ಎಲ್ಲರ ಮೇಲೆ ತನ್ನದೇ ಆದ ಸತ್ಯ ಹೇರಲು ಯತ್ನ: RSS ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

Date:

ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್) ದೇಶದ 150 ಕೋಟಿ ಜನರ ಮೇಲೆಯೂ ತನ್ನದೇ ಆದ ಸತ್ಯ ಹಾಗೂ ವಿಚಾರಧಾರೆಯನ್ನು ಬಲವಂತವಾಗಿ ಹೇರಲು ಯತ್ನಿಸುತ್ತಿದೆ ಎಂದು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಆರೋಪಿಸಿದ್ದಾರೆ. ಈ ಮೂಲಕ ಬಿಜೆಪಿ, ಆರ್‌ಎಸ್‌ಎಸ್ ವಿರುದ್ಧ ಸೈದ್ಧಾಂತಿಕ ದಾಳಿಯನ್ನು ತೀವ್ರಗೊಳಿಸಿದ್ದಾರೆ.

- Advertisement -

ದೆಹಲಿಯಲ್ಲಿ ನಡೆದ “ರಾಜೀವ್ ಗಾಂಧಿಯವರ ದೂರದೃಷ್ಟಿಗೆ ಗೌರವ” ಕಾರ್ಯಕ್ರಮದಲ್ಲಿ ಮಾತನಾಡಿದ ರಾಹುಲ್ ಗಾಂಧಿ, ಆರ್‌ಎಸ್‌ಎಸ್ ವಿಚಾರಧಾರೆ ಹಾಗೂ ಮಹಾತ್ಮ ಗಾಂಧೀಜಿಯವರ ‘ಸ್ವರಾಜ್’ ಪರಿಕಲ್ಪನೆಗಳ ನಡುವಿನ ವ್ಯತ್ಯಾಸವನ್ನು ವಿವರಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಸಂಪತ್ತು ಮತ್ತು ಮನುಷ್ಯನ ನೈತಿಕತೆ: ಅರ್ಥಶಾಸ್ತ್ರದ ಇಗ್ ನೊಬೆಲ್...

ಪ್ರತಿವರ್ಷ ನೊಬೆಲ್ ಪ್ರಶಸ್ತಿ ಘೋಷಣೆಯಾಗುವ ಕೆಲವೇ ದಿನಗಳ ಮೊದಲು ಹಾರ್ವರ್ಡ್ ವಿಶ್ವವಿದ್ಯಾಲಯದಲ್ಲಿ ನೊಬೆಲ್ ಪುರಸ್ಕೃತರ ಸಮ್ಮುಖದಲ್ಲೇ ಇಗ್ ನೊಬೆಲ್ ಪ್ರಶಸ್ತಿಗಳನ್ನು ಪ್ರದಾನ ಮಾಡಲಾಗುತ್ತದೆ. "ಮೊದಲು ಜನರನ್ನು ನಗಿಸಬೇಕು, ನಂತರ ಅವರನ್ನು ಆಳವಾಗಿ ಯೋಚಿಸುವಂತೆ...

ಆಗ್ನೇಯ ಪದವೀಧರ ಕ್ಷೇತ್ರ: ಕಾಂಗ್ರೆಸ್-ಬಿಜೆಪಿ ನಡುವೆ ಬಿರುಸಿನ ಸ್ಪರ್ಧೆ!

ವಿಧಾನ ಪರಿಷತ್ತಿನ ಕರ್ನಾಟಕ ಆಗ್ನೇಯ ಪದವೀಧರ ಕ್ಷೇತ್ರದ ಚುನಾವಣೆ ಕಾವು ಪಡೆದುಕೊಂಡಿದ್ದು, ಬಿಜೆಪಿ–ಜೆಡಿಎಸ್ ಮೈತ್ರಿ ಮತ್ತು ಕಾಂಗ್ರೆಸ್ ನಡುವೆ ನೇರ ಹಣಾಹಣಿಯ ವಾತಾವರಣ ನಿರ್ಮಾಣವಾಗಿದೆ. ಕಾಂಗ್ರೆಸ್‌ನಿಂದ ಶಶಿ ಹುಲಿಕುಂಟೆಮಠ ಹಾಗೂ ಬಿಜೆಪಿ ಅಭ್ಯರ್ಥಿಯಾಗಿ...

ವಿಜಯಪುರ | ಪ್ಲಾಟ್‌ಫಾರ್ಮ್‌ ಮೇಲೆ ಹರಿವ ಚರಂಡಿ ನೀರು;...

