ಡಿಜೆ, ಮದ್ಯ ಮುಕ್ತ ವಿವಾಹ ಸಮಾರಂಭ ನಡೆಸಿದರೆ 21 ಸಾವಿರ ರೂಪಾಯಿ ಬಹುಮಾನ!

Date:

ಪಂಜಾಬ್‌ನ ಬಟಿಂಡಾ ಜಿಲ್ಲೆಯ ಗ್ರಾಮ ಪಂಚಾಯತಿಯೊಂದು ಡಿಜೆ ಮತ್ತು ಮದ್ಯಪಾನವಿಲ್ಲದ ವಿವಾಹಕ್ಕೆ ಉತ್ತೇಜನ ನೀಡಲು ನಿರ್ಧರಿಸಿದೆ. ಇದಕ್ಕಾಗಿ ಮದ್ಯಪಾನ ಮುಕ್ತ ಮತ್ತು ಡಿಜೆ (ಸಂಗೀತ) ಇಲ್ಲದ ವಿವಾಹ ಸಮಾರಂಭವನ್ನು ನಡೆಸಿದರೆ ಕುಟುಂಬಕ್ಕೆ 21,000 ರೂಪಾಯಿಗಳ ನಗದು ಬಹುಮಾನವನ್ನು ನೀಡಲಾಗುವುದು ಎಂದು ಘೋಷಿಸಿದೆ.

- Advertisement -

ಮದುವೆ ಸಮಾರಂಭಗಳಲ್ಲಿ ದುಂದು ವೆಚ್ಚ ಮಾಡದಂತೆ ಗ್ರಾಮಸ್ಥರನ್ನು ಉತ್ತೇಜಿಸಲು ಮತ್ತು ಮದ್ಯದ ದುರುಪಯೋಗವನ್ನು ತಡೆಯಲು ಈ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ ಎಂದು ಬಲ್ಲೊ ಗ್ರಾಮದ ಸರಪಂಚ್ ಅಮರ್ಜಿತ್ ಕೌರ್ ಮಂಗಳವಾರ ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

ಇದನ್ನು ಓದಿದ್ದೀರಾ? ಬಳ್ಳಾರಿ | ಮದ್ಯಪಾನ ಮಾಡಿ ಆಸ್ಪತ್ರೆಗೆ ಬಂದಿದ್ದ ವೈದ್ಯಾಧಿಕಾರಿ ‘ಸಸ್ಪೆಂಡ್’

ಸಾಮಾನ್ಯವಾಗಿ ಹಳ್ಳಿಗಳಲ್ಲಿ ಡಿಜೆ, ಮದ್ಯ ಸೇವಿಸುವ ಕಾರ್ಯಕ್ರಮಗಳಲ್ಲಿ ಗಲಾಟೆಯಾಗುತ್ತದೆ. ಜೋರಾದ ಹಾಡಿನಿಂದ ಇತರರಿಗೆ ತೊಂದರೆಯಾಗುತ್ತದೆ. ವಿದ್ಯಾರ್ಥಿಗಳ ಅಧ್ಯಯನಕ್ಕೂ ಇದು ತೊಂದರೆ ಉಂಡು ಮಾಡುತ್ತದೆ ಎಂದು ಹೇಳಿದರು.

“ಮದುವೆ ಸಮಾರಂಭಗಳಲ್ಲಿ ವ್ಯರ್ಥ ಖರ್ಚು ಮಾಡದಂತೆ ಜನರನ್ನು ಪ್ರೋತ್ಸಾಹಿಸಲು ನಾವು ಬಯಸುತ್ತೇವೆ. ಆದ್ದರಿಂದ ಮದ್ಯ ಇಲ್ಲದ, ಡಿಜೆ ಇಲ್ಲದೆ ವಿವಾಹ ನಡೆಸಿದರೆ ಆ ಕುಟುಂಬಕ್ಕೆ ಪ್ರೋತ್ಸಾಹವಾಗಿ 21 ಸಾವಿರ ರೂಪಾಯಿ ನಾವು ನೀಡುತ್ತೇವೆ. ಪಂಚಾಯತ್‌ನಲ್ಲಿ ಈ ನಿರ್ಣಯ ಅಂಗೀಕಾರವಾಗಿದೆ” ಎಂದು ಗ್ರಾಮದ ಸರಪಂಚ್ ಹೇಳಿದರು.

