ಪ್ರಶ್ನೆಪತ್ರಿಕೆ ಸೋರಿಕೆ | ಪರೀಕ್ಷೆ ರದ್ದತಿಗೆ ಆಗ್ರಹಿಸಿದ್ದ ಪ್ರತಿಭಟನಾಕಾರರ ಮೇಲೆ ಪೊಲೀಸರ ಅಟ್ಟಹಾಸ

Date:

ಬಿಹಾರ ಲೋಕಸೇವಾ ಆಯೋಗವು (ಬಿಪಿಎಸ್‌ಸಿ) ಡಿಸೆಂಬರ್ 13ರಂದು ನಡೆಸಿದ್ದ ಪೂರ್ವಭಾವಿ ಪರೀಕ್ಷೆಯ ಪ್ರಶ್ನೆಪತ್ರಿಕೆಗಳು ಪರೀಕ್ಷೆಗೂ ಮುನ್ನವೇ ಸೋರಿಕೆಯಾಗಿದ್ದವು ಎಂದು ಆರೋಪಿಸಲಾಗಿದೆ. ಹೀಗಾಗಿ, ನಡೆದಿರುವ ಪರೀಕ್ಷೆಯನ್ನು ರದ್ದುಗೊಳಿಸಿ, ಮರುಪರೀಕ್ಷೆ ನಡೆಸಬೇಕೆಂದು ಆಗ್ರಹಿಸಿ ಹಲವಾರು ಆಕಾಂಕ್ಷಿಗಳು ಬಿಹಾರದ ಪಾಟ್ನಾದಲ್ಲಿ ಪ್ರತಿಭಟನೆ ನಡೆಸಿದ್ದಾರೆ. ಆ ಪ್ರತಿಭಟನಾಕಾರರ ಮೇಲೆ ಪೊಲೀಸರು ಅಮಾನುಷವಾಗಿ ಲಾಠಿ ಪ್ರಹಾರ ನಡೆಸಿದ್ದಾರೆ.

- Advertisement -

ಪಾಟ್ನಾದಲ್ಲಿ ಪ್ರತಿಭಟನೆ ನಡೆಸಿದ ಆಕಾಂಕ್ಷಿಗಳಲ್ಲಿ ಕೆಲವು ಪ್ರತಿಭಟನಾಕಾರರು ಬಿಪಿಎಸ್‌ಸಿ ಕಚೇರಿಯ ಆವರಣಕ್ಕೆ ತೆರಳಲು ಪ್ರಯತ್ನಿಸಿದ್ದಾರೆ. ಈ ವೇಳೆ, ಅವರ ಮೇಲೆ ಪೊಲೀಸರು ಲಾಠಿ ಚಾರ್ಜ್ ನಡೆಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಶಿವಮೊಗ್ಗ | ದಾಖಲೆಗಳಲ್ಲಿ ಪೂರ್ಣ, ವಾಸ್ತವದಲ್ಲಿ ನೆನೆಗುದಿಗೆ...

ಶಿವಮೊಗ್ಗ ತಾಲೂಕಿನ ಕಾಚಿನಕಟ್ಟೆ ಗ್ರಾಮದಲ್ಲಿ ಸಮುದಾಯ ಭವನದ ಅಪೂರ್ಣ ಕಾಮಗಾರಿ ಆದರೆ ಶಿವಮೊಗ್ಗ ನಿರ್ಮಿತಿ ಕೇಂದ್ರ ದಾಖಲೆ ಪ್ರಕಾರ ಕಾಮಗಾರಿ ಸಂಪೂರ್ಣವಾಗಿದೆ ಎಂದು ದಾಖಲೆಗಳಲ್ಲಿ. ಈ ಸಂಬಂಧ ಲಂಚಮುಕ್ತ ಕರ್ನಾಟಕ ಮತ್ತು KRS ಪಕ್ಷದ...

ವಿಜಯಪುರ | ಹೆಚ್ಚುತ್ತಿರುವ ಬೀದಿ ನಾಯಿಗಳ ಹಾವಳಿ: 9...

