ಪಂಜಾಬ್ ಎನ್‌ಕೌಂಟರ್‌ ಪ್ರಕರಣ: ಗಲ್ಲು ಶಿಕ್ಷೆಯಿಂದ ಪಾರಾದ ಅಧಿಕಾರಿಗಳು; ಸಾಯುವವರೆಗೂ ಜೈಲು

Date:

1993ರಲ್ಲಿ ಪಂಜಾಬ್‌ನಲ್ಲಿ ನಡೆದಿದ್ದ ಏಳು ಮಂದಿ ಅಮಾಯಕರ ನಕಲಿ ಎನ್‌ಕೌಂಟರ್‌ ಪ್ರಕರಣದಲ್ಲಿ ಅಂದಿನ ಎಸ್‌ಎಸ್‌ಪಿ, ಡಿಎಸ್‌ಪಿ ಸೇರಿದಂತೆ ಐದು ಮಂದಿ ಪೊಲೀಸ್‌ ಅಧಿಕಾರಿಗಳು ಗಲ್ಲು ಶಿಕ್ಷೆಯಿಂದ ಪಾರಾಗಿದ್ದಾರೆ. ಬದಲಾಗಿ, ಅವರಿಗೆ ಅಮರಣಾಂತ ಜೈಲು ಶಿಕ್ಷೆ ವಿಧಿಸಿ ವಿಶೇಷ ಸಿಬಿಐ ನ್ಯಾಯಾಲಯ ತೀರ್ಪು ನೀಡಿದೆ.

- Advertisement -

ಅಪರಾಧಿಗಳಾದ ನಿವೃತ್ತ ಎಸ್ಎಸ್‌ಪಿ ಭೂಪೀಂದರ್ಜಿತ್ ಸಿಂಗ್, ಮಾಜಿ ಡಿವೈಎಸ್‌ಪಿ ದವೀಂದರ್ ಸಿಂಗ್, ಮಾಜಿ ಇನ್‌ಪೆಕ್ಟರ್ ಸುಬಾ ಸಿಂಗ್, ಎಎಸ್ಐ ಗುಲ್ಬರ್ಗ್ ಸಿಂಗ್ ಹಾಗೂ ರಘುಬೀರ್ ಸಿಂಗ್‌ ವಯಸ್ಸಿನ ಕಾರಣದಿಂದಾಗಿ ಗಲ್ಲು ಶಿಕ್ಷೆಯಿಂದ ಪಾರಾಗಿದ್ದಾರೆ. ಅಮರಣಾಂತ ಜೈಲು ಶಿಕ್ಷೆಗೆ ಗುರಿಯಾಗಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ ಕಲ್ಪಿತ ಬಲವನ್ನು ಮೀರಿ, ಬಸವಂತಪ್ಪ ಬೆಳೆಯಬೇಕು ಎಂಬುದು ಕ್ಷೇತ್ರದ ಮತದಾರರ ಅಭಿಪ್ರಾಯ. ಪೌರಕಾರ್ಮಿಕರ ಮಗನಾಗಿ ಹುಟ್ಟಿ, ಸಚಿವ ಸ್ಥಾನದವರೆಗೆ ಬೆಳೆದವರು ಕೆ.ಎಸ್....

ಪಾಕ್‌ಗೆ ತಕ್ಕ ಉತ್ತರ ನೀಡಿದ್ದಾಗಿ ಎದೆ ತಟ್ಟಿಕೊಳ್ಳುವ ಮೋದೀಜಿ,...

ಬಾಲಾಕೋಟ್‌ನಿಂದ ಇತ್ತೀಚಿನ 'ಆಪರೇಷನ್ ಸಿಂಧೂರ್'ವರೆಗೆ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಿದ್ದಾಗಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಎದೆ ತಟ್ಟಿಕೊಳ್ಳುತ್ತಿದೆ. ಶತೃ ದೇಶವನ್ನು ಮಣಿಸುವುದು ಯಾರಿಗಾದರೂ ಹೆಮ್ಮೆಯೇ. ಆದರೆ, ದೇಶದ ಅಖಂಡತೆಗೆ ಅತಿ...

