ಬಿಡುಗಡೆ

ಬಸವಕಲ್ಯಾಣದ ಮಹಾ ಮಠದ ಮಹಾಮನೆ ಆವರಣದಲ್ಲಿ ಬಸವ ಧರ್ಮ ಪೀಠದ ವತಿಯಿಂದ...