ಕೇರಳ ಚುನಾವಣೆ | ಪ್ರಧಾನಿ ಮೋದಿ, ವಿಜಯನ್ ‘ದುರಹಂಕಾರಿಗಳು’ ಎಂದ ರಾಹುಲ್ ಗಾಂಧಿ

Date:

ಪ್ರಧಾನಿ ನರೇಂದ್ರ ಮೋದಿ ಮತ್ತು ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು ‘ದುರಹಂಕಾರಿಗಳು’ ಎಂದು ಕಾಂಗ್ರೆಸ್ ನಾಯಕ, ಲೋಕಸಭೆಯ ವಿಪಕ್ಷ ನಾಯಕ ರಾಹುಲ್ ಗಾಂಧಿ ಸೋಮವಾರ ಹೇಳಿದ್ದಾರೆ. “ಇವರಿಬ್ಬರೂ ಜನರೊಂದಿಗೆ ಕೆಲಸ ಮಾಡುವ ಬದಲು ಜನರ ಮೇಲೆ ಆಳ್ವಿಕೆ ನಡೆಸುವ ಮನಸ್ಥಿತಿ ಹೊಂದಿದ್ದಾರೆ” ಎಂದು ರಾಹುಲ್ ಆರೋಪಿಸಿದ್ದಾರೆ.

- Advertisement -

ಕೇರಳದ ಮಾಲಾದಲ್ಲಿ ಚುನಾವಣೆ ಪ್ರಚಾರ ನಡೆಸುತ್ತಾ ಮಾತನಾಡಿದ ರಾಹುಲ್ ಗಾಂಧಿ, “ಕೇರಳದಲ್ಲಿ ಮುಂಬರುವ ವಿಧಾನಸಭಾ ಚುನಾವಣೆ ಕಾಂಗ್ರೆಸ್ ನೇತೃತ್ವದ ಯುಡಿಎಫ್ ಮತ್ತು ಆಡಳಿತಾರೂಢ ಎಲ್‌ಡಿಎಫ್ ನಡುವಿನ ಹೋರಾಟ. ಎಲ್‌ಡಿಎಫ್‌ಗೆ ಬಿಜೆಪಿ ನೆರವು ನೀಡುತ್ತಿದೆ” ಎಂದು ದೂರಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ನೊಬೆಲ್‌ ಪ್ರಶಸ್ತಿ ಸರಣಿ | ರಸಾಯನವಿಜ್ಞಾನದ ʼಅಸಮಮಿತಿʼ (Chirality)ಯ...

ರಸಾಯನವಿಜ್ಞಾನದ ನೊಬೆಲ್ ಪ್ರಶಸ್ತಿಯನ್ನು ಈ ಬಾರಿ ಹೆನ್ರಿ ಕಗಾನ್‌ ಮತ್ತು ಕೆನ್ಸೊ ಸುಆಯ್‌ ಅವರಿಗೆ ನೀಡಲಾಗಿದೆ. ಅವರ ಸಂಶೋಧನೆಯ ಕೇಂದ್ರ ಬಿಂದು ರಸಾಯನವಿಜ್ಞಾನದಲ್ಲಿ ಶತಮಾನಗಟ್ಟಲೆ ಅತ್ಯಂತ ಕುತೂಹಲಕಾರಿ ಪ್ರಶ್ನೆಯಾಗಿದ್ದ- ಒಂದಕ್ಕೊಂದು ಕನ್ನಡಿಯ ಪ್ರತಿಬಿಂಬದಂತಿರುವ...

ಅನುದಾನ ಕೊರತೆ: ವಿದ್ಯಾರ್ಥಿಗಳಿಂದ ನಿರ್ವಹಣಾ ಶುಲ್ಕ ವಸೂಲಿ, ಶಿಕ್ಷಕರ...

