ಪಂಜಾಬ್ | ಪ್ರತಿಭಟನೆ ವೇಳೆ ಘರ್ಷಣೆ; ರೈತರ ಮೇಲೆ‌ ಅಶ್ರುವಾಯು ಪ್ರಯೋಗ

Date:

ಪ್ರತಿಭಟನಾ ಮೆರವಣಿಗೆ ನಡೆಸಲು ಯತ್ನಿಸಿದ ರೈತರು ಮತ್ತು ಪೊಲೀಸರ ನಡುವೆ ಘರ್ಷಣೆ ನಡೆದಿದ್ದು, ರೈತರ ಮೇಲೆ ಪೊಲೀಸರು ಅಶ್ರುವಾಯು‌ ಪ್ರಯೋಗಿಸಿರುವ ಘಟನೆ ಪಂಜಾಬ್‌ನ ಬಟಿಂಡಾದ ಜಿಯೋಂಡ್‌ನಲ್ಲಿ ನಡೆದಿದೆ.

- Advertisement -

ಕಳೆದ ವರ್ಷ ಬಂಧಿಸಲಾಗಿದ್ದ ರೈತ ಮುಖಂಡ ಶಗನ್‌ದೀಪ್ ಸಿಂಗ್ ಜಿಯೋಂಡ್ ಮತ್ತು ಬಲದೇವ್ ಸಿಂಗ್ ಚೌಕೆ ಅವರ ಬಿಡುಗಡೆಗೆ ಆಗ್ರಹಿಸಿ ಭಾರತೀಯ ಕಿಸಾನ್ ಯೂನಿಯನ್ ನೇತೃತ್ವದಲ್ಲಿ ರೈತರು ಪ್ರತಿಭಟನೆ ನಡೆಸುತ್ತಿದ್ದರು. ರೈತರನ್ನು ತಡೆಯಲು‌‌ ಪ್ರಮುಖ ರಸ್ತೆಗಳಲ್ಲಿ ಪೊಲೀಸರು ನಾಕಟಬಂಧಿ ಮಾಡಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಡಾ. ಟಿ.ಎಸ್.‌ ಚನ್ನೇಶ್‌ ಸರಣಿ | ವೈದ್ಯಕೀಯ ನೊಬೆಲ್‌...

ನಮ್ಮ ಮೆದುಳು, ಭಾವನೆಗಳನ್ನು, ವರ್ತನೆಗಳನ್ನು ಮತ್ತು ದೈಹಿಕ ಕಾರ್ಯಗಳನ್ನು ಹೇಗೆ ನಿಯಂತ್ರಿಸುತ್ತದೆ ಎಂಬುದನ್ನು ಸಂಶೋಧನೆಯಿಂದ ಬಿಡಿಸಿಟ್ಟು 2026ರ ವೈದ್ಯಕೀಯ ನೊಬೆಲ್‌ ಪ್ರಶಸ್ತಿಗೆ ಪಾತ್ರರಾದ ಮೂವರು ಸಂಶೋಧಕರು ಮತ್ತು ಸಂಶೋಧನೆಯ ಸುತ್ತಲಿನ ವಿಶ್ಲೇಷಣಾತ್ಮಕ ಬರಹ ಈ...

ಪೊಲೀಸ್ ಸುಧಾರಣೆ | ಹೈಟೆಕ್ ಪೊಲೀಸಿಂಗ್ Vs ವಾಸ್ತವ:...

ಪೊಲೀಸ್‌ ಇಲಾಖೆಯನ್ನು ಆಧುನೀಕರಿಸಲು AI, ಸೈಬರ್‌ ತಂತ್ರಜ್ಞಾನ, ಡಿಜಿಟಲ್‌ ತನಿಖೆ, ಸಿಸಿಟಿವಿ, ಬಾಡಿ ಕ್ಯಾಮೆರಾ ಸೇರಿದಂತೆ ಹಲವು ತಂತ್ರಜ್ಞಾನಗಳು ಪ್ರವೇಶಿಸುತ್ತಿವೆ. ಆದರೆ ಹೈಟೆಕ್‌ ಆಗುತ್ತಿರುವ ಪೊಲೀಸ್‌ ವ್ಯವಸ್ಥೆ ಜನರ ಬದುಕಿಗೆ ಎಷ್ಟು ಹತ್ತಿರವಾಗುತ್ತಿದೆ?...

