ಪಂಜಾಬ್ ಪ್ರವಾಹ | ಗುರುದಾಸ್‌ಪುರದಲ್ಲಿ ಸಿಲುಕಿರುವ 400 ವಿದ್ಯಾರ್ಥಿಗಳು

Date:

Advertisements

ಪಂಜಾಬ್‌ನಲ್ಲಿ ಭಾರೀ ಮಳೆಯಿಂದಾಗಿ ಪ್ರವಾಹ ಉಂಟಾಗಿದ್ದು, ಗುರುದಾಸ್‌ಪುರ ಜಿಲ್ಲೆಯ ದಬುರಿ ಗ್ರಾಮದ ಜವಾಹರ್ ನವೋದಯ ವಿದ್ಯಾಲಯದಲ್ಲಿ ಸುಮಾರು 400 ವಿದ್ಯಾರ್ಥಿಗಳು ಮತ್ತು 40 ಸಿಬ್ಬಂದಿ ಹೆಚ್ಚುತ್ತಿರುವ ಪ್ರವಾಹದ ನೀರಿನಲ್ಲಿ ಸಿಲುಕಿರುವ ಸಾಧ್ಯತೆಯಿದೆ.

ಎಂಟು ಜಿಲ್ಲೆಗಳಾದ ಗುರುದಾಸ್‌ಪುರ, ಪಠಾಣ್‌ಕೋಟ್, ಅಮೃತಸರ, ಹೋಶಿಯಾರ್‌ಪುರ್, ಕಪುರ್ತಲಾ, ತರಣ್ ತರಣ್, ಫಿರೋಜ್‌ಪುರ್ ಮತ್ತು ಫಜಿಲ್ಕಾದಲ್ಲಿ ಭಾರೀ ಮಳೆಯಿಂದಾಗಿ ಪ್ರವಾಹ ಸ್ಥಿತಿ ನಿರ್ಮಾಣವಾಗಿದೆ. ರಾವಿ, ಬಿಯಾಸ್ ಮತ್ತು ಸಟ್ಲೆಜ್ ನದಿಗಳು ಉಕ್ಕಿ ಹರಿಯುತ್ತಿವೆ.

ಇದನ್ನು ಓದಿದ್ದೀರಾ? ಪಂಜಾಬ್ ಪ್ರವಾಹ: 41 ಸಾವು, 1600 ಕ್ಕೂ ಹೆಚ್ಚು ಮಂದಿ ಪರಿಹಾರ ಶಿಬಿರಗಳಲ್ಲಿ ವಾಸ

ಗುರುದಾಸ್‌ಪುರ-ಡೊರಾಂಗ್ಲಾ ರಸ್ತೆ ಮಾರ್ಗದಲ್ಲಿ ಶಾಲೆಯಿದೆ. ಇನ್ನು ಹಲವು ಮಂದಿ ಆಶ್ರಯ ಪಡೆದಿದ್ದ ಕಟ್ಟಡ ಕುಸಿದು ಬೀಳುವ ಕೆಲವೇ ನಿಮಿಷಗಳ ಮೊದಲು, 22 ಸಿಆರ್‌ಪಿಎಫ್ ಸಿಬ್ಬಂದಿ ಮತ್ತು ಮೂವರು ನಾಗರಿಕರನ್ನು ಸೇನಾ ಹೆಲಿಕಾಪ್ಟರ್ ಮೂಲಕ ಪ್ರವಾಹ ಪೀಡಿತ ಗ್ರಾಮದಿಂದ ಜನರನ್ನು ಸ್ಥಳಾಂತರಿಸಿದ್ದರು ಎಂದು ಹೇಳಲಾಗಿದೆ.