ಬೀದಿ ನಾಯಿ ನಿಯಂತ್ರಣಕ್ಕೆ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಿ, ಬೀದಿ ನಾಯಿಗಳ ಹಾವಳಿ ಹೆಚ್ಚಿರುವ ಪ್ರದೇಶಗಳನ್ನು ಗುರುತಿಸಿ ನಿಯಂತ್ರಣ ಕ್ರಮ ಕೈಗೊಳ್ಳಬೇಕು. ಶಾಲೆ, ಆಸ್ಪತ್ರೆ,...

ದಿವಾಳಿ ಕಂಪನಿಗಳ ಬಿಡ್‌ನಲ್ಲಿ ಅದಾನಿಯದ್ದೇ ಮೇಲುಗೈ; ಸಾಲಗಾರರಿಗೆ ₹97,700...

ಭಾರತದ ದಿವಾಳಿ ಹಂತದಲ್ಲಿದ್ದ ಕಂಪನಿಗಳ ಬಿಡ್‌ ಪ್ರಕ್ರಿಯೆಗಳಲ್ಲಿ ಅದಾನಿ ಗ್ರೂಪ್‌ನ ಅಸಾಧಾರಣ ಯಶಸ್ಸಿನ ಹಿಂದೆ ರಹಸ್ಯವೊಂದಿದೆ! ಪ್ರತಿ ಐದರಲ್ಲಿ ಮೂರು ಬಿಡ್‌ಗಳನ್ನು ಗೆದ್ದು, ದೇಶದ ಅತಿ ದೊಡ್ಡ ಕಾರ್ಪೊರೇಟ್ ಸ್ವಾಧೀನದಾರನಾಗಿ ಹೊರಹೊಮ್ಮಿರುವ ಅದಾನಿ...

“ಹಲವಾರು ಪ್ರತಿಭಟನಾಕಾರರು ಪಾಟ್ನಾದ ಬೈಲಿ ರಸ್ತೆಯಲ್ಲಿರುವ ಬಿಪಿಎಸ್‌ಸಿ ಕಚೇರಿ ಬಳಿ ಜಮಾಯಿಸಿದ್ದರು. ಅವರು ಬಿಪಿಎಸ್‌ಸಿ ಕಚೇರಿಯ ಆವರಣಕ್ಕೆ ತೆರಳಲು ಮುಂದಾಗಿದ್ದರು. ಅದಕ್ಕೆ ಪೊಲೀಸರು ಅವಕಾಶ ನೀಡಲಿಲ್ಲ. ಆದರೆ, ಕೆಲವರು ಪೊಲೀಸ್‌ ಬ್ಯಾರಿಕೇಡ್‌ಗಳನ್ನು ಹಾರಿ, ಬಿಪಿಎಸ್‌ಸಿ ಕಚೇರಿಯ ಆವರಣಕ್ಕೆ ನುಗ್ಗಿದರು. ರಸ್ತೆಯಲ್ಲಿ ಅಡ್ಡಗಟ್ಟಿ ವಾಹನಗಳ ಸಂಚಾರಕ್ಕೆ ಅಡ್ಡಿಪಡಿಸಿದರು. ಭದ್ರತಾ ಸಿಬ್ಬಂದಿ ಪದೇ ಪದೇ ಮನವಿ ಮಾಡಿದರೂ, ಪ್ರತಿಭಟನಾಕಾರರು ರಸ್ತೆ ತೆರವು ಮಾಡಲು ನಿರಾಕರಿಸಿದರು. ಅಂತಿಮವಾಗಿ, ಲಾಠಿ ಚಾರ್ಜ್ ನಡೆಸಿ ಪ್ರತಿಭಟನಾಕಾರರನ್ನು ಚದುರಿಸಲಾಯಿತು” ಎಂದು ಪಾಟ್ನಾ ಎಸ್‌ಎಸ್‌ಪಿ ರಾಜೀವ್ ಮಿಶ್ರಾ ತಿಳಿಸಿದ್ದಾರೆ.

