ಖರ್ಗೆ ಸಭೆಯ ಬಳಿಕ ‘ಶುದ್ಧೀಕರಣ’ ವಿವಾದ: ಎಫ್‌ಐಆರ್‌ಗೆ ಒತ್ತಾಯಿಸಿದ್ದ ರಾಹುಲ್ ಗಾಂಧಿ ವಿರುದ್ಧವೇ ಪ್ರಕರಣ ದಾಖಲು!

Date:

ಉತ್ತರಾಖಂಡದ ಹಲ್ದ್ವಾನಿಯಲ್ಲಿ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಸಭೆಯ ಬಳಿಕ ‘ಶುದ್ಧೀಕರಣ’ ನಡೆಸಿದ ಜಾತಿವಾದಿ, ದಲಿತ ವಿರೋಧಿಗಳ ವಿರುದ್ಧ ಕ್ರಮಕ್ಕೆ ಆಗ್ರಹಿಸಿದ್ದ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ವಿರುದ್ಧವೇ ಉತ್ತರಾಖಂಡ ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ.

- Advertisement -

ಉತ್ತರಾಖಂಡದ ಹಲ್ದ್ವಾನಿಯ ರಾಮಲೀಲಾ ಮೈದಾನದಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಮಾತನಾಡಿದ್ದರು. ಇದರ ಬೆನ್ನಲ್ಲೇ ಬಲಪಂಥೀಯ ಸಂಘಟನೆಗಳು ಆ ಮೈದಾನವನ್ನು ‘ಶುದ್ಧೀಕರಣ’ ಮಾಡುವ ಸಲುವಾಗಿ ಹವನ ನಡೆಸಿದ್ದವು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕ್ಷಿಪಣಿ ಬಿಡಿಭಾಗಗಳ ಖರೀದಿಯಲ್ಲಿ ಸ್ವಜನಪಕ್ಷಪಾತ; ಬಿಡಿಎಲ್ ಮಾಜಿ ಮುಖ್ಯಸ್ಥನ...

ಕ್ಷಿಪಣಿಯ ಆಪ್ಟಿಕಲ್ ಸೈಟ್‌ಗಳ ಪೂರೈಕೆಗಾಗಿ ಭಾರತ್ ಡೈನಾಮಿಕ್ಸ್ ಲಿಮಿಟೆಡ್ (BDL) ತನ್ನದೇ ಸಂಸ್ಥೆಯ ಮಾಜಿ ಅಧ್ಯಕ್ಷ ಹಾಗೂ ವ್ಯವಸ್ಥಾಪಕ ನಿರ್ದೇಶಕರ (CMD) ಪತ್ನಿಯ ಒಡೆತನದ ಖಾಸಗಿ ಕಂಪನಿಗೆ 'ತುರ್ತು' ನೆಪವೊಡ್ಡಿ 56.8 ಕೋಟಿ...

ನುಡಿ ನಮನ | ಚೆರುವಯಲ್ ರಾಮನ್ – ಭತ್ತದ...

ಕೃಷಿ ಎಂದರೆ ಕೇವಲ ಬೆಳೆ ಬೆಳೆಯುವುದಲ್ಲ; ಬಿತ್ತನೆಗೆ ಸೂಕ್ತವಾದ ಬೀಜಗಳನ್ನು ಆಯ್ಕೆ ಮಾಡುವುದು, ಅವುಗಳನ್ನು ಸಂಗ್ರಹಿಸುವುದು ಹಾಗೂ ಮುಂದಿನ ಋತುವಿಗೆ ಉಳಿಸುವುದೂ ಕೃಷಿಯ ಅವಿಭಾಜ್ಯ ಅಂಗ ಎನ್ನುತ್ತಿದ್ದ ರಾಮನ್, ತಮ್ಮ ಇಡೀ ಜೀವನವನ್ನೇ...

ಬರಗಾಲದ ದಸರಾದಲ್ಲಿ ಕಂಬಳದ ಹಠ: ಜನಾಭಿಪ್ರಾಯಕ್ಕೆ ಬೆಲೆಯಿಲ್ಲವೇ?