"ಚರಂಡಿ ನೀರಿನ್ಯಾಗ ದಿನ ಹೋಗಾಕ ಹತ್ತಿವಿ…" ಇದು ವಿಜಯಪುರ ಕೇಂದ್ರ ಬಸ್ ನಿಲ್ದಾಣಕ್ಕೆ ಪ್ರತಿನಿತ್ಯ ಆಗಮಿಸುವ ಸಾವಿರಾರು ಪ್ರಯಾಣಿಕರ ಅಳಲು. ಪ್ಲಾಟ್‌ಫಾರ್ಮ್‌-1ರಲ್ಲಿ ಕೊಳಚೆ ನೀರು ಹರಿಯುತ್ತಿದ್ದರೂ, ಸಂಬಂಧಪಟ್ಟ ಅಧಿಕಾರಿಗಳು ಮಾತ್ರ ಜವಾಬ್ದಾರಿಯಿಂದ...

ಇದನ್ನೂ ಓದಿ: RSS, BJP ವಿರುದ್ಧ ಹೋರಾಡುವ ದೇಶದ ಏಕೈಕ ನಾಯಕ ರಾಹುಲ್‌ ಗಾಂಧಿ : RS MP ಕ್ರಿಸ್ಟೋಫರ್ ತಿಲಕ್

“ಇಂದು ಭಾರತದಲ್ಲಿ ನಡೆಯುತ್ತಿರುವ ನೈಜ ವೈಚಾರಿಕ ಹೋರಾಟವು ಕೇವಲ ರಾಜಕೀಯ, ಪರಿಸರ ಅಥವಾ ಮಾಧ್ಯಮದ ಸ್ವಾತಂತ್ರ್ಯಕ್ಕೆ ಮಾತ್ರ ಸೀಮಿತವಾಗಿಲ್ಲ; ಇವೆಲ್ಲವೂ ಮೂಲ ಸಮಸ್ಯೆಯ ಲಕ್ಷಣಗಳಷ್ಟೇ. ವ್ಯವಸ್ಥೆಯನ್ನು ತಮ್ಮ ನಿಯಂತ್ರಣದಲ್ಲಿಟ್ಟುಕೊಂಡಿರುವ ಸಣ್ಣ ಗುಂಪೊಂದು, ದೇಶದ ಪ್ರತಿಯೊಬ್ಬ ವ್ಯಕ್ತಿಯ ಸತ್ಯ ಏನು ಎಂಬುದು ತಮಗೇ ಗೊತ್ತು ಎಂದು ನಿರ್ಧರಿಸಿರುವುದೇ ಮುಖ್ಯ ಹೋರಾಟವಾಗಿದೆ” ಎಂದು ತಿಳಿಸಿದರು.

ಇನ್ನು, “150 ಕೋಟಿ ಭಾರತೀಯರ ಸತ್ಯ ತಮಗೆ ತಿಳಿದಿದೆ ಎಂದು ಆರ್‌ಎಸ್‌ಎಸ್ ಭಾವಿಸಿದೆ. ಆದರೆ ಅದನ್ನು ಒಪ್ಪಲು ಸಾಧ್ಯವಿಲ್ಲ. ಪ್ರತಿಯೊಬ್ಬ ವ್ಯಕ್ತಿಯೂ ತನ್ನದೇ ಆದ ಸತ್ಯವನ್ನು ಕಂಡುಕೊಳ್ಳುವ ಹಕ್ಕನ್ನು ಹೊಂದಿದ್ದಾನೆ” ಎಂದೂ ಈ ಸಂದರ್ಭದಲ್ಲೇ ರಾಹುಲ್ ಗಾಂಧಿ ಪ್ರತಿಪಾದಿಸಿದರು.

ಮಹಾತ್ಮ ಗಾಂಧಿಯವರ ಆತ್ಮಚರಿತ್ರೆಯ ಹೆಸರು ‘ದಿ ಟ್ರೂತ್’ (ಸತ್ಯ) ಎಂದಲ್ಲ, ‘ಮೈ ಎಕ್ಸ್‌ಪರಿಮೆಂಟ್ಸ್ ವಿತ್ ಟ್ರೂತ್’ (ಸತ್ಯದೊಂದಿಗೆ ನನ್ನ ಪ್ರಯೋಗಗಳು) ಎಂದಾಗಿದೆ ಎಂಬುದನ್ನು ಉಲ್ಲೇಖಿಸಿದ ಅವರು, ಪ್ರತಿಯೊಬ್ಬ ವ್ಯಕ್ತಿಯ ಜೀವನ ಪಯಣ, ತಂದೆ-ತಾಯಿ, ಅನುಭವಗಳು ಬೇರೆ ಬೇರೆಯಾಗಿರುತ್ತವೆ. ಹೀಗಿರುವಾಗ ಒಬ್ಬರು ಇನ್ನೊಬ್ಬರ ಸತ್ಯವನ್ನು ನಿರ್ಧರಿಸಲು ಹೇಗೆ ಸಾಧ್ಯ ಎಂದು ಪ್ರಶ್ನಿಸಿದರು.

