ಪರೀಕ್ಷೆಗೂ ಮುನ್ನಾದಿನವೇ ಪ್ರಶ್ನೆಪತ್ರಿಕೆ ಸೋರಿಕೆ: ಮಹಾರಾಷ್ಟ್ರ ಟಿಇಟಿ ಪರೀಕ್ಷೆ ಮುಂದೂಡಿಕೆ

Date:

ಭಾನುವಾರ ನಡೆಯಬೇಕಿದ್ದ ‘ಮಹಾರಾಷ್ಟ್ರ ಶಿಕ್ಷಕರ ಅರ್ಹತಾ ಪರೀಕ್ಷೆ’ಯನ್ನು (TET) ಪ್ರಶ್ನೆಪತ್ರಿಕೆ ಸೋರಿಕೆಯ ಹಿನ್ನೆಲೆಯಲ್ಲಿ ಮುಂದೂಡಲಾಗಿದೆ. ಪರೀಕ್ಷೆ ನಡೆಯುವ ಕೇವಲ ಒಂದು ದಿನ ಮುಂಚಿತವಾಗಿ ಠಾಣೆ ಜಿಲ್ಲೆಯಲ್ಲಿ ಪ್ರಶ್ನೆಪತ್ರಿಕೆ ಸೋರಿಕೆಯಾಗಿರುವುದು ಬೆಳಕಿಗೆ ಬಂದಿದೆ.

- Advertisement -

ಮಹಾರಾಷ್ಟ್ರ ರಾಜ್ಯ ಪರೀಕ್ಷಾ ಮಂಡಳಿಗೆ (MSCE) ಲಭಿಸಿದ ಗೌಪ್ಯ ಮಾಹಿತಿಯ ಆಧಾರದ ಮೇಲೆ, ಠಾಣೆ ಜಿಲ್ಲೆಯ ಭಿವಂಡಿ ಪ್ರದೇಶದಲ್ಲಿ ಪೊಲೀಸರು ದಿಢೀರ್ ದಾಳಿ ನಡೆಸಿದ್ದರು. ಈ ವೇಳೆ ಅಲ್ಲಿನ ಕೆಲವರ ಬಳಿ ಇದ್ದ ಪ್ರಶ್ನೆಗಳನ್ನು ಪರಿಶೀಲಿಸಿದಾಗ, ಅವು ಜೂನ್ 28ರಂದು ನಡೆಯಬೇಕಿದ್ದ ಟಿಇಟಿ ಪರೀಕ್ಷೆಯ ನೈಜ ಪ್ರಶ್ನೆಪತ್ರಿಕೆಗೆ ಬಹುತೇಕ ತಾಳೆಯಾಗುತ್ತಿರುವುದು ದೃಢಪಟ್ಟಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ರಾಷ್ಟ್ರೀಯ ಶಿಕ್ಷಣ ದಿನ | ಶಿಕ್ಷಣ ಕ್ರಾಂತಿಯ ಹರಿಕಾರ-ಮೌಲಾನ...

ಮೌಲಾನಾ ಅಬುಲ್ ಕಲಾಂ ಆಜಾದ್ ಇದು ಅಪರೂಪದ ರಾಷ್ಟ್ರೀಯ ವ್ಯಕ್ತಿತ್ವ. ಅವರ ಹೆಸರು ಆಜಾದ್. ಅವರ ಕನಸು ಸ್ವತಂತ್ರ ಭಾರತ. ಅವರ ಹೋರಾಟ ರಾಷ್ಟ್ರೀಯ ಏಕತೆ. ಅವರ ನಂಬಿಕೆ ಶಿಕ್ಷಣ. ಅವರ ವೈಚಾರಿಕ...

ಕಿವೀಸ್ ಕೋಟೆಯಲ್ಲಿ ಇತಿಹಾಸ ಬರೆಯುವತ್ತ ಶುಭಮನ್ ಗಿಲ್ ಪಡೆ:...

