ಪುಷ್ಪಾ 2 ಕಾಲ್ತುಳಿತ | ಆಸ್ಪತ್ರೆಯಲ್ಲಿ ಗಾಯಾಳು ಬಾಲಕನ ಭೇಟಿ; ಅಲ್ಲು ಅರ್ಜುನ್‌ಗೆ ಪೊಲೀಸ್‌ ನೋಟಿಸ್‌

Date:

ಇತ್ತೀಚೆಗೆ ಹೈದಾರಾಬಾದ್‌ನ ಸಂಧ್ಯಾ ಥಿಯೇಟರ್‌ನಲ್ಲಿ ಪುಷ್ಪಾ 2 ಶೋ ಸಂದರ್ಭದಲ್ಲಿ ಉಂಟಾದ ಕಾಲ್ತುಳಿತದಲ್ಲಿ ಗಾಯಗೊಂಡ ಬಾಲಕನನ್ನು ಸಿನಿಮಾ ನಟ ಅಲ್ಲು ಅರ್ಜುನ್ ಆಸ್ಪತ್ರೆಯಲ್ಲಿ ಭೇಟಿಯಾಗಲು ಮುಂದಾಗಿದ್ದರು. ಈ ಬೆನ್ನಲ್ಲೇ ಪೊಲೀಸರು ಅಲ್ಲು ಅರ್ಜುನ್‌ಗೆ ನೋಟಿಸ್ ನೀಡಿದ್ದಾರೆ.

- Advertisement -

ಗಾಯಗೊಂಡಿರುವ ಬಾಲಕನನ್ನು ನೋಡಲು ಸಿಕಂದರಾಬಾದ್‌ನ ಕಿಮ್ಸ್ ಆಸ್ಪತ್ರೆಗೆ ಭೇಟಿ ನೀಡದಂತೆ ಹೈದರಾಬಾದ್‌ನ ರಾಮಗೋಪಾಲ್‌ಪೇಟೆ ಪೊಲೀಸ್ ಠಾಣೆಯು ನಟ ಅಲ್ಲು ಅರ್ಜುನ್‌ಗೆ ನೋಟಿಸ್ ಜಾರಿ ಮಾಡಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಟ್ಟದಷ್ಟಾದ ಅತ್ಯಾಚಾರ ಪ್ರಕರಣಗಳು – ತೆವಳುತ್ತಿರುವ ನ್ಯಾಯದಾನ

ಪೊಲೀಸರೆಂದು ನಟಿಸಿ ಬೆದರಿಸುವುದು, ನಿರ್ಜನ ಪ್ರದೇಶಗಳಲ್ಲಿ ತೋಳಗಳಂತೆ ಕಾದು ಹಲ್ಲೆಗೈದು ಸಾಮೂಹಿಕ ಅತ್ಯಾಚಾರ ನಡೆಸಿ ಕೊಂದೆಸೆಯುವುದು, ಕಿಂಚಿತ್ತೂ ಭಯವಿಲ್ಲದೆ ಕೃತ್ಯದ ವಿಡಿಯೋ ತುಣುಕುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಲ್ಲದೆ, ಸಂತ್ರಸ್ತರ ಗುರುತು ಬಹಿರಂಗಪಡಿಸುವ ಪ್ರವೃತ್ತಿ...

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ ಕಲ್ಪಿತ ಬಲವನ್ನು ಮೀರಿ, ಬಸವಂತಪ್ಪ ಬೆಳೆಯಬೇಕು ಎಂಬುದು ಕ್ಷೇತ್ರದ ಮತದಾರರ ಅಭಿಪ್ರಾಯ. ಪೌರಕಾರ್ಮಿಕರ ಮಗನಾಗಿ ಹುಟ್ಟಿ, ಸಚಿವ ಸ್ಥಾನದವರೆಗೆ ಬೆಳೆದವರು ಕೆ.ಎಸ್....

ಪಾಕ್‌ಗೆ ತಕ್ಕ ಉತ್ತರ ನೀಡಿದ್ದಾಗಿ ಎದೆ ತಟ್ಟಿಕೊಳ್ಳುವ ಮೋದೀಜಿ,...

