ಆರ್‌ಜಿ ಕರ್ ಪ್ರತಿಭಟನೆ | ಪೊಲೀಸ್ ಕಸ್ಟಡಿಯಲ್ಲಿ ಚಿತ್ರಹಿಂಸೆ ಪ್ರಕರಣ; ಎಸ್‌ಐಟಿ ತನಿಖೆಗೆ ಆದೇಶ

Date:

ಕೋಲ್ಕತ್ತಾದ ಆರ್‌ಜಿ ಕರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ವೈದ್ಯೆಯ ಅತ್ಯಾಚಾರ ಮತ್ತು ಹತ್ಯೆಯನ್ನು ಖಂಡಿಸಿ ಪ್ರತಿಭಟಿಸಿದ ಮಹಿಳೆಗೆ ಪೊಲೀಸ್ ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಬಗ್ಗೆ ತನಿಖೆಗೆ ವಿಶೇಷಾ ತನಿಖಾ ತಂಡ (ಎಸ್‌ಐಟಿ) ರಚನೆಗೆ ಸುಪ್ರೀಂ ಕೋರ್ಟ್ ಆದೇಶಿಸಿದೆ.

- Advertisement -

ಪ್ರತಿಭಟನಾಕಾರರನ್ನು ಪೊಲೀಸರು ಬಂಧಿಸಿದ್ದರು. ಈ ಬಂಧನದ ವೇಳೆ ಮಹಿಳೆಯೋರ್ವರಿಗೆ ಚಿತ್ರಹಿಂಸೆ ನೀಡಲಾಗಿದೆ ಎಂದು ಆರೋಪಿಸಲಾಗಿದೆ. ಈ ಬಗ್ಗೆ ಎಸ್‌ಐಸಿ ತನಿಖೆಗೆ ಸುಪ್ರೀಂ ಸೋಮವಾರ ಆದೇಶ ನೀಡಿದೆ. ಹಾಗೆಯೇ ಎಲ್ಲಾ ಪ್ರಕರಣವನ್ನು ಸಿಬಿಐಗೆ ವರ್ಗಾಯಿಸಲು ಸಾಧ್ಯವಿಲ್ಲ ಎಂದು ಪೀಠ ತಿಳಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

ಇದನ್ನು ಓದಿದ್ದೀರಾ? ಕೋಲ್ಕತ್ತಾ ಆರ್‌ಜಿ ಕರ್ ಕಾಲೇಜಿನ ಮಾಜಿ ಪ್ರಾಂಶುಪಾಲರ ಮನೆ ಮೇಲೆ ಇಡಿ ದಾಳಿ

ಈ ಹಿಂದೆ ಈ ಪ್ರಕರಣವನ್ನು ಸಿಬಿಐ ತನಿಖೆಗೆ ನೀಡಿ ಕೋಲ್ಕತ್ತಾ ಹೈಕೋರ್ಟ್ ಆದೇಶ ನೀಡಿತ್ತು. ಕೋಲ್ಕತ್ತಾ ಹೈಕೋರ್ಟ್‌ನ ಆದೇಶವನ್ನು ನ್ಯಾಯಮೂರ್ತಿಗಳಾದ ಸೂರ್ಯ ಕಾಂತ್ ಮತ್ತು ಉಜ್ಜಲ್ ಭುಯಾನ್ ಪೀಠವು ಬದಿಗೊತ್ತಿದೆ. ಹಾಗೆಯೇ ರಾಜ್ಯದ ಹಿರಿಯ ಐಪಿಎಸ್ ಅಧಿಕಾರಿಗಳಿಗೆ ತನಿಖೆಯನ್ನು ವಹಿಸಬೇಕಾಗಿದೆ ಎಂದು ಸುಪ್ರೀಂ ಕೋರ್ಟ್ ಹೇಳಿದೆ.