ನವೆಂಬರ್ 13 ಮತ್ತು 15ರಂದು ನಡೆಯಲಿರುವ ಕಿವೀಸ್ ವಿರುದ್ಧದ ನಾಲ್ಕು ಹಾಗೂ ಐದನೇ ಏಕದಿನ ಪಂದ್ಯಗಳಲ್ಲಿ ನಾಯಕ ಶುಭಮನ್ ಗಿಲ್ ಅವರ ನಾಯಕತ್ವದ ಕೌಶಲ ಮತ್ತೊಮ್ಮೆ ಒರೆಗಲ್ಲಿಗೆ ಹಚ್ಚಲ್ಪಡಲಿದೆ. ಗಾಯದ ಸಮಸ್ಯೆಯಿಂದ ಬಳಲುತ್ತಿರುವ...

ತುರ್ತುಪರಿಸ್ಥಿತಿ ಸರಿಯೇ- ತಪ್ಪೇ? ಸೋನಿಯಾ ತಮ್ಮ ಆತ್ಮಕಥೆಯಲ್ಲಿ ಏನಂತಾರೆ?

The Guardian ಪತ್ರಿಕೆಗೆ ನೀಡಿದ ಸಂದರ್ಶನದಲ್ಲಿ ತುರ್ತುಪರಿಸ್ಥಿತಿ ಘೋಷಣೆಯೇ ತಪ್ಪು ನಿರ್ಧಾರವಾಗಿತ್ತು ಎಂದು ಸೋನಿಯಾ ಅಭಿಪ್ರಾಯಪಟ್ಟಿದ್ದಾರೆ. ರಾಜೀವ್ ಗಾಂಧಿ ಈ ನಿರ್ಧಾರಕ್ಕೆ ವಿರೋಧ ವ್ಯಕ್ತಪಡಿಸಿ, ಮುಂದಿನ ಚುನಾವಣೆಯವರೆಗೆ ಕಾಯುವಂತೆ ಇಂದಿರಾ ಗಾಂಧಿಯವರಿಗೆ ಸಲಹೆ...

ಇದನ್ನು ಓದಿದ್ದೀರಾ? ‘ಸಚಿನ್ ವೃತ್ತಿಬದುಕನ್ನೇ ನುಂಗುವಂತಿತ್ತು ಆ ಗಾಯ’: ವೈಭವ್ ಸೂರ್ಯವಂಶಿಗೆ ಕಾದಿದೆಯಾ ಕಂಟಕ?

ಈ ಘಟನೆಗೆ ಸಂಬಂಧಿಸಿದಂತೆ ಭಿವಂಡಿ ಪೊಲೀಸ್ ಠಾಣೆಯಲ್ಲಿ ಕ್ರಿಮಿನಲ್ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಪರೀಕ್ಷಾ ಪ್ರಕ್ರಿಯೆಯಲ್ಲಿ ಪಾರದರ್ಶಕತೆ ಕಾಯ್ದುಕೊಳ್ಳುವ ನಿಟ್ಟಿನಲ್ಲಿ ಭಾನುವಾರದಂದು ನಿಗದಿಯಾಗಿದ್ದ ಟಿಇಟಿ ಪರೀಕ್ಷೆಯನ್ನು ಮುಂದೂಡಲು ಮಹಾರಾಷ್ಟ್ರ ರಾಜ್ಯ ಪರೀಕ್ಷಾ ಮಂಡಳಿ ಕಠಿಣ ನಿರ್ಧಾರ ಕೈಗೊಂಡಿದೆ. ಪರೀಕ್ಷೆಯ ಹೊಸ ದಿನಾಂಕ ಹಾಗೂ ಇತರ ಪರಿಷ್ಕೃತ ಮಾಹಿತಿಯನ್ನು ಮಂಡಳಿಯ ಅಧಿಕೃತ ವೆಬ್‌ಸೈಟ್‌ನಲ್ಲಿ ಶೀಘ್ರದಲ್ಲೇ ಪ್ರಕಟಿಸಲಾಗುವುದು ಎಂದು ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ.