ಐದು ಭಾಷೆ, ಆರು ದಶಕ, ಅನಂತ ಪ್ರಯೋಗ: ಭಾರತೀಯ...

ಬದುಕಿನ ಕೊನೆಯ ಉಸಿರಿನವರೆಗೂ ಕೇವಲ ಸಿನಿಮಾವನ್ನೇ ಶ್ವಾಸವಾಗಿಸಿಕೊಂಡಿದ್ದ, 95ನೇ ವಯಸ್ಸಿನಲ್ಲೂ ಹೊಸ ಕಥೆಯ ಕನಸು ಕಾಣುತ್ತಿದ್ದ ಭಾರತೀಯ ಚಿತ್ರರಂಗದ ಅಪ್ರತಿಮ ದಾರ್ಶನಿಕ ಸಿಂಗೀತಂ ಶ್ರೀನಿವಾಸರಾವ್ ನಮ್ಮೊಂದಿಗಿಲ್ಲ. ಆರು ದಶಕಗಳ ಕಾಲ ತಮ್ಮ ಅನಂತ...

ಪೊಲೀಸರ‌ ತಡೆಗೆ ಜಗ್ಗದ ಪೊಲೀಸರು ಜಿಲ್ಲಾಧಿಕಾರಿ ಕಚೇರಿ ಎಡೆಗೆ ಧಾವಿಸಲು‌ ಮುಂದಾಗಿದ್ದಾರೆ. ಈ ವೇಳೆ, ರೈತರು ಮತ್ತು ಪೊಲೀಸರ ನಡುವೆ ಘರ್ಷಣೆ ನಡೆದಿದೆ. ಗುಂಪನ್ನು ಚದುರಿಸಲು ಪೊಲೀಸರು ಅಶ್ರುವಾಯು ಪ್ರಯೋಗಿಸಿದ್ದಾರೆ. ಘಟನೆಯಲ್ಲಿ ಹಲವು ರೈತರು ಗಾಯಗೊಂಡಿದ್ದಾರೆ.

ಅಲ್ಲದೆ, ಹಲವಾರು ರೈತರನ್ನು ವಿವಿಧ ಸ್ಥಳಗಳಲ್ಲಿ ಬಂಧಿಸಲಾಗಿದೆ. ಕೆಲವು ರೈತ ಮುಖಂಡರನ್ನು ಗೃಹಬಂಧನದಲ್ಲಿ ಇರಿಸಲಾಗಿದೆ ಎಂದು ವರದಿಯಾಗಿದೆ.

ಅಶ್ರುವಾಯು ಪ್ರಯೋಗವನ್ಮು ಸಮರ್ಥಿಸಿಕೊಂಡಿರುವ ಬಟಿಂಡಾ ಹಿರಿಯ ಪೊಲೀಸ್ ವರಿಷ್ಠಾಧಿಕಾರಿ (SSP) ಜ್ಯೋತಿ ಯಾದವ್, “ಕೆಲವು ಮನೆಗಳ ಮೇಲ್ಛಾವಣಿ ಹಾಗೂ ಪೊಲೀಸ್ ಸಿಬ್ಬಂದಿ ಮೇಲೆ ಉದ್ರಿಕ್ತ ಗುಂಪು ಕಲ್ಲು ತೂರಾಟ ನಡೆಸಿದೆ. ಗುಂಪನ್ನು ಚದುರಿಸಲು ಪೊಲೀಸರು ಅಶ್ರುವಾಯು ಪ್ರಯೋಗಿಸಿದ್ದಾರೆ” ಎಂದಿದ್ದಾರೆ.

