ಆಪ್ ಸರ್ಕಾರದಿಂದ ಬೇಡಿಕೆ ಈಡೇರಿಕೆಯ ಭರವಸೆ: 7 ದಿನಗಳ ಪ್ರತಿಭಟನೆ ವಾಪಸ್ ಪಡೆದ ಪಂಜಾಬ್ ರೈತರು

Date:

ಪಂಜಾಬ್‌ನ ಆಮ್ ಆದ್ಮಿ ಪಾರ್ಟಿ (ಎಎಪಿ) ಸರ್ಕಾರವು ರೈತರ ಪ್ರಮುಖ ಬೇಡಿಕೆಗಳನ್ನು ಪುರಸ್ಕರಿಸಿ, ಲಿಖಿತ ಭರವಸೆ ನೀಡಿದ ಹಿನ್ನೆಲೆಯಲ್ಲಿ ಕಳೆದ ಏಳು ದಿನಗಳಿಂದ ನಡೆಯುತ್ತಿದ್ದ ರೈತರ ಪ್ರತಿಭಟನೆಯನ್ನು ಅಧಿಕೃತವಾಗಿ ಹಿಂಪಡೆಯಲಾಗಿದೆ.

- Advertisement -

ಸಂಯುಕ್ತ ಕಿಸಾನ್ ಮೋರ್ಚಾ (ಎಸ್‌ಕೆಎಂ) ನಾಯಕರು ಮತ್ತು ರಾಜ್ಯ ಸರ್ಕಾರದ ಉನ್ನತಾಧಿಕಾರಿಗಳ ನಡುವೆ ನಡೆದ ಸುದೀರ್ಘ ಸಭೆಯ ನಂತರ ಈ ನಿರ್ಧಾರಕ್ಕೆ ಬರಲಾಗಿದೆ. ಸರ್ಕಾರದ ಪ್ರತಿನಿಧಿಗಳು ನೀಡಿದ ಭರವಸೆಗಳು ಮತ್ತು ಬೇಡಿಕೆ ಈಡೇರಿಕೆಯ ಪತ್ರವನ್ನು ರೈತ ನಾಯಕರು ಸ್ವೀಕರಿಸಿದ್ದು, ಚಂಡೀಗಢ-ಮೊಹಾಲಿ ಗಡಿಯಿಂದ ಪ್ರತಿಭಟನಾ ಸ್ಥಳವನ್ನು ಖಾಲಿ ಮಾಡಲು ಸಮ್ಮತಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಪ್ರಚಾರ, ರಾಹುಲ್ ವ್ಯಕ್ತಿತ್ವ ಮತ್ತು ರೆಜಿಮ್ ಚೇಂಜ್

ಮೋದಿ ಅನುಭವಿ ನಟನಂತೆ, ಪ್ರದರ್ಶಕನಂತೆ ಕಾಣುತ್ತಾರೆ. ರಾಹುಲ್ ಗಾಂಧಿ ಪಾತ್ರದ ಒಳಹೊಕ್ಕು ನಟಿಸುವ ಕಲಾವಿದನಂತೆ ಕಾಣುತ್ತಾರೆ. ಈ ನಿಟ್ಟಿನಲ್ಲಿ ರಾಹುಲ್ ರಾಜಕೀಯ ನಡೆಗಳು ಮೋದಿಯವರ ರಾಜಕೀಯ ನಡೆಗಳೊಂದಿಗೆ ವಿಶ್ಲೇಷಣೆಗೊಳಗಾಗುತ್ತಿವೆ. ಕಳೆದ 12 ವರ್ಷಗಳ...

137 ಜೀವ ರಕ್ಷಕ ಕ್ಯಾನ್ಸರ್ ಔಷಧಗಳ ದರ ಶೇ.70ರಷ್ಟು...

ಕ್ಯಾನ್ಸರ್ ಚಿಕಿತ್ಸೆಯ ದುಬಾರಿ ವೆಚ್ಚದಿಂದ ಕಂಗೆಟ್ಟಿರುವ ರೋಗಿಗಳಿಗೆ ಕೇಂದ್ರ ಸರ್ಕಾರದಿಂದ ಕೊಂಚ ನಿರಾಳತೆಯ ಸುದ್ದಿಯೊಂದಿದೆ! 137 ಜೀವರಕ್ಷಕ ಕ್ಯಾನ್ಸರ್ ಔಷಧಗಳ ಬೆಲೆ ಇಳಿಕೆಯಾಗುವ ಸಾಧ್ಯತೆಯಿದ್ದು, ಕೆಲವು ಔಷಧಗಳ ಗರಿಷ್ಠ ಚಿಲ್ಲರೆ ಬೆಲೆ ಶೇ.70ರವರೆಗೆ...

‘ದೇಶ್ ಕೋ ಬಿಕನೇ ನಹೀ ದೂಂಗಾ’ ಎಂದು ನವಮಂಗಳೂರು...