ನೀರಿನ ಅಭಾವ, ಪರಿಸರ ನಾಶ, ಸಾರ್ವಜನಿಕ ಹಣದ ವೆಚ್ಚದ ನಡುವೆ ಸರ್ಕಾರದ ಸಮರ್ಥನೆ; ಇತಿಹಾಸದ ಹೆಸರಿನಲ್ಲಿ ವಿವಾದ, ಆಡಳಿತದ ನಡೆಗೆ ಸಾರ್ವಜನಿಕರ ಪ್ರಶ್ನೆ. ರಾಜ್ಯದ ಜನತೆ ಬರಗಾಲದ ಸಂಕಷ್ಟ ಎದುರಿಸುತ್ತಿರುವಾಗ, ರೈತರು ಮಳೆ-ಬೆಳೆಯಿಲ್ಲದೆ ಕಂಗಾಲಾಗಿರುವಾಗ,...

ಇದನ್ನೂ ಓದಿ: ಖರ್ಗೆ ಭಾಷಣ ಮಾಡಿದ ವೇದಿಕೆ ‘ಶುದ್ಧೀಕರಣ’ ವಿವಾದ: ಎಫ್‌ಐಆರ್, SC-ST ಕಾಯ್ದೆಯಡಿ ಕ್ರಮಕ್ಕೆ ಪ್ರಿಯಾಂಕಾ ಗಾಂಧಿ ಆಗ್ರಹ

ಈ ಬಗ್ಗೆ ನವದೆಹಲಿಯಲ್ಲಿ ಸುದ್ದಿಗೋಷ್ಠಿ ನಡೆಸಿ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದ ರಾಹುಲ್ ಗಾಂಧಿ, ದಲಿತ ನಾಯಕರೊಬ್ಬರು ಭಾಗವಹಿಸಿದ ಜಾಗದಲ್ಲಿ ಶುದ್ಧೀಕರಣ ನಡೆಸಿರುವುದು ಅಸ್ಪೃಶ್ಯತೆ ಹಾಗೂ ದಲಿತ ವಿರೋಧಿ ಮನಸ್ಥಿತಿಯ ಸಂಕೇತ. ಈ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಅವರು ತಕ್ಷಣವೇ SC/ST ಕಾಯ್ದೆಯಡಿ FIR ದಾಖಲಿಸಲು ಆದೇಶಿಸಬೇಕು ಎಂದು ಆಗ್ರಹಿಸಿದ್ದರು.

ಆದರೆ, ಇದಕ್ಕೆ ಪ್ರತಿಯಾಗಿ ಹಲ್ದ್ವಾನಿಯ ಶ್ರೀ ರಾಮ್ ಸೇನಾ ಧರ್ಮಾರ್ಥ ಸೇವಾ ನ್ಯಾಸದ ಪದಾಧಿಕಾರಿ ಹಾಗೂ ವಾಲ್ಮೀಕಿ (ಪರಿಶಿಷ್ಟ ಜಾತಿ) ಸಮುದಾಯಕ್ಕೆ ಸೇರಿದ ಅಮಿತ್ ಕುಮಾರ್ ಎಂಬುವರು ನೀಡಿದ ದೂರಿನನ್ವಯ ಹಲ್ದ್ವಾನಿ ಕೊತ್ವಾಲಿ ಪೊಲೀಸ್ ಠಾಣೆಯಲ್ಲಿ ರಾಹುಲ್ ಗಾಂಧಿ ವಿರುದ್ಧವೇ ಎಫ್‌ಐಆರ್ ದಾಖಲಾಗಿದೆ.