ಲಾಠಿ ಚಾರ್ಜ್‌ನಲ್ಲಿ ಇಬ್ಬರು ಅಥವಾ ಮೂವರು ಗಾಯಗೊಂಡಿದ್ದಾರೆ ಎಂದು ಪ್ರತಿಭಟನಾಕಾರರು ಹೇಳಿದ್ದಾರೆ. ಆದರೆ, ಆರೋಪವನ್ನು ಎಸ್‌ಎಸ್‌ಪಿ ನಿರಾಕರಿಸಿದ್ದಾರೆ.

ಡಿಸೆಂಬರ್ 20 ರಿಂದ ಆಮರಣಾಂತ ಉಪವಾಸ ನಡೆಸುತ್ತಿರುವ ಸತ್ಯಂ ಎಂಬಾತನ ಮೇಲೆಯೂ ಪೊಲೀಸರು ಲಾಠಿ ಬೀಸಿದ್ದಾರೆ ಎಂದು ಪ್ರತಿಭಟನಾಕಾರರು ಆರೋಪಿಸಿದ್ದಾರೆ.

“ಪೊಲೀಸ್ ಅಧಿಕಾರಿ ಸಂಜೀವ್ ಕುಮಾರ್ ನನ್ನ ತೋಳುಗಳು ಮತ್ತು ಹೊಟ್ಟೆಯ ಮೇಲೆ ತುಂಬಾ ಬಲವಾಗಿ ಹೊಡೆದರು. ನಾನು ಕುಸಿದುಬಿದ್ದು, ಪ್ರಜ್ಞಾಹೀನಳಾಗಿದ್ದೆ. ಬಳಿಕ ನನ್ನನ್ನು ಆಸ್ಪತ್ರೆಗೆ ರವಾನಿಸಲಾಗಿದೆ” ಎಂದು ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಅಲ್ಪನಾ ರಾಥೋಡ್ ಆರೋಪಿಸಿದ್ದಾರೆ.

ಡಿಸೆಂಬರ್ 13ರಂದು ನಡೆದಿರುವ ಪರೀಕ್ಷೆಯನ್ನು ಸಂಪೂರ್ಣವಾಗಿ ರದ್ದುಗೊಳಿಸಿ, ರಾಜ್ಯಾದ್ಯಂತ ಮರುಪರೀಕ್ಷೆ ನಡೆಸಬೇಕೆಂದು ಅಭ್ಯರ್ಥಿಗಳು ಒತ್ತಾಯಿಸಿದ್ದಾರೆ. ಆದರೆ, BPSC ಪಾಟ್ನಾ ಕೇಂದ್ರದಲ್ಲಿ ಮಾತ್ರವೇ ಮರುಪರೀಕ್ಷೆ ನಡೆಸಲು ಮುಂದಾಗಿದ್ದು, ಜನವರಿ 4 ರಂದು ಪರೀಕ್ಷೆ ನಡೆಸಲು ನಿರ್ಧರಿಸಿದೆ.