ಎಸ್‌ಐಆರ್‌ | 13 ಕೋಟಿ ಮತಗಳ ಮಾರಣಹೋಮ

ಭಾರತೀಯ ಪ್ರಜಾಸತ್ತಾತ್ಮಕ ವ್ಯವಸ್ಥೆಯ ಅತ್ಯಂತ ಪ್ರಮುಖ ಅಡಿಪಾಯವೇ ಮತದಾನದ ಹಕ್ಕು. ದೇಶದ ಪ್ರಜಾಪ್ರಭುತ್ವದ ಮೌಲ್ಯಗಳು ಉಳಿದುಕೊಂಡಿರುವುದೇ ಚುನಾವಣಾ ವ್ಯವಸ್ಥೆಯ ಮೇಲಿರುವ ಸಾರ್ವಜನಿಕರ ಅಪಾರ ನಂಬಿಕೆಯಿಂದ. ಆದರೆ, ಚುನಾವಣಾ ಆಯೋಗವು (ECI) ದೇಶಾದ್ಯಂತ ಜಾರಿಗೆ...

ಪಂಜಾಬ್‌ನ ಮೊಹಾಲಿಯಲ್ಲಿ ಈ ಐವರು ಅಪರಾಧಿ ಅಧಿಕಾರಿಗಳು 1993ರಲ್ಲಿ 7 ಮಂದಿ ಅಮಾಯಕರನ್ನು ಅಪಹರಿಸಿ, ಚಿತ್ರಹಿಂಸೆ ನೀಡಿ ಎನ್‌ಕೌಂಟರ್ ಹೆಸರಿನಲ್ಲಿ ಹತ್ಯೆಗೈದಿದ್ದರು. ಅವರ ವಿರುದ್ಧ ನಕಲಿ ಎನ್‌ಕೌಂಟರ್‌ ಆರೋಪದ ಮೇಲೆ ಪ್ರಕರಣ ದಾಖಲಾಗಿತ್ತು. ಪ್ರಕರಣದ ತನಿಖೆಯನ್ನು ಸಿಬಿಐಗೆ ನೀಡಲಾಗಿತ್ತು.

ಪ್ರಕರಣದ ಸುದೀರ್ಘ ವಿಚಾರಣೆ ನಡೆಸಿದ ವಿಶೇಷ ಸಿಬಿಐ ನ್ಯಾಯಾಲಯದ ನ್ಯಾಯಾಧೀಶ ಬಲ್ಜೀಂದರ್ ಸಿಂಗ್‌ ಅವರು ಸೋಮವಾರ ತೀರ್ಪು ಪ್ರಕಟಿಸಿದ್ದಾರೆ. ಎಲ್ಲ ಅಪರಾಧಿಗಳಿಗೆ ತಲಾ 3.5 ಲಕ್ಷ ರೂ. (ಒಟ್ಟು 17.5 ಲಕ್ಷ ರೂ.) ದಂಡ ವಿಧಿಸಿದ್ದಾರೆ. ಈ ಹಣವನ್ನು ಸಂತ್ರಸ್ತ ಕುಟುಂಬಗಳಿಗೆ ಸಮವಾಗಿ ಹಂಚಿಕೆ ಮಾಡುವಂತೆ ಸೂಚಿಸಿದ್ದಾರೆ.

