ನಮ್ಮ‌ ಪ್ರಸ್ತಾಪಗಳನ್ನು ರಾಷ್ಟ್ರಪತಿ ನಿರಾಕರಿಸಿದ್ದು ಅಚ್ಚರಿ ಮೂಡಿಸಿದೆ, ಸಾಕ್ಷ್ಯ ಕೇಳಿದ್ದಾರೆ – ಕೊಡುತ್ತೇವೆ: ರಾಹುಲ್ ಗಾಂಧಿ

Date:

ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಕ್ರಮವಾಗಿ ತೆಗೆದುಹಾಕಿರುವ ಕುರಿತು ನಾವು ಎತ್ತಿರುವ ವಿಷಯವನ್ನು ರಾಷ್ಟ್ರಪತಿಗಳು ಗಂಭೀರವಾಗಿ ಆಲಿಸಿದ್ದಾರೆ. ಮತ ಕಳ್ಳತನ ಮತ್ತು ಅಕ್ರಮಗಳ ಕುರಿತು ಸಾಕ್ಷ್ಯ ನೀಡುವಂತೆ ರಾಷ್ಟ್ರಪತಿಗಳು ಸೂಚಿಸಿದ್ದು, ಇದಕ್ಕೆ ಅಗತ್ಯವಿರುವ ಎಲ್ಲಾ ದಾಖಲೆಗಳು ಮತ್ತು ಮಾಹಿತಿಗಳು ನಮ್ಮ ಬಳಿ ಸಿದ್ಧವಾಗಿವೆ. ಶೀಘ್ರದಲ್ಲೇ ಅದನ್ನು ಅವರಿಗೆ ಸಲ್ಲಿಸಲಾಗುವುದು ಎಂದು ವಿಪಕ್ಷ ನಾಯಕ ರಾಹುಲ್ ಗಾಂಧಿ ತಿಳಿಸಿದ್ದಾರೆ.

- Advertisement -

ಎಸ್‌ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮಗಳು ನಡೆದಿವೆ ಎಂದು ಆರೋಪಿಸಿ ಪ್ರತಿಪಕ್ಷಗಳ ‘ಇಂಡಿಯಾ’ ಮೈತ್ರಿಕೂಟವು ಪ್ರತಿಭಟನೆಯನ್ನು ತೀವ್ರಗೊಳಿಸಿದೆ. ಶುಕ್ರವಾರ ಸಂಜೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ವಿಪಕ್ಷ ನಾಯಕರ ನಿಯೋಗವು ಭೇಟಿಯಾಗಿ, ಮನವಿ ಪತ್ರ ಸಲ್ಲಿಸಿದೆ. ಭೇಟಿಯ ಬಳಿಕ ಮಾಧ್ಯಮಗಳೊಂದಿಗೆ ರಾಹುಲ್‌ ಗಾಂಧಿ ಮಾತನಾಡಿದ್ದು, “ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ಮೂರು ಪ್ರಮುಖ ಅಂಶಗಳನ್ನೊಳಗೊಂಡ ಮನವಿ ಪತ್ರವನ್ನು ಹಸ್ತಾಂತರಿಸಿದ್ದೇವೆ” ಎಂದು ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ನೊಬೆಲ್‌ ಪ್ರಶಸ್ತಿ ಸರಣಿ | ಭಾರತೀಯ ಮೂಲದ ದಕ್ಷಿಣ...

ಈ ಬಾರಿಯ ಶಾಂತಿ ನೊಬೆಲ್‌ ಪ್ರಶಸ್ತಿಯನ್ನು ಶಾಂತಿ ಮತ್ತು ಅಂತಾರಾಷ್ಟ್ರೀಯ ಕಾನೂನನ್ನು ಉತ್ತೇಜಿಸುವ ನಿಟ್ಟಿನಲ್ಲಿ ನಡೆಸಿದ ಪ್ರಯತ್ನಗಳಿಗಾಗಿ, ಮಾನವ ಹಕ್ಕುಗಳ ರಕ್ಷಣೆಗಾಗಿ ಜೀವನವನ್ನೇ ಮುಡಿಪಾಗಿಟ್ಟ ಭಾರತೀಯ ಮೂಲದ ದಕ್ಷಿಣ ಆಫ್ರಿಕಾದ ಡಾ. ನವನೀತಮ್‌...

ಗಡುಸಾದ ದನಿಯೊಳಗಿನ ಮೃದು ಮನಸ್ಸು: ʼನಾನಾ ಪಾಟೇಕರ್ʼ ಎಂಬ...

ಅವರ ಗಡುಸಾದ ದನಿಯಲ್ಲಿ ಸಾಮಾನ್ಯ ಮನುಷ್ಯನ ಆಕ್ರೋಶವಿತ್ತು; ಅವರ ತೀಕ್ಷ್ಣ ನೋಟದಲ್ಲಿ ಬದುಕಿನ ಕಹಿ ಸತ್ಯಗಳಿದ್ದವು. ‘ಕ್ರಾಂತಿವೀರ್’ನಲ್ಲಿ ಅನ್ಯಾಯದ ವಿರುದ್ಧ ಸಿಡಿದವರು, ‘ಖಾಮೋಶಿ’ಯಲ್ಲಿ ಮಾತಿಲ್ಲದೆ ಮನಸ್ಸು ತಟ್ಟಿದವರು, ‘ವೆಲ್‌ಕಮ್’ನಲ್ಲಿ ನಗುವಿನ ಹೊಳೆ ಹರಿಸಿದವರು...

