ಪಂಜಾಬ್‌ನಲ್ಲಿ ಫಾರ್ಮಸಿ ಅಧಿಕಾರಿ ಪರೀಕ್ಷೆ ವಿವಾದ; ಸಚಿವರ ರಾಜೀನಾಮೆಗೆ ವಿಪಕ್ಷಗಳ ಆಗ್ರಹ

Date:

ದೇಶಾದ್ಯಂತ ಪ್ರಶ್ನೆಪತ್ರಿಕೆ ಸೋರಿಕೆ ಚರ್ಚೆ ನಡೆಯುತ್ತಿದೆ. ಇದೇ ಹೊತ್ತಿನಲ್ಲಿ, ಫರೀದ್‌ಕೋಟದ ಬಾಬಾ ಫರೀದ್ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯವು ನಡೆಸಿದ 454 ಫಾರ್ಮಸಿ ಅಧಿಕಾರಿ ಹುದ್ದೆಗಳ ನೇಮಕಾತಿ ಪರೀಕ್ಷೆಯಲ್ಲಿಯೂ ಅಕ್ರಮ ನಡೆದಿದೆ ಎಂಬ ಗಂಭೀರ ಆರೋಪ ಕೇಳಿಬಂದಿದೆ. ಆಮ್ ಆದ್ಮಿ ಪಾರ್ಟಿ ನೇತೃತ್ವದ ಪಂಜಾಬ್ ಸರ್ಕಾರದ ವಿರುದ್ಧ ವಿಪಕ್ಷಗಳು ವಾಗ್ದಾಳಿ ನಡೆಸಿದ್ದು, ಪಂಜಾಬ್ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹಿಸಿವೆ.

- Advertisement -

ಕಾಂಗ್ರೆಸ್, ಬಿಜೆಪಿ ಹಾಗೂ ಶಿರೋಮಣಿ ಅಕಾಲಿದಳ ಸೇರಿದಂತೆ ವಿರೋಧ ಪಕ್ಷಗಳು, 2022ರಿಂದ ರಾಜ್ಯದಲ್ಲಿ ಆರು ಪ್ರಮುಖ ಪ್ರಶ್ನೆಪತ್ರಿಕೆ ಸೋರಿಕೆ ಅಥವಾ ಪರೀಕ್ಷಾ ಅಕ್ರಮಗಳು ನಡೆದಿವೆ ಎಂದು ಆರೋಪಿಸಿವೆ. ಕಳೆದ ವಾರ ನೀಟ್ ಪರೀಕ್ಷೆ ಸೋರಿಕೆ ವಿವಾದದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ ಮಾದರಿಯಲ್ಲೇ, ರಾಜ್ಯ ಶಾಲಾ ಮತ್ತು ಉನ್ನತ ಶಿಕ್ಷಣ ಸಚಿವ ಹರ್‌ಜೋತ್ ಸಿಂಗ್ ಬೈನ್ಸ್ ಅವರು ರಾಜೀನಾಮೆ ನೀಡಬೇಕು ಎಂದು ಪಟ್ಟು ಹಿಡಿದಿವೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಬ್ಬ ಅಂದ್ರ ಕೂಡಿಸಬೇಕ್ರಿ, ರಾಜಕೀಯದ ವಿಷ ಬೀಜ ಬಿತ್ತೋದಲ್ಲ…

ಹಬ್ಬಗಳು ಬಾಲ್ಯದ ಆ ಎತ್ತಿನ ಬಂಡಿಯ ನೆನಪಿನಂತೆ ಎಲ್ಲರನ್ನೂ ಮುಗ್ಧವಾಗಿ ಕೂಡಿಸಬೇಕೇ ಹೊರತು, ಮತ್ತೊಬ್ಬರ ಧರ್ಮವನ್ನು ಕೆಣಕಿ, ರಾಜಕೀಯ ಲಾಭಕ್ಕಾಗಿ ಬೀದಿಯಲ್ಲಿ ಬೆಂಕಿ ಹಚ್ಚುವ ಪ್ರವೃತ್ತಿ ಧರ್ಮವೂ ಅಲ್ಲ, ಭಾರತೀಯ ಸಂಸ್ಕೃತಿಯೂ ಅಲ್ಲ....

ಬಳ್ಳಾರಿ ಚಲೋ | ಕಾಂಗ್ರೆಸ್ ಭದ್ರಕೋಟೆಯಲ್ಲಿ ಬಿಜೆಪಿಯ ಪಾದಯಾತ್ರೆ:...

