ನರೇಂದ್ರ ಮೋದಿ ಸರ್ಕಾರದ ನಿರ್ಲಕ್ಷ್ಯದಿಂದ ಕಾಲ್ತುಳಿತ: ಕಾಂಗ್ರೆಸ್ ಆಕ್ರೋಶ

Date:

Advertisements

ನವದೆಹಲಿ ರೈಲು ನಿಲ್ದಾಣದಲ್ಲಿ ಸಂಭವಿಸಿದ ಕಾಲ್ತುಳಿತಕ್ಕೆ ಮೋದಿ ಸರಕಾರದ ನಿರ್ಲಕ್ಷ್ಯ, ಅವ್ಯವಸ್ಥೆಯೇ ಕಾರಣ ಎಂದು ಕಾಂಗ್ರೆಸ್ ಆಕ್ರೋಶ ವ್ಯಕ್ತಪಡಿಸಿದೆ.

ಈ ಕುರಿತು ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು, ನವದೆಹಲಿ ರೈಲು ನಿಲ್ದಾಣದಲ್ಲಿ ಕಾಲ್ತುಳಿತದಿಂದ ಅನೇಕ ಜನರು ಮೃತಪಟ್ಟಿದ್ದಾರೆ ಮತ್ತು ಅನೇಕರಿಗೆ ಗಾಯಗಳಾಗಿವೆ ಎಂಬ ಸುದ್ದಿ ತಿಳಿದು ಅತ್ಯಂತ ದುಃಖಕರವಾಗಿದೆ. ಈ ಘಟನೆಯು ರೈಲ್ವೆ ಇಲಾಖೆಯ ವೈಫಲ್ಯ ಮತ್ತು ಸರಕಾರದ ನಿರ್ಲಕ್ಷ್ಯವನ್ನು ಮತ್ತೊಮ್ಮೆ ತೆರೆದಿಟ್ಟಿದೆ. ಪ್ರಯಾಗ್‌ರಾಜ್‌ಗೆ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಹೋಗುತ್ತಿರುವುದನ್ನು ಪರಿಗಣಿಸಿ, ರೈಲು ನಿಲ್ದಾಣದಲ್ಲಿ ಉತ್ತಮ ವ್ಯವಸ್ಥೆ ಮಾಡಬೇಕಿತ್ತು. ದುರಾಡಳಿತ ಮತ್ತು ನಿರ್ಲಕ್ಷ್ಯದಿಂದ ಯಾರೂ ಪ್ರಾಣ ಕಳೆದುಕೊಳ್ಳದಂತೆ ಸರಕಾರ ನೋಡಿಕೊಳ್ಳಬೇಕು ಎಂದು ಹೇಳಿದ್ದಾರೆ.

ಈ ಕುರಿತು ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ಕಾಂಗ್ರೆಸ್‌ ನಾಯಕ ಕೆ ಸಿ ವೇಣುಗೋಪಾಲ್, ಕೇಂದ್ರ ಸರ್ಕಾರದ ಮೂಗಿನ ನೇರಕ್ಕೆ ರಾಷ್ಟ್ರ ರಾಜಧಾನಿಯಲ್ಲಿ ನಡೆಯುತ್ತಿರುವ ಈ ರೀತಿಯ ಅನಾಹುತವು ಸರಕಾರವು ಸಂಪೂರ್ಣ ಅಸಮರ್ಥವಾಗಿದೆ, ಪ್ರಚಾರಕ್ಕೆ ಮಾತ್ರ ಸೀಮಿತವಾಗಿದೆ, ನಿಜವಾಗಿಯೂ ಸರಿಯಾಗಿ ನಿರ್ವಹಣೆ ಮಾಡುತ್ತಿಲ್ಲ ಎಂಬವುದನ್ನು ಸೂಚಿಸುತ್ತದೆ. ಸರಕಾರ ಮತ್ತೆ ಪರಿಸ್ಥಿತಿ ಬಗ್ಗೆ ವಾಸ್ತವಾಂಶವನ್ನು ಮುಚ್ಚಿಡಲು ಪ್ರಯತ್ನಿಸುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

