ಶಿಕ್ಷಣ ಸಚಿವರ ರಾಜೀನಾಮೆಗೆ ಪಟ್ಟು: ಕಾಂಗ್ರೆಸ್ ಸಂಸದರ ತುರ್ತು ಸಭೆ ಕರೆದ ರಾಹುಲ್ ಗಾಂಧಿ

Date:

ಸಂಸತ್ತಿನ ಮುಂಗಾರು ಅಧಿವೇಶನದಲ್ಲಿ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹ ಹೆಚ್ಚಾಗುತ್ತಿದೆ. ಈ ನಡುವೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಗುರುವಾರ ಸಂಜೆ ತಮ್ಮ ನಿವಾಸದಲ್ಲಿ ಉಭಯ ಸದನಗಳ ಕಾಂಗ್ರೆಸ್ ಸಂಸದರ ಪ್ರಮುಖ ಸಭೆಯನ್ನು ಕರೆದಿದ್ದಾರೆ ಎಂದು ವರದಿಯಾಗಿದೆ.

- Advertisement -

ರಾಜ್ಯಸಭೆಯಲ್ಲಿ ನಿಯಮ 267ರ ಅಡಿಯಲ್ಲಿ ಕಲಾಪಗಳನ್ನು ತಡೆಹಿಡಿದು ನೀಟ್ ಅಕ್ರಮದ ಬಗ್ಗೆ ಚರ್ಚೆ ನಡೆಸಬೇಕು ಹಾಗೂ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಬೇಕು ಎಂದು ವಿಪಕ್ಷಗಳು ಪಟ್ಟು ಹಿಡಿದಿವೆ. ಆದರೆ, ಕೇಂದ್ರ ಸರ್ಕಾರವು ನೀಟ್ ವಿಚಾರ ಹಾಗೂ ಅದಕ್ಕೆ ಸಂಬಂಧಿಸಿದ ವಿಷಯಗಳ ಕುರಿತು ಚರ್ಚೆಗೆ ತಾನು ಸಂಪೂರ್ಣ ಸಿದ್ಧವಿದ್ದು, ವಿರೋಧ ಪಕ್ಷಗಳು ಯಾವುದೇ ಷರತ್ತುಗಳನ್ನು ವಿಧಿಸಬಾರದು ಎಂದು ಹೇಳಿಕೊಳ್ಳುತ್ತಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಪ್ರಚಾರ, ರಾಹುಲ್ ವ್ಯಕ್ತಿತ್ವ ಮತ್ತು ರೆಜಿಮ್ ಚೇಂಜ್

ಮೋದಿ ಅನುಭವಿ ನಟನಂತೆ, ಪ್ರದರ್ಶಕನಂತೆ ಕಾಣುತ್ತಾರೆ. ರಾಹುಲ್ ಗಾಂಧಿ ಪಾತ್ರದ ಒಳಹೊಕ್ಕು ನಟಿಸುವ ಕಲಾವಿದನಂತೆ ಕಾಣುತ್ತಾರೆ. ಈ ನಿಟ್ಟಿನಲ್ಲಿ ರಾಹುಲ್ ರಾಜಕೀಯ ನಡೆಗಳು ಮೋದಿಯವರ ರಾಜಕೀಯ ನಡೆಗಳೊಂದಿಗೆ ವಿಶ್ಲೇಷಣೆಗೊಳಗಾಗುತ್ತಿವೆ. ಕಳೆದ 12 ವರ್ಷಗಳ...

137 ಜೀವ ರಕ್ಷಕ ಕ್ಯಾನ್ಸರ್ ಔಷಧಗಳ ದರ ಶೇ.70ರಷ್ಟು...