ಖರ್ಗೆ ಅವರ ಸಭೆಯ ನಂತರ ಸ್ಥಳದಲ್ಲಿ ಕಸ ಮತ್ತು ಬಾಟಲಿಗಳು ಬಿದ್ದಿದ್ದರಿಂದ ವಾಲ್ಮೀಕಿ ಸಮುದಾಯ ಸೇರಿದಂತೆ ವಿವಿಧ ವರ್ಗಗಳ ಜನರು ಸೇರಿ ಸ್ವಚ್ಛತಾ ಅಭಿಯಾನ ಮತ್ತು ಧಾರ್ಮಿಕ ಹವನ ನಡೆಸಿದ್ದೇವೇ ಹೊರತು, ಇದಕ್ಕೂ ಜಾತಿಗೂ ಯಾವುದೇ ಸಂಬಂಧವಿಲ್ಲ. ರಾಹುಲ್ ಗಾಂಧಿ ಅವರು ಈ ಘಟನೆಗೆ ಜಾತಿಯ ಬಣ್ಣ ಹಚ್ಚಿ, ಅಸ್ಪೃಶ್ಯತೆ ಎಂದು ಕರೆದು ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದಿದ್ದಾರೆ ಮತ್ತು ಸಾಮಾಜಿಕ ಸೌಹಾರ್ದತೆಗೆ ಧಕ್ಕೆ ತಂದಿದ್ದಾರೆ ಎಂದು ದೂರಿನಲ್ಲಿ ಆರೋಪಿಸಿದ್ದಾರೆ.

ಈ ದೂರಿನ ಆಧಾರದ ಮೇಲೆ ಪೊಲೀಸರು ಭಾರತೀಯ ನ್ಯಾಯ ಸಂಹಿತೆ (BNS) ಸೆಕ್ಷನ್ 196 (ಸಮುದಾಯಗಳ ನಡುವೆ ದ್ವೇಷ ಪ್ರಚೋದನೆ), 299 (ಧಾರ್ಮಿಕ ಭಾವನೆಗೆ ಧಕ್ಕೆ) ಹಾಗೂ SC/ST ತಡೆ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಜಾತಿ ತಾರತಮ್ಯದ ವಿರುದ್ಧ ಧ್ವನಿ ಎತ್ತಿದ ಮುಖಂಡರ ವಿರುದ್ಧವೇ ಪ್ರಕರಣ

ಅಷ್ಟಕ್ಕೂ ಜಾತಿ ತಾರತಮ್ಯದ ವಿರುದ್ಧ ಧ್ವನಿ ಎತ್ತಿದ ಮುಖಂಡರ ವಿರುದ್ಧವೇ ಪ್ರಕರಣ ದಾಖಲಾಗುತ್ತಿರುವುದು ಇದೇ ಮೊದಲೇನಲ್ಲ. ಈ ಹಿಂದೆಯೂ ಬಿಜೆಪಿ ಸರ್ಕಾರ ಇದೇ ರೀತಿ ಜಾತಿ ತಾರತಮ್ಯದ ವಿರುದ್ಧ ಮಾತನಾಡಿದ ವಿಪಕ್ಷ ನಾಯಕರ ವಿರುದ್ಧವೇ ಪ್ರಕರಣ ದಾಖಲಿಸಿದೆ.

ಗುಜರಾತ್ ಶಾಸಕ ಹಾಗೂ ದಲಿತ ಹಕ್ಕುಗಳ ಹೋರಾಟಗಾರ ಜಿಗ್ನೇಶ್ ಮೇವಾನಿ ಇದೇ ರೀತಿ ಪ್ರಕರಣ ಎದುರಿಸಿದ್ದಾರೆ. ಗುಜರಾತ್‌ನ ಊನಾ ದಲಿತ ದೌರ್ಜನ್ಯ ಘಟನೆ ಸೇರಿದಂತೆ ಹಲವು ಜಾತಿ ತಾರತಮ್ಯ ವಿರೋಧಿ ಚಳವಳಿ ಮತ್ತು ಮೆರವಣಿಗೆ ನಡೆಸಿದಾಗ, ಸರ್ಕಾರದ ಅನುಮತಿ ಇಲ್ಲದೆ ಪ್ರತಿಭಟನೆ ನಡೆಸಿ ಸಾರ್ವಜನಿಕ ಶಾಂತಿಗೆ ಭಂಗ ತಂದರೆಂದು ಆರೋಪಿಸಿ ವಿವಿಧ ಠಾಣೆಗಳಲ್ಲಿ ಹಲವು ಪ್ರಕರಣಗಳು ದಾಖಲಾಗಿದ್ದವು.

