ಪ್ರಶ್ನಿಸುವುದು ಮಾನನಷ್ಟವಲ್ಲ: ಎಎಪಿ ನಾಯಕ ಸೌರಭ್ ವಿರುದ್ಧ ಬಿಜೆಪಿ ಸಚಿವ ಪರ್ವೇಶ್ ಸಲ್ಲಿಸಿದ್ದ ಅರ್ಜಿ ವಜಾ

Date:

ಆಮ್ ಆದ್ಮಿ ಪಾರ್ಟಿ (ಎಎಪಿ) ನಾಯಕ ಸೌರಭ್ ಭಾರದ್ವಾಜ್ ವಿರುದ್ಧ ಬಿಜೆಪಿ ನಾಯಕ, ದೆಹಲಿ ಸಚಿವ ಪರ್ವೇಶ್ ವರ್ಮಾ ಸಲ್ಲಿಸಿದ್ದ ಕ್ರಿಮಿನಲ್ ಮಾನನಷ್ಟ ದೂರು ಪ್ರಕರಣವನ್ನು ದೆಹಲಿಯ ರೌಸ್ ಅವೆನ್ಯೂ ನ್ಯಾಯಾಲಯವು ವಜಾಗೊಳಿಸಿದೆ. “ಸಾಮಾಜಿಕ ಜಾಲತಾಣಗಳಲ್ಲಿ ಪ್ರಶ್ನೆಗಳನ್ನು ಕೇಳುವುದು ಮಾನನಷ್ಟ ಎನಿಸಿಕೊಳ್ಳುವುದಿಲ್ಲ” ಎಂದು ಕೋರ್ಟ್ ಸ್ಪಷ್ಟಪಡಿಸಿದೆ.

- Advertisement -

ಶಾಲೆಯೊಂದಕ್ಕೆ ಸಂಬಂಧಿಸಿದ ‘ಪೋಕ್ಸೋ’ ಪ್ರಕರಣದ ವಿಷಯದಲ್ಲಿ ಸೌರಭ್ ಭಾರದ್ವಾಜ್ ಅವರು ತಮ್ಮ ಸೋಷಿಯಲ್ ಮೀಡಿಯಾ ಖಾತೆಗಳಲ್ಲಿ ಪೋಸ್ಟ್ ಮಾಡಿದ್ದರು. ಈ ಪೋಸ್ಟ್‌ಗಳು ತಮ್ಮ ಮತ್ತು ತಮ್ಮ ಕುಟುಂಬದ ತೇಜೋವಧೆ ಮಾಡುವಂತಿದ್ದು, ಸುಳ್ಳು ಆರೋಪಗಳಿಂದ ಕೂಡಿದೆ ಎಂದು ಪರ್ವೇಶ್ ವರ್ಮಾ ಆರೋಪಿಸಿದ್ದರು. ಅಲ್ಲದೆ, ತಮಗೂ, ಆ ಶಾಲೆಗೂ ಯಾವುದೇ ಸಂಬಂಧವಿಲ್ಲ ಎಂದು ಸ್ಪಷ್ಟಪಡಿಸಿ, ಭಾರದ್ವಾಜ್ ವಿರುದ್ಧ ಕ್ರಿಮಿನಲ್ ಮಾನನಷ್ಟ ಮೊಕದ್ದಮೆ ದಾಖಲಿಸಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

₹2,000 ಕೋಟಿ ಆಸ್ತಿ, 3 ಕೋಟಿಗೆ ಡೀಲ್: ಸಾಲದಾತರಿಗೆ...

ಮುಂಬೈನ BKCಯಲ್ಲಿ ₹2,000 ಕೋಟಿ ಬೆಲೆಬಾಳುವ ಪ್ರಾಜೆಕ್ಟ್ ಕೇವಲ ₹3 ಕೋಟಿಗೆ ಅದಾನಿ ಪಾಲು! ಆಸ್ತಿಯ ಮೌಲ್ಯವನ್ನು ‘ಶೂನ್ಯ’ ಎಂದು ಬಿಂಬಿಸಿದ್ದು ಹೇಗೆ? ಕೊರ್ಬಾ ವೆಸ್ಟ್‌ನಲ್ಲಿ ತನ್ನದೇ ಕಂಪನಿಗೆ ತಾನೇ ಮತ ಹಾಕಿಕೊಂಡ...

ದೆಹಲಿಯ ಬಂಧನಗಳು ಮತ್ತು ಮಹಾತ್ಮ ಗಾಂಧಿ

ವ್ಯವಸ್ಥೆಗಳು ದುರ್ಬಲವಾಗುತ್ತಿರುವ ಇಂದಿನ ಕಾಲದಲ್ಲಿ, ಕೋಪಗೊಂಡ ಯುವಕರ ಬೀದಿ ಪ್ರತಿಭಟನೆಗಳೇ ಒಂದು ಹೊಸ ನಿಯಂತ್ರಣ ವ್ಯವಸ್ಥೆಯಾಗಿ ನಿಲ್ಲುತ್ತಿವೆ ಎಂದೆನಿಸುತ್ತದೆ. ಜನರಿಗೆ ಮತದಾನದ ಹಕ್ಕನ್ನು ಮತ್ತೆ ದೊರಕಿಸಿಕೊಡುವುದಕ್ಕೂ ಇಂತಹ ಹೋರಾಟಗಳತ್ತ ಮುಖ ಮಾಡಬೇಕಾಗಿದೆ. ಸಾರ್ವಜನಿಕರು...

