ಟಾಕ್ಸಿಕ್ ಜಾಬ್| ಉದ್ಯೋಗ ತೊರೆದು ಮ್ಯಾನೇಜರ್ ಎದುರೇ ಡೋಲು ಬಾರಿಸಿ ಕುಣಿದಾಡಿದ!

Date:

ಟಾಕ್ಸಿಕ್ ಜಾಬ್ ಎನ್ನುವುದು ಈಗ ಸಾಮಾನ್ಯವಾಗಿ ಕೇಳಿ ಬರುವ ಪದವಾಗಿದೆ. ಆದರೆ ಈ ಸವಾಲಿನಿಂದ ಹೊರಬರಲು ಹಲವಾರು ಮಂದಿಗೆ ಹಣಕಾಸು ಸ್ಥಿತಿ ಅಡ್ಡಿಯಾಗುತ್ತಿದೆ. ಇವೆಲ್ಲವುದರ ನಡುವೆ ಪುಣೆಯ ಸೇಲ್ಸ್ ಎಕ್ಸಿಕ್ಯೂಟಿವ್ ಓರ್ವ ತನ್ನ ಈ ಟಾಕ್ಸಿಕ್ ಜಾಬ್ ತೊರೆದು ಮ್ಯಾನೇಜರ್ ಎದುರೇ ಡೋಲು ಬಾರಿಸಿ ಕುಣಿದಾಡಿದ ಘಟನೆ ಇತ್ತೀಚೆಗೆ ನಡೆದಿದ್ದು ಇದರ ವಿಡಿಯೋ ಭಾರೀ ವೈರಲ್ ಆಗಿದೆ.

- Advertisement -

ಈ ಉದ್ಯೋಗಿಯ ಸ್ನೇಹಿತ ಮತ್ತು ಕಂಟೆಂಟ್ ಕ್ರಿಯೇಟರ್ ಅನೀಶ್ ಭಗತ್ ಈ ವಿಡಿಯೋವನ್ನು ಇನ್‌ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದಾರೆ. ಈ ವಿಡಿಯೋದಲ್ಲಿ ಅನಿಕೇತ್ ಎಂಬ ಪುಣೆಯ ಸೇಲ್ಸ್ ಎಕ್ಸಿಕ್ಯೂಟಿವ್ ತನ್ನ ಟಾಕ್ಸಿಕ್ ಜಾಬ್ ಬಗ್ಗೆ ವಿವರಿಸಿದ್ದಾನೆ.

 

View this post on Instagram

 

A post shared by Anish Bhagat (@anishbhagatt)

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

ಹಾಗೆಯೇ ಕಂಪನಿಯಲ್ಲಿ ಮೂರು ವರ್ಷಗಳ ಕಾಲ ಕೆಲಸ ಮಾಡಿದರೂ ಸ್ವಲ್ಪವೇ ವೇತನ ಹೆಚ್ಚಿಸಲಾಗಿದೆ. ನಮ್ಮ ಬಾಸ್ ನಮ್ಮನ್ನು ಅಗೌರವದಿಂದ ನೋಡುತ್ತಾರೆ. ಮಧ್ಯಮವರ್ಗದ ಕುಟುಂಬದಿಂದ ಬಂದ ನನಗೆ ಕೆಲಸ ತೊರೆಯುವುದು ಕಷ್ಟ ಎಂದು ಅನಿಕೇತ್ ಹೇಳಿಕೊಂಡಿದ್ದಾರೆ.

ಇದನ್ನು ಓದಿದ್ದೀರಾ?  ಪ್ಯಾರಿಸ್ ಒಲಿಂಪಿಕ್ಸ್‌ನ ಭಾರತದ ಮುಖ್ಯಸ್ಥ ಸ್ಥಾನಕ್ಕೆ ಮೇರಿ ಕೋಮ್ ರಾಜೀನಾಮೆ

