ಹೋರಾಟಕ್ಕೆ ಮಣಿದ ಪಿಡಬ್ಲ್ಯೂಡಿ: 6 ಕಿ.ಮೀ ನಡೆದು ಧರಣಿ ನಡೆಸಿದ ‘ಜೆನ್ ಆಲ್ಫಾ’ ಶಾಲಾ ಮಕ್ಕಳ ಪಟ್ಟು ಗೆದ್ದಿತು!

Date:

ವರ್ಷಾನುಗಟ್ಟಲೆಯಿಂದ ಸರಿಹೋಗದ, ಮಳೆಗಾಲದಲ್ಲಿ ಕೆಸರು, ಕಲ್ಲು-ಮುಳ್ಳು ಹಾಗೂ ಗುಂಡಿಗಳಿಂದ ಸಂಪೂರ್ಣ ಹಾಳಾಗಿದ್ದ ರಸ್ತೆಯ ದುರಸ್ತಿಗೆ ಆಗ್ರಹಿಸಿ ಶಾಲಾ ಮಕ್ಕಳು ಅಂದರೆ ಜೆನ್ ಆಲ್ಫಾ ನಡೆಸಿದ ಬೃಹತ್ ಪ್ರತಿಭಟನೆಯ ನಂತರ ಕೊನೆಗೂ ಜಿಲ್ಲಾಡಳಿತ ಹಾಗೂ ಲೋಕೋಪಯೋಗಿ ಇಲಾಖೆ (PWD) ಅಧಿಕಾರಿಗಳು ಸ್ಥಳ ಪರಿಶೀಲನೆಗೆ ಇಳಿದಿದ್ದು, ರಸ್ತೆ ನಿರ್ಮಾಣ ಪ್ರಕ್ರಿಯೆಗೆ ಚಾಲನೆ ನೀಡಿದ್ದಾರೆ.

- Advertisement -

ಉತ್ತರ ಪ್ರದೇಶದ ಹಮೀರ್‌ಪುರ ಜಿಲ್ಲೆಯ ಚಂದೂಪುರ, ಗಂಗವಾ ಕಾ ಡೇರಾ ಹಾಗೂ ಬಚ್ಚಿ ಕಾ ಡೇರಾ ಸೇರಿದಂತೆ ಸುತ್ತಮುತ್ತಲಿನ 8ಕ್ಕೂ ಹೆಚ್ಚು ಹಳ್ಳಿಗಳನ್ನು ಸಂಪರ್ಕಿಸುವ ಸುಮಾರು 1.6 ಕಿ.ಮೀ ಮುಖ್ಯ ರಸ್ತೆ ದಶಕಗಳಿಂದ ಕಚ್ಚಾ ರಸ್ತೆಯಾಗಿಯೇ ಉಳಿದಿತ್ತು. ಮಳೆ ಬಂದರೆ ಇಡೀ ರಸ್ತೆ ಕೆಸರು ಗದ್ದೆಯಾಗಿ ಬದಲಾಗುತ್ತಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಸೋನಿಯಾ ಗಾಂಧಿ ಎಂಬ ಸೋಜಿಗ! ರಾಜಕೀಯ ನಾಯಕತ್ವದ ಹಿಂದಿನ...

ದಿನೇಶ್ ಅಮೀನ್ ಮಟ್ಟು ಅವರು ಪ್ರಸ್ತಾಪಿಸಿದ ನಾಲ್ಕು ಆಯಾಮಗಳು ನನ್ನನ್ನು ವೈಯಕ್ತಿಕವಾಗಿ ಬಹಳವಾಗಿ ಪ್ರಭಾವಿಸಿದವು. ಸೋನಿಯಾ ಗಾಂಧಿ ಒಬ್ಬ ಮಹಿಳೆಯಾಗಿ, ಒಬ್ಬ ವಿಧವೆಯಾಗಿ, ಅಲ್ಪಸಂಖ್ಯಾತ ಕ್ರಿಶ್ಚಿಯನ್ ಧಾರ್ಮಿಕ ಹಿನ್ನೆಲೆಯ ಮಹಿಳೆಯಾಗಿ ಮತ್ತು ವಿದೇಶಿ...

ಬಿತ್ತನೆ ಗುರಿ ಅರ್ಧದಷ್ಟೂ ಮುಟ್ಟದ ಕೃಷಿ ಚಟುವಟಿಕೆ; ಜೋಳದ...