ಎಸ್‌ಐಟಿಗೆ ಅಧಿಕಾರಿಗಳ ಹೆಸರುಗಳನ್ನು ರಾಜ್ಯ ಸರ್ಕಾರ ಸಲ್ಲಿಸಬೇಕು. ಎಸ್‌ಐಟಿ ತನಿಖೆಯ ಪ್ರಗತಿಯ ವರದಿಯನ್ನು ವಾರಕ್ಕೊಮ್ಮೆ ಹೈಕೋರ್ಟ್‌ಗೆ ಸಲ್ಲಿಸಬೇಕು ಎಂದು ಸುಪ್ರೀಂ ಕೋರ್ಟ್ ತಿಳಿಸಿದೆ. ಜೊತೆಗೆ ಕೋಲ್ಕತ್ತಾ ಹೈಕೋರ್ಟ್‌ನ ಮುಖ್ಯ ನ್ಯಾಯಾಧೀಶರಿಗೆ ವಿಶೇಷ ಪೀಠವನ್ನು ರಚಿಸುವಂತೆ ಸೂಚಿಸಲಾಗಿದೆ. ಎಸ್‌ಐಟಿ ಈ ವಿಶೇಷ ಪೀಠದ ಮುಂದೆ ವರದಿ ಸಲ್ಲಿಸಬೇಕು ಎಂದು ಸುಪ್ರೀಂ ಕೋರ್ಟ್ ತಿಳಿಸಿದೆ.

ದೂರುದಾರರಾದ ರೆಬೆಕಾ ಖಾತುನ್ ಮೊಲ್ಲಾ ಮತ್ತು ರಾಮ ದಾಸ್ ಅವರನ್ನು ಸೆಪ್ಟೆಂಬರ್ 7ರಂದು ಬಂಧಿಸಲಾಗಿದೆ. ಮರುದಿನ ಡೈಮಂಡ್ ಹಾರ್ಬರ್ ನ್ಯಾಯಾಲಯವು ನ್ಯಾಯಾಂಗ ಬಂಧನಕ್ಕೆ ಆದೇಶಿಸುವವರೆಗೆ ಡೈಮಂಡ್ ಹಾರ್ಬರ್ ಜಿಲ್ಲೆಯ ಫಾಲ್ಟಾ ಪೊಲೀಸ್ ಠಾಣೆಯ ವಶದಲ್ಲಿಯೇ ಇದ್ದರು ಎಂದು ಹೇಳಲಾಗಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ನ್ಯಾಯಾಂಗದ ಮೇಲೆ ಗೌರವವಿದೆ, ತಪ್ಪಾಗಿದ್ದರೆ ಕ್ಷಮೆಯಾಚಿಸುವೆ: ಸಂಜಯ್ ರಾವತ್

ಸುಪ್ರೀಂ ಕೋರ್ಟ್ ಕುರಿತು ತಾವು ನೀಡಿರುವ ಹೇಳಿಕೆಗಳು ಸೂಕ್ತವಲ್ಲ ಅಥವಾ ಅನುಚಿತ...

ವಿರಳಾತಿ ವಿರಳ ಪ್ರಕರಣ: ಮಾಲೆಗಾಂವ್ ಅಪ್ರಾಪ್ತೆಯ ಅತ್ಯಾಚಾರ, ಕೊಲೆ ಅಪರಾಧಿಗೆ ಮರಣದಂಡನೆ ಶಿಕ್ಷೆ

ಮಹಾರಾಷ್ಟ್ರದ ನಾಸಿಕ್ ಜಿಲ್ಲೆಯ ಮಾಲೆಗಾಂವ್ ತಾಲೂಕಿನ ಡೋಂಗರಾಳೆ ಗ್ರಾಮದಲ್ಲಿ ಸಾಡೇನಾಲ್ಕು ವರ್ಷದ...

ತಿರಂಗಾ ಮಾರ್ಚ್ ನಡೆಸದಂತೆ ಅಭಿಜೀತ್ ದೀಪ್ಕೆಗೆ ದೆಹಲಿ ಪೊಲೀಸರಿಂದ ನೋಟಿಸ್: ಮನೆಯ ಬಳಿ ಬಿಗಿ ಭದ್ರತೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ ಅವರು ದೆಹಲಿಯ...

​ಪ್ರತಿಭಟನೆಗಳ ವರದಿಗಾರಿಕೆಗೆ ಭಾರತೀಯ ಪ್ರೆಸ್ ಕೌನ್ಸಿಲ್‌ನಿಂದ ನೂತನ ಮಾರ್ಗದರ್ಶಿ ಸೂತ್ರಗಳ ಬಿಡುಗಡೆ

ಪ್ರತಿಭಟನೆಗಳು ಮತ್ತು ಧರಣಿ ಸತ್ಯಾಗ್ರಹಗಳ ಸಂದರ್ಭದಲ್ಲಿ ಪತ್ರಕರ್ತರ ಸುರಕ್ಷತೆಯನ್ನು ಕಾಯ್ದುಕೊಳ್ಳಲು, ಜವಾಬ್ದಾರಿಯುತ...