ಬಾಲಾಕೋಟ್‌ನಿಂದ ಇತ್ತೀಚಿನ 'ಆಪರೇಷನ್ ಸಿಂಧೂರ್'ವರೆಗೆ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಿದ್ದಾಗಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಎದೆ ತಟ್ಟಿಕೊಳ್ಳುತ್ತಿದೆ. ಶತೃ ದೇಶವನ್ನು ಮಣಿಸುವುದು ಯಾರಿಗಾದರೂ ಹೆಮ್ಮೆಯೇ. ಆದರೆ, ದೇಶದ ಅಖಂಡತೆಗೆ ಅತಿ...

ಇದನ್ನು ಓದಿದ್ದೀರಾ? ಪುಷ್ಪಾ 2 ಕಾಲ್ತುಳಿತ | ಅಭಿಮಾನಿಗಳ ಜವಾಬ್ದಾರಿ ಸೆಲೆಬ್ರೆಟಿಗಳದ್ದು, ಯಾವುದೇ ರಾಜಿಯಿಲ್ಲ: ರೇವಂತ್ ರೆಡ್ಡಿ

“ನೀವು ಆಸ್ಪತ್ರೆಗೆ ಭೇಟಿ ನೀಡುವುದರಿಂದ ಆಸ್ಪತ್ರೆಯ ಕಾರ್ಯಾಚರಣೆಗಳಿಗೆ, ಇತರೆ ರೋಗಿಗಳಿಗೆ ತೊಂದರೆಯಾಗುತ್ತದೆ. ಆದ್ದರಿಂದ ಈ ಭೇಟಿ ನಿರ್ಧಾರವನ್ನು ಮರುಪರಿಶೀಲಿಸುವಂತೆ ನಾವು ಶಿಫಾರಸು ಮಾಡುತ್ತೇವೆ” ಎಂದು ರಾಮಗೋಪಾಲಪೇಟೆ ಪೊಲೀಸ್ ಠಾಣೆಯ ಸ್ಟೇಷನ್ ಹೌಸ್ ಆಫೀಸರ್ ಹೊರಡಿಸಿದ ನೋಟಿಸ್‌ನಲ್ಲಿ ಉಲ್ಲೇಖಿಸಲಾಗಿದೆ.

ಇನ್ನು ಜಾಮೀನು ಷರತ್ತಿನ ಪ್ರಕಾರ ಭಾನುವಾರ ಚಿಕ್ಕಡಪಲ್ಲಿ ಪೊಲೀಸ್ ಠಾಣೆಯಲ್ಲಿ ಹಾಜರಾದ ನಂತರ ಆಸ್ಪತ್ರೆಗೆ ಭೇಟಿ ನೀಡಲು ನಟ ನಿರ್ಧರಿಸಿದ್ದರು. ಆದರೆ ನೋಟೀಸ್ ಬಂದ ನಂತರ ಭಾನುವಾರ ಬೆಳಗ್ಗೆ ಆಸ್ಪತ್ರೆಗೆ ಭೇಟಿ ನೀಡುವ ನಿರ್ಧಾರವನ್ನು ನಟ ಕೈಬಿಟ್ಟಿದ್ದಾರೆ.

ಇದನ್ನು ಓದಿದ್ದೀರಾ? ಪುಷ್ಪಾ 2 ಕಾಲ್ತುಳಿತ ಪ್ರಕರಣ | ನಟ ಅಲ್ಲು ಅರ್ಜುನ್‌ಗೆ ಸಮನ್ಸ್

ಆಸ್ಪತ್ರೆಯ ಶಾಂತಿಯುತ ಪರಿಸರಕ್ಕೆ ಭಂಗ ತರುವಂತಹ ಯಾವುದೇ ಸಾರ್ವಜನಿಕರು/ ಮಾಧ್ಯಮಗಳು ಆವರಣದಲ್ಲಿ ಸೇರುವುದನ್ನು ತಡೆಯಲು ತಮ್ಮ ಗೌಪ್ಯತೆಯನ್ನು ಕಾಪಾಡಿಕೊಳ್ಳುವಂತೆ ಅಲ್ಲು ಅರ್ಜುನ್ ಅವರಿಗೆ ಸೂಚಿಸಲಾಗಿದೆ. ಹಾಗೆಯೇ ಈ ಸೂಚನೆ ಹೊರತಾಗಿಯೂ ಆಸ್ಪತ್ರೆಗೆ ಭೇಟಿ ನೀಡಿ ಏನೇ ಸಂಭವಿಸಿದರೂ ಅದಕ್ಕೆ ನಟನೇ ಕಾರಣರಾಗಿರುತ್ತಾರೆ ಎಂದು ನಟನಿಗೆ ಎಚ್ಚರಿಕೆ ನೀಡಲಾಗಿದೆ.