ಕೊನೆಗೂ ಕೆಲಸವನ್ನು ತೊರೆಯುವ ನಿರ್ಧಾರ ಮಾಡಿದ ಅನಿಕೇತ್ ಇದನ್ನು ವಿಭಿನ್ನವಾಗಿಸುವ ಪ್ರಯತ್ನ ಮಾಡಿದ್ದಾರೆ. ಭಗತ್ ತನ್ನ ಸ್ನೇಹಿತರೊಂದಿಗೆ ಡೋಲಿನೊಂದಿಗೆ ಅನಿಕೇತ್‌ನ ಕಚೇರಿಯ ಹೊರಗೆ ನಿಂತಿದ್ದು ಅನಿಕೇತ್ ತನ್ನ ಮ್ಯಾನೇಜರ್ ಕಛೇರಿಯಿಂದ ಹೊರಬರುತ್ತಿದ್ದಂತೆ, ಅವರ ಕೈ ಕುಲುಕಿಸಿ “ಕ್ಷಮಿಸಿ ಸರ್, ಬೈ-ಬೈ” ಎಂದು ಹೇಳಿ ಕುಣಿದಾಡಿದ್ದಾರೆ. ಆದರೆ ಆಕ್ರೋಶಗೊಂಡ ಮ್ಯಾನೇಜರ್‌ ಕೂಗಾಡಿದ್ದಾರೆ.

ಇನ್ನು ಸಣ್ಣ ವಯಸ್ಸಿನಲ್ಲಿಯೇ ಫಿಟ್ನೆಸ್ ತರಬೇತುದಾರರಾಗಲು ಬಯಸಿದ್ದ ಅನಿಕೇತ್‌ಗೆ ಸ್ನೇಹಿತರು ಶೂ ನೀಡಿದ್ದಾರೆ. ಈ ವಿಡಿಯೋ 70 ಸಾವಿರಕ್ಕೂ ಅಧಿಕ ಲೈಕ್ ಪಡೆದಿದೆ. ಇನ್ನು ಕೆಲವರು ಸಂಸ್ಥೆಯ ಹೆಸರು ಹೇಳಿ ಎಂದು ಕಾಮೆಂಟ್ ಮಾಡಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ನ್ಯಾಯಾಂಗದ ಮೇಲೆ ಗೌರವವಿದೆ, ತಪ್ಪಾಗಿದ್ದರೆ ಕ್ಷಮೆಯಾಚಿಸುವೆ: ಸಂಜಯ್ ರಾವತ್

ಸುಪ್ರೀಂ ಕೋರ್ಟ್ ಕುರಿತು ತಾವು ನೀಡಿರುವ ಹೇಳಿಕೆಗಳು ಸೂಕ್ತವಲ್ಲ ಅಥವಾ ಅನುಚಿತ...

ವಿರಳಾತಿ ವಿರಳ ಪ್ರಕರಣ: ಮಾಲೆಗಾಂವ್ ಅಪ್ರಾಪ್ತೆಯ ಅತ್ಯಾಚಾರ, ಕೊಲೆ ಅಪರಾಧಿಗೆ ಮರಣದಂಡನೆ ಶಿಕ್ಷೆ

ಮಹಾರಾಷ್ಟ್ರದ ನಾಸಿಕ್ ಜಿಲ್ಲೆಯ ಮಾಲೆಗಾಂವ್ ತಾಲೂಕಿನ ಡೋಂಗರಾಳೆ ಗ್ರಾಮದಲ್ಲಿ ಸಾಡೇನಾಲ್ಕು ವರ್ಷದ...

ತಿರಂಗಾ ಮಾರ್ಚ್ ನಡೆಸದಂತೆ ಅಭಿಜೀತ್ ದೀಪ್ಕೆಗೆ ದೆಹಲಿ ಪೊಲೀಸರಿಂದ ನೋಟಿಸ್: ಮನೆಯ ಬಳಿ ಬಿಗಿ ಭದ್ರತೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ ಅವರು ದೆಹಲಿಯ...

​ಪ್ರತಿಭಟನೆಗಳ ವರದಿಗಾರಿಕೆಗೆ ಭಾರತೀಯ ಪ್ರೆಸ್ ಕೌನ್ಸಿಲ್‌ನಿಂದ ನೂತನ ಮಾರ್ಗದರ್ಶಿ ಸೂತ್ರಗಳ ಬಿಡುಗಡೆ

ಪ್ರತಿಭಟನೆಗಳು ಮತ್ತು ಧರಣಿ ಸತ್ಯಾಗ್ರಹಗಳ ಸಂದರ್ಭದಲ್ಲಿ ಪತ್ರಕರ್ತರ ಸುರಕ್ಷತೆಯನ್ನು ಕಾಯ್ದುಕೊಳ್ಳಲು, ಜವಾಬ್ದಾರಿಯುತ...