ವಿದ್ಯಾರ್ಥಿಗಳ ಮೇಲೆ ಪೆಲೆಟ್‌ ಗನ್ ದಾಳಿ ಮಾಡಿದ್ದ ಆರ್‌ಎಎಫ್‌; ಆರೋಪ-ತನಿಖೆಗಳ ನಡುವೆ ಸಿಆರ್‌ಪಿಎಫ್‌ಗೆ ಮೋದಿ-ಶಾ ಶ್ಲಾಘನೆ

Date:

ದೆಹಲಿಯಲ್ಲಿ ಜುಲೈ 20ರಂದು ನಡೆದ ವಿದ್ಯಾರ್ಥಿಗಳ ಪ್ರತಿಭಟನೆ ವೇಳೆ ನಿರಾಯುಧ ನಾಗರಿಕರ ಮೇಲೆ ಪೆಲೆಟ್ ಗನ್, ಅಶ್ರುವಾಯು, ಲಾಠಿ ಪ್ರಹಾರ ಹಾಗೂ ದೈಹಿಕ ಹಲ್ಲೆ ನಡೆಸಲಾಗಿದೆ ಎಂಬ ಗಂಭೀರ ಆರೋಪಗಳನ್ನು ಆರ್‌ಎಎಫ್‌ ಎದುರಿಸುತ್ತಿದೆ. ಆತಂರಿತ ತನಿಖೆಗಳು ನಡೆಯುತ್ತಿವೆ. ಇದೇ ಹೊತ್ತಿನಲ್ಲಿ, ಆರ್‌ಎಎಫ್‌ನ ಕಮಾಂಡ್‌ ಸಂಸ್ಥೆ ‘ಕೇಂದ್ರೀಯ ಮೀಸಲು ಪೊಲೀಸ್ ಪಡೆ’ (ಸಿಆರ್‌ಪಿಎಫ್‌)ಯನ್ನು ಪ್ರಧಾನಿ ಮೋದಿ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸಿಆರ್‌ಪಿಎಫ್‌ಅನ್ನು ಶ್ಲಾಘಿಸಿದ್ದಾರೆ. ದೇಶದಲ್ಲಿ ನಕ್ಸಲ್ ಹೋರಾಟಗಾರರನ್ನು ಭೀಕರವಾಗಿ ಕೊಂದಿದ್ದಕ್ಕೆ ಅಭಿನಂದನೆ ಸಲ್ಲಿಸಿದ್ದಾರೆ.

- Advertisement -

ಜುಲೈ 27ರಂದು ಸಿಆರ್‌ಪಿಎಫ್‌ ತನ್ನ ಸಂಸ್ಥಾಪನಾ ದಿನ ಆಚರಿಸಿಕೊಂಡಿದೆ. ಪ್ರಧಾನಿ ಮೋದಿ ಮತ್ತು ಅಮಿತ್ ಶಾ ತಮ್ಮ ಸಾಮಾಜಿಕ ಜಾಲತಾಣ ಖಾತೆಗಳಲ್ಲಿ ಸಿಆರ್‌ಪಿಎಫ್‌ಗೆ ಅಭಿನಂದನೆಯ ಪೋಸ್ಟ್‌ ಹಂಚಿಕೊಂಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಪ್ರಜಾಪ್ರಭುತ್ವದ ಕಗ್ಗೊಲೆ: ‘ಖಾಸಗಿತನ’ದ ನೆಪದಲ್ಲಿ ಪತ್ರಿಕಾ ಸ್ವಾತಂತ್ರ್ಯ ಹತ್ತಿಕ್ಕಲು...

ಮೋದಿ ಸರ್ಕಾರವು ಈ ಕಾಯ್ದೆಯನ್ನು ಏಕಾಏಕಿ ಜಾರಿಗೊಳಿಸದೆ, ಹಂತ ಹಂತವಾಗಿ ಜಾರಿಗೊಳಿಸುತ್ತಾ ಪ್ರಜಾಪ್ರಭುತ್ವದ ಕತ್ತು ಹಿಸುಕುತ್ತಿದೆ. ಆರ್‌ಟಿಐ ಕಾಯ್ದೆಯನ್ನು ದುರ್ಬಲಗೊಳಿಸುವ ತಿದ್ದುಪಡಿಯು ಈಗಾಗಲೇ ನವೆಂಬರ್ 2025ರಿಂದಲೇ ಜಾರಿಯಲ್ಲಿದ್ದರೆ, ಡೇಟಾ ಬಳಕೆಯ ಕಠಿಣ ನಿಯಮಗಳು...

ಬೆಂಗಳೂರು ಶಿಕ್ಷಕರ ಕ್ಷೇತ್ರದ ಸೋಲು: ಕಾಂಗ್ರೆಸ್ ಸರ್ಕಾರಕ್ಕೆ ಎಚ್ಚರಿಕೆಯ...

ಉಳಿದ ಮೂರು ವಿಧಾನ ಪರಿಷತ್‌ ಕ್ಷೇತ್ರಗಳಿಗಿಂತ ಬೆಂಗಳೂರು ಶಿಕ್ಷಕರ ಕ್ಷೇತ್ರದ ಫಲಿತಾಂಶ ರಾಜಕೀಯವಾಗಿ ಪರಿಣಾಮ ಬೀರಬಲ್ಲದು. ಡಿ.ಕೆ. ಶಿವಕುಮಾರ್‌ ಅವರ ನಾಯಕತ್ವವನ್ನು ಓರೆಗೆ ಹಚ್ಚಬಲ್ಲದು. ಒಕ್ಕಲಿಗ ಪ್ರಾಬಲ್ಯದ ಪ್ರದೇಶಗಳ ಒಲವು-ನಿಲುವುಗಳನ್ನು ತಿಳಿಸಬಲ್ಲದು. ಆದರೆ,...

ಬ್ರೆಜಿಲ್‌ನಲ್ಲಿ ಒಂದೇ ಹುದ್ದೆಗೆ ಎರಡು ಬಾರಿ ಚುನಾವಣೆ: ಏನಿದು...

ಭಾರತಕ್ಕೂ ಎರಡನೇ ಸುತ್ತಿನ ಪದ್ಧತಿ ಅಗತ್ಯವಿದೆಯೇ ಎಂಬ ಚರ್ಚೆ ಆಗಿಂದಾಗ್ಗೆ ಮುನ್ನೆಲೆಗೆ ಬರುತ್ತಲೇ ಇರುತ್ತದೆ. ಹಲವು ಅಭ್ಯರ್ಥಿಗಳು ಕಣದಲ್ಲಿರುವಾಗ ಮತಗಳು ಹಂಚಿಹೋಗಿ, ಕೇವಲ ಶೇ 30 ಅಥವಾ 40ರಷ್ಟು ಮತ ಪಡೆದವರೂ ನಮ್ಮಲ್ಲಿ...

ಪ್ರಧಾನಿ ಮೋದಿ, “ಸಿಆರ್‌ಪಿಎಫ್ ಸಿಬ್ಬಂದಿಗೆ ಸಂಸ್ಥಾಪನಾ ದಿನದ ಶುಭಾಶಯಗಳು. ಅಚಲ ಧೈರ್ಯ ಮತ್ತು ಕರ್ತವ್ಯನಿಷ್ಠೆಯಿಂದ ಸಿಆರ್‌ಪಿಎಫ್ ದೇಶಕ್ಕೆ ವಿಶಿಷ್ಟ ಸೇವೆ ಸಲ್ಲಿಸಿದೆ. ಆಂತರಿಕ ಭದ್ರತೆಯಿಂದ ಹಿಡಿದು ಸಂಕಷ್ಟದ ಸಂದರ್ಭಗಳಲ್ಲಿ ನಾಗರಿಕರಿಗೆ ನೆರವಾಗುವವರೆಗೆ, ಈ ಪಡೆ ಯಾವಾಗಲೂ ರಾಷ್ಟ್ರದ ಹಿತವನ್ನೇ ಆದ್ಯತೆಯಾಗಿ ಪರಿಗಣಿಸಿದೆ” ಎಂದು ಹೇಳಿದ್ದಾರೆ.

“ಮಾವೋವಾದದ ಭೀತಿಯನ್ನು ನಿರ್ಮೂಲನೆ ಮಾಡುವಲ್ಲಿ ಸಿಆರ್‌ಪಿಎಫ್‌ನ ಪ್ರಯತ್ನಗಳು ಗಮನಾರ್ಹವಾಗಿದ್ದು, ಅನೇಕ ಜನರ ಜೀವನದಲ್ಲಿ ಶಾಂತಿ ಮತ್ತು ಅಭಿವೃದ್ಧಿಗೆ ಕಾರಣವಾಗಿವೆ” ಎಂದು ಮೋದಿ ಹೇಳಿದ್ದಾರೆ.

ಕೇಂದ್ರ ಗೃಹ ಸಚಿವ ಅಮಿತ್ ಶಾ ಕೂಡ ಸಿಆರ್‌ಪಿಎಫ್‌ಗೆ ಅಭಿನಂದನೆ ಸಲ್ಲಿಸಿದ್ದು, “ದೇಶದ ಆಂತರಿಕ ಭದ್ರತೆಯನ್ನು ಕಾಪಾಡುವ ಪ್ರತಿಯೊಂದು ಹೋರಾಟದಲ್ಲೂ ಸಿಆರ್‌ಪಿಎಫ್ ಹೆಮ್ಮೆಯ ಮೈಲಿಗಲ್ಲುಗಳನ್ನು ನಿರ್ಮಿಸಿದೆ. ನಕ್ಸಲವಾದವನ್ನು ಮಟ್ಟಹಾಕುವುದರಿಂದ ಹಿಡಿದು ದೇಶದ ಶಾಂತಿ ಮತ್ತು ಪ್ರಗತಿಯನ್ನು ರಕ್ಷಿಸುವವರೆಗೆ ಈ ಪಡೆ ರಾಷ್ಟ್ರದ ನಿರೀಕ್ಷೆಗಳನ್ನು ಸದಾ ಈಡೇರಿಸಿದೆ” ಎಂದು ಹೇಳಿದ್ದಾರೆ.

ಈ ಪ್ರಶಂಸೆಯ ನಡುವೆಯೇ, ಕಳೆದ ವಾರ ವಿದ್ಯಾರ್ಥಿಗಳ ಪ್ರತಿಭಟನೆ ವೇಳೆ ರ್ಯಾಪಿಡ್ ಆಕ್ಷನ್ ಫೋರ್ಸ್ (ಆರ್‌ಎಎಫ್) ನಿರಾಯುಧ ಪ್ರತಿಭಟನಾಕಾರರ ವಿರುದ್ಧ ಪೆಲೆಟ್ ಗನ್ ಬಳಸಿದೆ ಎಂಬ ಆರೋಪಗಳು ತೀವ್ರ ಚರ್ಚೆಗೆ ಕಾರಣವಾಗಿವೆ.

ಈ ಆರೋಪಗಳ ಹಿನ್ನೆಲೆಯಲ್ಲಿ ಜುಲೈ 24ರಂದು ಸಿಆರ್‌ಪಿಎಫ್ ತನಿಖೆ ಆರಂಭಿಸಿತ್ತು. ತನಿಖೆಯಲ್ಲಿ ಆರ್‌ಎಎಫ್‌ನ ಒಬ್ಬ ಯೋಧ ಕನಿಷ್ಠ ಏಳು ಸುತ್ತು ಪೆಲೆಟ್ ಗುಂಡು ಹಾರಿಸಿದ್ದು, ಅದರಲ್ಲಿ ಐದು ಗುಂಡುಗಳು ನಿರಾಯುಧ ಪ್ರತಿಭಟನಾಕಾರರ ದೇಹವನ್ನು ಹೊಕ್ಕಿವೆ ಎಂಬ ಮಾಹಿತಿ ಬಹಿರಂಗವಾಗಿದೆ ಎಂದು ವರದಿಯಾಗಿದೆ.

ಈ ಲೇಖನ ಓದಿದ್ದೀರಾ?: ಸಮಿತಿಯ ಮೇಲೆ ಸಮಿತಿ: ಪರೀಕ್ಷಾ ಸುಧಾರಣೆಯೇ? ವಿದ್ಯಾರ್ಥಿಗಳ ಕಣ್ಣಿಗೆ ಮಣ್ಣೆರಚುವ ತಂತ್ರವೇ?

ಇದರ ಜೊತೆಗೆ, ಸಂಸತ್ ಮಾರ್ಗ ಪೊಲೀಸ್ ಠಾಣೆಯ ದಿನಚರಿ ದಾಖಲೆಯ ಪ್ರಕಾರ, ಪ್ರತಿಭಟನಾಕಾರರ ವಿರುದ್ಧ ಗಲಭೆ ನಿಯಂತ್ರಣ ಶಸ್ತ್ರಾಸ್ತ್ರಗಳನ್ನು ಬಳಸುವಂತೆ ದೆಹಲಿ ಪೊಲೀಸ್ ಉಪ ಆಯುಕ್ತರು (ಡಿಸಿಪಿ) ಆರ್‌ಎಎಫ್‌ಗೆ ಸೂಚನೆ ನೀಡಿದ್ದರು ಎನ್ನಲಾಗಿದೆ. ಕಳೆದ ವಾರ ಪ್ರತಿಭಟನಾಕಾರರ ವಿರುದ್ಧ ಪೆಲೆಟ್ ಗನ್ ಬಳಸಿಲ್ಲ ಎಂದು ದೆಹಲಿ ಪೊಲೀಸರು ನೀಡಿದ್ದ ಹೇಳಿಕೆಗಳ ನಂತರ ಈ ಬೆಳವಣಿಗೆಗಳು ಮಹತ್ವ ಪಡೆದಿವೆ.

ವಿದ್ಯಾರ್ಥಿಗಳ ಪ್ರತಿಭಟನೆ ಸಂದರ್ಭದಲ್ಲಿ ಭದ್ರತಾ ಪಡೆಗಳು ನಡೆಸಿದ ದೌರ್ಜನ್ಯಗಳ ಕುರಿತು ಚರ್ಚೆಗಳು ನಡೆಯುತ್ತಿರುವಾಗಲೇ, ಸಿಆರ್‌ಪಿಎಫ್‌ಗೆ ಕೇಂದ್ರ ಸರ್ಕಾರದಿಂದ ಪ್ರಶಂಸೆ ವ್ಯಕ್ತವಾಗಿರುವುದು, ರಾಜಕೀಯ ಮತ್ತು ಸಾರ್ವಜನಿಕ ವಿರೋಧಕ್ಕೆ ಗುರಿಯಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್‌ | ನ.1ರಂದು ಸಚಿವ ಈಶ್ವರ ಖಂಡ್ರೆಗೆ ಅಭಿನಂದನಾ ಸಮಾರಂಭ

ಬೀದರ್‌ ತಾಲ್ಲೂಕಿನ ಅತಿವಾಳ ಸಮೀಪ ಡಾ. ಬಿ.ಆರ್. ಅಂಬೇಡ್ಕರ್ ಅಧ್ಯಯನ ಮತ್ತು...

ಬೀದರ್‌ | ವಾಲ್ಮೀಕಿ ರಾಮಾಯಣ ಮಾನವ ಸಂಬಂಧಗಳ ಮೌಲ್ಯ ಸಾರುತ್ತದೆ: ನಾ.ಗೀತಾಚಾರ್ಯ

ಮಹರ್ಷಿ ವಾಲ್ಮೀಕಿ ರಚಿಸಿದ ರಾಮಾಯಣವು ಮಾನವ ಸಂಬಂಧಗಳ ಮಹತ್ವ, ಕುಟುಂಬದ ಜವಾಬ್ದಾರಿ,...

ಔಷಧ ಮಾರಾಟದಲ್ಲಿ ಲೂಟಿ! MRP-ಮಾರಾಟ ದರದ ನಡುವೆ ಇಷ್ಟೊಂದು ಅಂತರವೇಕೆ?: ಕೇಂದ್ರಕ್ಕೆ ಸುಪ್ರೀಂ ಪ್ರಶ್ನೆ

ಭಾರತದಲ್ಲಿ ಔಷಧಿಗಳ ಗರಿಷ್ಠ ಚಿಲ್ಲರೆ ಬೆಲೆ (MRP) ಮತ್ತು ಚಿಲ್ಲರೆ ವ್ಯಾಪಾರಿಗಳು...

ಅಂತಿಮ ಮತದಾರರ ಪಟ್ಟಿ ಪ್ರಕಟ: ಧಾರವಾಡ ಜಿಲ್ಲೆಯಲ್ಲಿ 13.78 ಲಕ್ಷ ಮತದಾರರು

15,151 ಯುವ ಮತದಾರರ ಮೊದಲ ಬಾರಿ ನೋಂದಣಿ, 6,305 ಹೆಸರು ಡಿಲೀಟ್,...