8 ನೌಕಾಪಡೆ ಮಾಜಿ ಸಿಬ್ಬಂದಿಗೆ ಮರಣದಂಡನೆ ವಿರುದ್ಧ ಭಾರತದ ಮನವಿ ಸ್ವೀಕರಿಸಿದ ಕತಾರ್

Date:

ಕಳೆದ ತಿಂಗಳು ಕತಾರ್‌ ನ್ಯಾಯಾಲಯವು ಎಂಟು ಭಾರತೀಯ ನೌಕಾಪಡೆಯ ಮಾಜಿ ಸಿಬ್ಬಂದಿಗೆ ಮರಣದಂಡನೆ ವಿಧಿಸಿದ್ದಕ್ಕೆ ಸಂಬಂಧಿಸಿದಂತೆ ಭಾರತ ಸರ್ಕಾರ ಸಲ್ಲಿಸಿದ ಮೇಲ್ಮನವಿಯನ್ನು ಕತಾರ್ ನ್ಯಾಯಾಲಯವು ಗುರುವಾರ ಸ್ವೀಕರಿಸಿದೆ.

ಅಧಿಕಾರಿಗಳು ಮೇಲ್ಮನವಿಯನ್ನು ಅಧ್ಯಯನ ಮಾಡುತ್ತಿದ್ದಾರೆ ಮತ್ತು ಮುಂದಿನ ವಿಚಾರಣೆಯನ್ನು ಶೀಘ್ರದಲ್ಲೇ ತಿಳಿಸಲಾಗುವುದು ಎಂದು ನ್ಯಾಯಾಲಯ ಹೇಳಿದೆ.

ಅಕ್ಟೋಬರ್ 26 ರಂದು, ಕತಾರ್‌ನ ಪ್ರಥಮ ನಿದರ್ಶನದ ನ್ಯಾಯಾಲಯವು ಎಂಟು ಜನರಿಗೆ ಮರಣದಂಡನೆ ವಿಧಿಸಿತ್ತು. ಖಾಸಗಿ ಕಂಪನಿ ಅಲ್ ದಹ್ರಾ ಗ್ಲೋಬಲ್ ಟೆಕ್ನಾಲಜೀಸ್ ಮತ್ತು ಕನ್ಸಲ್ಟೆನ್ಸಿ ಸರ್ವಿಸಸ್‌ನೊಂದಿಗೆ ಕೆಲಸ ಮಾಡುತ್ತಿದ್ದ ಅವರನ್ನು ಆಗಸ್ಟ್ 2022 ರಲ್ಲಿ ಬಂಧಿಸಲಾಗಿತ್ತು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಮರಣದಂಡಣೆ ವಿಧಿಸಿದ ನಂತರ ಭಾರತ ಸರ್ಕಾರವು ಆಘಾತ ವ್ಯಕ್ತಪಡಿಸಿ ಪ್ರಕರಣದಿಂದ ಅವರನ್ನು ಬಿಡಿಸಿ ತರಲು ಕಾನೂನಿನ ಎಲ್ಲ ಆಯ್ಕೆಗಳನ್ನು ಪರಿಶೀಲಿಸುವುದಾಗಿ ತಿಳಿಸಿತ್ತು.

ಈ ಸುದ್ದಿ ಓದಿದ್ದೀರಾ? ಪಾಪಿಗಳು ಹಾಜರಾದ ಕಾರಣ ವಿಶ್ವಕಪ್ ಫೈನಲ್‌ನಲ್ಲಿ ಭಾರತ ಸೋತಿದೆ: ಮಮತಾ ಬ್ಯಾನರ್ಜಿ

ನವೆಂಬರ್ 16 ರಂದು, ವಿದೇಶಾಂಗ ವ್ಯವಹಾರಗಳ ಸಚಿವಾಲಯದ ವಕ್ತಾರ ಅರಿಂದಮ್ ಬಾಗ್ಚಿ ಅವರು ಈ ವಿಷಯದ ಬಗ್ಗೆ ಭಾರತವು ಕತಾರ್‌ ಅಧಿಕಾರಿಗಳೊಂದಿಗೆ ಮಾತುಕತೆಯಲ್ಲಿ ತೊಡಗಿಸಿಕೊಂಡಿದೆ ಮತ್ತು ನೌಕಾಪಡೆಯ ಮಾಜಿ ಸಿಬ್ಬಂದಿಗೆ ಸರ್ಕಾರವು ಎಲ್ಲ ಕಾನೂನು ಮತ್ತು ದೂತಾವಾಸದ ಸಹಾಯವನ್ನು ನೀಡುವುದನ್ನು ಮುಂದುವರಿಸುತ್ತದೆ ಎಂದು ಹೇಳಿದ್ದರು.