ಪುಷ್ಪಾ 2 ಶೋ ವೇಳೆ ನಡೆದ ಕಾಲ್ತುಳಿತದಲ್ಲಿ ಮಹಿಳೆಯೊಬ್ಬರು ಸಾವನ್ನಪ್ಪಿ, ಇಬ್ಬರು ಬಾಲಕರು ಗಾಯಗೊಂಡಿದ್ದಾರೆ. ಓರ್ವ ಬಾಲಕ ಚೇತರಿಸಿಕೊಂಡಿದ್ದು ಇನ್ನೋರ್ವ ಬಾಲಕ ಇನ್ನೂ ಆಸ್ಪತ್ರೆಯಲ್ಲೇ ಗಂಭೀರ ಸ್ಥಿತಿಯಲ್ಲಿದ್ದಾನೆ ಎಂದು ಹೇಳಲಾಗಿದೆ. ಥಿಯೇಟರ್‌ಗೆ ನಟ ದಿಢೀರ್ ಭೇಟಿ ನೀಡಿರುವುದೇ ಈ ಕಾಲ್ತುಳಿತಕ್ಕೆ ಕಾರಣ ಎನ್ನಲಾಗಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಇಸಿ ಗ್ಯಾನೇಶ್‌ ಕುಮಾರ್‌ ವಿರುದ್ಧ ದೇಶವ್ಯಾಪಿ ಪ್ರತಿಭಟನೆ; ಹೈದರಾಬಾದ್‌ನಲ್ಲಿ ‘ಸಿಜೆಪಿ’ ಮಹತ್ವದ ಸಭೆ

ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ...

ಜಮ್ಮು-ಕಾಶ್ಮೀರಕ್ಕೆ ಪೂರ್ಣ ರಾಜ್ಯ ಸ್ಥಾನಮಾನದ ನಿರ್ಣಯ ಅಂಗೀಕಾರ; ಸದನದಲ್ಲಿ ಬಿಜೆಪಿ ಗದ್ದಲ

ಜಮ್ಮು-ಕಾಶ್ಮೀರಕ್ಕೆ ತುರ್ತಾಗಿ ಪೂರ್ಣ ರಾಜ್ಯದ ಸ್ಥಾನಮಾನವನ್ನು ಮರುಸ್ಥಾಪಿಸಬೇಕು ಎಂದು ಆಗ್ರಹಿಸುವ ನಿರ್ಣಯವನ್ನು...

ಅಕ್ಟೋಬರ್ 8ರೊಳಗೆ ಪಶ್ಚಿಮ ಬಂಗಾಳ ಶಾಸಕರ ಅನರ್ಹತೆ ಅರ್ಜಿಗಳ ವಿಲೇವಾರಿಗೆ ಸ್ಪೀಕರ್​ಗೆ ಸುಪ್ರೀಂ ಸೂಚನೆ

ಪಕ್ಷಾಂತರ ನಿಷೇಧ ಕಾಯ್ದೆ ಹಾಗೂ ಸಂವಿಧಾನದ ಹತ್ತನೇ ಶೆಡ್ಯೂಲ್‌ನ ಅಡಿಯಲ್ಲಿ, ರಿತಬ್ರತಾ...

ಮೋದಿ ಸರ್ಕಾರ ECಗೆ ಇಮ್ಯೂನಿಟಿ ನೀಡಿದ್ದರೂ ಹೊಣೆಗಾರಿಕೆಯಿಂದ ತಪ್ಪಿಸಿಕೊಳ್ಳಲಾಗಲ್ಲ: ಕಪಿಲ್ ಸಿಬಲ್

ಮುಖ್ಯ ಚುನಾವಣಾ ಆಯುಕ್ತರಿಗೆ (CEC) ಕ್ರಿಮಿನಲ್ ಪ್ರಕರಣಗಳಿಂದ ಕಾನೂನು ರಕ್ಷಣೆ ನೀಡಲಾಗಿದೆ...