ಮುಂಗಾರು ಮಳೆ ಕೈಕೊಟ್ಟು ಬೆಳೆ ನಷ್ಟದಿಂದ ಕಂಗೆಟ್ಟ ಅನ್ನದಾತರಿಗೆ ಹಿಂಗಾರು ಹಂಗಾಮಿನಲ್ಲಾದರೂ ಮಳೆ ಆಸರೆಯಾಗಬಹುದು ಎಂಬ ನಿರೀಕ್ಷೆಯಿತ್ತು. ಆದರೆ ರೈತರ ಆ ನಿರೀಕ್ಷೆಯೂ ಹುಸಿಯಾಗಿದೆ. ಮುಂಗಾರಿನ ಬೆನ್ನಲ್ಲೇ ಹಿಂಗಾರು ಹಂಗಾಮಿನಲ್ಲೂ ಮಳೆ ಕೈಕೊಟ್ಟಿರುವುದರಿಂದ...

ಧಾರವಾಡದ ‘ಲಲಿತಕಲಾ ಅಕಾಡೆಮಿ’ಗೆ ದುಸ್ಥಿತಿ: ಕಲಾವಿದರಿಂದಲೇ ದೂರವಾದ ಪ್ರಾದೇಶಿಕ...

ಕಲಾವಿದರ ಬಹುದಿನಗಳ ಬೇಡಿಕೆಯಂತೆ ಸ್ಥಾಪನೆಯಾದ ಕೇಂದ್ರಕ್ಕೆ ಮೂರೇ ವರ್ಷಗಳಲ್ಲಿ ದುಸ್ಥಿತಿ; ಸಂಚಾಲಕರ ಏಕಪಕ್ಷೀಯ ಧೋರಣೆ, ಕಲಾವಿದರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳದಿರುವುದು ಹಾಗೂ ಕಲಾ ಚಟುವಟಿಕೆಗಳ ಕೊರತೆಯ ವಿರುದ್ಧ ಹಿರಿಯ ಕಲಾವಿದರ ಆಕ್ರೋಶ. ಸಲಹಾ ಸಮಿತಿ...

ಇದನ್ನೂ ಓದಿ: ಉತ್ತರ ಪ್ರದೇಶ | ಶಾಲೆಗೆ ರಸ್ತೆ ನಿರ್ಮಿಸಿ: ಡಿಎಂ ಕಚೇರಿಗೆ ಮುತ್ತಿಗೆ ಹಾಕಿದ ಜೆನ್-ಆಲ್ಫಾ

ಶಾಲೆಗೆ ತೆರಳುವ 15 ವರ್ಷದೊಳಗಿನ ಕಿರಿಯ ವಿದ್ಯಾರ್ಥಿಗಳು (Gen Alpha) ಪ್ರತಿದಿನ ಕೆಸರಿನಲ್ಲಿ ಬಿದ್ದು ಬಟ್ಟೆ ಹಾಗೂ ಬ್ಯಾಗ್ ಹಾಳುಮಾಡಿಕೊಳ್ಳುತ್ತಿದ್ದರು. ಹಲವು ಬಾರಿ ಮನವಿ ನೀಡಿದರೂ ಅಧಿಕಾರಿಗಳು ನಿರ್ಲಕ್ಷ್ಯ ವಹಿಸಿದ್ದರಿಂದ ಆಕ್ರೋಶಗೊಂಡ ಸುಮಾರು 300ಕ್ಕೂ ಹೆಚ್ಚು ಶಾಲಾ ಮಕ್ಕಳು ಹಾಗೂ ಪೋಷಕರು ಕೈಯಲ್ಲಿ ತ್ರಿವರ್ಣ ಧ್ವಜ ಹಿಡಿದು ಕಲೆಕ್ಟರೇಟ್ ಕಚೇರಿಯತ್ತ ಸುಮಾರು 6 ಕಿ.ಮೀ ಪಾದಯಾತ್ರೆ ನಡೆಸಿ ಮುತ್ತಿಗೆ ಹಾಕಿದ್ದರು.

ಮಕ್ಕಳ ಈ ಹಠಾತ್ ಹೋರಾಟ ಮತ್ತು ಮಾಧ್ಯಮಗಳಲ್ಲಿ ಬಂದ ವರದಿಗಳ ಬೆನ್ನಲ್ಲೇ ಎಚ್ಚೆತ್ತುಕೊಂಡ ಜಿಲ್ಲಾಡಳಿತದ ಹಿರಿಯ ಅಧಿಕಾರಿಗಳು ಹಾಗೂ ಲೋಕೋಪಯೋಗಿ ಇಲಾಖೆಯ (PWD) ಎಂಜಿನಿಯರ್‌ಗಳ ತಂಡವು ಸಂಕಷ್ಟದಲ್ಲಿದ್ದ ರಸ್ತೆ ಭಾಗವನ್ನು ನೇರವಾಗಿ ವೀಕ್ಷಿಸಿ ಪರಿಶೀಲನೆ ನಡೆಸಿದೆ.

