ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ತಮ್ಮ ದಿವಂಗತ ತಂದೆ ಮತ್ತು ಮಾಜಿ ಪ್ರಧಾನಿ ರಾಜೀವ್ ಗಾಂಧಿ ಅವರ 33ನೇ ಪುಣ್ಯತಿಥಿಯಂದು ಅವರನ್ನು ಸ್ಮರಿಸುತ್ತಾ, ಎಕ್ಸ್‌ನಲ್ಲಿ ಪೋಸ್ಟ್ ಹಂಚಿಕೊಂಡಿದ್ದಾರೆ. “ತಮ್ಮ ತಂದೆಯ ಆಕಾಂಕ್ಷೆಗಳು ತನ್ನ ಜವಾಬ್ದಾರಿ” ಎಂದು ರಾಹುಲ್ ಗಾಂಧಿ ಹೇಳಿದ್ದಾರೆ.
ರಾಹುಲ್ ಅವರು ತಮ್ಮ ತಂದೆಯೊಂದಿಗಿನ ಬಾಲ್ಯದ ಛಾಯಾಚಿತ್ರವನ್ನು ಹಂಚಿಕೊಂಡಿದ್ದಾರೆ. ಇದರಲ್ಲಿ ರಾಜೀವ್ ಗಾಂಧಿ ಅವರು ರಾಹುಲ್ ಅವರ ಹೆಗಲ ಮೇಲೆ ಕೈಯಿಟ್ಟಿರುವುದು, ರಾಹುಲ್ ಗಾಂಧಿ ಕೈ ಕಟ್ಟಿಕೊಂಡಿರುವುದನ್ನು ನಾವು ಕಾಣಬಹುದು.
पापा,
आपके सपने, मेरे सपने,
आपकी आकांक्षाएं, मेरी ज़िम्मेदारियां।आपकी यादें, आज और हमेशा, दिल में सदा। pic.twitter.com/lT8M7sk7dS
— Rahul Gandhi (@RahulGandhi) May 21, 2024
“ತಂದೆ, ನಿಮ್ಮ ಕನಸುಗಳು, ನನ್ನ ಕನಸುಗಳು. ನಿಮ್ಮ ಆಕಾಂಕ್ಷೆಗಳು, ನನ್ನ ಜವಾಬ್ದಾರಿಗಳು. ನಿಮ್ಮ ನೆನಪುಗಳು, ಇಂದು ಮತ್ತು ಯಾವಾಗಲೂ, ಯಾವಾಗಲೂ ನನ್ನ ಹೃದಯದಲ್ಲಿರುತ್ತದೆ” ಎಂದು ರಾಹುಲ್ ಗಾಂಧಿ ಎಕ್ಸ್‌ನಲ್ಲಿ ಭಾವುಕ ಪೋಸ್ಟ್ ಮಾಡಿದ್ದಾರೆ.
ಇದನ್ನು ಓದಿದ್ದೀರಾ? ರಾಜೀವ್ ಗಾಂಧಿ ಹತ್ಯೆ ಪ್ರಕರಣ | ಮೂವರು ಆರೋಪಿಗಳು ಶ್ರೀಲಂಕಾಗೆ ಗಡಿಪಾರು
ಇದಕ್ಕೂ ಮುನ್ನ ಮಂಗಳವಾರ ಬೆಳಗ್ಗೆ ದೆಹಲಿಯ ವೀರಭೂಮಿಯಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಕಾಂಗ್ರೆಸ್ ಸಂಸದೀಯ ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿ ಅವರೊಂದಿಗೆ ರಾಹುಲ್ ಅವರು ರಾಜೀವ್ ಗಾಂಧಿ ಅವರಿಗೆ ನಮನ ಸಲ್ಲಿಸಿದರು. ಪಿ ಚಿದಂಬರಂ ಮತ್ತು ಸಚಿನ್ ಪೈಲಟ್ ಅವರಂತಹ ಇತರ ಕಾಂಗ್ರೆಸ್ ನಾಯಕರು ಮಾಜಿ ಪ್ರಧಾನಿಗೆ ಗೌರವ ಸಲ್ಲಿಸಿದರು.
ಪ್ರಧಾನಿ ನರೇಂದ್ರ ಮೋದಿ ಅವರು ರಾಜೀವ್ ಗಾಂಧಿ ಅವರಿಗೆ ಶ್ರದ್ಧಾಂಜಲಿ ಸಲ್ಲಿಸಿ ಎಕ್ಸ್ ಪೋಸ್ಟ್ ಮಾಡಿದ್ದಾರೆ. “ನಮ್ಮ ಮಾಜಿ ಪ್ರಧಾನಿ ರಾಜೀವ್ ಗಾಂಧಿ ಅವರ ಪುಣ್ಯತಿಥಿಯಂದು ಅವರಿಗೆ ನನ್ನ ನಮನಗಳು” ಎಂದು ಪ್ರಧಾನಿ ಪೋಸ್ಟ್ ಮಾಡಿದ್ದಾರೆ.
ಇದನ್ನು ಓದಿದ್ದೀರಾ? ರಾಜೀವ್ ಗಾಂಧಿ ಹತ್ಯೆ ಪ್ರಕರಣದಲ್ಲಿ ಬಿಡುಗಡೆಗೊಂಡಿದ್ದ ಅಪರಾಧಿ ಸಾವು
1984ರಲ್ಲಿ ತಮ್ಮ ತಾಯಿ ಮತ್ತು ಅಂದಿನ ಪ್ರಧಾನಿ ಇಂದಿರಾ ಗಾಂಧಿಯವರ ಹತ್ಯೆಯ ನಂತರ ರಾಜೀವ್ ಗಾಂಧಿ ಅವರು ಕಾಂಗ್ರೆಸ್ ಉಸ್ತುವಾರಿ ವಹಿಸಿಕೊಂಡಿದ್ದರು. ಅಕ್ಟೋಬರ್ 1984 ರಲ್ಲಿ ಅಧಿಕಾರ ವಹಿಸಿಕೊಂಡರು. 40ನೇ ವಯಸ್ಸಿನಲ್ಲಿ ಭಾರತದ ಅತ್ಯಂತ ಕಿರಿಯ ಪ್ರಧಾನಿಯಾದ ಹೆಗ್ಗಳಿಕೆ ರಾಜೀವ್ ಗಾಂಧಿ ಅವರದ್ದು.
ರಾಜೀವ್ ಗಾಂಧಿ ಅವರು 1989ರ ಡಿಸೆಂಬರ್ 2ವರೆಗೆ ಭಾರತದ ಪ್ರಧಾನ ಮಂತ್ರಿಯಾಗಿ ಸೇವೆ ಸಲ್ಲಿಸಿದರು. ರಾಜೀವ್ ಗಾಂಧಿಯವರು 1991ರ ಮೇ 21ರಂದು ಚುನಾವಣಾ ಪ್ರಚಾರದಲ್ಲಿರುವಾಗ ಲಿಬರೇಶನ್ ಟೈಗರ್ಸ್ ಆಫ್ ತಮಿಳು ಈಳಂ (ಎಲ್‌ಟಿಟಿಇ) ಆತ್ಮಹತ್ಯಾ ಬಾಂಬರ್‌ನಿಂದ ಹತ್ಯೆಗೀಡಾದರು.