ಹಾವೇರಿ ಜಿಲ್ಲೆಯಲ್ಲಿ ಸರಕಾರಿ ಶಾಲೆಗಳಿಗೆ ನಿರ್ವಹಣಾ ವೆಚ್ಚದ ಅನುದಾನ ಬಿಡುಗಡೆಯಾಗದ ಹಿನ್ನೆಲೆಯಲ್ಲಿ ಶಿಕ್ಷಕರು ನಿತ್ಯದ ಖರ್ಚು-ವೆಚ್ಚ ಸರಿದೂಗಿಸಲು ಪರದಾಡುವಂತಾಗಿದೆ. ಶಾಲೆ ನಡೆಸಲು ವಿದ್ಯಾರ್ಥಿಗಳಿಂದಲೇ ಹಣ ವಸೂಲಿ ಮಾಡುತ್ತಿರುವ ಆರೋಪ ಕೇಳಿಬಂದಿದ್ದು, ಪೋಷಕರಿಂದ ಮತ್ತು...

ಬೀಗರೂಟ ಬಂದ್ ಮಾಡಿ ಸುದ್ದಿಯಾದ ಹರಗಿ ಗ್ರಾಮದಲ್ಲಿ ಸಮಸ್ಯೆಗಳದ್ದೇ...

ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲೂಕಿನಲ್ಲಿರುವ ಕಟ್ಟೆ ಕಡೆಯ ಕುಗ್ರಾಮ ಎಂದು ಹೇಳಬಹುದಾದ ಹರಗಿ ಗ್ರಾಮ ಇಡೀ ರಾಜ್ಯದ ಗಮನ ಸೆಳೆಯುತ್ತಿದೆ ಬೀಗರೂಟ ಹಾಕಿಸಿದರೆ ದಂಡ ವಿಧಿಸುತ್ತೇವೆ ಎಂದು ಗ್ರಾಮಸ್ಥರು ನಿರ್ಧಾರಕ್ಕೆ ಬಂದು ಬಡ...

ಇದನ್ನು ಓದಿದ್ದೀರಾ? ವಿವಾದಗಳ ಗೊಚ್ಚೆಯಲ್ಲಿ ಸಿಲುಕಿರುವ ಕೇರಳ ಬಿಜೆಪಿ: ಮತ ಬ್ಯಾಂಕ್‌ಗಾಗಿ ತೊಳಲಾಟ

“ಎಲ್‌ಡಿಎಫ್‌ಗೆ ಸಹಾಯ ಮಾಡುವ ಗುಪ್ತ ಕೈ ಇದೆ. ಆಡಳಿತಾರೂಢ ಸಿಪಿಐ(ಎಂ) ಕಾರ್ಯಕರ್ತರು ಸಹ ಸರ್ಕಾರ ನಿಜವಾದ ಎಡ ಆಡಳಿತವಾಗಿ ಕಾರ್ಯನಿರ್ವಹಿಸುತ್ತಿಲ್ಲ ಎಂದು ಒಪ್ಪಿಕೊಳ್ಳುತ್ತಾರೆ. ಕೇರಳ ಮತ್ತು ದೇಶಾದ್ಯಂತ ಬಿಜೆಪಿ ಕಾಂಗ್ರೆಸ್ ಮತ್ತು ಅದರ ನೇತೃತ್ವದ ಯುಡಿಎಫ್ ಅನ್ನು ತನ್ನ ಪ್ರಮುಖ ರಾಜಕೀಯ ಸವಾಲಾಗಿ ಪರಿಗಣಿಸುತ್ತದೆ” ಎಂದು ಹೇಳಿದರು.

“ಪ್ರಧಾನಿ ಮೋದಿ ತಮ್ಮ ಭಾಷಣಗಳಲ್ಲಿ ದೇವರು, ದೇವಾಲಯಗಳು ಮತ್ತು ಧರ್ಮದ ಬಗ್ಗೆ ಮಾತನಾಡುತ್ತಾರೆ. ಆದರೆ ಕೇರಳದಲ್ಲಿ ಅವರು ಸಿಪಿಐ(ಎಂ) ನಾಯಕರ ಕೈವಾಡವಿರುವ ಶಬರಿಮಲೆಯ ಚಿನ್ನ ನಾಪತ್ತೆ ಬಗ್ಗೆ ಮಾತನಾಡುವುದಿಲ್ಲ. ಏಕೆಂದರೆ ಮೋದಿ ಅವರು ಬಿಜೆಪಿ ಸಿಎಂ ಪಿಣರಾಯಿ ಮತ್ತು ಸಿಪಿಐಎಂ ಅನ್ನು ರಕ್ಷಿಸಲು ಬಯಸುತ್ತಾರೆ. ಎಲ್‌ಡಿಎಫ್ ಅನ್ನು ರಕ್ಷಿಸುವ ಸಲುವಾಗಿ ಕೇರಳದಲ್ಲಿ ದೇವರು, ಹಿಂದೂ ಧರ್ಮ ಮತ್ತು ದೇವಾಲಯಗಳನ್ನು ಮರೆತಿದ್ದಾರೆ” ಎಂದು ದೂರಿದರು.