ಅಪರಾಧಗಳು ತಮ್ಮ ವಯಸ್ಸು ಮತ್ತು ಆರೋಗ್ಯ ಕಾರಣಗಳನ್ನು ನೀಡಿ, ಶಿಕ್ಷೆಯಲ್ಲಿ ವಿನಾಯತಿ ನೀಡುವಂತೆ ಅರ್ಜಿ ಸಲ್ಲಿಸಿದ್ದರು. ಅವರ ಅರ್ಜಿಯನ್ನು ನ್ಯಾಯಾಲಯ ತಿರಸ್ಕರಿಸಿದೆ. “ಅಪರಾಧಿಗಳಿಗೆ ಗಲ್ಲು ಶಿಕ್ಷೆ ವಿಧಿಸಬೇಕಾಗಿತ್ತು. ಆದರೆ, ಅಪರಾಧಿಗಳು 60ರಿಂದ 80 ವರ್ಷ ವಯಸ್ಸಿನಲ್ಲಿದ್ದಾರೆ. ಈ ವಯಸ್ಸಿನ ಕಾರಣದಿಂದಾಗಿ ನೇಣು ಕುಣಿಕೆಯಿಂದ ತಪ್ಪಿಸಿಕೊಂಡಿದ್ದಾರೆ. ಆದಾಗ್ಯೂ, ಅವರ ನೈತಿಕ ವಿವಾಳಿತನ ಮತ್ತು ಅಮಾನವೀಯ ಕೃತ್ಯಗಳಿಗೆ ಯಾವುದೇ ವಿನಾಯತಿ ಇಲ್ಲ” ಎಂದು ಹೇಳಿದೆ. ಅಪರಾಧಿಗಳಿಗೆ ಅಮರಣಾಂತ ಜೈಲು ಶಿಕ್ಷೆ ವಿಧಿಸಿದೆ.

ಪ್ರಕರಣದ ಐವರು ಅಪರಾಧಿಗಳು ಅಮರಣಾಂತ ಜೈಲು ಶಿಕ್ಷೆಗೆ ಗುರಿಯಾಗಿದ್ದು, ಸಾಯುವವರೆಗೂ ಜೈಲು ಶಿಕ್ಷೆ ಅನುಭವಿಸಲಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮೋದಿ ಸರ್ಕಾರ ECಗೆ ಇಮ್ಯೂನಿಟಿ ನೀಡಿದ್ದರೂ ಹೊಣೆಗಾರಿಕೆಯಿಂದ ತಪ್ಪಿಸಿಕೊಳ್ಳಲಾಗಲ್ಲ: ಕಪಿಲ್ ಸಿಬಲ್

ಮುಖ್ಯ ಚುನಾವಣಾ ಆಯುಕ್ತರಿಗೆ (CEC) ಕ್ರಿಮಿನಲ್ ಪ್ರಕರಣಗಳಿಂದ ಕಾನೂನು ರಕ್ಷಣೆ ನೀಡಲಾಗಿದೆ...

UPI ವಹಿವಾಟಿನ ಮೇಲಿನ ಶುಲ್ಕಕ್ಕೆ ತಡೆ ನೀಡಲು ಸುಪ್ರೀಂ ಕೋರ್ಟ್‌ ನಕಾರ

ಅಕ್ಟೋಬರ್ 15ರಿಂದ ಜಾರಿಗೆ ಬರಲಿರುವ 2,000 ರೂ.ಗಿಂತ ಹೆಚ್ಚಿನ ಯುಪಿಐ ವಹಿವಾಟುಗಳ...

‘ದೇಶದ ನೌಕರಶಾಹಿ ಆತ್ಮಸಾಕ್ಷಿಯ ಕರೆಯನ್ನು ಆಲಿಸಬೇಕು.’ ಮಾಜಿ ಚುನಾವಣಾ ಆಯುಕ್ತ ಅಶೋಕ್‌ ಲವಾಸ ಹೇಳಿದ ಆತ್ಮಸಾಕ್ಷಿಯ ಕತೆ

ಸಾರ್ವಜನಿಕ ಸೇವೆಯಲ್ಲಿರುವ ಪ್ರತಿಯೊಬ್ಬರೂ ತಮ್ಮ ಕರ್ತವ್ಯದ ಹಾದಿಯಲ್ಲಿ ನೈತಿಕ ಸಂದಿಗ್ಧತೆಯನ್ನು ಎದುರಿಸಿದಾಗ,...

ವರ್ಷಗಳಿಂದ ನೀರಿಲ್ಲದೆ ಸೊರಗಿದ ಗ್ರಾಮ; ಹತಾಶೆಯಿಂದ ಊರನ್ನೇ ಬಿಕರಿಗಿಟ್ಟ ನಿವಾಸಿಗಳು

ಒಂದೆಡೆ ನೀರಾವರಿ ಯೋಜನೆ, ಇನ್ನೊಂದೆಡೆ ನೀರಿಗಾಗಿ ಪರದಾಡುವ ರೈತರು. ಯೋಜನೆ ಆರಂಭವಾಗಿ...