ಕ್ಯಾನ್ಸರ್ ಚಿಕಿತ್ಸೆಯ ದುಬಾರಿ ವೆಚ್ಚದಿಂದ ಕಂಗೆಟ್ಟಿರುವ ರೋಗಿಗಳಿಗೆ ಕೇಂದ್ರ ಸರ್ಕಾರದಿಂದ ಕೊಂಚ ನಿರಾಳತೆಯ ಸುದ್ದಿಯೊಂದಿದೆ! 137 ಜೀವರಕ್ಷಕ ಕ್ಯಾನ್ಸರ್ ಔಷಧಗಳ ಬೆಲೆ ಇಳಿಕೆಯಾಗುವ ಸಾಧ್ಯತೆಯಿದ್ದು, ಕೆಲವು ಔಷಧಗಳ ಗರಿಷ್ಠ ಚಿಲ್ಲರೆ ಬೆಲೆ ಶೇ.70ರವರೆಗೆ...

‘ದೇಶ್ ಕೋ ಬಿಕನೇ ನಹೀ ದೂಂಗಾ’ ಎಂದು ನವಮಂಗಳೂರು...

​ರೈಲ್ವೆ, ವಿಮಾನ ನಿಲ್ದಾಣ, ಟೆಲಿಕಾಂ ಸೇರಿದಂತೆ ದೇಶದ ಪ್ರಮುಖ ಜಯಶೀಲ ಸಾರ್ವಜನಿಕ ವಲಯಗಳನ್ನು ಈಗಾಗಲೇ ಆಯ್ದ ಕಾರ್ಪೊರೇಟ್ ಕುಳಗಳಿಗೆ ಒಪ್ಪಿಸಿರುವ ಮೋದಿ ಸರ್ಕಾರ, ಈಗ ತನ್ನ ದೃಷ್ಟಿಯನ್ನು ಕಡಲತೀರಗಳತ್ತ ಹರಿಸಿದೆ. ದೇಶದ ಆಮದು-ರಫ್ತು...

ಇದನ್ನೂ ಓದಿ: ದೆಹಲಿ ಪ್ರತಿಭಟನೆ: ಪ್ರಧಾನಿ ಮೋದಿಗೆ ಡಿಸಿಎಂ ಪರಮೇಶ್ವರ್‌ ಬಹಿರಂಗ ಪತ್ರ

ಗುರುವಾರ ರಾಜ್ಯಸಭೆಯ ಕಲಾಪ ಆರಂಭವಾಗುತ್ತಿದ್ದಂತೆಯೇ ವಿರೋಧ ಪಕ್ಷದ ಸದಸ್ಯರು ಭಾರಿ ಘೋಷಣೆ ಕೂಗಿ ಪ್ರತಿಭಟನೆ ನಡೆಸಿದ್ದರು. ಇದರಿಂದಾಗಿ ಸದನದಲ್ಲಿ ಗದ್ದಲದ ವಾತಾವರಣ ನಿರ್ಮಾಣವಾಗಿದ್ದು ಸರ್ಕಾರ ಮತ್ತು ವಿಪಕ್ಷಗಳ ನಡುವೆ ತೀವ್ರ ಮಾತಿನ ಚಕಮಕಿ ನಡೆದಿದೆ.

ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಗಳಲ್ಲಿ ಭಾಗಿಯಾದವರಿಗೆ ಶೀಘ್ರ ಮತ್ತು ಕಠಿಣ ಶಿಕ್ಷೆ ಖಾತರಿಪಡಿಸಲು ವೇಗದ ಗತಿ ನ್ಯಾಯಾಲಯಗಳನ್ನು (ಫಾಸ್ಟ್ ಟ್ರ್ಯಾಕ್ ಕೋರ್ಟ್) ಸ್ಥಾಪಿಸಲಾಗುವುದು ಎಂದು ಪ್ರಧಾನಿ ನರೇಂದ್ರ ಮೋದಿ ಘೋಷಿಸಿದ್ದಾರೆ. ಯುವಕರ ಭವಿಷ್ಯದ ಜೊತೆ ಆಟವಾಡುವವರನ್ನು ಬಿಡುವುದಿಲ್ಲ ಎಂದು ಅವರು ‘X’ನಲ್ಲಿ ಪೋಸ್ಟ್ ಮಾಡಿದ್ದಾರೆ.