Advertisements

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಅಮೆರಿಕ ನೆಲದಲ್ಲಿ ಮೋದಿ ಸಾಧಿಸಿದ್ದಕ್ಕಿಂತ ತಲೆ ಬಾಗಿದ್ದೇ ಹೆಚ್ಚು

ಮೃತರ ಮತ್ತು ಗಾಯಗೊಂಡವರ ಬಗ್ಗೆ ನಿಖರವಾದ ಅಂಕಿಅಂಶಗಳು ನಮಗೆ ಯಾವಾಗ ತಿಳಿಯುತ್ತದೆ? ಜನಸಂದಣಿ ನಿಯಂತ್ರಣ ಕ್ರಮಗಳನ್ನು ಏಕೆ ಜಾರಿಗೊಳಿಸಿಲ್ಲ? ಮಹಾಕುಂಭ ಮೇಳದ ಸಂದರ್ಭದಲ್ಲಿ ಈ ರೀತಿಯ ಜನಸಂದಣಿ ನಿರೀಕ್ಷಿಸಬಹುದು ಎಂದು ಗೊತ್ತಿದ್ದರೂ ರೈಲ್ವೆ ಇಲಾಖೆ ಏಕೆವಿಶೇಷ ರೈಲುಗಳ ವ್ಯವಸ್ಥೆಯನ್ನು ಮಾಡಿಲ್ಲ ಎಂದು ಪ್ರಶ್ನಿಸಿದ್ದಾರೆ.

ಕಾಂಗ್ರೆಸ್ ಸಂಸದೆ ಪ್ರಿಯಾಂಕ ಗಾಂಧಿ, ನವದೆಹಲಿ ರೈಲು ನಿಲ್ದಾಣದಲ್ಲಿ ಕಾಲ್ತುಳಿತದಲ್ಲಿ ಮಹಿಳೆಯರು ಮತ್ತು ಮಕ್ಕಳು ಸೇರಿದಂತೆ ಹಲವರು ಮೃತಪಟ್ಟ ಸುದ್ದಿ ತಿಳಿದು ದುಃಖಿತಳಾಗಿದ್ದೇನೆ. ಮೃತರ ಕುಟುಂಬಸ್ಥರಿಗೆ ನನ್ನ ಸಂತಾಪಗಳು. ಗಾಯಗೊಂಡವರು ಶೀಘ್ರವಾಗಿ ಗುಣಮುಖರಾಗಲಿ ಎಂದು ಹಾರೈಸುತ್ತೇನೆ ಎಂದು ಹೇಳಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

ಗುಜರಾತ್‌ನ ಗ್ರಾಮವೊಂದರಲ್ಲಿ ಕೊನೆಗೂ ದಲಿತರಿಗೆ ಕ್ಷೌರದಂಗಡಿಗೆ ಮುಕ್ತ ಪ್ರವೇಶ: ಶತಮಾನಗಳ ಅನಿಷ್ಟ ಪದ್ದತಿಗೆ ತೆರೆ

ಗುಜರಾತ್‌ನ ಜುನಾಗಡ್‌ ಜಿಲ್ಲೆಯಲ್ಲಿ ಗಡ್ಡ ಮೀಸೆ ಬೆಳೆಸಿದ್ದಕ್ಕೆ ದಲಿತ ಯುವಕರಿಬ್ಬರ ಜಾತಿ...

ರಾಜಸ್ಥಾನ | ರಸ್ತೆ ಅಪಘಾತ: ಮಹಿಳೆ ಸೇರಿ ನಾಲ್ವರು ಕಾರ್ಮಿಕರ ಸಾವು, ಐವರಿಗೆ ಗಾಯ

ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ವ್ಯಾನ್‌ಗೆ ವಾಹನವೊಂದು ಡಿಕ್ಕಿ ಹೊಡೆದು ಮಹಿಳೆ ಸೇರಿ ನಾಲ್ವರು...

Download Eedina App Android / iOS

X