ಘಟನೆಯ ಬಗ್ಗೆ ಆಕ್ರೋಶ ವ್ಯಕ್ತಪಡಿಸಿರುವ ಲೋಕಸಭೆ ವಿಪಕ್ಷ ನಾಯಕ ರಾಹುಲ್‌ ಗಾಂಧಿ, ”ಏಕಲವ್ಯನ ಹೆಬ್ಬೆರಳು ಕತ್ತರಿಸಿದಂತೆಯೇ, ಪೇಪರ್ ಸೋರಿಕೆಯ ಮೂಲಕ ಯುವಕರ ಹೆಬ್ಬೆರಳು ಕತ್ತರಿಸಲಾಗುತ್ತದೆ ಎಂದು ನಾನು ಸಂಸತ್ತಿನಲ್ಲಿ ಹೇಳಿದ್ದೆ. ಇದಕ್ಕೆ ಉದಾಹರಣೆಯಾಗಿ, ಬಿಹಾರದಲ್ಲಿ BPSC ಅಭ್ಯರ್ಥಿಗಳು ಪತ್ರಿಕೆ ಸೋರಿಕೆ ವಿರುದ್ಧ ಧ್ವನಿ ಎತ್ತಿದ್ದು, ಪರೀಕ್ಷೆಯನ್ನು ರದ್ದುಗೊಳಿಸುವಂತೆ ಒತ್ತಾಯಿಸುತ್ತಿದ್ದಾರೆ. ಆದರೆ, ತನ್ನ ವೈಫಲ್ಯವನ್ನು ಮರೆಮಾಚಲು ಎನ್‌ಡಿಎ ಸರ್ಕಾರ ವಿದ್ಯಾರ್ಥಿಗಳ ಮೇಲೆ ಲಾಠಿ ಚಾರ್ಜ್ ನಡೆಸುತ್ತಿದೆ. ಇದು ಅತ್ಯಂತ ನಾಚಿಕೆಗೇಡಿನ ಮತ್ತು ಖಂಡನೀಯ ಕೃತ್ಯ. ವಿದ್ಯಾರ್ಥಿಗಳ ಭವಿಷ್ಯದ ಜೊತೆ ಚೆಲ್ಲಾಟವಾಡುವುದನ್ನು ನಾವು ಸಹಿಸುವುದಿಲ್ಲ. ನಾವು ಅಭ್ಯರ್ಥಿಗಳೊಂದಿಗೆ ಇದ್ದೇವೆ. ಅವರಿಗೆ ನ್ಯಾಯ ದೊರಕಿಸಲು ಹೋರಾಟ ಮಾಡುತ್ತೇವೆ” ಎಂದು ಹೇಳಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಜೆಪಿ ಪ್ರತಿಭಟನೆ – ಹೆದರಿದ ಮೋದಿ: ದೆಹಲಿಯಲ್ಲಿ ಮೂವರು ಮಾಜಿ ಸಿಎಂ – ಮಮತಾ, ಪಿಣರಾಯಿ, ಕೇಜ್ರಿವಾಲ್ – ಬಂಧನ

ಚುನಾವಣಾ ಆಯುಕ್ತ ಗ್ಯಾನೇಶ್‌ ಕುಮಾರ್ ರಾಜೀನಾಮೆ ಮತ್ತು ಎಸ್‌ಐಆರ್‌ ರದ್ದತಿಗೆ ಆಗ್ರಹಿಸಿ...

ಅ.12ರಂದು ದೆಹಲಿಯಲ್ಲಿ ಇಂಡಿಯಾ ಒಕ್ಕೂಟದ ಪ್ರತಿಭಟನೆ: ಕೆ.ಸಿ. ವೇಣುಗೋಪಾಲ್

ಜನರ ಮತದಾನದ ಹಕ್ಕನ್ನು ರಕ್ಷಿಸುವ ಉದ್ದೇಶದಿಂದ ಇಂಡಿಯಾ ಮೈತ್ರಿಕೂಟವು ಸೋಮವಾರ ನವದೆಹಲಿಯಲ್ಲಿ...

ಸಿಜೆಪಿ ಪ್ರತಿಭಟನೆ – ಹೆದರಿದ ಮೋದಿ: ದೀಪ್ಕೆ ಬಂಧನ ಬಳಿಕ, ಹೋರಾಟಕ್ಕೆ ಅಜಿಂಕ್ಯ ಶಿಂಧೆ ಉಸ್ತುವಾರಿ; ಯಾರು ಈ ಹೊಸ ನಾಯಕ?

ಗ್ಯಾನೇಶ್‌ ಕುಮಾರ್ ವಿರುದ್ಧದ ಪ್ರತಿಭಟನೆ ಆರಂಭಕ್ಕೂ ಮುನ್ನವೇ ಸಿಜೆಪಿ ಸಂಸ್ಥಾಪಕ ಅಭಿಜಿತ್...