ಆದರೆ ಪ್ರಧಾನಿಯವರ ಈ ಪ್ರಕಟಣೆಯನ್ನು ರಾಜ್ಯಸಭೆಯ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಖಂಡಿಸಿದ್ದು, ಇದು “ಪ್ರಚೋದನಾಕಾರಿ ಹೇಳಿಕೆ” ಎಂದು ಬಣ್ಣಿಸಿದ್ದಾರೆ. ಸರ್ಕಾರವು ಪೇಪರ್ ಲೀಕ್ ಹೊಣೆಗಾರಿಕೆಯಿಂದ ತಪ್ಪಿಸಿಕೊಳ್ಳುತ್ತಿದೆ ಎಂದು ಆರೋಪಿಸಿದ ಅವರು, “ಶಿಕ್ಷಣ ಸಚಿವರು ತಕ್ಷಣವೇ ರಾಜೀನಾಮೆ ನೀಡಬೇಕು, ಆಗ ಮಾತ್ರ ನಾವು ಚರ್ಚೆಗೆ ಸಿದ್ಧ” ಎಂದು ಸ್ಪಷ್ಟಪಡಿಸಿದ್ದಾರೆ.

ಸಂಸತ್ತಿನ ಆವರಣದ ಮಕರ ದ್ವಾರದ ಬಳಿ ಎನ್‌ಡಿಎ ಮತ್ತು ಇಂಡಿಯಾ ಒಕ್ಕೂಟದ ಸಂಸದರು ಪ್ರತ್ಯೇಕ ವಿಷಯಗಳನ್ನು ಮುಂದಿಟ್ಟುಕೊಂಡು ಒಂದೇ ಸಮಯದಲ್ಲಿ ಧರಣಿ ನಡೆಸಿದ್ದರಿಂದ ಎರಡೂ ಬಣಗಳ ನಡುವೆ ನೇರ ಮುಖಾಮುಖಿ ವಾತಾವರಣ ಉಂಟಾಯಿತು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಹಲ್ಲೆಗೊಳಗಾಗಿ ರೈಲ್ವೆ ಹಳಿ ಮೇಲೆ ಬಿದ್ದಿದ್ದ ಯುವಕ ಚಿಕಿತ್ಸೆ ಫಲಿಸದೆ ಸಾವು

ಶಿವಮೊಗ್ಗ ರೈಲ್ವೆ ಹಳಿ ಬಳಿ ಗಂಭೀರ ಗಾಯಗಳೊಂದಿಗೆ ಪತ್ತೆಯಾಗಿದ್ದ 26 ವರ್ಷದ...

ನೇಣು ಬಿಗಿದ ಸ್ಥಿತಿಯಲ್ಲಿ ಯುವತಿಯ ಶವ ಪತ್ತೆ; ತರಾತುರಿಯಲ್ಲಿ ಅಂತ್ಯಕ್ರಿಯೆ, ಕಾರಣ ನಿಗೂಢ!

ಸೊರಬ ತಾಲೂಕಿನ ಮುಟಗುಪ್ಪೆ ಗ್ರಾಮದಲ್ಲಿ 22 ವರ್ಷದ ಯುವತಿಯೊಬ್ಬರು ಮನೆಯಲ್ಲಿ ನೇಣು...

ಶಿವಮೊಗ್ಗ | ಗಾಂಜಾ ಮಾರಾಟ ಆರೋಪ: ಐವರು ಅರೆಸ್ಟ್‌, 1.23 ಕೆಜಿ ಮಾದಕ ವಸ್ತು ಜಪ್ತಿ

ಶಿವಮೊಗ್ಗ ನಗರದ ಅನುಪಿನಕಟ್ಟೆ ಸಮೀಪ ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪದಡಿ ತುಂಗಾನಗರ...