ಲೋಕಸಭಾ ಚುನಾವಣೆ: ಕಾಂಗ್ರೆಸ್ ಮೊದಲ ಪಟ್ಟಿಯಲ್ಲಿ ಕರ್ನಾಟಕ, ಕೇರಳ, ತೆಲಂಗಾಣಕ್ಕೆ ಸ್ಥಾನ

Date:

ಲೋಕಸಭಾ ಚುನಾವಣೆಗೆ ಕಾಂಗ್ರೆಸ್ ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಶೀಘ್ರದಲ್ಲೇ ಪ್ರಕಟಿಸಲಿದ್ದು, ಮೊದಲ ಪಟ್ಟಿಯಲ್ಲಿ ಕೇರಳ, ಕರ್ನಾಟಕ, ತೆಲಂಗಾಣ, ಛತ್ತೀಸ್‌ಗಢ ಹಾಗೂ ಲಕ್ಷದ್ವೀಪಕ್ಕೆ ಸ್ಥಾನ ನೀಡಲಾಗುತ್ತದೆ ಎಂದು  ತಿಳಿಸಿದೆ.

- Advertisement -

ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆ ಸಿ ವೇಣುಗೋಪಾಲ್, ಕಾಂಗ್ರೆಸ್ ಚುನಾವಣಾ ಸಮಿತಿ ನಿನ್ನೆ(ಮಾ.07) ಮೊದಲ ಸಭೆ ಏರ್ಪಡಿಸಿದ್ದು 10 ರಾಜ್ಯಗಳಲ್ಲಿ ಆರು ರಾಜ್ಯಗಳ ಅಭ್ಯರ್ಥಿಗಳನ್ನು ನಿರ್ಣಯಿಸಲಾಗಿದೆ. ಔಪಾಚಾರಿಕ ಘೋಷಣೆಯನ್ನು ಶೀಘ್ರದಲ್ಲೇ ತಿಳಿಸಲಾಗುವುದು ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

“ಕೇರಳ, ಕರ್ನಾಟಕ, ತೆಲಂಗಾಣ, ಛತ್ತೀಸ್‌ಗಢ, ದೆಹಲಿ ಹಾಗೂ ಲಕ್ಷದ್ವೀಪ ರಾಜ್ಯಗಳ ಸ್ಥಾನಗಳನ್ನು ಅಂತಿಮಗೊಳಿಲಾಗಿದೆ. ಕಾರ್ಯವಿಧಾನ ಮುಂದುವರಿಯುತ್ತಿದೆ. ಔಪಾಚಾರಿಕ ಘೋಷಣೆಯನ್ನು ಶೀಘ್ರದಲ್ಲೇ ಪ್ರಕಟಿಸಲಾಗುತ್ತದೆ” ಎಂದು ವೇಣುಗೋಪಾಲ್ ತಿಳಿಸಿದರು.

ಮೂಲಗಳ ಪ್ರಕಾರ ರಾಹುಲ್ ಗಾಂಧಿ ಕೇರಳದ ವಯನಾಡಿನಿಂದ ಸ್ಪರ್ಧಿಸಲಿದ್ದಾರೆ. ಛತ್ತೀಸ್‌ಗಢದ ಮಾಜಿ ಮುಖ್ಯಮಂತ್ರಿ ಭೂಪೇಶ್ ಬಘೇಲ್ ರಾಜನಂದಗಾವ್‌ ಕ್ಷೇತ್ರದಿಂದ ಸ್ಪರ್ಧಿಸಲಿದ್ದಾರೆ. ಕೇರಳದಿಂದ ಮಾಜಿ ಕೇಂದ್ರ ಸಚಿವ ಶಶಿ ತರೂರ್ ಒಳಗೊಂಡು 16 ಅಭ್ಯರ್ಥಿಗಳನ್ನು ಪ್ರಕಟಿಸುವ ಸಾಧ್ಯತೆಯಿದೆ.

ಈ ಸುದ್ದಿ ಓದಿದ್ದೀರಾ? ಒಂದು ನೆನಪು | ಲಂಕೇಶರಿಗೆ ‘ಪತ್ರಿಕೆ’ ಜೀವನ್ಮರಣದ ಪ್ರಶ್ನೆಯಾಗಿತ್ತೇ?

ಕರ್ನಾಟಕದಲ್ಲಿ ಸಚಿವರು ಸ್ಪರ್ಧಿಸುವ ಸಾಧ್ಯತೆ ಕಡಿಮೆ. ಬಹುತೇಕ ಸಚಿವರು ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಲು ಆಸಕ್ತಿ ಹೊಂದಿಲ್ಲ. ಇಲ್ಲಿಯವರೆಗೂ ಒಬ್ಬರು ಸಚಿವರು ಮಾತ್ರ ಪಕ್ಷದ ನಿರ್ಧಾರಕ್ಕೆ ಬದ್ಧ ಎಂದು ತಿಳಿಸಿದ್ದಾರೆ.