ಭೀಮ್ ಆರ್ಮಿ ಮುಖ್ಯಸ್ಥ ಹಾಗೂ ಪ್ರಸ್ತುತ ಸಂಸದರಾಗಿರುವ ಚಂದ್ರಶೇಖರ್ ಆಜಾದ್ ‘ರಾವಣ್’ ಅವರ ವಿರುದ್ಧ ಉತ್ತರ ಪ್ರದೇಶದ ಯೋಗಿ ಸರ್ಕಾರ ಪ್ರಕರಣ ದಾಖಲಿಸಿತ್ತು. ದಲಿತರ ಮೇಲಿನ ದೌರ್ಜನ್ಯ ಮತ್ತು ತಾರತಮ್ಯಗಳ ವಿರುದ್ಧ ಸಾರ್ವಜನಿಕವಾಗಿ ಹೋರಾಟ ರೂಪಿಸಿದಾಗ, ಆಜಾದ್ ವಿರುದ್ಧ ಕಾನೂನು ಸುವ್ಯವಸ್ಥೆ ಹದಗೆಡಿಸಿದ ಆರೋಪ ಹಾಗೂ ಎನ್‌ಎಸ್‌ಎ ಅಡಿಯಲ್ಲೂ ಪ್ರಕರಣಗಳನ್ನು ದಾಖಲಿಸಲಾಗಿತ್ತು.

ದಲಿತ ಮುಖಂಡರ ಮೇಲಿನ ದೌರ್ಜನ್ಯದ ವಿರುದ್ಧ ಹಾಗೂ ದಲಿತ ನಾಯಕರ ದೇವಾಲಯ ಪ್ರವೇಶದ ನಂತರ ಶುದ್ಧೀಕರಣ ನಡೆಸಿದ ಬಿಜೆಪಿ ನಾಯಕರ ಹೇಳಿಕೆಗಳನ್ನು ಖಂಡಿಸಿ ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಮಾಡಿದಾಗ, ಸುಪ್ರಿಯಾ ಶ್ರೀನಾಥೆ ಮತ್ತು ಕಾಂಗ್ರೆಸ್ ಐಟಿ ಸೆಲ್ ನಾಯಕರ ವಿರುದ್ಧವೇ ಬಿಜೆಪಿ ನಾಯಕರ ದೂರಿನ ಮೇರೆಗೆ ಮಾನನಷ್ಟ ಮತ್ತು ಸೌಹಾರ್ದ ಕೆಡಿಸಿದ ಪ್ರಕರಣಗಳನ್ನು ದಾಖಲಿಸಲಾಗಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್‌ | ನ.28, 29ರಂದು 47ನೇ ಶರಣ ಕಮ್ಮಟ, ಅನುಭವಮಂಟಪ ಉತ್ಸವ

ವಿಶ್ವಬಸವಧರ್ಮ ಅನುಭವಮಂಟಪ, ಬಸವಕಲ್ಯಾಣ ವತಿಯಿಂದ ನವೆಂಬರ್ 28 ಮತ್ತು 29ರಂದು 47ನೇ...

ಕನ್ನಾಟ್ ಪ್ಲೇಸ್‌ನಲ್ಲಿ ಸಿಜೆಪಿ ಪ್ರತಿಭಟನೆ: ತಡೆ ನೀಡಲು ದೆಹಲಿ ಹೈಕೋರ್ಟ್ ನಕಾರ

ಮುಖ್ಯ ಚುನಾವಣಾ ಆಯುಕ್ತರ (ಸಿಇಸಿ) ರಾಜೀನಾಮೆಗೆ ಆಗ್ರಹಿಸಿ ಅಕ್ಟೋಬರ್ 16ರಂದು ದೆಹಲಿಯ...

ಜಂತರ್ ಮಂತರ್ ಪ್ರತಿಭಟನಾ ಸ್ಥಳ ರದ್ದು: ಕೇಂದ್ರ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ನೋಟಿಸ್

ನವದೆಹಲಿಯ ಐತಿಹಾಸಿಕ 'ಜಂತರ್ ಮಂತರ್' ಅನ್ನು ಪ್ರತಿಭಟನಾ ಸ್ಥಳಗಳ ಪಟ್ಟಿಯಿಂದ ಅಧಿಕೃತವಾಗಿ...