ಕೂಲಿಕಾರ್ಮಿಕರ ಮೊಮ್ಮಗಳ ವಿಶ್ವ ವಿಜಯ: ಭಾರತೀಯ ಮೂಲದ ನವಿ...

ವಿಶ್ವಸಂಸ್ಥೆಯ ಮಾನವ ಹಕ್ಕುಗಳ ವಿಭಾಗದ ಮಾಜಿ ಮುಖ್ಯಸ್ಥೆ ಹಾಗೂ ಪ್ರಸ್ತುತ ಅಂತಾರಾಷ್ಟ್ರೀಯ ನ್ಯಾಯಾಲಯದ (ICJ) ನ್ಯಾಯಾಧೀಶರಾಗಿರುವ ದಕ್ಷಿಣ ಆಫ್ರಿಕಾ ಮತ್ತು ಭಾರತೀಯ ಮೂಲದ ನವನೀತಮ್ 'ನವಿ' ಪಿಳ್ಳೈ (85) ಅವರಿಗೆ 2026ನೇ ಸಾಲಿನ...

“ನಾವು ಪ್ರಸ್ತಾಪಿಸಿದ ವಿಷಯಗಳನ್ನು ರಾಷ್ಟ್ರಪತಿಗಳು ನಿರಾಕರಿಸದಿರುವುದು ಅಚ್ಚರಿ ಮೂಡಿಸಿದೆ. ನಾವು ಸೋಮವಾರ ಸುಪ್ರೀಂ ಕೋರ್ಟ್‌ಗೆ ತೆರಳಿ ಭಾರತದ ಮುಖ್ಯ ನ್ಯಾಯಮೂರ್ತಿಗಳನ್ನು ಭೇಟಿ ಮಾಡಿ ಮನವಿ ಪತ್ರ ಸಲ್ಲಿಸುತ್ತೇವೆ” ಎಂದು ರಾಹುಲ್ ಗಾಂಧಿ ಘೋಷಿಸಿದ್ದಾರೆ.

ಕಳೆದ ಮೂರು ದಿನಗಳಿಂದ ದೆಹಲಿಯಲ್ಲಿ ನಿರಂತರ ಪ್ರತಿಭಟನೆ ಮಡೆಸುತ್ತಿರುವ ವಿಪಕ್ಷಗಳು, “ಎಸ್‌ಐಆರ್‌ ಪ್ರಕ್ರಿಯೆಯನ್ನು ತಕ್ಷಣವೇ ರದ್ದುಗೊಳಿಸಬೇಕು. ಕರಡು ಪಟ್ಟಿಯಿಂದ ಕೈಬಿಡಲಾಗಿರುವ ಕೋಟ್ಯಂತರ ಮತದಾರರ ಹೆಸರುಗಳನ್ನು ಪುನಃ ಪಟ್ಟಿಗೆ ಸೇರ್ಪಡೆಗೊಳಿಸಬೇಕು” ಎಂದು ಆಗ್ರಹಿಸಿವೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಲಬುರಗಿಯಲ್ಲಿ ಅ.30ರಿಂದ ನ.1ರವರೆಗೆ ಎಸ್‌ಎಫ್‌ಐ ರಾಜ್ಯ ಸಮ್ಮೇಳನ

ಭಾರತ ವಿದ್ಯಾರ್ಥಿ ಫೆಡರೇಷನ್ (ಎಸ್‌ಎಫ್‌ಐ) ಕರ್ನಾಟಕ ರಾಜ್ಯ ಸಮಿತಿಯ ರಾಜ್ಯ ಸಮ್ಮೇಳನವು...

ಯತ್ನಾಳ್ ವಿರುದ್ಧ ಹೊರ್ತಿ ವಾಗ್ದಾಳಿ; ಅರ್ಜಿ ವಾಪಸ್ ಪಡೆದ ಹಿಂದಿನ ಸತ್ಯ ಬಹಿರಂಗಪಡಿಸಲು ಸವಾಲು

ಮತದಾರರ ಪಟ್ಟಿಯಿಂದ ಹೆಸರುಗಳನ್ನು ತೆಗೆದುಹಾಕುವಂತೆ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಬರೆದಿರುವ...

ಲೈಂಗಿಕ ಕಿರುಕುಳ ಆರೋಪ; ಪ್ರಾಧ್ಯಾಪಕ ಹುದ್ದೆಯಿಂದ ಕಾಂಗ್ರೆಸ್ ಸಂಸದ ಬಿಮೋಲ್ ವಜಾ

11 ವಿದ್ಯಾರ್ಥಿನಿಯರು ಲೈಂಗಿಕ ಕಿರುಕುಳ ಹಾಗೂ ಅನುಚಿತ ವರ್ತನೆಯ ಆರೋಪದಡಿ ದೂರು...

ಬೀದರ್‌ | ಕಾನ್ಶಿರಾಂ ಹೋರಾಟ ಬಹುಜನರ ರಾಜಕೀಯ ಜಾಗೃತಿಗೆ ದಾರಿದೀಪ

ಬೀದರ್ ಜಿಲ್ಲಾ ದಲಿತ ಸಂಘಟನೆಗಳ ಒಕ್ಕೂಟ ಹಾಗೂ ವಿವಿಧ ಬಹುಜನ ಸಂಘಟನೆಗಳ...