ಕೋಲ್ಕತ್ತದ ಆರ್ ಜಿ ಕರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ವಿದ್ಯಾರ್ಥಿನಿಯೊಬ್ಬರ ಮೃತದೇಹ ಉತ್ತರ ಪರಗಣ 24 ಜಿಲ್ಲೆಯ ಕಮರ್ ಹಾತಿ ಎಂಬಲ್ಲಿರುವ ಇಎಸ್ಐ ಆಸ್ಪತ್ರೆ ಕ್ವಾಟ್ರಸ್ನಲ್ಲಿ ಪತ್ತೆಯಾಗಿದೆ.
ಪುತ್ರಿಗೆ ಕರೆ ಮಾಡಿದಾಗ ಉತ್ತರಿಸಿದೇ ಇದ್ದ ಕಾರಣದಿಂದ ವೈದ್ಯೆಯಾಗಿರುವ ವಿದ್ಯಾರ್ಥಿನಿಯ ತಾಯಿ ಆತಂಕಕ್ಕೀಡಾಗಿದ್ದರು.ಬಳಿಕ ಪರಿಶೀಲಿಸಿದಾಗ ಕೊಠಡಿಯೊಂದರಲ್ಲಿ ಆಕೆಯ ಮೃತದೇಹ ಪತ್ತೆಯಾಗಿದೆ ಎಂದು ತಾಯಿ ಹೇಳಿದ್ದಾರೆ.
ಈ ಸುದ್ದಿ ಓದಿದ್ದೀರಾ? ವಿಜಯಪುರ | ಬಜೆಟ್ನಲ್ಲಿ ರಾಜ್ಯಕ್ಕೆ ಅನ್ಯಾಯ: ಸಬಲಾ ಸಂಸ್ಥೆ
ವಿದ್ಯಾರ್ಥಿನಿಯ ತಂದೆ ಬ್ಯಾಂಕ್ ಉದ್ಯೋಗಿಯಾಗಿದ್ದು ಮುಂಬೈನಲ್ಲಿ ವಾಸಿಸುತ್ತಿದ್ದಾರೆ. ಪೊಲೀಸರು ಅಸಹಜ ಸಾವಿನ ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ. ಮರಣೋತ್ತರ ಪರೀಕ್ಷೆ ನಡೆಸಲಾಗಿದ್ದು, ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.
ಕಳೆದ ವರ್ಷದ ಆಗಸ್ಟ್ 9ರಂದು ಆರ್.ಜಿ.ಕರ್ ಆಸ್ಪತ್ರೆಯ ಸೆಮಿನಾರ್ ಹಾಲ್ ನಲ್ಲಿ ಸ್ನಾತಕೋತ್ತರ ಟ್ರೈನಿ ವೈದ್ಯೆಯ ಅತ್ಯಾಚಾರ ಮತ್ತು ಕೊಲೆ ಪ್ರಕರಣ ನಡೆದಿತ್ತು. ಅಪರಾಧಿಗೆ ಈಗಾಗಲೇ ಸ್ಥಳೀಯ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿದೆ.