ಶಬರಿಮಲೆ ಚಿನ್ನ ಕಳ್ಳತನದ ಬಗ್ಗೆ ಮೋದಿ ಮೌನ : ರಾಹುಲ್‌ ಆಕ್ರೋಶ

Date:

ದೇಶದ ಇತರೆ ಭಾಗಗಳಲ್ಲಿ ಅಲ್ಪಸಂಖ್ಯಾತರ ಮೇಲೆ ದಾಳಿ ಮಾಡುವವರ ಜೊತೆಗೆ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಶಾಮೀಲಾಗಿದ್ದಾರೆ ಎಂದು ಕಾಂಗ್ರೆಸ್‌ ನಾಯಕ, ಲೋಕಸಭೆಯ ವಿಪಕ್ಷಗಳ ನಾಯಕ ರಾಹುಲ್ ಗಾಂಧಿ ಗಂಭೀರ ಆರೋಪ ಮಾಡಿದ್ದಾರೆ.

ಚುನಾವಣಾ ಪ್ರಚಾರ ಸಭೆಯನ್ನುದ್ದೇಶಿಸಿ ಮಾತನಾಡಿದ ರಾಗಾ, ಬಿಜೆಪಿ-ಎಲ್‌ಡಿಎಫ್ ನಡುವಿನ ಹೊಂದಾಣಿಕೆಯ ಆರೋಪವನ್ನು ಪುನರುಚ್ಚರಿಸಿದರು. ಚುನಾವಣಾ ಪ್ರಚಾರದ ಸಮಯದಲ್ಲಿ ಪ್ರಧಾನಿ ನರೇಂದ್ರ ಮೋದಿ ಶಬರಿಮಲೆ ವಿಷಯದ ಬಗ್ಗೆ ಮಾತನಾಡಲಿಲ್ಲ ಎಂದು ಹೇಳಿದ್ದಾರೆ.

ಮೋದಿ ಅವರು ತಮ್ಮ ಭಾಷಣಗಳಲ್ಲಿ ಧರ್ಮ ಮತ್ತು ದೇವಾಲಯಗಳ ಬಗ್ಗೆ ಆಗಾಗ್ಗೆ ಮಾತನಾಡುತ್ತಾರೆ. ಚುನಾವಣೆ ಲಾಭಗಳಿದ್ದರೆ ಅಷ್ಟೇ ಅವರು ಧರ್ಮಗಳ ಬಗ್ಗೆ ಮಾತನಾಡುತ್ತಾರೆ ಎಂದು ಆರೋಪಿಸಿರುವ ರಾಹುಲ್, ಕೇರಳದಲ್ಲಿ ಶಬರಿಮಲೆ ಚಿನ್ನ ಕಳ್ಳತನ ಪ್ರಕರಣದ ಬಗ್ಗೆ ಮೌನವಾಗಿದ್ದಾರೆ ಏಕೆ ಎಂದು ಪ್ರಶ್ನಿಸಿದ್ದಾರೆ.

- Advertisement -

‘ಬಿಜೆಪಿ ಹಾಗೂ ಆರ್‌ಎಸ್ಎಸ್ ನನ್ನ ಮೇಲೆ ಸದಾ ದಾಳಿ ಮಾಡುತ್ತವೆ, ನನ್ನ ವಿರುದ್ಧ ಪ್ರಕರಣಗಳನ್ನು ದಾಖಲಿಸುತ್ತವೆ. ಆದರೆ, ಪ್ರಧಾನಿ ಮೋದಿ ಕೇರಳ ಮುಖ್ಯಮಂತ್ರಿ ಅಥವಾ ಅವರ ಕುಟುಂಬದ ವಿರುದ್ಧ ಯಾಕೆ ಯಾವುದೇ ಕ್ರಮ ತೆಗೆದುಕೊಳ್ಳುತ್ತಿಲ್ಲ?’ ಎಂದು ಆಕ್ರೋಶ ಹೊರ ಹಾಕಿದ್ದಾರೆ.

ಏಪ್ರಿಲ್ 9ರಂದು ಕೇರಳ ವಿಧಾನಸಭಾ ಚುನಾವಣೆ ನಡೆಯಲಿದೆ. ಮೇ 4ರಂದು ಚುನಾವಣಾ ಫಲಿತಾಂಶ ಹೊರಬೀಳಲಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಜಾ, ಕ್ಷಮೆ, ಮರುನೇಮಕ: ಸೋದರಳಿಯ ಆಕಾಶ್ ಆನಂದ್’ಗೆ ಮೂರನೇ ಬಾರಿಗೆ ಮಣೆಹಾಕಿದ ಮಾಯಾವತಿ

ಬಹುಜನ ಸಮಾಜ ಪಕ್ಷದ (ಬಿಎಸ್‌ಪಿ) ರಾಷ್ಟ್ರೀಯ ಸಂಚಾಲಕ ಹುದ್ದೆಯಿಂದ ಸೋದರಳಿಯ ಆಕಾಶ್...

SIR ನಲ್ಲಿ ದೊಡ್ಡ ಪ್ರಮಾಣದ Form 7 ಅರ್ಜಿಗಳ ಸಲ್ಲಿಕೆ  ಆರೋಪ; ಕ್ರಮಕ್ಕೆ ತೆಲಂಗಾಣ ಚುನಾವಣಾ ಆಯುಕ್ತರ ಆದೇಶ

ಹೈದರಾಬಾದ್: ಪ್ರಸ್ತುತ ನಡೆಯುತ್ತಿರುವ SIR ಪ್ರಕ್ರಿಯೆಯಲ್ಲಿ  ದೊಡ್ಡ ಪ್ರಮಾಣದಲ್ಲಿ ನಕಲಿ Form...

Form 6 ಬದಲಾಯಿಸಿದ್ದು ಯಾರು, ದಾಖಲೆ ಕೊಡಿ; ಚುನಾವಣಾ ಆಯೋಗಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಹೊಸ ಮತದಾರರ ಹೆಸರುಗಳನ್ನು ಮತದಾರರ ಪಟ್ಟಿಗೆ ಸೇರ್ಪಡೆಗೊಳಿಸಲು ಬಳಸುವ Form 6ನಲ್ಲಿ...

ಬಂಗಾಳ SIR | ನೋಟಿಸ್ ನೀಡಲು, ಹೆಸರು ಮರು ಸೇರಿಸಲು ಸಾಧ್ಯವಿಲ್ಲ: EC ಪೋರ್ಟಲ್ ವಿರುದ್ಧ ನ್ಯಾಯಾಧೀಶರ ದೂರು

ಪಶ್ಚಿಮ ಬಂಗಾಳದಲ್ಲಿ SIR ವೇಳೆ ಮತದಾರರ ಪಟ್ಟಿಯಿಂದ ಹೊರಗಿಡಲಾದವರ ಮೇಲ್ಮನವಿಗಳ ವಿಚಾರಣೆ...