ಶಿಕ್ಷಣ ಮಾರಾಟ ಮಾಡಿದ ಶಾಲೆಗಳೇ ಈಗ ಮಾರಾಟಕ್ಕೆ!

ಕರ್ನಾಟಕದಲ್ಲಿ ಖಾಸಗಿ ಶಾಲೆಗಳು ಮುಚ್ಚುವ ಹಂತಕ್ಕೆ ತಲುಪಿದ್ದು, ಮಾರಾಟಕ್ಕೆ ಸಜ್ಜಾಗಿವೆ. ಕೋವಿಡ್-19 ಆಕ್ರಮಣದ ನಂತರದಲ್ಲಿ ಖಾಸಗಿ ಶಾಲೆಗಳಲ್ಲಿ ದಾಖಲಾತಿಯಲ್ಲಿ ಭಾರೀ ಕುಸಿತ, ಪ್ರತಿಷ್ಠಿತ ಶಾಲೆಗಳ ಜೊತೆಗೆ ಪೈಪೋಟಿ, ಮೂಲಭೂತ ಸೌಕರ್ಯಕ್ಕೆ ತಕ್ಕಂತೆ ಲಾಭದ...

ಇದನ್ನೂ ಓದಿ: ದೆಹಲಿ ಸತ್ಯನಿಕೇತನ ಕಟ್ಟಡ ಕುಸಿತ: ಬಿಜೆಪಿ ಶಾಸಕರ ನಂಟಿರುವ ದಾಖಲೆ ಬಿಡುಗಡೆ ಮಾಡಿದ ಎಎಪಿ

ಅರ್ಜಿಯ ವಿಚಾರಣೆ ನಡೆಸಿದ ಮ್ಯಾಜಿಸ್ಟ್ರೇಟ್ ನ್ಯಾಯಾಲಯವು, ಸೌರಭ್ ಭಾರದ್ವಾಜ್ ಅವರು ಮಾಡಿದ ಪೋಸ್ಟ್‌ಗಳನ್ನು ಪರಿಶೀಲಿಸಿತು. ಆ ಪೋಸ್ಟ್‌ಗಳು ಕೇವಲ ‘ಪ್ರಶ್ನೆಗಳ ರೂಪದಲ್ಲಿದ್ದವು’ ಹೊರತು, ನೇರ ಆರೋಪ ಅಥವಾ ತೇಜೋವಧೆ ಮಾಡುವ ಉದ್ದೇಶ ಹೊಂದಿರಲಿಲ್ಲ. ಸಾರ್ವಜನಿಕ ಜೀವನದಲ್ಲಿರುವವರ ಬಳಿ ಪ್ರಶ್ನೆಗಳನ್ನು ಕೇಳುವುದು ಮಾನನಷ್ಟದ ವ್ಯಾಪ್ತಿಗೆ ಬರುವುದಿಲ್ಲ ಎಂದು ಅಭಿಪ್ರಾಯಪಟ್ಟು ದೂರು ಅರ್ಜಿಯನ್ನು ರದ್ದುಗೊಳಿಸಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಂಗಾಳದ ನವರಾತ್ರಿ- ತಾಯಿ ದುರ್ಗೆಯ ಕೇಶ ತಯಾರಕರು ಮುಸ್ಲಿಮರು- ಕೋಮು ಸೌಹಾರ್ದಕ್ಕೊಂದು ನಿದರ್ಶನ

ಪಶ್ಚಿಮ ಬಂಗಾಳದಲ್ಲಿ ನವರಾತ್ರಿ ಹಾಗೂ ದುರ್ಗಾಪೂಜೆಯೆಂದರೆ ಕೇವಲ ಒಂದು ಧಾರ್ಮಿಕ ಹಬ್ಬವಲ್ಲ,...

ಪಾತ್ರಕ್ಕಾಗಿ 14 ಕೆ.ಜಿ. ತೂಕ ಹೆಚ್ಚಿಸಿಕೊಂಡ ನಿಮಿಷಾ ಸಜಯನ್: ಅಭಿನಯವನ್ನೇ ಉಸಿರಾಗಿಸಿಕೊಂಡ ಅಪರೂಪದ ಕಲಾವಿದೆ

ಭಾರತೀಯ ಚಿತ್ರರಂಗದಲ್ಲಿ ನಾಯಕಿಯೊಬ್ಬಳು ಯಶಸ್ವಿಯಾಗಬೇಕಾದರೆ ಹೇಗಿರಬೇಕು ಎಂಬುದಕ್ಕೆ ಬಹುಕಾಲದಿಂದ ಕೆಲವು ಅಲಿಖಿತ...

ಬೇರೊಬ್ಬರೊಂದಿಗೆ ಮದುವೆ ನಿಶ್ಚಯ: ಪ್ರಿಯತಮೆಯನ್ನು ಸಾವಿರ ಅಡಿ ಆಳದ ಕಮರಿಗೆ ನೂಕಿ ಕೊಂದ ಪಾಪಿ!

ಮಹಾರಾಷ್ಟ್ರದ ಕೊಲ್ಹಾಪುರ ಜಿಲ್ಲೆಯಲ್ಲಿ ಅತ್ಯಂತ ಭೀಕರ ಘಟನೆಯೊಂದು ವರದಿಯಾಗಿದೆ. ತನ್ನ ಪ್ರಿಯತಮೆಗೆ...