ಇನ್ನು ಜಮ್ಮು ಕಾಶ್ಮೀರದ ಲಖನ್‌ಪುರದ ಗಡಿಯಲ್ಲಿರುವ ಪ್ರದೇಶವಾದ ಮಾಧೋಪುರ್ ಹೆಡ್‌ವರ್ಕ್ಸ್‌ ಬಳಿ ಸಿಲುಕಿಕೊಂಡಿದ್ದ ಜನರನ್ನು ಸೇನೆಯು ಸ್ಥಳಾಂತರಿಸಿದೆ ಎಂದು ವಕ್ತಾರರು ಹೇಳಿದ್ದಾರೆ.

“ಸಿಲುಕಿದ್ದ ಎಲ್ಲರನ್ನೂ ರಕ್ಷಿಸಲಾಗಿದೆ. ಇದು ಭಾರತೀಯ ಸೇನೆಯ ಅಚಲ ಬದ್ಧತೆ, ಬಿಕ್ಕಟ್ಟಿನ ಸಂದರ್ಭಗಳಲ್ಲಿ ತಕ್ಷಣ ಪ್ರತಿಕ್ರಿಯಿಸುವ ಸಾಮರ್ಥ್ಯವನ್ನು ಪ್ರತಿಬಿಂಬಿಸುತ್ತದೆ. ಸೇನೆ ಮತ್ತು ಸ್ಥಳೀಯ ಅಧಿಕಾರಿಗಳ ನಡುವಿನ ಸಮನ್ವಯವು ದುರಂತವನ್ನು ತಪ್ಪಿಸಿದೆ” ಎಂದು ವಕ್ತಾರರು ತಿಳಿಸಿದ್ದಾರೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರೆಪೋ ದರ ಶೇ. 5.5 ಕ್ಕೆ ಸ್ಥಿರವಾಗಿರಿಸಿದ ಆರ್‌ಬಿಐ; ಸತತ ಎರಡನೇ ಬಾರಿಯೂ ಯಥಾಸ್ಥಿತಿ

ಶೇ.5.5ರ ರೆಪೋ ದರದಲ್ಲಿ ಯಾವುದೇ ಬದಲಾವಣೆ ಮಾಡದೇ ಯಥಾಸ್ಥಿತಿಯಲ್ಲಿ ಮುಂದುವರಿಯಲಿದೆ ಎಂದು...

Bihar SIR | ಬಿಜೆಪಿ-ಚುನಾವಣಾ ಆಯೋಗದ ಕುತಂತ್ರಕ್ಕೆ 47 ಲಕ್ಷ ಮತದಾರರು ಬಲಿ

ಚುನಾವಣೆಯ ಹೊಸ್ತಿಲಿನಲ್ಲಿರುವ ಬಿಹಾರದಲ್ಲಿ ಚುನಾವಣಾ ಆಯೋಗವು ಮತದಾರರ ಪಟ್ಟಿಯ ವಿಶೇಷ ತೀವ್ರ...

ಎಲ್ಲರ ತಾಯಿ ಸಾಯುತ್ತಾರೆ; ರಜೆ ಕೇಳಿದ್ದಕ್ಕೆ ಮೇಲಧಿಕಾರಿಯ ಉಡಾಫೆಯ ಉತ್ತರ

ತಾಯಿಯನ್ನು ಕಳೆದುಕೊಂಡ ದುಃಖದಲ್ಲಿ ರಜೆ ಕೇಳಿದ ಬ್ಯಾಂಕ್ ಉದ್ಯೋಗಿಗೆ, “ಎಲ್ಲರ ತಾಯಿ...

ವಿವಾದಾತ್ಮಕ ಎಸ್‌ಐಆರ್ ನಂತರ ಬಿಹಾರದ ಅಂತಿಮ ಮತದಾರರ ಪಟ್ಟಿ ಪ್ರಕಟ

ಬಿಹಾರ ವಿಧಾನಸಭಾ ಚುನಾವಣೆಗೆ ಸಂಬಂಧಿಸಿದಂತೆ ಚುನಾವಣಾ ಆಯೋಗವು ಮಂಗಳವಾರ ಅಂತಿಮ ಮತದಾರರ...

Download Eedina App Android / iOS

X