ಹೆಚ್ಚುವರಿ ಜಿಲ್ಲಾಧಿಕಾರಿ (ADM) ರಾಕೇಶ್ ಕುಮಾರ್ ಅವರು ಮಾಹಿತಿ ನೀಡಿ, “ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳ ಸಮಸ್ಯೆಯನ್ನು ಆಡಳಿತವು ಗಂಭೀರವಾಗಿ ಪರಿಗಣಿಸಿದೆ. ಈ ಭಾಗದಲ್ಲಿ ಅರಣ್ಯ ಇಲಾಖೆಯ ಅನುಮತಿ ಬಾಕಿ ಇದ್ದ ಕಾರಣ ವಿಳಂಬವಾಗಿತ್ತು. ಈಗ NOC ಲಭಿಸಿದ್ದು, ₹1.81 ಕೋಟಿ ವೆಚ್ಚದ ಯೋಜನೆಗೆ ಅನುಮೋದನೆ ಸಿಗುತ್ತಿದ್ದಂತೆ ಖಾಯಂ ರಸ್ತೆ ನಿರ್ಮಾಣ ಕೆಲಸ ಪ್ರಾರಂ‌ಭವಾಗಲಿದೆ” ಎಂದು ತಿಳಿಸಿದ್ದಾರೆ.

ತಮ್ಮ ಮೂಲಭೂತ ಹಕ್ಕಿಗಾಗಿ ಧೈರ್ಯವಾಗಿ ಬೀದಿಗಿಳಿದು ಹೋರಾಡಿದ ‘ಜೆನ್ ಆಲ್ಫಾ’ ಮಕ್ಕಳ ಕಾರ್ಯಕ್ಕೆ ದೇಶಾದ್ಯಂತ ವ್ಯಾಪಕ ಶ್ಲಾಘನೆ ವ್ಯಕ್ತವಾಗಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸೋನಿಯಾ ಗಾಂಧಿ ಎಂಬ ಸೋಜಿಗ! ರಾಜಕೀಯ ನಾಯಕತ್ವದ ಹಿಂದಿನ ಮಹಿಳೆಯ ಸವಾಲುಗಳು ಮತ್ತು ಆತ್ಮಸ್ಥೈರ್ಯದ ಪಯಣ

ದಿನೇಶ್ ಅಮೀನ್ ಮಟ್ಟು ಅವರು ಪ್ರಸ್ತಾಪಿಸಿದ ನಾಲ್ಕು ಆಯಾಮಗಳು ನನ್ನನ್ನು ವೈಯಕ್ತಿಕವಾಗಿ...

ಗಾಂಧಿ ಕುಟುಂಬದ ಬಗ್ಗೆ ವಿವಾದಾತ್ಮಕ ಪೋಸ್ಟ್: ಕಂಗನಾ ವಿರುದ್ಧ FIR ದಾಖಲು!

ಗಾಂಧಿ ಕುಟುಂಬದ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಆಕ್ಷೇಪಾರ್ಹ ಮತ್ತು ಪ್ರಚೋದನಕಾರಿ ಪೋಸ್ಟ್...

ಗುಜರಾತ್‌ನಲ್ಲಿ ಭೀಕರ ಜಾತಿ ದೌರ್ಜನ್ಯ: ಕಳ್ಳತನದ ಶಂಕೆಯ ಮೇಲೆ ದಲಿತ ಯುವಕನ ಹತ್ಯೆ

ಕಳ್ಳತನದ ಶಂಕೆಯ ಮೇಲೆ ದಲಿತ ಯುವಕ ಮತ್ತು ಆತನ ಸ್ನೇಹಿತನನ್ನು ಅಪಹರಿಸಿ,...

ಬೀದರ್‌ | ನಮ್ಮ ನಾಡಿನ ಸಂಸ್ಕೃತಿಯ ತಾಯಿಬೇರು ಜಾನಪದ: ಹಾವಗಿರಾವ ಮೈಲಾರೆ

ಜಾನಪದವು ನಮ್ಮ ನಾಡಿನ ಸಂಸ್ಕೃತಿ, ಪರಂಪರೆ ಹಾಗೂ ನೆಲಮೂಲದ ಬದುಕಿನ ಪ್ರತಿಬಿಂಬವಾಗಿದೆ....