ಪ್ರತಿಭಟನೆ ನಡೆಸುವುದು ಪ್ರಜಾಸತ್ತಾತ್ಮಕ ಹಕ್ಕು ಎಂದು ಹೇಳಿರುವ ಪ್ರತಿಭಟನಾಕಾರರು, “ಪ್ರತಿಭಟನೆಯ ಕರೆಗೂ ಮುನ್ನ ಪೊಲೀಸರು ರೈತ ಮುಖಂಡರ ನಿವಾಸಗಳ ಮೇಲೆ ದಾಳಿ ನಡೆಸಿ ವಶಕ್ಕೆ ಪಡೆಯುತ್ತಿದ್ದಾರೆ” ಎಂದು ಆರೋಪಿಸಿದ್ದಾರೆ.

ಈ ಮಧ್ಯೆ ಶಗನ್‌ದೀಪ್ ಮತ್ತು ಬಲದೇವ್‌ಗೆ ನ್ಯಾಯಾಲಯ ಜಾಮೀನು ನೀಡಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

SIR ನಲ್ಲಿ ದೊಡ್ಡ ಪ್ರಮಾಣದ Form 7 ಅರ್ಜಿಗಳ ಸಲ್ಲಿಕೆ  ಆರೋಪ; ಕ್ರಮಕ್ಕೆ ತೆಲಂಗಾಣ ಚುನಾವಣಾ ಆಯುಕ್ತರ ಆದೇಶ

ಹೈದರಾಬಾದ್: ಪ್ರಸ್ತುತ ನಡೆಯುತ್ತಿರುವ SIR ಪ್ರಕ್ರಿಯೆಯಲ್ಲಿ  ದೊಡ್ಡ ಪ್ರಮಾಣದಲ್ಲಿ ನಕಲಿ Form...

Form 6 ಬದಲಾಯಿಸಿದ್ದು ಯಾರು, ದಾಖಲೆ ಕೊಡಿ; ಚುನಾವಣಾ ಆಯೋಗಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಹೊಸ ಮತದಾರರ ಹೆಸರುಗಳನ್ನು ಮತದಾರರ ಪಟ್ಟಿಗೆ ಸೇರ್ಪಡೆಗೊಳಿಸಲು ಬಳಸುವ Form 6ನಲ್ಲಿ...

ಬಂಗಾಳ SIR | ನೋಟಿಸ್ ನೀಡಲು, ಹೆಸರು ಮರು ಸೇರಿಸಲು ಸಾಧ್ಯವಿಲ್ಲ: EC ಪೋರ್ಟಲ್ ವಿರುದ್ಧ ನ್ಯಾಯಾಧೀಶರ ದೂರು

ಪಶ್ಚಿಮ ಬಂಗಾಳದಲ್ಲಿ SIR ವೇಳೆ ಮತದಾರರ ಪಟ್ಟಿಯಿಂದ ಹೊರಗಿಡಲಾದವರ ಮೇಲ್ಮನವಿಗಳ ವಿಚಾರಣೆ...

ಡಾ. ಟಿ.ಎಸ್.‌ ಚನ್ನೇಶ್‌ ಸರಣಿ | ವೈದ್ಯಕೀಯ ನೊಬೆಲ್‌ ಪ್ರಶಸ್ತಿ ಪಡೆದ ಸಂಶೋಧನೆಯ ಸುತ್ತ ಒಂದು ನೋಟ

ನಮ್ಮ ಮೆದುಳು, ಭಾವನೆಗಳನ್ನು, ವರ್ತನೆಗಳನ್ನು ಮತ್ತು ದೈಹಿಕ ಕಾರ್ಯಗಳನ್ನು ಹೇಗೆ ನಿಯಂತ್ರಿಸುತ್ತದೆ...