ಬಲ್ಲೊ ಗ್ರಾಮವು ಸುಮಾರು 5,000 ಜನಸಂಖ್ಯೆಯನ್ನು ಹೊಂದಿದೆ. ಇನ್ನು ಗ್ರಾಮದಲ್ಲಿ ಜೈವಿಕ ಅನಿಲ ಘಟಕ ಸ್ಥಾಪಿಸಲೂ ಕೂಡಾ ಪಂಚಾಯಿತಿ ಮುಂದಾಗಿದೆ. ಸಾವಯವ ಕೃಷಿ ಆಯ್ಕೆ ಮಾಡುವ ರೈತರಿಗೆ ಉಚಿತ ಬೀಜಗಳನ್ನು ನೀಡಲಾಗುವುದು ಎಂದು ಪಂಚಾಯತ್ ತಿಳಿಸಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ನ್ಯಾಯಾಂಗದ ಮೇಲೆ ಗೌರವವಿದೆ, ತಪ್ಪಾಗಿದ್ದರೆ ಕ್ಷಮೆಯಾಚಿಸುವೆ: ಸಂಜಯ್ ರಾವತ್

ಸುಪ್ರೀಂ ಕೋರ್ಟ್ ಕುರಿತು ತಾವು ನೀಡಿರುವ ಹೇಳಿಕೆಗಳು ಸೂಕ್ತವಲ್ಲ ಅಥವಾ ಅನುಚಿತ...

ವಿರಳಾತಿ ವಿರಳ ಪ್ರಕರಣ: ಮಾಲೆಗಾಂವ್ ಅಪ್ರಾಪ್ತೆಯ ಅತ್ಯಾಚಾರ, ಕೊಲೆ ಅಪರಾಧಿಗೆ ಮರಣದಂಡನೆ ಶಿಕ್ಷೆ

ಮಹಾರಾಷ್ಟ್ರದ ನಾಸಿಕ್ ಜಿಲ್ಲೆಯ ಮಾಲೆಗಾಂವ್ ತಾಲೂಕಿನ ಡೋಂಗರಾಳೆ ಗ್ರಾಮದಲ್ಲಿ ಸಾಡೇನಾಲ್ಕು ವರ್ಷದ...

ತಿರಂಗಾ ಮಾರ್ಚ್ ನಡೆಸದಂತೆ ಅಭಿಜೀತ್ ದೀಪ್ಕೆಗೆ ದೆಹಲಿ ಪೊಲೀಸರಿಂದ ನೋಟಿಸ್: ಮನೆಯ ಬಳಿ ಬಿಗಿ ಭದ್ರತೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ ಅವರು ದೆಹಲಿಯ...

​ಪ್ರತಿಭಟನೆಗಳ ವರದಿಗಾರಿಕೆಗೆ ಭಾರತೀಯ ಪ್ರೆಸ್ ಕೌನ್ಸಿಲ್‌ನಿಂದ ನೂತನ ಮಾರ್ಗದರ್ಶಿ ಸೂತ್ರಗಳ ಬಿಡುಗಡೆ

ಪ್ರತಿಭಟನೆಗಳು ಮತ್ತು ಧರಣಿ ಸತ್ಯಾಗ್ರಹಗಳ ಸಂದರ್ಭದಲ್ಲಿ ಪತ್ರಕರ್ತರ ಸುರಕ್ಷತೆಯನ್ನು ಕಾಯ್ದುಕೊಳ್ಳಲು, ಜವಾಬ್ದಾರಿಯುತ...