ಬಳ್ಳಾರಿ ಚಲೋ ಒಂದೆಡೆ ಎಸ್‌ಟಿ ಮತಗಳನ್ನು ಮರಳಿ ಸೆಳೆಯಲು ಶ್ರೀರಾಮುಲು ಅವರನ್ನು ಮುನ್ನಲೆಗೆ ತರುವ ಬಿಜೆಪಿ ತಂತ್ರವಾದರೆ, ಮತ್ತೊಂದೆಡೆ ವಿಜಯೇಂದ್ರ ನಾಯಕತ್ವದ ಶಕ್ತಿ ಪ್ರದರ್ಶನ ಮತ್ತು ಮೈತ್ರಿ ಪಕ್ಷ ಜೆಡಿಎಸ್‌ ಪಾದಯಾತ್ರೆಗೆ ಗೈರಾಗಿರುವಂತಹ...

AI ಕ್ರಾಂತಿಯ ಕರಾಳ ಮುಖ: ಯುವಜನರ ಆಲೋಚನಾ, ಚಿಂತನಾ...

ಕೃತಕ ಬುದ್ಧಿಮತ್ತೆಯ (ಎಐ) ಸಿದ್ಧ ಉತ್ತರವೇ ಇಂದಿನ ಯುವಜನರಿಗೆ ತೃಪ್ತ. ಇದರಿಂದಾಗಿ ಆಳವಾದ ಅಧ್ಯಯನಕ್ಕೆ ಬಿದ್ದಿದೆ ಕತ್ತರಿ. ತಂತ್ರಜ್ಞಾನದಿಂದ ನಮಗೆ ಹಲವು ಅನುಕೂಲವಿದೆ ಎಂಬುದು ಸ್ಫುಟ. ಆದರೆ ಅನುಕೂಲವನ್ನು ಸ್ವೀಕರಿಸುವ ಜತೆಗೆ, ಅದರಿಂದಾಗುವ...

ಆದಾಗ್ಯೂ, ತಮ್ಮ ಸರ್ಕಾರದ ಅವಧಿಯಲ್ಲಿ ಒಂದೇ ಒಂದು ಸ್ಪರ್ಧಾತ್ಮಕ ಪರೀಕ್ಷೆಯ ಪ್ರಶ್ನೆಪತ್ರಿಕೆಯೂ ಸೋರಿಕೆಯಾಗಿಲ್ಲ ಎಂದು ಮುಖ್ಯಮಂತ್ರಿ ಭಗವಂತ್ ಮಾನ್ ಹೇಳಿದ್ದಾರೆ.

ಇತ್ತೀಚೆಗೆ, ದೆಹಲಿಯ ಜಂತರ್ ಮಂತರ್‌ನಲ್ಲಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸುತ್ತಿದ್ದಾಗ, ಅಲ್ಲಿಗೆ ಭೇಟಿ ನೀಡಿದ್ದ ಎಎಪಿ ಹಿರಿಯ ನಾಯಕ, ಪಂಜಾಬ್ ಉಸ್ತುವಾರಿ ಮನೀಷ್ ಸಿಸೋಡಿಯಾ, “ಪಂಜಾಬ್‌ನಲ್ಲಿ ಯಾವುದೇ ಪತ್ರಿಕೆ ಸೋರಿಕೆಯಾದರೆ ನಾವು ತಕ್ಷಣವೇ ಸಂಬಂಧಪಟ್ಟ ಸಚಿವರನ್ನು ವಜಾಗೊಳಿಸುತ್ತೇವೆ” ಎಂದು ಹೇಳಿದ್ದರು. ಇದೇ ಹೇಳಿಕೆಯನ್ನು ಮುಂದಿಟ್ಟಿರುವ ವಿಪಕ್ಷಗಳು, ಪಂಜಾಬ್ ಸಚಿವ ಬೈನ್ಸ್ ಮತ್ತು ಸಂಬಂಧಪಟ್ಟ ಇತರ ಸಚಿವರ ರಾಜೀನಾಮೆಗೆ ಆಗ್ರಹಿಸಿವೆ.