ಇತ್ತೀಚೆಗಷ್ಟೇ ಯುಜಿಸಿ-ನೆಟ್ (UGC-NET) ಸೇರಿದಂತೆ ಇತರ ಕೆಲವು ಸ್ಪರ್ಧಾತ್ಮಕ ಪರೀಕ್ಷೆಗಳ ಪ್ರಶ್ನೆಪತ್ರಿಕೆ ಸೋರಿಕೆಯಾಗಿ ವಿವಾದ ಸೃಷ್ಟಿಸಿದ್ದ ಬೆನ್ನಲ್ಲೇ, ಇದೀಗ ಲಕ್ಷಾಂತರ ಅಭ್ಯರ್ಥಿಗಳು ಬರೆಯಬೇಕಿದ್ದ ಮಹಾರಾಷ್ಟ್ರ ಟಿಇಟಿ ಪರೀಕ್ಷೆಯಲ್ಲೂ ಈ ಅಕ್ರಮ ನಡೆದಿರುವುದು ಕಳವಳ ಮೂಡಿಸಿದೆ. ಈ ಘಟನೆಯು ರಾಜ್ಯ ಮಟ್ಟದ ಸ್ಪರ್ಧಾತ್ಮಕ ಪರೀಕ್ಷೆಗಳ ಭದ್ರತೆ ಹಾಗೂ ವಿಶ್ವಾಸಾರ್ಹತೆಯ ಬಗ್ಗೆ ಮತ್ತೊಮ್ಮೆ ಗಂಭೀರ ಪ್ರಶ್ನೆಗಳನ್ನು ಹುಟ್ಟುಹಾಕಿದೆ.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಷ್ಟ್ರೀಯ ಶಿಕ್ಷಣ ದಿನ | ಶಿಕ್ಷಣ ಕ್ರಾಂತಿಯ ಹರಿಕಾರ-ಮೌಲಾನ ಅಬುಲ್ ಕಲಾಂ ಅಜಾದ್

ಮೌಲಾನಾ ಅಬುಲ್ ಕಲಾಂ ಆಜಾದ್ ಇದು ಅಪರೂಪದ ರಾಷ್ಟ್ರೀಯ ವ್ಯಕ್ತಿತ್ವ. ಅವರ...

ಅಸ್ಸಾಂನಲ್ಲಿ ಹಳಿ ತಪ್ಪಿದ ಕೋಲ್ಕತ್ತಾ-ಸೈರಾಂಗ್ ಎಕ್ಸ್‌ಪ್ರೆಸ್‌: ಹಲವರಿಗೆ ಗಾಯ

ಅಸ್ಸಾಂನ ಕಾಮರೂಪ್ ಜಿಲ್ಲೆಯ ಗುವಾಹಟಿ ಸಮೀಪದ ಡಿಗಾರು ರೈಲು ನಿಲ್ದಾಣದ ಬಳಿ...

ಜಾತಿಯ ಗೋಡೆಗಳಾಚೆ ಪ್ರೀತಿಯ ಪಯಣ: ಸಂವಿಧಾನದ ಬೆಳಕಿನಲ್ಲಿ ಹೊಸ ಬದುಕಿಗೆ ಮುನ್ನುಡಿ!

ಜಾತಿ, ಧರ್ಮ, ಕುಲ, ಗೋತ್ರಗಳ ಕಟ್ಟುಪಾಡುಗಳನ್ನು ಮೀರಿ ಪ್ರೀತಿ, ಸಮಾನತೆ ಮತ್ತು...

ಸೋನಿಯಾ ಪುಸ್ತಕ: ಸಿಖ್ಖರ ಗಾಯಗಳ ಮೇಲೆ ಉಪ್ಪು ಎರಚಿದ್ದಾರೆಂದ ಅಕಾಲಿಗಳು

‘ಆಪರೇಷನ್ ಬ್ಲೂ ಸ್ಟಾರ್’ ಬಳಿಕ ದೆಹಲಿಯ ಬೀದಿಗಳಲ್ಲಿ ಸಿಖ್ಖರ ಕಗ್ಗೊಲೆ ನಡೆಸುವಂತೆ...