​ರೈಲ್ವೆ, ವಿಮಾನ ನಿಲ್ದಾಣ, ಟೆಲಿಕಾಂ ಸೇರಿದಂತೆ ದೇಶದ ಪ್ರಮುಖ ಜಯಶೀಲ ಸಾರ್ವಜನಿಕ ವಲಯಗಳನ್ನು ಈಗಾಗಲೇ ಆಯ್ದ ಕಾರ್ಪೊರೇಟ್ ಕುಳಗಳಿಗೆ ಒಪ್ಪಿಸಿರುವ ಮೋದಿ ಸರ್ಕಾರ, ಈಗ ತನ್ನ ದೃಷ್ಟಿಯನ್ನು ಕಡಲತೀರಗಳತ್ತ ಹರಿಸಿದೆ. ದೇಶದ ಆಮದು-ರಫ್ತು...

ಇದನ್ನೂ ಓದಿ: ಮೋದಿ ವಿರುದ್ಧ ಎದೆ ಸೆಟೆಸಿದ ಪಂಜಾಬ್ ಪುನಃ ಕೇಜ್ರೀವಾಲರ ಪೊರಕೆ ಹಿಡಿಯುವುದೇ?

ಬೆಳೆಗಳಿಗೆ ಬೆಂಬಲ ಬೆಲೆ (MSP) ಖಾತರಿ, ಕೃಷಿ ಕ್ಷೇತ್ರದ ವಿದ್ಯುತ್ ಸಂಪರ್ಕ, ನೀರಾವರಿ ಸೌಲಭ್ಯ ಹಾಗೂ ಇತರ ಕೃಷಿ ಸಂಬಂಧಿತ ವಿಚಾರಗಳನ್ನು ಆಧರಿಸಿ ರೈತರು ಕಳೆದ ಒಂದು ವಾರದಿಂದ ಪ್ರತಿಭಟನೆ ನಡೆಸುತ್ತಿದ್ದರು.

ರೈತ ಮುಖಂಡರು ಮಾತನಾಡಿ, “ಸರ್ಕಾರವು ನಮ್ಮ ಪ್ರಮುಖ ಬೇಡಿಕೆಗಳನ್ನು ಈಡೇರಿಸಲು ಸಮ್ಮತಿಸಿದ್ದು, ಈ ಕುರಿತು ಸೂಕ್ತ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದೆ. ಹೀಗಾಗಿ 7 ದಿನಗಳ ಕಾಲ ನಡೆದ ಪ್ರತಿಭಟನೆಯನ್ನು ಕೈಬಿಡಲಾಗುತ್ತಿದೆ” ಎಂದು ತಿಳಿಸಿದ್ದಾರೆ. ಸಭೆಯಲ್ಲಿ ನಡೆದ ನಿರ್ಧಾರಗಳ ಕುರಿತು ಶೀಘ್ರದಲ್ಲೇ ಅಧಿಕೃತ ಅಧಿಸೂಚನೆ ಹೊರಬೀಳುವ ನಿರೀಕ್ಷೆಯಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಹಲ್ಲೆಗೊಳಗಾಗಿ ರೈಲ್ವೆ ಹಳಿ ಮೇಲೆ ಬಿದ್ದಿದ್ದ ಯುವಕ ಚಿಕಿತ್ಸೆ ಫಲಿಸದೆ ಸಾವು

ಶಿವಮೊಗ್ಗ ರೈಲ್ವೆ ಹಳಿ ಬಳಿ ಗಂಭೀರ ಗಾಯಗಳೊಂದಿಗೆ ಪತ್ತೆಯಾಗಿದ್ದ 26 ವರ್ಷದ...

ನೇಣು ಬಿಗಿದ ಸ್ಥಿತಿಯಲ್ಲಿ ಯುವತಿಯ ಶವ ಪತ್ತೆ; ತರಾತುರಿಯಲ್ಲಿ ಅಂತ್ಯಕ್ರಿಯೆ, ಕಾರಣ ನಿಗೂಢ!

ಸೊರಬ ತಾಲೂಕಿನ ಮುಟಗುಪ್ಪೆ ಗ್ರಾಮದಲ್ಲಿ 22 ವರ್ಷದ ಯುವತಿಯೊಬ್ಬರು ಮನೆಯಲ್ಲಿ ನೇಣು...

ಶಿವಮೊಗ್ಗ | ಗಾಂಜಾ ಮಾರಾಟ ಆರೋಪ: ಐವರು ಅರೆಸ್ಟ್‌, 1.23 ಕೆಜಿ ಮಾದಕ ವಸ್ತು ಜಪ್ತಿ

ಶಿವಮೊಗ್ಗ ನಗರದ ಅನುಪಿನಕಟ್ಟೆ ಸಮೀಪ ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪದಡಿ ತುಂಗಾನಗರ...