ರಾಯ್‌ಬರೇಲಿ ಆಯ್ಕೆ ಮಾಡಿಕೊಂಡ ರಾಹುಲ್; ವಯನಾಡಿನಿಂದ ಪ್ರಿಯಾಂಕಾ ಸ್ಪರ್ಧೆ

Date:

ರಾಹುಲ್ ಗಾಂಧಿ ಅವರ ಲೋಕಸಭಾ ಸ್ಥಾನದ ಆಯ್ಕೆಯ ಮೇಲಿನ ನಿಗೂಢತೆಯನ್ನು ಕಾಂಗ್ರೆಸ್‌ ಕೊನೆಗೂ ಕೊನೆಗೊಳಿಸಿದೆ. ಸೋಮವಾರ ಕಾಂಗ್ರೆಸ್ ಪಕ್ಷವು ಇಂದು ಎರಡು ಪ್ರಮುಖ ಪ್ರಕಟಣೆಗಳನ್ನು ಹೊರಡಿಸಿದ್ದು, ರಾಹುಲ್ ಗಾಂಧಿ ಕೇರಳದಲ್ಲಿನ ವಯನಾಡ್ ಲೋಕಸಭಾ ಕ್ಷೇತ್ರವನ್ನು ತೆರವುಗೊಳಿಸಲಿದ್ದು, ಉತ್ತರ ಪ್ರದೇಶದಲ್ಲಿನ ತಮ್ಮ ಕುಟುಂಬದ ಭದ್ರಕೋಟೆಯಾದ ರಾಯ್‌ಬರೇಲಿಯನ್ನು ಉಳಿಸಿಕೊಳ್ಳಲಿದ್ದಾರೆ.

- Advertisement -

ರಾಹುಲ್ ಗಾಂಧಿ ತೆರವುಗೊಳಿಸಲಿರುವ ವಯನಾಡ್ ಲೋಕಸಭಾ ಕ್ಷೇತ್ರದಿಂದ ಅವರ ಸಹೋದರಿಯಾದ ಪ್ರಿಯಾಂಕಾ ಗಾಂಧಿ ವಾದ್ರಾ ಸ್ಪರ್ಧಿಸಲಿದ್ದಾರೆ. ಈ ಮೂಲಕ ಅವರು ಕೊನೆಗೂ ಚುನಾವಣಾ ರಾಜಕಾರಣಕ್ಕೆ ಪ್ರವೇಶ ಮಾಡಲಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ನೀಟಾಗಿಲ್ಲ ಎನ್ನುವುದು ಗೊತ್ತಿದ್ದೂ ಭಂಡತನ ಮೆರೆದ ಬಿಜೆಪಿ

ನಿಯಮಗಳ ಪ್ರಕಾರ, ಜೂನ್ 4 ರಂದು ಹೊರಬಿದ್ದ ಲೋಕಸಭೆಯ ಫಲಿತಾಂಶದ 14 ದಿನಗಳಲ್ಲಿ ರಾಹುಲ್ ಗಾಂಧಿ ಒಂದು ಸ್ಥಾನವನ್ನು ಖಾಲಿ ಮಾಡಬೇಕಾಗಿತ್ತು. ಇದೀಗ ರಾಹುಲ್ ಗಾಂಧಿ ರಾಯ್‌ಬರೇಲಿಯಲ್ಲಿ ಉಳಿಯಲು ಆಯ್ಕೆ ಮಾಡಿಕೊಂಡಿರುವುದರಿಂದ, ಅವರ ಸಹೋದರಿ ಪ್ರಿಯಾಂಕಾ ಅವರು ತೆರವಾದ ವಯನಾಡಿನ ಕ್ಷೇತ್ರದ ಉಪಚುನಾವಣೆಯಲ್ಲಿ ಸ್ಪರ್ಧಿಸಲಿದ್ದಾರೆ.

ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, “ರಾಹುಲ್ ಗಾಂಧಿ ಅವರು ಎರಡು ಲೋಕಸಭಾ ಸ್ಥಾನಗಳಿಂದ ಗೆಲುವು ಸಾಧಿಸಿದ್ದಾರೆ. ಆದರೆ ಕಾನೂನಿನ ಪ್ರಕಾರ ಅವರು ಒಂದನ್ನು ತೆರವು ಮಾಡಬೇಕು. ರಾಹುಲ್ ಗಾಂಧಿ ರಾಯ್ ಬರೇಲಿಯನ್ನು ಉಳಿಸಿಕೊಳ್ಳಲಿದ್ದು, ಪ್ರಿಯಾಂಕಾ ಅವರು ವಯನಾಡಿನಿಂದ ಸ್ಪರ್ಧಿಸಲು ನಿರ್ಧರಿಸಿದ್ದಾರೆ” ಎಂದು ಹೇಳಿದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅಸ್ಸಾಂ ಉಪಚುನಾವಣೆ ಅಖಾಡ: ಸಿಎಂ ಶರ್ಮಾ ಮತ್ತು ಕಾಂಗ್ರೆಸ್ ಸಂಸದರ ನಡುವೆ ‘ಬಿರಿಯಾನಿ vs ರಸ್ಕ್’ ವಾಕ್ಸಮರ!

ಅಸ್ಸಾಂನ ನಗಾಂವ್ ಲೋಕಸಭಾ ಕ್ಷೇತ್ರಕ್ಕೆ ನಡೆಯಲಿರುವ ಉಪಚುನಾವಣೆಯ ಪ್ರಚಾರ ಕಣದಲ್ಲಿ ರಾಜಕೀಯ...

ಶಾಲಾ ಸಮಸ್ಯೆಗಳ ಕುರಿತು ಗ್ರಾಮ ಸಭೆಯಲ್ಲಿ ಧ್ವನಿ ಎತ್ತಿದ ವಿದ್ಯಾರ್ಥಿಗಳು; ಅಧಿಕಾರಿಗಳ ಮೆಚ್ಚುಗೆ-ಭರವಸೆ

ಸರ್ಕಾರಿ ಶಾಲಾ ವಿದ್ಯಾರ್ಥಿಗಳು ‘ವಿಶೇಷ ಗ್ರಾಮ ಸಭೆ’ಗಳಲ್ಲಿ ಪಾಲ್ಗೊಂಡು, ಪಂಚಾಯತ್ ಪ್ರತಿನಿಧಿಗಳು...

ಉತ್ತರಾಖಂಡ SIR ಅಂತಿಮ ಮತದಾರರ ಪಟ್ಟಿ ಪ್ರಕಟ: ಆದರೆ ಮುಗಿದಿಲ್ಲ ನೋಂದಣಿ ಪ್ರಕ್ರಿಯೆ

ಉತ್ತರಾಖಂಡ ರಾಜ್ಯದಲ್ಲಿ ನಡೆದ 'ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ' (ಎಸ್‌ಐಆರ್)...