ಶುಕ್ರವಾರ ಶಿರೋಮಣಿ ಅಕಾಲಿದಳದ (SAD) ನಾಯಕರು ಪಂಜಾಬ್ ರಾಜ್ಯಪಾಲ ಗುಲಾಬ್ ಚಂದ್ ಕಟಾರಿಯಾ ಅವರನ್ನು ಭೇಟಿಯಾಗಿ, ಸರ್ಕಾರಿ ನೇಮಕಾತಿಗಳಲ್ಲಿ ನಡೆದ ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಅಕ್ರಮಗಳ ಬಗ್ಗೆ ವಿವರಣೆ ನೀಡಿದ್ದಾರೆ.
ಎಎಪಿ ಸರ್ಕಾರದ ಹಿರಿಯ ಅಧಿಕಾರಿಗಳ ಶಾಮೀಲಾತಿಯೊಂದಿಗೆ ಪರೀಕ್ಷಾ ಪ್ರಶ್ನೆ ಪತ್ರಿಕೆ ಸೋರಿಕೆಗಳು ನಡೆಯುತ್ತಿದ್ದು, ಇದೊಂದು ಸಂಘಟಿತ ಅಪರಾಧ ಜಾಲದಿಂದ ನಡೆಯುತ್ತಿರುವ ‘ಹಣಕ್ಕಾಗಿ ಕೆಲಸ’ ದಂಧೆಯಾಗಿದೆ ಎಂದು ದೂರಿದ್ದಾರೆ.

“ಪರೀಕ್ಷಾ ಹಗರಣದಲ್ಲಿ ಮುಖ್ಯಮಂತ್ರಿ, ಸಚಿವ ಸಂಪುಟ, ಎಎಪಿ ನಾಯಕರು, ಸರ್ಕಾರಿ ನೌಕರರು ಮತ್ತು ಖಾಸಗಿ ವ್ಯಕ್ತಿಗಳ ಪಾತ್ರದ ಕುರಿತು ಸಿಬಿಐ (CBI) ಮೂಲಕ ಸಮಗ್ರ ತನಿಖೆ ನಡೆಸಬೇಕು” ಎಂದು ಆಗ್ರಹಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

AI ಕ್ರಾಂತಿಯ ಕರಾಳ ಮುಖ: ಯುವಜನರ ಆಲೋಚನಾ, ಚಿಂತನಾ ಶಕ್ತಿಗೆ ಕತ್ತರಿ

ಕೃತಕ ಬುದ್ಧಿಮತ್ತೆಯ (ಎಐ) ಸಿದ್ಧ ಉತ್ತರವೇ ಇಂದಿನ ಯುವಜನರಿಗೆ ತೃಪ್ತ. ಇದರಿಂದಾಗಿ...

ಮೋದಿಯ ಮೋಸದ UPI ಶುಲ್ಕ ನೀತಿ; ತೀವ್ರ ವಿರೋಧದ ನಡುವೆಯೂ ಜಾರಿಗೆ ಮುಂದಾದ ಕೇಂದ್ರ

₹2,000ಕ್ಕಿಂತ ಹೆಚ್ಚಿನ UPI ವಹಿವಾಟುಗಳಿಗೆ ಪ್ರಸ್ತಾಪಿಸಿರುವ ಶೇ 0.4ರಷ್ಟು ಮರ್ಚೆಂಟ್ ಡಿಸ್ಕೌಂಟ್...

ಕಲಬುರಗಿ | ಪಿಎಸ್‌ಐ ಕಾರಿಗೆ ಬೆಂಕಿ ಹಚ್ಚಿ ಪರಾರಿಯಾದ ಪೊಲೀಸ್ ಪೇದೆ

ಖಾಕಿ ಧರಿಸಿ ರಕ್ಷಣೆ ಮಾಡಬೇಕಾದವರೇ ಅಪರಾಧ ಕೃತ್ಯಕ್ಕೆ ಇಳಿದಿರುವ ಘಟನೆ...

ಪ್ರಜಾಪ್ರಭುತ್ವದ ಅಣಕ: ಪಕ್ಷಾಂತರಕ್ಕಾಗಿ ಶಾಸಕರ ರಾಜೀನಾಮೆ ಮತ್ತು ಮರು ಸ್ಪರ್ಧೆಗೆ ಮದ್ರಾಸ್ ಹೈಕೋರ್ಟ್ ಕಿಡಿ

ಚುನಾವಣೆಯಲ್ಲಿ ಗೆದ್ದ ಕೆಲವೇ ದಿನಗಳಲ್ಲಿ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ, ಪಕ್ಷಾಂತರಗೊಂಡು...