ಮುಂದುವರಿದು ಮಾತನಾಡಿದ ರಾಹುಲ್ ಗಾಂಧಿ, ಬಿಜೆಪಿ ಹಾಗೂ ಆರ್‌ಎಸ್‌ಎಸ್ ವಿವಿಧ ಸಮುದಾಯಗಳು, ಅಲ್ಪಸಂಖ್ಯಾತರು, ದಲಿತರು ಮತ್ತು ಆದಿವಾಸಿಗಳಲ್ಲಿ ಹೊರಗಿನವರು ಎಂಬ ಭಾವನೆಯನ್ನು ಸೃಷ್ಟಿಸುತ್ತಿದೆ. ಇದು ‘ಭಾರತ ಮಾತೆ’ಗೆ ಹಾನಿ ಉಂಟುಮಾಡುತ್ತಿದೆ ಎಂದು ಆರೋಪಿಸಿದರು.

ದೇಶದ ಪ್ರತಿಯೊಬ್ಬ ನಾಗರಿಕನೂ ಧರ್ಮ, ಸಮುದಾಯ ಅಥವಾ ಲಿಂಗಭೇದವಿಲ್ಲದೆ ತಾನು ಈ ದೇಶಕ್ಕೆ ಸೇರಿದವನು ಮತ್ತು ಗೌರವಿಸಲ್ಪಡುವವನು ಎಂಬ ಭಾವನೆಯನ್ನು ಹೊಂದಿರಬೇಕು ಎಂದು ಅವರು ಅಭಿಪ್ರಾಯಪಟ್ಟರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಸಿಇಒ ಹೇಮಂತ್‌ಗೆ ಬೀಳ್ಕೊಡುಗೆ; ನೂತನ ಸಿಇಒ ರಿಷಿ ಆನಂದ್‌ ಸ್ವಾಗತಿಸಿದ ಜಿ.ಪಂ

ಶಿವಮೊಗ್ಗ ಜಿಲ್ಲಾಡಳಿತ ಹಾಗೂ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ, ನಿಕಟಪೂರ್ವ...

ಆಗ್ನೇಯ ಪದವೀಧರ ಕ್ಷೇತ್ರ: ಕಾಂಗ್ರೆಸ್-ಬಿಜೆಪಿ ನಡುವೆ ಬಿರುಸಿನ ಸ್ಪರ್ಧೆ!

ವಿಧಾನ ಪರಿಷತ್ತಿನ ಕರ್ನಾಟಕ ಆಗ್ನೇಯ ಪದವೀಧರ ಕ್ಷೇತ್ರದ ಚುನಾವಣೆ ಕಾವು ಪಡೆದುಕೊಂಡಿದ್ದು,...

ದೆಹಲಿಯಲ್ಲಿ ಪತ್ರಕರ್ತೆಯರ ಮೇಲೆ ಪೊಲೀಸ್ ದೌರ್ಜನ್ಯ: ಕ್ರಮಕ್ಕೆ ಶಿವಮೊಗ್ಗ ಕಾನಿಪಸ ಆಗ್ರಹ

ದೆಹಲಿಯ ಜಂತರ್‌ ಮಂತರ್‌ನಲ್ಲಿ ಮುಖ್ಯ ಚುನಾವಣಾ ಆಯುಕ್ತರ ರಾಜಿನಾಮೆಗೆ ಆಗ್ರಹಿಸಿ ನಡೆಯುತ್ತಿರುವ...

ತೀರ್ಥಹಳ್ಳಿ | ಮತಪಟ್ಟಿಯಿಂದ ಮುಸ್ಲಿಮರ ಹೆಸರು ಅಳಿಸಲು ಬಿಜೆಪಿ ಸಂಚು? ತಹಶೀಲ್ದಾರ್‌ಗೆ ಪತ್ರ ಬರೆದಿದ್ದ ಬಿಜೆಪಿ ಮುಖಂಡ

ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನಲ್ಲಿ ಅರ್ಹ ಮತದಾರರ ಹೆಸರುಗಳನ್ನು ಮತದಾರರ ಪಟ್ಟಿಯಿಂದ...