ಕೇರಳ ವಿಧಾನಸಭೆ ಚುನಾವಣೆಯು ಏಪ್ರಿಲ್ 9ರಂದು ನಡೆಯಲಿದೆ. ಮೇ 4ರಂದು ಚುನಾವಣೆಯ ಫಲಿತಾಂಶ ಹೊರಬೀಳಲಿದೆ. ಯುಡಿಎಫ್, ಎಲ್‌ಡಿಎಫ್, ಎನ್‌ಡಿಎ ಪ್ರಚಾರ ಕಾರ್ಯ ನಡೆಸುತ್ತಿದೆ. ಒಂದೆಡೆ ಬಿಜೆಪಿ-ಎಲ್‌ಡಿಎಫ್ ಒಂದೇ ಎಂದು ಯುಡಿಎಫ್ ಆರೋಪಿಸುತ್ತಿದೆ. ಇನ್ನೊಂದೆಡೆ ಯುಡಿಎಫ್-ಬಿಜೆಪಿ ಒಂದೇ ಎಂದು ಎಲ್‌ಡಿಎಫ್ ದೂರುತ್ತಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹವಾಮಾನ ವರದಿ | ಮುಂದಿನ 3 ದಿನ ಗುಡುಗು ಸಹಿತ ಭಾರೀ ಮಳೆ

ಮನ್ನಾರ್ ಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತ ಮತ್ತು ಮೇಲ್ಮೈ ಸುಳಿಗಾಳಿಯ ಪ್ರಭಾವದಿಂದ...

ಬೀದರ್‌ | ವಿದ್ಯಾರ್ಥಿಗಳು ಸಮಯ ಪ್ರಜ್ಞೆ, ಶಿಸ್ತು ಮೈಗೂಡಿಸಿಕೊಳ್ಳಿ : ಜಯಕುಮಾರ ಶಿಂಧೆ

ಸಮಯ ಪ್ರಜ್ಞೆ ಹಾಗೂ ಶಿಸ್ತು ಮೈಗೂಡಿಸಿಕೊಳ್ಳುವುದರಿಂದ ಜೀವನದಲ್ಲಿ ಯಶಸ್ಸು ಗಳಿಸಬಹುದು ಎಂದು...

ಮುದ್ದೇಬಿಹಾಳದಲ್ಲಿ ತೀವ್ರ ಬರ; ಕಾಲುವೆಗಳಿಗೆ ನೀರು ಹರಿಸಲು ಶಾಸಕ ನಾಡಗೌಡ ಮನವಿ

ಬರದ ಬಿಸಿಲಿಗೆ ಮುದ್ದೇಬಿಹಾಳ ಮತ್ತು ತಾಳಿಕೋಟೆ ತಾಲೂಕುಗಳ ಗ್ರಾಮೀಣ ಬದುಕು ತತ್ತರಿಸುತ್ತಿರುವ...

ಈ ದಿನ ಸಂಪಾದಕೀಯ | ಪ್ರಧಾನಿಗೂ ಸಿಗದ ʼಬಾರಾಖೂನ್ ಮಾಫಿʼ ಗ್ಯಾನೇಶ್ ಕುಮಾರ್‌ಗೆ ಯಾಕೆ? ಕೊಡಿಸಿದವರು ಯಾರು?

ಚುನಾವಣೆಯ ಕಾವಲುಗಾರನಿಗೆ ಕಾನೂನಿನ ಕವಚ ಕುಂಡಲಗಳನ್ನು ನೀಡಿ, ಕಾನೂನಿನ ಕೈಗಳು ಮುಟ್ಟದಂತೆ,...