“ಪ್ರಕರಣವು ಪ್ರಸ್ತುತ ಅಲ್ಲಿನ ಕಾನೂನಿನಂತೆ ಪ್ರಕ್ರಿಯೆಯಲ್ಲಿದೆ. ನಾವು ಹೇಳಿದಂತೆ, ಕತಾರ್‌ನ ಮೇಲ್ಮನವಿ ನ್ಯಾಯಾಲಯದಲ್ಲಿ ಮನವಿ ಸಲ್ಲಿಸಲಾಗಿದೆ” ಎಂದು ಅರಿಂದಮ್ ಬಾಗ್ಚಿ ಕಳೆದ ವಾರ ತಿಳಿಸಿದ್ದರು.

ಆಗಸ್ಟ್ 2022 ರಲ್ಲಿ, ಕತಾರ್ ಪೊಲೀಸರು ಎಂಟು ಮಾಜಿ ಭಾರತೀಯ ನೌಕಾಪಡೆಯ ಅಧಿಕಾರಿಗಳನ್ನು ಮಧ್ಯಪ್ರಾಚ್ಯ ರಾಷ್ಟ್ರದ ಮೂಲದ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದಾಗ ಇಸ್ರೇಲ್‌ಗೆ ಗೂಢಚಾರರಾಗಿ ಕೆಲಸ ಮಾಡುತ್ತಿದ್ದಾರೆ ಎಂಬ ಶಂಕೆಯ ಮೇಲೆ ಬಂಧಿಸಿದ್ದರು.

ಈ ಅಧಿಕಾರಿಗಳ ಜಮೀನಿನ ಅರ್ಜಿಗಳನ್ನು ಕತಾರ್‌ ನ್ಯಾಯಾಲಯ ಹಲವು ಬಾರಿ ತಿರಸ್ಕರಿಸಿತ್ತು. ಈ ವರ್ಷದ ಅಕ್ಟೋಬರ್‌ನಲ್ಲಿ ಕತಾರ್‌ನ ಪ್ರಥಮ ನಿದರ್ಶನದ ನ್ಯಾಯಾಲಯವು ಮರಣದಂಡನೆಯನ್ನು ಘೋಷಿಸಿತು.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ನಮ್ಮನ್ನು ಬೆಂಬಲಿಸಿ

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮೂರನೇ ಬಾರಿ ಅರುಣಾಚಲ ಪ್ರದೇಶ ಮುಖ್ಯಮಂತ್ರಿಯಾಗಿ ಪೆಮಾ ಖಂಡು ಪ್ರಮಾಣವಚನ

ಅರುಣಾಚಲ ಪ್ರದೇಶದ ಬಿಜೆಪಿ ಶಾಸಕಾಂಗ ಪಕ್ಷದ ನಾಯಕರಾಗಿ ಆಯ್ಕೆಯಾಗಿದ್ದ ಪೆಮಾ ಖಂಡು...

ಗಾಜಿಯಾಬಾದ್‌ನ ವಸತಿ ಕಟ್ಟಡದಲ್ಲಿ ಬೆಂಕಿ; ಐವರು ಸಾವು

ಉತ್ತರ ಪ್ರದೇಶದ ಗಾಜಿಯಾಬಾದ್‌ನ ವಸತಿ ಕಟ್ಟಡದಲ್ಲಿ ಬೆಂಕಿ ಕಾಣಿಸಿಕೊಂಡು ಐವರು ಸಾವನ್ನಪ್ಪಿದ್ದಾರೆ...

ಜಮ್ಮು ಕಾಶ್ಮೀರ| ನಾಲ್ವರು ಉಗ್ರರ ರೇಖಾಚಿತ್ರ ಬಿಡುಗಡೆ, 20 ಲಕ್ಷ ರೂ ಬಹುಮಾನ ಘೋಷಣೆ

ಜಮ್ಮು ಮತ್ತು ಕಾಶ್ಮೀರ ಪೊಲೀಸರು ಬುಧವಾರ ದೋಡಾ ಜಿಲ್ಲೆಯಲ್ಲಿ ಎರಡು ದಾಳಿಗಳಲ್ಲಿ...

ಸಚಿವ ಸಂಪುಟದಲ್ಲಿ ಜೆಪಿ ನಡ್ಡಾ; ಮುಂದಿನ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಯಾರು?

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜಗತ್ ಪ್ರಕಾಶ್ ನಡ್ಡಾ ಅವರ ಅಧಿಕಾರಾವಧಿಯು ಜೂನ್...