ಪ್ರಕಟಗೊಳ್ಳುವ ಮೊದಲ ಪಟ್ಟಿಯಲ್ಲಿ ಕರ್ನಾಟಕದ ಡಿಸಿಎಂ ಸಹೋದರ ಹಾಲಿ ಸಂಸದ ಡಿ ಕೆ ಸುರೇಶ್ ಅವರ ಹೆಸರು ಬಹುತೇಕ ಇರಲಿದ್ದು, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸ್ಪರ್ಧಿಸುವ ಕಲಬುರಗಿಯಲ್ಲಿ ಸ್ಪರ್ಧಿಗಳ ಹೆಸರು ಅಂತಿಮಗೊಂಡಿಲ್ಲ.

ಮೊದಲ ಪಟ್ಟಿಯಲ್ಲಿ ಕೇರಳ, ಕರ್ನಾಟಕ, ತೆಲಂಗಾಣ, ಛತ್ತೀಸ್‌ಗಢ, ದೆಹಲಿ ಹಾಗೂ ಲಕ್ಷದ್ವೀಪ ರಾಜ್ಯಗಳನ್ನು ಪರಿಗಣಿಸಲಾಗಿದ್ದು, ಎರಡನೇ ಸುತ್ತಿನ ಪಟ್ಟಿ ಪ್ರಕಟಣೆಯಲ್ಲಿ ಈಶಾನ್ಯ ರಾಜ್ಯಗಳ ಅಭ್ಯರ್ಥಿಗಳನ್ನು ಪ್ರಕಟಿಸಲಾಗುತ್ತದೆ.

90 ಕ್ಷೇತ್ರಗಳನ್ನು ಒಳಗೊಂಡಿರುವ ನಿರ್ಣಾಯಕ ರಾಜ್ಯಗಳಾದ ಮಹಾರಾಷ್ಟ್ರ ಹಾಗೂ ಪಶ್ಚಿಮ ಬಂಗಾಳದಲ್ಲಿ ಸೀಟು ಹಂಚಿಕೆ ಇನ್ನು ಅಂತಿಮಗೊಂಡಿಲ್ಲ. ಆದರೂ ಅಭ್ಯರ್ಥಿಗಳ ಹೆಸರು ಪ್ರಕಟಿಸಲು ಕಸರತ್ತು ನಡೆಯುತ್ತಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಾಲಾ ಸಮಸ್ಯೆಗಳ ಕುರಿತು ಗ್ರಾಮ ಸಭೆಯಲ್ಲಿ ಧ್ವನಿ ಎತ್ತಿದ ವಿದ್ಯಾರ್ಥಿಗಳು; ಅಧಿಕಾರಿಗಳ ಮೆಚ್ಚುಗೆ-ಭರವಸೆ

ಸರ್ಕಾರಿ ಶಾಲಾ ವಿದ್ಯಾರ್ಥಿಗಳು ‘ವಿಶೇಷ ಗ್ರಾಮ ಸಭೆ’ಗಳಲ್ಲಿ ಪಾಲ್ಗೊಂಡು, ಪಂಚಾಯತ್ ಪ್ರತಿನಿಧಿಗಳು...

ಉತ್ತರಾಖಂಡ SIR ಅಂತಿಮ ಮತದಾರರ ಪಟ್ಟಿ ಪ್ರಕಟ: ಆದರೆ ಮುಗಿದಿಲ್ಲ ನೋಂದಣಿ ಪ್ರಕ್ರಿಯೆ

ಉತ್ತರಾಖಂಡ ರಾಜ್ಯದಲ್ಲಿ ನಡೆದ 'ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ' (ಎಸ್‌ಐಆರ್)...

ವಾಹನ ದಟ್ಟಣೆಯ ಸುಳಿಯಲ್ಲಿ ಮನಾಲಿ; ಪ್ರವಾಸೋದ್ಯಮದ ಒತ್ತಡಕ್ಕೆ ನಲುಗುತ್ತಿವೆಯೇ ಬೆಟ್ಟಗಳು?

ಮುಂಗಾರು ಮಳೆ ಕಡಿಮೆಯಾಗುತ್ತಿದ್ದಂತೆ ಹಿಮಾಚಲ ಪ್ರದೇಶದ ಪ್ರವಾಸಿ ತಾಣಗಳಿಗೆ ಪ್ರವಾಸಿಗರ ಆಗಮನ...