ತಿಂಗಳೊಳಗೆ ಸರ್ಕಾರಿ ಬಂಗಲೆ ತೊರೆಯುವಂತೆ ರಾಹುಲ್‌ ಗಾಂಧಿಗೆ ನೋಟಿಸ್

Date:

  • ನವದೆಹಲಿಯ ಲೂಧಿಯಾನದ 12 ತುಘಲಕ್ ರಸ್ತೆಯಲ್ಲಿರುವ ಬಂಗಲೆಯಲ್ಲಿ ವಾಸವಿರುವ ರಾಹುಲ್‌ ಗಾಂಧಿ
  • ಸೂರತ್‌ ಜಿಲ್ಲಾ ನ್ಯಾಯಾಲಯ ಶಿಕ್ಷೆ ವಿಧಿಸಿದ ನಂತರ ಸಂಸದ ಸ್ಥಾನದಿಂದ ಅನರ್ಹಗೊಂಡಿದ್ದ ರಾಹುಲ್

ಸಂಸದನ ಸ್ಥಾನದಿಂದ ಅನರ್ಹಗೊಂಡ ಮೂರು ದಿನದ ನಂತರ ಕಾಂಗ್ರೆಸ್ ನಾಯಕ ರಾಹುಲ್‌ ಗಾಂಧಿ ಅವರಿಗೆ ಒಂದು ತಿಂಗಳೊಳಗೆ ಸರ್ಕಾರಿ ಬಂಗಲೆ ತೊರೆಯುವಂತೆ ಲೋಕಸಭಾ ವಸತಿ ಸಮಿತಿ ನೋಟಿಸ್ ನೀಡಿದೆ.

ಮಾನಹಾನಿ ಪ್ರಕರಣಕ್ಕೆ ಸಂಬಂಧಿಸಿದಂತೆ ಸೂರತ್‌ ಜಿಲ್ಲಾ ನ್ಯಾಯಾಲಯ ಶಿಕ್ಷೆ ವಿಧಿಸಿದ ನಂತರ ಲೋಕಸಭೆ ಸಚಿವಾಲಯ ಸಂಸದನ ಸ್ಥಾನದಿಂದ ವಜಾಗೊಳಿಸಿತ್ತು.

2004ರಲ್ಲಿ ಅವರು ಮೊದಲ ಬಾರಿಗೆ ಲೋಕಸಭಾ ಸದಸ್ಯರಾಗಿ ಆಯ್ಕೆಯಾದಾಗ ಅವರಿಗೆ ನವದೆಹಲಿಯ ಲೂಧಿಯಾನದ 12 ತುಘಲಕ್ ರಸ್ತೆಯಲ್ಲಿರುವ ಬಂಗಲೆಯನ್ನು ಅವರಿಗೆ ಸರಕಾರದ ವತಿಯಿಂದ ನೀಡಲಾಗಿತ್ತು.

ಸಂಸದ ಸ್ಥಾನದಿಂದ ಅನರ್ಹಗೊಂಡಿರುವ ಕಾರಣ ಏಪ್ರಿಲ್‌ 22ರೊಳಗೆ ಸರ್ಕಾರಿ ಬಂಗಲೆಯನ್ನು ಖಾಲಿ ಮಾಡಬೇಕು ಎಂದು ಲೋಕಸಭಾ ವಸತಿ ಸಮಿತಿ ನೀಡಿರುವ ನೋಟಿಸ್‌ನಲ್ಲಿ ತಿಳಿಸಲಾಗಿದೆ.

ಈ ಬಗ್ಗೆ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ರಾಹುಲ್ ಗಾಂಧಿ ಈವರೆಗೂ ತನಗೆ ಅಂತಹ ಯಾವುದೇ ನೋಟಿಸ್ ದೊರಕಿಲ್ಲ ಎಂದು ತಿಳಿಸಿದ್ದಾರೆ.

ತನಿಖೆಗೆ ಮತ್ತೆ ಆಗ್ರಹ

ಅದಾನಿ ಸಮೂಹದಲ್ಲಿ ಜನರ ನಿವೃತ್ತಿ ನಿಧಿಯ ಹೂಡಿಕೆಯ ಬಗ್ಗೆ ಹಲವಾರು ಆರೋಪಗಳು ಕೇಳಿಬಂದಿದ್ದರೂ, ತನಿಖೆ ಏಕೆ ನಡೆಸಲಿಲ್ಲ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸೋಮವಾರ ಪ್ರಧಾನಿ ನರೇಂದ್ರ ಮೋದಿ ಅವರನ್ನು ಮತ್ತೆ ಪ್ರಶ್ನಿಸಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಅವರು, ‘ಎಲ್‌ಐಸಿಯ ಬಂಡವಾಳ, ಅದಾನಿಗೆ!. ಎಸ್‌ಬಿಐ ಬಂಡವಾಳ, ಅದಾನಿಗೆ!. ಇಪಿಎಫ್‌ಒ ಬಂಡವಾಳವೂ ಅದಾನಿಗೆ! ‘ಮೋದಾನಿ’ ಬಹಿರಂಗಗೊಂಡ ನಂತರವೂ ಸಾರ್ವಜನಿಕರ ನಿವೃತ್ತಿ ಹಣವನ್ನು ಅದಾನಿ ಕಂಪನಿಗಳಲ್ಲಿ ಏಕೆ ಹೂಡಿಕೆ ಮಾಡಲಾಗುತ್ತಿದೆ?’ ಎಂದು ಕೇಳಿದ್ದಾರೆ.

‘ಪ್ರಧಾನ ಮಂತ್ರಿಗಳೇ, ತನಿಖೆ ಇಲ್ಲ, ಉತ್ತರವಿಲ್ಲ! ಇಷ್ಟೊಂದು ಭಯ ಯಾಕೆ ‘ ಎಂದು ರಾಹುಲ್ ಗಾಂಧಿ ಹಿಂದಿಯಲ್ಲಿ ಟ್ವೀಟ್‌ ಮಾಡಿದ್ದಾರೆ.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

3ನೇ ಕಂತಿಗಾಗಿ ಮತ್ತೆ ಬಂದ ಸುರ್ಜೇವಾಲ: ಸಿ ಟಿ ರವಿ ಆರೋಪ

ಕಾಂಗ್ರೆಸ್ ಯಾವಾಗಲೂ ಚುನಾವಣೆ ನಡೆಸುವುದೇ ಕಡೇ 3 ದಿನದಲ್ಲಿ ...

ಚಂದ್ರಬಾಬು ನಾಯ್ಡು ಜಾಮೀನು ಷರತ್ತು ಸಡಿಲಿಸಿದ ಸುಪ್ರೀಂ; ರ‍್ಯಾಲಿ, ಸಭೆಗಳಲ್ಲಿ ಭಾಗವಹಿಸಲು ಅನುಮತಿ

ಕೌಶಲ್ಯಾಭಿವೃದ್ಧಿ ಕಾರ್ಯಕ್ರಮ ಹಗರಣ ಪ್ರಕರಣದಲ್ಲಿ ಜಾಮೀನಿನ ಮೇಲೆ ಬಿಡುಗಡೆಯಾಗಿ ಷರತ್ತಾಗಿ ಸಾರ್ವಜನಿಕ...